ಹಾಸನ: ಜಿಲ್ಲೆಯ ವಸತಿ ಶಾಲೆಯೊಂದರಲ್ಲಿ ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ (Harrassment) ನಡೆಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಇದಕ್ಕೆ ಸಂಬಂಧಿಸಿ ಪ್ರಾಂಶುಪಾಲರು ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಸಮಾಜ ಇಲಾಖೆ ವ್ಯಾಪ್ತಿಗೆ ಬರುವ ಹಾಸನ ಜಿಲ್ಲೆ ಬೇಲೂರಿನ ಹೆಣ್ಣು ಮಕ್ಕಳ ವಸತಿ ಶಾಲೆಯಲ್ಲಿ ಘಟನೆ ಹೆಣ್ಣುಮಕ್ಕಳ ವಸತಿ ಶಾಲೆಯಲ್ಲಿ ಈ ಅಮಾನುಷ ಕೃತ್ಯ. ನಡೆದಿದ್ದು, ಎಂಟು ಮಂದಿ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ದೂರಲಾಗಿದೆ. ಪ್ರಾಂಶುಪಾಲರು, ಇಬ್ಬರು ಶಿಕ್ಷಕರು, ಒಬ್ಬ ಸೆಕ್ಯುರಿಟಿ ಗಾರ್ಡ್ ಹಾಗೂ ಮತ್ತಿಬ್ಬರನ್ನು ಬಂಧಿಸಲಾಗಿದೆ.
ಕಳೆದ ಹಲವು ತಿಂಗಳುಗಳಿಂದಲೇ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವ ಆಪಾದನೆ ಇದೆ. ಇದೇ ಕಾರಣಕ್ಕಾಗಿ, ದೌರ್ಜನ್ಯ ಸಹಿಸಲಾಗದೆ ಎರಡು ದಿನಗಳ ಹಿಂದೆ ಪ್ರಾಂಶುಪಾಲರ ಬದಲಾವಣೆಗಾಗಿ ವಿದ್ಯಾರ್ಥಿನಿಯರು ತೀವ್ರ ಹೋರಾಟ ನಡೆಸಿದ್ದರು. ಆದರೆ, ಈ ವಿಚಾರ ಎಂದು ಹೆಣ್ಣು ಮಕ್ಕಳು ಬಾಯಿ ಬಿಟ್ಟಿರಲಿಲ್ಲ.
ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳು ವಸತಿ ಶಾಲೆಗೆ ಭೇಟಿ ನೀಡಿದಾಗ ಅಮಾನುಷ ಕೃತ್ಯ ಬಯಲಾಗಿದೆ. ಹಳೆಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಾಂಶುಪಾಲರು ಸೇರಿ ಐವರ ವಿರುದ್ಧ ಜಾತಿ ದೌರ್ಜನ್ಯ ಮತ್ತು ಫೊಕ್ಸೊ ಕಾಯಿದೆಯಡಿ ತನಿಖೆ ನಡೆಸಲಾಗುತ್ತಿದೆ.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಹೈಸ್ಕೂಲ್ ಹೆಡ್‌ಮಾಸ್ಟರ್ ಮೇಲೆ ಪೋಕ್ಸೋ ಕೇಸ್
ಕೊಡಗು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಹೈಸ್ಕೂಲ್ ಮುಖ್ಯ ಶಿಕ್ಷಕನೊಬ್ಬನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಚೆಯ್ಯಂಡಾಣೆಯ ಅನುದಾನಿತ ಶಾಲೆಯೊಂದರ ಮುಖ್ಯ ಶಿಕ್ಷಕ ಮನೋಹರ್ ಮೇಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ (Sexual harrassment ) ನಡೆಸಿದ ಆರೋಪ ಎದುರಾಗಿದೆ.
ಪ್ರೌಢ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಈತ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಇವರಿಬ್ಬರೂ ಹತ್ತನೆ ತರಗತಿಯಲ್ಲಿ ಕಲಿಯುತ್ತಿದ್ದು, ಅವರನ್ನು ಮುಖ್ಯ ಶಿಕ್ಷಕರ ಕಚೇರಿಗೆ ಕರೆಸಿಕೊಂಡು ಅಸಭ್ಯ ವರ್ತನೆ ತೋರಿದ ಆರೋಪವಿದೆ.
ತಮಗೆ ಶಾಲೆಯಲ್ಲಿ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ವಿದ್ಯಾರ್ಥಿಯರು ಪೋಷಕರಿಗೆ ತಿಳಿಸಿದ್ದರು. ಅವರು ಪೊಲೀಸ್ ಠಾಣೆಗೆ ದೂರು ನೀಡಿದರು. ಇದೀಗ ಮಡಿಕೇರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : Harrassment Case : ಮಂಗಳೂರಿನ ಸಿಎಸ್‌ಐ ಬಿಷಪ್ ಹೌಸ್ ಉದ್ಯೋಗಿಗೆ ಲೈಂಗಿಕ ಕಿರುಕುಳ ಆರೋಪ; ಆರು ಮಂದಿ ಮೇಲೆ ಪ್ರಕರಣ ದಾಖಲು