Site icon Vistara News

H.D. Kumaraswamy: ಏನು ಶಿಕ್ಷೆ ಅಂತ ಹೇಳಲಿ, ಆಮೇಲೆ ಸಾಕ್ಷಿ ಬಿಡುಗಡೆ: ಪೆನ್‌ಡ್ರೈವ್‌ ಹಿಡಿದು ಸರ್ಕಾರಕ್ಕೆ HDK ಸವಾಲು

HD Kumaraswamy vidhanasoudha

ಬೆಂಗಳೂರು: ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಏನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರ ತಿಳಿಸಲಿ, ನನ್ನ ಬಳಿಯಿರುವ ಪೆನ್‌ಡ್ರೈವ್‌ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ (H.D. Kumaraswamy) ತಿಳಿಸಿದ್ದಾರೆ.

ಈ ಸರ್ಕಾರ ದಿನದ 24 ಗಂಟೆಯೂ ವರ್ಗಾವಣೆ ದಂಧೆಯನ್ನೇ ನಡೆಸುತ್ತಿದೆ. ಅಭಿವೃದ್ಧಿ ಬದಲು ನಗದು ಅಭಿವೃದ್ಧಿಯಲ್ಲಿ ತೊಡಗಿದೆ. ಇದನ್ನು ಹೇಳಿದರೆ ನಮ್ಮ ಮೇಲೆಯೇ ಕೆಸರು ಎರಚುವ ಕೆಲಸ ಮಾಡುತ್ತಿದ್ದಾರೆ. ನನ್ನಲ್ಲಿ ಈ ಸರ್ಕಾರ ನಡೆಸುತ್ತಿರುವ ವರ್ಗಾವಣೆ ದಂಧೆಗಳಿಗೆ ಸಂಬಂಧಿಸಿ ನನ್ನಲ್ಲಿ ದಾಖಲೆಗಳಿವೆ. ಅದರಲ್ಲಿ ಯಾರಿಗೂ ಅನುಮಾನ ಬೇಡ. ಅದನ್ನು ಬಿಡುಗಡೆ ಮಾಡಬೇಕಾದ ಸಂದರ್ಭದಲ್ಲಿ ಮಾಡುತ್ತೇನೆ. ಯಾವಾಗ, ಎಲ್ಲಿ ಬಿಡುಗಡೆ ಮಾಡುತ್ತೇನೆ ಎಂಬುದು ನನಗೆ ಗೊತ್ತಿದೆ. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಹಲವಾರು ವರ್ಷಗಳು ಕೆಲಸ ಮಾಡಿದ್ದಾರೆ, ಅವರು ಎಂದಾದರೂ ದಾಖಲೆ ಬಿಡುಗಡೆ ಮಾಡಿದ್ದರಾ? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಅವರು ಎಂದೂ ದಾಖಲೆ ಇಟ್ಟು ಮಾತನಾಡಿದನ್ನು ನಾನು ನೋಡಲೇ ಇಲ್ಲ. ಇದ್ದರೆ ತೋರಿಸಲಿ. ಬಹುಮತದ ಸರ್ಕಾರ ತಂದುಕೊಂಡು ಈ ದಂಧೆಯಲ್ಲಿ ತೊಡಗಿದ್ದಾರೆ. ಮೈಸೂರಿನಲ್ಲಿ ವರ್ಗಾವಣೆ ಬಗ್ಗೆ ಚರ್ಚೆ ಆಗುತ್ತಿದೆ. ಮನೆಯಲ್ಲಿ ಸಿಎಂ ಪುತ್ರ ಮಲಗಿರುವ ಸಂದರ್ಭದಲ್ಲಿ ಇಷ್ಟಾಗಿದೆ. ಇನ್ನು ಹೊರಗೆ ಬಂದರೆ ಏನಾಗಬಹುದು ಎಂದು ಜನ ಕೇಳುತ್ತಿದ್ದಾರೆ. ನಾನು ದ್ವೇಷದ ರಾಜಕೀಯ ಮಾಡ್ತಿಲ್ಲ, ವಿರೋಧ ಪಕ್ಷದ ಸದಸ್ಯನಾಗಿ ನನ್ನ ಕೆಲಸ ಮಾಡ್ತಿದ್ದೇನೆ. ಸತ್ಯ ಹೇಳುವುದೇ ತಪ್ಪಾ?

ಇದನ್ನೂ ಓದಿ: Karnataka Politics: ಇಂಧನ ಇಲಾಖೆಯಲ್ಲಿ 10 ಕೋಟಿ ರೂ.ಗೆ ಒಂದು ಟ್ರಾನ್ಸ್‌ಫರ್‌: ಪೆನ್‌ಡ್ರೈವ್‌ ಹಿಡಿದೇ ಸದನಕ್ಕೆ ಬಂದ HDK

ಪೈನ್ ಡ್ರೈವ್ ಬಿಡುಗಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಎಚ್‌.ಡಿ. ಕುಮಾರಸ್ವಾಮಿ, ನಾನು ಹೆದರಿ ಓಡಿ ಹೋಗುವ ವ್ಯಕ್ತಿ ಅಲ್ಲ. ಹಿಟ್ ಅಂಡ್ ರನ್ ಮಾಡಲ್ಲ. ಕಾಂಗ್ರೆಸ್ ನಾಯಕರು ಏನು ಮಾತಾಡ್ತಾರೆಂದು ನೋಡೋಣ. ನನ್ನ ಬಳಿ ಇರುವ ಪೆನ್ ಡ್ರೈವ್ ಅಸಲಿ, ಹೈದ್ರಾಬಾದ್ ನಲ್ಲಿ ಮಾಡಿಸಿದ್ದಲ್ಲ. ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಕ್ರಮ ಏನು ಅಂತ ಅವರು ಹೇಳಲಿ. ಆಮೇಲೆ ದಾಖಲೆ ಹೊರ ಬಿಡುತ್ತೇನೆ ಎಂದರು.

Exit mobile version