ಶಿವಮೊಗ್ಗ: ಕಾಲೇಜು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅಭಯ್ ರೆಡ್ಡಿ (22) ಮೃತ ದುರ್ದೈವಿ.
ಶಿವಮೊಗ್ಗದ ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಯಾಗಿರುವ ಅಭಯ್ ರೆಡ್ಡಿ, ಕಾಲೇಜಿನ ವಸತಿ ನಿಲಯದ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ. ಬೆಂಗಳೂರಿನ ಬೊಮ್ಮಸಂದ್ರ ನಿವಾಸಿವಾಗಿರುವ ಅಭಯ್ ವಿದ್ಯಾಭ್ಯಾಸಕ್ಕೆಂದು ಸುಬ್ಬಯ್ಯ ವೈದ್ಯಕೀಯ ಕಾಲೇಜು ಸೇರಿದ್ದ.
ಆದರೆ, ಕಾಲೇಜಿನ ಪ್ರಾಂಶುಪಾಲರಿಂದ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಇನ್ನು ಗೋಡೆ ಮೇಲೆ ಡೆತ್ ನೋಟ್‌ವೊಂದನ್ನು ಬರೆದಿದ್ದು, ನಾನು ವೀಕ್ ಮೈಂಡೆಡ್ ಅಲ್ಲ. ನಾನೊಬ್ಬ ಮನೆ ಮಗನಾಗಿದ್ದು, ಸ್ನೇಹಿತನ ಕುಟುಂಬವನ್ನು ಉಳಿಸುವವನು, ನನ್ನ ಸಾವನ್ನು ಕಾಮಿಡಿ ಎಂದು ಪರಿಗಣಿಸದಿರಿ ಎಂದು ಬರೆದಿದ್ದಾನೆ.
ಮಾನಸಿಕ ಖಿನ್ನತೆಯಿಂದ ಕುದೂರು ಠಾಣೆಯ ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣು
ನೆಲಮಂಗಲ: ಮಾನಸಿಕ ಖಿನ್ನತೆಯಿಂದ (Mental depression) ಬಳಲುತ್ತಿದ್ದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ (Kudur Police Station) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಜಮೀನಿನಲ್ಲಿದ್ದ ಹಲಸಿನ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರದ ನೆಲಮಂಗಲ ತಾಲೂಕಿನ ಅಗಳಕುಪ್ಪೆಯಲ್ಲಿ ಈ ಘಟನೆ ನಡೆದಿದೆ.
ಉಮೇಶ್ (37) ಮೃತ ದುರ್ದೈವಿ. ಕುದೂರು ಪೊಲೀಸ್ ಠಾಣೆಯಲ್ಲಿ ಉಮೇಶ್ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಐದು ತಿಂಗಳ ಹಿಂದಷ್ಟೇ ಅನಾರೋಗ್ಯದಿಂದ ತಮ್ಮ ನಾಲ್ಕೂವರೆ ವರ್ಷದ ಮಗುವನ್ನು ಕಳೆದುಕೊಂಡಿದ್ದರು. ಈ ಘಟನೆಯಿಂದ ಉಮೇಶ್ ಮನನೊಂದು ಖಿನ್ನತೆಗೆ ಜಾರಿದ್ದರು. ಜತೆಗೆ ರಕ್ತದೊತ್ತಡ ಹಾಗೂ ಮಧುಮೇಹ ಕಾಯಿಲೆಯಿಂದಲೂ ಬಳಲುತ್ತಿದ್ದರು.
ಇದನ್ನೂ ಓದಿ: ಡೆತ್‌ನೋಟ್ ಬರೆದಿಟ್ಟು 7ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ; ಮನನೊಂದಿದ್ದು ಯಾಕೆ?
ಕಳೆದ ಶನಿವಾರ ರಾತ್ರಿ ತಮ್ಮ ಜಮೀನಿನಲ್ಲಿ ಬೈಕ್ ನಿಲ್ಲಿಸಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ ಗ್ರಾಮಸ್ಥರು ನೋಡಿದಾಗ ವಿಷಯವನ್ನು ಪೊಲೀಸರಿಗೆ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ದಾಬಸ್‌ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.