Site icon Vistara News

H.D. Kumaraswamy: ಅವನ್ಯಾವಾನೊ ಗುತ್ತಿಗೆದಾರರ ಸಂಘದ ಪದಾಧಿಕಾರಿ ಸಾಕ್ಷಿ ಕೊಟ್ಟಿದ್ನ?: ಡಿಕೆಶಿ ವಿರುದ್ಧ ಎಚ್‌ಡಿಕೆ ಯದ್ವಾತದ್ವಾ ವಾಗ್ದಾಳಿ!

HD Kumaraswamy channapatna

ರಾಮನಗರ/ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರದ ವಿರುದ್ಧ ಪರ್ಸೆಂಟೇಜ್ ಆರೋಪ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕುಮಾರಸ್ವಾಮಿ ಅವರು ತಮ್ಮ ಆರೋಪಗಳ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿರುವುದಕ್ಕೆ ತಿರುಗೇಟು ನೀಡಿದ ಕುಮಾರಸ್ವಾಮಿ, ಹಿಂದೆ ಇದೇ ಜನ ಬಿಜೆಪಿ ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದರು. ಆ ಆರೋಪವನ್ನು ಅವರು ಸಾಬೀತು ಮಾಡಿದ್ದರಾ? ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರಾ? ಈಗ ನೋಡಿದರೆ ನನಗೆ ಪುಕ್ಕಟೆ ಸಲಹೆ ನೀಡುತ್ತಿದ್ದಾರೆ.

ಈಗ ಕಾಂಗ್ರೆಸ್‌ನವರದ್ದೇ ಸರ್ಕಾರ ಇದೆ. 40% ವಿಚಾರವನ್ನು ತನಿಖೆ ಮಾಡಿಸಲಿ, ಸತ್ಯ ಜನರ ಮುಂದೆ ಇಡಲಿ. ಆರೋಪ ಮಾಡಿದವರ ಬಳಿ ಸಾಕ್ಷ್ಯ ಇರಲೇಬೇಕಲ್ಲವೇ? ಅವನ್ಯಾವಾನೋ ಗುತ್ತಿಗೆದಾರರ ಪದಾಧಿಕಾರಿ ಆರೋಪ ಮಾಡಿದ್ನಲ್ಲ, ಅದಕ್ಕೆ ಸಾಕ್ಷಿ ಕೊಟ್ಟಿದ್ದಾರ ಇವರು? ಲೋಕಾಯುಕ್ತಕ್ಕೆ ದೂರು ನೀಡಲು ಅಡ್ಡಿ ಮಾಡಿದ್ದವರು ಯಾರು? ಎಂದು ಅವರು ಪ್ರಶ್ನಿಸಿದರು.

ಕಳೆದ ಮೇ 8 ರಂದು ಮಹಾನಗರ ಪಾಲಿಕೆಯಲ್ಲಿ 675 ಕೋಟಿ ಎಲ್‌ಒಸಿ ಹಣವನ್ನು ಯಾಕೆ ರಿಲೀಸ್ ಮಾಡಿಲ್ಲ? ಅದನ್ನು ಯಾಕೆ ಇಟ್ಟುಕೊಂಡಿದ್ದೀರಿ? ಅದರ ಬಗ್ಗೆ ನೀವು ಮೊದಲು ಜನತೆಗೆ ಹೇಳಿ ಎಂದು ಕುಮಾರಸ್ವಾಮಿ ಒತ್ತಾಯ ಮಾಡಿದರು.

ಕೆಡಿಪಿ ಸಭೆಯಲ್ಲಿ ಭಾಗವಹಿಸಿದ ಮಾಜಿ ಸಿಎಂ:
ಚುನಾವಣೆ ಮುಗಿದು ಹೊಸ ಸರ್ಕಾರ ರಚನೆ ಆದ ನಂತರ ಚನ್ನಪಟ್ಟಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕುಮಾರಸ್ವಾಮಿ ಭಾಗಿಯಾದರು. ಇಲಾಖಾವಾರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು; ತಾಲೂಕಿನ ಹಲವು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿರುವ ವಿಚಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಅವರು ಅಧಿಕಾರಿಗಳ ಜತೆ ಚರ್ಚೆ ನಡೆಸಿದರು ಹಾಗೂ ಕಾಡಾನೆ ತಡೆಯಲು ತಡೆಗೋಡೆ ನಿರ್ಮಾಣ ಮಾಡಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: Lok Sabha Election 2024: ಲೋಕಸಭೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ; ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ

Exit mobile version