ಕರ್ನಾಟಕ
H.D. Kumaraswamy: ಅತ್ತೂ ಕರೆದು ಟಿಕೆಟ್ ತೊಗೊತೀರ; ಆಮೇಲೆ ಮ್ಯಾಚ್ ಫಿಕ್ಸ್ ಮಾಡ್ಕೊತೀರ: ಪಕ್ಷದ ಅಭ್ಯರ್ಥಿಗಳ ಬಗ್ಗೆ ಕುಮಾರಸ್ವಾಮಿ ಆಕ್ರೋಶ
ಸಮರ್ಥ ಅಭ್ಯರ್ಥಿಗಳನ್ನು ತಯಾರು ಮಾಡುವಲ್ಲಿ, ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವಲ್ಲಿ ಲೋಪ ಎಸಗಿರುವ ಪಕ್ಷದ ಜಿಲ್ಲಾ ಅಧ್ಯಕ್ಷರುಗಳನ್ನು ಎಚ್.ಡಿ. ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು.
ಬೆಂಗಳೂರು: ಚುನಾವಣೆ ಹತ್ತಿರಕ್ಕೆ ಬಂದಾಗ ಬಂದು ಗೋಳಾಡಿ ಬೀ ಫಾರಂ ತೆಗೆದುಕೊಂಡು ಹೋಗುತ್ತೀರಿ, ಆಮೇಲೆ ಯಾವನ ಜತೆಗೊ ಜತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳುತ್ತೀರಿ ಎಂದು ಬೆಂಗಳೂರು ಜೆಡಿಎಸ್ ಅಭ್ಯರ್ಥಿಗಳ ಕುರಿತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.
ಅರಮನೆ ಮೈದಾನದಲ್ಲಿ ಆಯೋಜನೆ ಮಾಡಿದ್ದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಬೆಂಗಳೂರು ನಗರದಲ್ಲಿ ಹಲವು ವರ್ಷಗಳಿಂದ ಪಕ್ಷದ ಸಂಘಟನೆ ನನೆಗುದಿಗೆ ಬಿದ್ದಿದೆ. ಇನ್ನು ಮುಂದೆ ಬೆಂಗಳೂರಿನಲ್ಲಿ ಸಂಘಟನೆ ಬಗ್ಗೆ ನಿರ್ಲಕ್ಷ್ಯ ಮಾಡುವುದಿಲ್ಲ. ನಗರದ ನಾಲ್ಕು ವಿಭಾಗಕ್ಕೆ ನಾಲ್ವರು ಅಧ್ಯಕ್ಷರನ್ನು ಮಾಡಿ ಆದೇಶ ಹೊರಡಿಸಿ ಎಂದು ವೇದಿಕೆಯ ಮೇಲೆ ಕೂತಿದ್ದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ಸೂಚನೆ ನೀಡಿದರು. ಒಬ್ಬರಿಗೆ ಕೊಟ್ಟರೆ ಅವರು ಏಕ ಚಕ್ರಾಧಿಪತ್ಯ ಮಾಡಿಕೊಳ್ಳುತ್ತಾರೆ ಎಂದು ಕಿಡಿಕಾರಿದರು.
ಸಮರ್ಥ ಅಭ್ಯರ್ಥಿಗಳನ್ನು ತಯಾರು ಮಾಡುವಲ್ಲಿ, ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವಲ್ಲಿ ಲೋಪ ಎಸಗಿರುವ ಪಕ್ಷದ ಜಿಲ್ಲಾ ಅಧ್ಯಕ್ಷರುಗಳನ್ನು ಎಚ್.ಡಿ. ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು. ಅಧ್ಯಕ್ಷಗಿರಿ ಎಂದರೆ ಸ್ವಂತ ಜಹಗೀರು ಅಲ್ಲ, ಸಂಘಟನೆಯನ್ನು ಸರಿಯಾಗಿ ಮಾಡಿಲ್ಲ, ಯಾರೂ ಸಮರ್ಥವಾಗಿ ಕೆಲಸ ಮಾಡಿಲ್ಲ, ಎಲ್ಲಾ ಹಂತಗಳಲ್ಲಿಯೂ ಸಂಘಟನೆ ಸೋತಿದೆ, ನಾನೇ ಅಭ್ಯರ್ಥಿ ಹುಡುಕಿ ಕೊಡಬೇಕಾದ ಪರಿಸ್ಥಿತಿ ಬಂದಿದೆ, ಹಾಗಾದರೆ ಜಿಲ್ಲಾಧ್ಯಕ್ಷರು ಮಾಡಿದ್ದೇನು? ಇವರೇನು ಅಲಂಕಾರಕ್ಕೆ ಇದ್ದಾರಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಮುಂದಿನ ಲೋಕಸಭೆ ಚುನಾವಣೆ ಫಲಿತಾಂಶದ ಮೇಲೆ ಈ ಸರ್ಕಾರದ ಭವಿಷ್ಯ ನಿಂತಿದೆ. ಈ ಸರ್ಕಾರ ಇರಬಹುದು ಅಥವಾ ಹೋಗಬಹುದು. ನಾನೇನು ಭವಿಷ್ಯ ಹೇಳುತ್ತಿಲ್ಲ, ಆ ನಂತರ ಏನೆಲ್ಲಾ ಬೆಳೆವಣಿಗೆ ನಡೆಯುತ್ತದೆಯೋ ಗೊತ್ತಿಲ್ಲ. ಏನು ಬೇಕಾದರೂ ಆಗಬಹುದು.
ಕಾಂಗ್ರೆಸ್ 135 ಕ್ಷೇತ್ರ ಗೆದ್ದಿದೆ, ಆದರೆ ಆ ಸರಕಾರದಲ್ಲಿ ವಿಶ್ವಾಸದ ಕೊರತೆ ಇದೆ. ಜನರ ಕೆಲಸ ಮಾಡಲು ಅವರಿಗೆ ಆಗುತ್ತಿಲ್ಲ. ಆದರೆ ನಾವು ಸಂಘಟನೆ ಕಡೆ ಗಮನಕ್ಕೆ ಕೊಡೋಣ, ವಿಷಯಾಧಾರಿತವಾಗಿ ನಾವು ಹೋರಾಟ ನಡೆಸಬೇಕು. ಸಂಘಟನೆಯನ್ನು ಬಳಪಡಿಸಿಕೊಂಡು ಜನರ ಜತೆ ನಿಲ್ಲೋಣ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿದಂತೆ ಎಲ್ಲ ನೂತನ ಶಾಸಕರು, ಮಾಜಿ ಶಾಸಕರು, ಸೋತ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು ಸಭೆಯಲ್ಲಿ ಹಾಜರಿದ್ದರು.
ಇದನ್ನೂ ಓದಿ: Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್.ಡಿ. ಕುಮಾರಸ್ವಾಮಿ ಆಕ್ರೋಶ
ಕರ್ನಾಟಕ
Bahuroopi Prakashana: ಸರ್ಕಾರ ಪುಸ್ತಕೋದ್ಯಮ ಬೆಂಬಲಿಸಲಿ: ಪೊನ್ ವಾಸುದೇವನ್
Bahuroopi Prakashana: ಬೆಂಗಳೂರಿನಲ್ಲಿ ‘ಬಹುರೂಪಿ’ ಪ್ರಕಾಶನದಿಂದ ಹಮ್ಮಿಕೊಂಡಿದ್ದ ಸಂವಾದದಲ್ಲಿ ತಮಿಳಿನ ಹೆಸರಾಂತ ಸಾಹಿತಿ, ಪ್ರಕಾಶಕ ಪೊನ್ ವಾಸುದೇವನ್ ಭಾಗವಹಿಸಿದ್ದರು.
ಬೆಂಗಳೂರು: ಪುಸ್ತಕೋದ್ಯಮಕ್ಕೆ ತಮಿಳುನಾಡು ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಮಾದರಿಯಾಗಿದ್ದು, ಕರ್ನಾಟಕದಲ್ಲಿಯೂ ಪುಸ್ತಕೋದ್ಯಮವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ವಹಿಸಬೇಕು ಎಂದು ತಮಿಳಿನ ಹೆಸರಾಂತ ಸಾಹಿತಿ, ಪ್ರಕಾಶಕ ಪೊನ್ ವಾಸುದೇವನ್ ಅಭಿಪ್ರಾಯಪಟ್ಟರು.
‘ಬಹುರೂಪಿ’ ಪ್ರಕಾಶನದಿಂದ (Bahuroopi Prakashana) ನಗರದಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುಸ್ತಕೋದ್ಯಮ ಇಂದು ಆತಂಕವನ್ನು ಎದುರಿಸುತ್ತಿದೆ. ನಾಳಿನ ಪೀಳಿಗೆಗೆ ಓದುವ ಸಂಸ್ಕೃತಿಯನ್ನು ಉಳಿಸಬೇಕಾದರೆ ಸರ್ಕಾರ ಪ್ರಕಾಶನ ರಂಗಕ್ಕೆ ಬೆನ್ನೆಲುಬಾಗಿ ನಿಲ್ಲಬೇಕಾದ ಅವಶ್ಯಕತೆ ಇದೆ ಎಂದರು.
ಡಿಎಂಕೆ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಜಿಲ್ಲಾ ಮಟ್ಟದಲ್ಲಿ ನಡೆಸುತ್ತಿರುವ ಪುಸ್ತಕ ಮೇಳಗಳು ಹಾಗೂ ಕೈಗೆತ್ತಿಕೊಂಡಿರುವ ಹಲವು ರೀತಿಯ ಸಗಟು ಖರೀದಿ ಯೋಜನೆಗಳು ಪುಸ್ತಕೋದ್ಯಮ ಉಸಿರಾಡುವಂತೆ ಮಾಡಿದೆ. ಓದುವ ಸಂಸ್ಕೃತಿಯನ್ನು ಯಾವೆಲ್ಲ ರಾಜ್ಯಗಳು ರಕ್ಷಿಸಿವೆಯೋ ಅಲ್ಲೆಲ್ಲ ಪುಸ್ತಕ ಉದ್ಯಮ ಸಂಪನ್ನವಾಗಿದೆ. ಹಾಗಾಗಿ ಓದುವ ಸಂಸ್ಕೃತಿಯನ್ನು ರಕ್ಷಿಸುವ ಕಡೆಗೆ ಗಮನ ಕೊಡಬೇಕಾದ ಹೊಣೆ ಎಲ್ಲರದ್ದು ಎಂದು ತಿಳಿಸಿದರು.
ಇದನ್ನೂ ಓದಿ | ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
ಕಾರ್ಯಕ್ರಮದಲ್ಲಿ ಅನುವಾದಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ಕೆ.ನಲ್ಲತಂಬಿ ಅವರನ್ನು ‘ಬಹುರೂಪಿ’ ಸನ್ಮಾನಿಸಿತು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಪುಸ್ತಕ ಎನ್ನುವುದು ಅರಿವಿನ ಭಾಗ. ನಮ್ಮ ಜ್ಞಾನ ವೃದ್ಧಿಗೆ ಪುಸ್ತಕ ಓದುವ ಹವ್ಯಾಸ ಎಲ್ಲೆಡೆಯೂ ಪಸರಿಸಬೇಕಿದೆ. ಸಾಹಿತ್ಯದ ಸಹವಾಸ ನನ್ನ ವ್ಯಕ್ತಿತ್ವವನ್ನು ರೂಪಿಸಿದೆ ಎಂದು ತಿಳಿಸಿದರು.
ಸಂವಾದದಲ್ಲಿ ಬಹುರೂಪಿಯ ಸಂಸ್ಥಾಪಕ ಜಿ.ಎನ್. ಮೋಹನ್, ಶ್ರೀಜಾ ವಿ.ಎನ್, ಕಲಾವಿದರಾದ ಗುಜ್ಜಾರ್, ಆರ್. ಸೂರಿ, ಸಾಹಿತಿ ರಂಜನಿ ಪ್ರಭು, ಸಂಸ್ಕೃತಿ ಚಿಂತಕ ಜಿ.ಎನ್. ನಾಗರಾಜ್ ಭಾಗಿಯಾಗಿದ್ದರು.
ಕರ್ನಾಟಕ
Education Department: ಶಿಥಿಲ ಶಾಲಾ ಕೊಠಡಿಗಳ ಬಳಕೆ ಬೇಡ: ಶಿಕ್ಷಣ ಇಲಾಖೆ ಸುತ್ತೋಲೆ
Education Department: ಮೇ 29ರಿಂದ ರಾಜ್ಯದಲ್ಲಿ ಶಾಲೆಗಳು ಆರಂಭವಾಗುತ್ತಿವೆ. ಆದರೆ, ಎಲ್ಲೆಡೆ ಭಾರಿ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆಯಾಗಿ ಶಿಥಿಲಾವಸ್ಥೆಯ ಶಾಲಾ ಕೊಠಡಿಗಳನ್ನು ಬಳಸದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.
ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಅಲ್ಲಲ್ಲಿ ಮನೆಗಳು ಬಿದ್ದಿರುವ ಉದಾಹರಣೆಗಳು ಇವೆ. ಈ ನಡುವೆ ಮೇ 29ರಿಂದ ಶಾಲೆಗಳು ಆರಂಭವಾಗುತ್ತಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶಿಥಿಲಾವಸ್ಥೆಯ ಶಾಲಾ ಕೊಠಡಿಗಳನ್ನು ಬಳಸಬಾರದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (Education Department) ಸುತ್ತೋಲೆ ಹೊರಡಿಸಿದೆ.
ಮಕ್ಕಳ ಬೇಸಿಗೆ ರಜೆ ಮುಗಿದಿದ್ದು, 2023-24ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲು ಎರಡೇ ದಿನ ಬಾಕಿ ಇದೆ. ಆದರೆ, ರಾಜ್ಯದೆಲ್ಲೆಡೆ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆ ಶಾಲಾ ಕೊಠಡಿಗಳು ಕುಸಿದು ಅಪಾಯ ಸಂಭವಿಸುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತೆ ಕ್ರಮವಾಗಿ ಶಿಥಿಲ ಕೊಠಡಿಗಳನ್ನು ಬಳಸಬಾರದು. ಅಗತ್ಯ ಮುಂಜಾಗ್ರತೆ ಕ್ರಮಗಳೊಂದಿಗೆ ಶಾಲಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮುಖ್ಯ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.
ದುರಸ್ತಿಗೆ ಕ್ರಮ ಕೈಗೊಳ್ಳಬೇಕು
ಮಳೆಯಿಂದ ಶಾಲೆಯ ಕೊಠಡಿಗಳು, ಶೌಚಾಲಯ, ಕಾಂಪೌಂಡ್ ಶಿಥಿಲಗೊಂಡಲ್ಲಿ ಅವುಗಳನ್ನು ಬಳಸದಂತೆ ಸೂಚಿಸಲಾಗಿದೆ. ಇನ್ನು ಮಳೆಯಿಂದ ಪ್ರವಾಹ ಉಂಟಾಗಿ ಶಾಲೆಗಳಿಗೆ ಬಂದು ಹೋಗಲು ಸಮಸ್ಯೆ, ಶಾಲಾ ಕೊಠಡಿಗಳು ಜಲಾವೃತವಾಗಿ ಒಳಗೆ ನೀರು ಸಂಗ್ರಹವಾಗಿದ್ದರೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ, ಜಿಲ್ಲಾ ಉಪನಿರ್ದೇಶಕರು, ಸ್ಥಳೀಯ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದು ಮುಖ್ಯ ಶಿಕ್ಷಕರು ಕೊಠಡಿಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಆಯುಕ್ತ ಆರ್.ವಿಶಾಲ್ ತಿಳಿಸಿದ್ದಾರೆ.
ಇದನ್ನೂ ಓದಿ: UPSC Prelims 2023: ಮೇ 28ರಂದು ಬೆಂಗಳೂರಿನಲ್ಲಿ ಬೆಳಗ್ಗೆ 6ರಿಂದಲೇ ಮೆಟ್ರೋ ಸಂಚಾರ ಆರಂಭ
ಇನ್ನು ಬಿಸಿಯೂಟದಲ್ಲಿ ಸಿಹಿ ಉಪಾಹಾರ ವಿತರಿಸಬೇಕು. ಜೂನ್ 1 ರಿಂದ ತರಗತಿಗಳನ್ನು ಆರಂಭಿಸಬೇಕು. ಮಳೆಯಿಂದಾಗಿ ಹಳ್ಳ, ಕೊಳ್ಳ, ನದಿಗಳು ತುಂಬಿದ್ದು, ರಸ್ತೆಗಳು ಹಾಳಾಗಿ ಮಕ್ಕಳು ಶಾಲೆಗೆ ಬರಲು ತೊಂದರೆಯಾಗಿದ್ದರೆ ಅಧಿಕಾರಿಗಳ ಗಮನಕ್ಕೆ ತಂದು ಶಾಲೆಗೆ ರಜೆ ಘೋಷಿಸಬೇಕು ಎಂದು ಸೂಚಿಸಲಾಗಿದೆ.
ಕರ್ನಾಟಕ
Bbmp Teachers: ಜೂನ್ 1ರಿಂದ ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಕರು ಗೈರು; ಮಕ್ಕಳ ಗತಿಯೇನು?
Summer Holiday: ಬೇಸಿಗೆ ರಜೆ ಮುಗಿದು ಇನ್ನೇನು ಕೆಲವೇ ದಿನದಲ್ಲಿ ಶಾಲೆಗಳು ಪುನರ್ (School Reopen) ಆರಂಭಗೊಳ್ಳುತ್ತವೆ. ಆದರೆ ಬಿಬಿಎಂಪಿ ಶಾಲೆಗಳು (BBMP school) ಆರಂಭವಾಗಿ ಮಕ್ಕಳು ಬಂದರೂ, ಶಿಕ್ಷಕರು ಮಾತ್ರ (Teachers absent) ಗೈರಾಗಲಿದ್ದಾರೆ. ಹಾಗಂತ ಎಲ್ಲ ಶಿಕ್ಷಕರೂ ಅಲ್ಲ, ಗುತ್ತಿಗೆ ಆಧಾರದಲ್ಲಿ ನೇಮಕಗೊಳ್ಳುತ್ತಿದ್ದ ಶಿಕ್ಷಕರು ಮಾತ್ರ ಲಭ್ಯವಾಗುತ್ತಿಲ್ಲ.
ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಬಿಬಿಎಂಪಿ ಶಾಲೆಗಳ ಶೈಕ್ಷಣಿಕ ವರ್ಷವು ಮೇ 29 ರಿಂದ ಆರಂಭವಾಗಲಿದೆ. ಈ ನಡುವೆ ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಕರು ಗೈರಾಗಲಿದ್ದಾರೆ (BBMP Teachers absent) ಎಂಬ ಮಾತು ಕೇಳಿ ಬಂದಿದೆ. ಬಿಬಿಎಂಪಿ ಶಾಲಾ-ಕಾಲೇಜುಗಳಿಗೆ ಹೊರಗುತ್ತಿಗೆ ಆಧಾರದಲ್ಲಿ (Outsourcing Basis) ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಆದರೆ, ಈ ಬಾರಿ ನೇಮಕಾತಿ ಪ್ರಕ್ರಿಯೆಯಲ್ಲಿ ಸಮಸ್ಯೆ ಆಗಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ಏಜೆನ್ಸಿಗಳು ಪಾಲ್ಗೊಳ್ಳದ ಹಿನ್ನೆಲೆಯಲ್ಲಿ ನಗರದ ಬಿಬಿಎಂಪಿ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ಜೂನ್ 1 ರಿಂದ ಗೈರಾಗುವ ಆತಂಕ ಎದುರಾಗಿದೆ.
4 ವಲಯಗಳಿಗೆ ಪ್ರತ್ಯೇಕ ಟೆಂಡರ್ ಕರೆದ ಪಾಲಿಕೆ
ಬಿಬಿಎಂಪಿ ಶಾಲಾ-ಕಾಲೇಜುಗಳಿಗೆ 700ಕ್ಕೂ ಹೆಚ್ಚು ಶಿಕ್ಷಕರ ಹೊರಗುತ್ತಿಗೆ ನೇಮಕಾತಿ ಟೆಂಡರ್ ಕರೆಯಲಾಗಿತ್ತು. ಆದರೆ, ಹಲವು ದಿನಗಳಿಂದ ಟೆಂಡರ್ ಕರೆದರೂ ಯಾವ ಏಜೆನ್ಸಿಗಳು ಭಾಗವಹಿಸಿಲ್ಲ. ಈ ಕಾರಣದಿಂದ ಬಿಬಿಎಂಪಿಯಿಂದ ಮರು ಟೆಂಡರ್ ಕರೆಯಲಾಗಿದ್ದು, ಈ ಪ್ರಕ್ರಿಯೆ ಮುಗಿಯುವವರೆಗೂ ಶಿಕ್ಷಕರ ಕೊರತೆ ಉಂಟಾಗಲಿದೆ.
ಹೊರಗುತ್ತಿಗೆ ಶಿಕ್ಷಕರ ಟೆಂಡರ್ ಪ್ರಕಿಯೆಯಲ್ಲಿ ಹಲವಾರು ನ್ಯೂನತೆಗಳು ಇರುವುದರಿಂದ ಗುತ್ತಿಗೆದಾರ ಸಂಸ್ಥೆಗಳು ಭಾಗವಹಿಸುತ್ತಿಲ್ಲ ಎಂಬ ಆರೋಪವು ಕೇಳಿ ಬಂದಿದೆ. ನಾಲ್ಕು ವಲಯಗಳಲ್ಲಿ ಟೆಂಡರ್ ಕರೆದಿರುವುದರಿಂದ ವಲಯವಾರುಗಳಲ್ಲಿ ಬಿಲ್ಲು ಸಂದಾಯ ಮಾಡಿ, ಶಿಕ್ಷಕರಿಗೆ ವೇತನ ನೀಡಲು ವಿಳಂಬವಾಗುತ್ತದೆ. ಒಂದು ವಲಯ ವ್ಯಾಪ್ತಿಯಲ್ಲಿ ಸಕಾಲಕ್ಕೆ ಸಂಬಳ ಪಾವತಿಯಾದರೆ, ಇನ್ನೊಂದು ವಲಯ ವ್ಯಾಪ್ತಿಯಲ್ಲಿ ವೇತನ ಬಿಡುಗಡೆಯಲ್ಲಿ ವಿಳಂಬವಾದಲ್ಲಿ ಅರ್ಧ ಶಿಕ್ಷಕರಿಗೆ ಸಂಬಳ ನೀಡುವುದು, ಇನ್ನೊಬ್ಬರಿಗೆ ನೀಡದಂತೆ ಆಗುತ್ತದೆ ಎಂದು ಗುತ್ತಿಗೆದಾರರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.
ಪೇಮೆಂಟ್ ವಿಚಾರವಾಗಿ ಅನೇಕ ಗೊಂದಲಗಳು
ಅಧಿಕಾರ ಕೇಂದ್ರೀಕರಣ ಮಾಡಿ ಒಂದೇ ಕಡೆ ಬಿಲ್‌ಗಳ ಪಾವತಿ ಮಾಡಿ, ಒಂದೇ ಕಡೆ ವೇತನ ಪಾವತಿ ಮಾಡುವುದರಿಂದ ಕೆಲಸದ ಒತ್ತಡ ಕಡಿಮೆಯಾಗುತ್ತದೆ. ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರ ನೇಮಕಾತಿಗೆ ಬೇಕಾದ ನಿಯಮಾವಳಿ ಪ್ರಕಾರ ಶಿಕ್ಷಕರನ್ನು ನೀಡುತ್ತೇವೆ. ಆದರೆ, ವಲಯವಾರು ಟೆಂಡರ್ ಕೈ ಬಿಡಬೇಕು ಎಂದು ಏಜೆನ್ಸಿಗಳು ಮನವಿ ಮಾಡಿವೆ.
ಇದನ್ನೂ ಓದಿ: Weather Report: ಈ ವಾರ ಕರಾವಳಿಯಲ್ಲಿ ಮಳೆ ಅಬ್ಬರ; ಉಳಿದೆಡೆ ಬಿಸಿಲಿಗೆ ಜನ ತತ್ತರ
ಸದ್ಯ, ಟೆಂಡರ್ ಅಂತಿಮವಾಗದೆ ಹೋದರೆ ಜೂನ್ ತಿಂಗಳಲ್ಲಿ ಆರಂಭವಾಗುವ ಶಾಲೆಗೆ ಹೊರಗುತ್ತಿಗೆ ಶಿಕ್ಷಕರು ಇರುವುದಿಲ್ಲ. ಟೆಂಡರ್ ನಿಯಮಾವಳಿ ಸರಳೀಕರಣ ಮಾಡಿರುವ ಕಾರಣದಿಂದ ಯಾರು ಬೇಕಾದರೂ ಭಾಗವಹಿಸಬಹುದು. ಇದರಿಂದ ಉತ್ತಮ ಗುಣಮಟ್ಟದ ಶಿಕ್ಷಕರನ್ನು ನೀಡಲು ಅಸಾಧ್ಯವಾಗುತ್ತದೆ ಎಂದು ಏಜೆನ್ಸಿಗಳು ಬೇಸರ ವ್ಯಕ್ತಪಡಿಸಿವೆ. ಆದರೆ ಪಾಲಿಕೆ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಸದ್ಯದ ಪ್ರಶ್ನೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಕರ್ನಾಟಕ
New Parliament Building : ನೂತನ ಸಂಸತ್ ಭವನ ಉದ್ಘಾಟನೆಗೆ ಶೃಂಗೇರಿ ಪುರೋಹಿತರು
ನೂತನ ಸಂಸತ್ ಭವನ: ಭಾನುವಾರ ನಡೆಯಲಿರುವ ನೂತನ ಸಂಸತ್ ಭವನದ ಉದ್ಘಾಟನೆಗೆ ಸಂಬಂಧಿಸಿದ ಪೂಜಾ ಕಾರ್ಯಕ್ರಮಗಳ ಸಾರಥ್ಯವನ್ನು ಶೃಂಗೇರಿಯ ಋತ್ವಿಜರು ವಹಿಸಿದ್ದಾರೆ.
ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಸಾರಥ್ಯದಲ್ಲಿ ನಿರ್ಮಾಣಗೊಂಡಿರುವ ನೂತನ ಸಂಸತ್ ಭವನ (New Parliament Building) ಉದ್ಘಾಟನೆ ಭಾನುವಾರ (ಮೇ 28) ಅದ್ಧೂರಿಯಾಗಿ ಮತ್ತು ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ. ವಿಶೇಷವೆಂದರೆ ಸಂಸತ್ ಭವನದಲ್ಲಿ ನಡೆಯಲಿರುವ ಉದ್ಘಾಟನೆ ಸಂಬಂಧಿತ ಪೂಜಾ ಕೈಂಕರ್ಯಗಳನ್ನು (Pooja programmes) ನಡೆಸುವ ಜವಾಬ್ದಾರಿ ಹೊತ್ತಿರುವವರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ (Shringeri) ಪುರೋಹಿತರು.
ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸುವುದಕ್ಕಾಗಿ ಶೃಂಗೇರಿಯ ಪುರೋಹಿತರ ತಂಡ ಆಗಲೇ ದಿಲ್ಲಿ ತಲುಪಿಸಿದ್ದು ಶನಿವಾರ ಸಂಜೆಯಿಂದಲೇ ಕಾರ್ಯಕ್ರಮಗಳು ನಡೆಯಲಿವೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಈ ಭವನವನ್ನು ಉದ್ಘಾಟಿಸಲಿದ್ದು, ಅದಕ್ಕೆ ಸಂಬಂಧಿಸಿದ ಪೂಜೆಗಳನ್ನು ಶೃಂಗೇರಿಯ ವೇದಪಾರಂಗತ ಪುರೋಹಿತರಾದ ಸೀತಾರಾಮ ಶರ್ಮ, ಶ್ರೀರಾಮ ಶರ್ಮ ಹಾಗೂ ಲಕ್ಷ್ಮೀಶ ತಂತ್ರಿ ಅವರು ನೆರವೇರಿಸಲಿದ್ದಾರೆ.
ಶನಿವಾರದಿಂದಲೇ ಪೂಜಾ ಕಾರ್ಯಕ್ರಮಗಳು ಆರಂಭವಾಗಿವೆ. ಶನಿವಾರ ರಾತ್ರಿ ವಾಸ್ತು ಹೋಮ ನಡೆಯಲಿದ್ದು, ಭಾನುವಾರ ಬೆಳಗ್ಗೆ ಗಣಪತಿ ಹೋಮ ನಡೆಯಲಿದೆ.
ಅಡಿಗಲ್ಲು ಕಾರ್ಯಕ್ರಮದಲ್ಲೂ ಶೃಂಗೇರಿಯ ಪುರೋಹಿತರಿಂದಲೇ ಪೂಜೆ
2020ರಲ್ಲಿ ಸಂಸತ್ ಭವನಕ್ಕೆ ಅಡಿಗಲ್ಲು ಇಡುವ ಸಂದರ್ಭದಲ್ಲಿ ನಡೆದ ಪೂಜೆಯನ್ನೂ ಶೃಂಗೇರಿಯ ಪುರೋಹಿತರೇ ನಡೆಸಿದ್ದರು. ಆರು ಜನ ಪುರೋಹಿತರಿಂದ ಭೂಮಿ ಪೂಜೆ ನೆರವೇರಿಸಲಾಗಿತ್ತು.
2020ರ ಡಿಸೆಂಬರ್ 10ರಂದು ನಡೆದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಶೃಂಗೇರಿ ಮಠದ ವೈದಿಕ ಪಂಡಿತರಾದ ವೇದಬ್ರಹ್ಮ ಡಾ. ಟಿ. ಶಿವಕುಮಾರ ಶರ್ಮಾ, ವೇದ ಬ್ರಹ್ಮ ಶ್ರೀ ಲಕ್ಷ್ಮೀನಾರಾಯಣ ಸೋಮಯಾಜಿ, ವೇದಬ್ರಹ್ಮ ಶ್ರೀ ಗಣೇಶ ಸೋಮಯಾಜಿ, ನಾಗರಾಜ ಅಡಿಗ, ಋಗ್ವೇದ ಪ್ರಾಧ್ಯಾಪಕರಾಗಿರುವ ರಾಘವೇಂದ್ರ ಭಟ್, ಋಷ್ಯಶೃಂಗ ಭಟ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ಬಾರಿ ಏನೇನು ಕಾರ್ಯಕ್ರಮವಿರುತ್ತದೆ?
ನೂತನ ಸಂಸತ್ ಭವನದ ಉದ್ಘಾಟನೆ ಭಾನುವಾರ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲನೆ ಹಂತದಲ್ಲಿ, ಸಂಸತ್ತಿನ ಮಹಾತ್ಮ ಗಾಂಧಿ ಪ್ರತಿಮೆ ಬಳಿಯ ಮೇಲಾವರಣದೊಳಗೆ ನಡೆಯುವ ಧಾರ್ಮಿಕ ಕ್ರಿಯೆಯೊಂದಿಗೆ ಸಮಾರಂಭವು ಪ್ರಾರಂಭವಾಗುತ್ತದೆ. ಈ ವೇಳೆ, ಪ್ರಧಾನಿ ಮೋದಿ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ಸೇರಿದಂತೆ ಹಿರಿಯ ಸಚಿವರು ಭಾಗವಹಿಸಲಿದ್ದಾರೆ.
ಬಳಿಕ ಲೋಕಸಭೆ ಮತ್ತು ರಾಜ್ಯಸಭೆ ಆವರಣಗಳನ್ನು ಗಣ್ಯರು ಪರಿಶೀಲಿಸಿದ ಬಳಿಕ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಬಳಿಕ ಲೋಕಸಭೆ ಸ್ಪೀಕರ್ ಪೀಠದ ಮುಂದೆ ಪವಿತ್ರ ರಾಜದಂಡವನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈ ಪ್ರತಿಷ್ಠಾಪನೆಯನ್ನು ತಮಿಳುನಾಡಿನಿಂದ ಆಗಮಿಸಿದ ಪುರೋಹಿತರೇ ಮಾಡಲಿದ್ದು, ರಾಜದಂಡವನ್ನು ವಿನ್ಯಾಸ ಮಾಡಿದ ಮೂಲ ಅಕ್ಕಸಾಲಿಗ ಕೂಡ ಈ ವೇಳೆ ಹಾಜರು ಇರಲಿದ್ದಾರೆ. ಮೊದಲನೆ ಹಂತದ ಈ ಕಾರ್ಯಕ್ರಮವು ಬೆಳಗ್ಗೆ 9.30ಕ್ಕೆ ಮುಕ್ತಾಯವಾಗಲಿದೆ.
ಮಧ್ಯಾಹ್ನದ ವೇಳೆ ಎರಡನೇ ಹಂತದ ಕಾರ್ಯಕ್ರಮಗಳು ನಡೆಯಲಿವೆ. ಈ ವೇಳೆ ನಾಯಕರು ಮಾತನಾಡಲಿದ್ದಾರೆ. ಮೊದಲಿಗೆ ರಾಜ್ಯಸಭೆಯ ಡೆಪ್ಯುಟಿ ಚೇರ್ಮನ್ ಹರಿವಂಶ್ ಅವರು, ರಾಜ್ಯಸಭಾ ಚೇರ್ಮನ್ ಆಗಿರುವ ಉಪರಾಷ್ಟ್ರಪತಿಗಳ ಲಿಖಿತ ಸಂದೇಶವನ್ನು ಓದಲಿದ್ದಾರೆ. ಇದೇ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಳುಹಿಸಿರುವ ಲಿಖಿತ ಸಂದೇಶವನ್ನೂ ಓದಲಾಗುತ್ತದೆ.
ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆ ಪ್ರಧಾನ ಕಾರ್ಯದರ್ಶಿ ಅವರು ವಂದನಾರ್ಪಣೆ ಮಾಡುವುದರೊಂದಿಗೆ ಉದ್ಘಾಟನಾ ಕಾರ್ಯಕ್ರಮವು ಸಂಪನ್ನಗೊಳ್ಳಲಿದೆ.
ಇದನ್ನೂ ಓದಿ: New Parliament: ಹೊಸ ಸಂಸತ್ ಭವನದ ವಿಡಿಯೊ ಹಂಚಿಕೊಂಡು, ವಿಶೇಷ ಮನವಿ ಮಾಡಿದ ಪ್ರಧಾನಿ ಮೋದಿ
-
ಸುವಚನ15 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕರ್ನಾಟಕ7 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ9 hours ago
Karnataka Cabinet Expansion Live : 34 ಸಚಿವರಿಗೆ ಖಾತೆ ಹಂಚಿಕೆ; ಬಯಸಿದ ಖಾತೆ ಪಡೆದ ಡಿ ಕೆ ಶಿವಕುಮಾರ್
-
ಕರ್ನಾಟಕ21 hours ago
RP Ashok: ಇನ್ಸ್ಪೆಕ್ಟರ್ ಆರ್.ಪಿ.ಅಶೋಕ್ಗೆ ಆರ್ಯಭಟ ಪ್ರಶಸ್ತಿ ಪ್ರದಾನ
-
ಕರ್ನಾಟಕ21 hours ago
ರಾಜ್ಯ ಸಚಿವ ಸಂಪುಟ ವಿಸ್ತರಣೆ: ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ 24 ಶಾಸಕರಿಗೆ ಸಚಿವ ಸ್ಥಾನ, ಮತ್ತೆ ಸಿದ್ದು ಮೇಲುಗೈ
-
ಕ್ರಿಕೆಟ್22 hours ago
IPL 2023: ಗಿಲ್ ಶತಕದ ಕಮಾಲ್; ಮುಂಬೈಗೆ ಬೃಹತ್ ಮೊತ್ತದ ಗುರಿ
-
ಉತ್ತರ ಕನ್ನಡ20 hours ago
Honnavar News: ಕಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ, 30 ಮಂದಿಗೆ ಗಾಯ
-
ಪ್ರಮುಖ ಸುದ್ದಿ20 hours ago
ವಿಸ್ತಾರ ಸಂಪಾದಕೀಯ: ರಾಜ್ಯಾದ್ಯಂತ ಗ್ಯಾರಂಟಿ ಭರವಸೆಯ ಗದ್ದಲ, ಹೊಸ ಸರ್ಕಾರ ಗೊಂದಲ ನಿವಾರಿಸಲಿ