Site icon Vistara News

Holenarasipur Election Results : ಹೊಳೆನರಸೀಪುರದಲ್ಲಿ ಗೆಲುವಿನ ನಗೆ ಬೀರಿದ ಎಚ್‌.ಡಿ. ರೇವಣ್ಣ

Holenarasipur Election Results HD revanna winner

Holenarasipur Election Results HD revanna wins

ಹಾಸನ: ರಾಜ್ಯ ವಿಧಾನಸಭಾ ಚುನಾವಣೆ (Holenarasipur Election Results) ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಹೊಳೆನರಸೀಪುರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್‌.ಡಿ.ರೇವಣ್ಣ ಗೆಲುವು ಪಡೆದಿದ್ದಾರೆ. ಇವರು ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್ ವಿರುದ್ಧ 3,152 ಮತಗಳ ಅಂತರದಿಂದ ವಿಜಯ ಪತಾಕೆ ಹಾರಿಸಿದ್ದಾರೆ.

ಈ ಬಾರಿ ಜೆಡಿಎಸ್‌ ಅಭ್ಯರ್ಥಿ ಎಚ್‌.ಡಿ.ರೇವಣ್ಣ 88,103 ಮತಗಳನ್ನು ಪಡೆದಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಪಟೇಲ್ 84,951 ಮತ, ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ 4,850 ಮತಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ | Channapatna Election Results : ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಜಯಭೇರಿ

2018ರ ಚುನಾವಣೆಯಲ್ಲಿ ಜೆಡಿಎಸ್ ಆಭ್ಯರ್ಥಿ ಎಚ್.ಡಿ.ರೇವಣ್ಣ ಅವರು 1,08,541 ಮತಗಳನ್ನು ಪಡೆದು ಭರ್ಜರಿ ಗೆಲುವು ದಾಖಲಿಸಿದ್ದರು. ಇನ್ನು ಕಾಂಗ್ರೆಸ್ ಅಭ್ಯರ್ಥಿ ಬಾಗೂರು ಮಂಜೇಗೌಡ 64,709, ಬಿಜೆಪಿ ಅಭ್ಯರ್ಥಿ ಎಂ.ಎನ್.ರಾಜು 3,667 ಮತಗಳನ್ನು ಪಡೆದಿದ್ದರು.

Exit mobile version