Hassan Accident | ಯಾರನ್ನು ಬೈಕೊಬೇಕು ಹೇಳಿ? ದೇವರನ್ನಾ, ರಸ್ತೆಯನ್ನಾ, ಚಾಲಕನನ್ನಾ? ನಮ್ಮ ಹಣೆಬರಹವನ್ನಾ? - Vistara News

ಕರ್ನಾಟಕ

Hassan Accident | ಯಾರನ್ನು ಬೈಕೊಬೇಕು ಹೇಳಿ? ದೇವರನ್ನಾ, ರಸ್ತೆಯನ್ನಾ, ಚಾಲಕನನ್ನಾ? ನಮ್ಮ ಹಣೆಬರಹವನ್ನಾ?

ದೇವರು ಕೂಡಾ ಇಷ್ಟೊಂದು ಕ್ರೂರಿನಾ? ಅವನನ್ನೇ ನೋಡಲು ಹೋದವರಿಗೆ ಈ ಪರಿಯ ಶಿಕ್ಷೆನಾ? ಅಲ್ಲಿಗೆ ಹೋಗುವ ಮುನ್ನ ಮನೆಯಲ್ಲಿ ಹಿರಿಯರನ್ನು ಪೂಜಿಸಿಸಿದರಲ್ಲ.. ಅವರೂ ರಕ್ಷಣೆಗೆ ಬರಲಿಲ್ಲವೇಕೆ? ಹೀಗೆ ಸಾಲು ಸಾಲು ಪ್ರಶ್ನೆಗಳು ಬಂಧುಗಳದ್ದು. ಆದರೆ, ಉತ್ತರವಿಲ್ಲ.

VISTARANEWS.COM


on

Hasana accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಅವರೆಲ್ಲ ದೇವರನ್ನು ನೋಡಲು ಹೋದವರು.. ಈ ರೀತಿ ನಡುರಸ್ತೆಯಲ್ಲಿ ಹೆಣವಾಗಿ ಬಿದ್ದರಲ್ಲಾ? ದೇವರಿಗೆ ಕಣ್ಣಿಲ್ಲ ಎಂದು ಹೇಳಬೇಕಾ? ಎದುರಿನಿಂದ ಬಂದು ಡಿಕ್ಕಿ ಹೊಡೆಸಿದನಲ್ಲಾ? ಆ ಡ್ರೈವರ್‌ನನ್ನು ಹಳಿಯಬೇಕಾ? ರಸ್ತೆಯನ್ನು ಈ ರೀತಿ ಮಾಡಿಟ್ಟವರಿಗೆ ಶಾಪ ಹಾಕಬೇಕಾ? ಅಥವಾ ಇದು ನಮ್ಮದೇ ಹಣೆಬರಹ, ಇದೇ ವಿಧಿ ಅಂತ ಕಣ್ಣೀರು ಹಾಕುತ್ತಾ ಕೂರಬೇಕಾ?

ಹೀಗೆಂದು ಪ್ರಶ್ನೆಗಳ ಪ್ರಶ್ನೆಗಳನ್ನು ಇಡುತ್ತಾ, ಉತ್ತರವೇ ಇಲ್ಲದೆ ಕುಳಿತಿದ್ದರು ಆ ಒಂಬತ್ತು ಮಂದಿ ನಿಷ್ಪಾಪಿ ಜೀವಗಳ ಅಮಾಯಕ ಬಂಧುಗಳು.

ಹೌದು, ಅವ್ರೆಲ್ಲಾ ಧರ್ಮಸ್ಥಳ ಮಂಜುನಾಥ ಸ್ವಾಮಿ, ಹಾಸನದ ಹಾಸನಾಂಬೆ ದರ್ಶನ ಮಾಡ್ಕೊಂಡು ಮನೆ ಕಡೆಗೆ ಹೊರಟಿದ್ದರು. ಇನ್ನು ಕೇವಲ ಮೂರು ಕಿ.ಮೀ. ಕ್ರಮಿಸಿದ್ದರೆ ಮನೆ ಸಿಕ್ಕಿಯೇ ಬಿಡುತ್ತಿತ್ತು. ಆದರೆ, ಅವರಿಗೆ ಆ ಮನೆ ದೂರವಾಗಿ ಸಾವಿನ ಮನೆಯೇ ಹತ್ತಿರವಾಗಿಬಿಟ್ಟಿತು.

ಇದು ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಗಾಂಧಿ ನಗರದ ಬಳಿ ಶನಿವಾರ ತಡ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳ ಕಣ್ಣೀರ ಕಥೆ. ಈ ದುರ್ದೈವಿಗಳು ಸಾಗುತ್ತಿದ್ದ ಟೆಂಪೊ ಟ್ರಾವೆಲರ್‌ ಕೆಎಂಎಫ್‌ ಹಾಲಿನ ವಾಹನ ಮತ್ತು ಸರಕಾರಿ ಬಸ್‌ ನಡುವೆ ಅಪ್ಪಚ್ಚಿಯಾಗಿತ್ತು. ಒಂದೇ ಕುಟುಂಬದ ಒಂಬತ್ತು ಜೀವಗಳು ಅಲ್ಲಿ ಪ್ರಾಣ ಕಳೆದುಕೊಂಡಿದ್ದವು.

ಮೃತರ ಕುಟುಂಬಗಳ ಕಣ್ಣೀರು

ಹಿರಿಯರ ಪೂಜೆ ಮುಗಿಸಿ ಹೋಗಿದ್ದರು
ಅವರು ಯಾರಿಗೂ ಏನೂ ಕಡಿಮೆ ಮಾಡಿರಲಿಲ್ಲ. ಕಳೆದ ಶುಕ್ರವಾರವಷ್ಟೇ ಹಿರಿಯರ ಪೂಜೆ ಮುಗಿಸಿದ್ದರು. ಒಂದು ಕುಟುಂಬದವರೆಲ್ಲರೂ ಜತೆ ಆಗಿದ್ದೇವಲ್ಲಾ.. ಒಮ್ಮೆ ದೇವಸ್ಥಾನಗಳಿಗೂ ಹೋಗಿ ಬರೋಣ ಎಂದು ಹೊರಟಿದ್ದರು. ಹಿರಿಯರನ್ನು ನೆನಪಿಸಿಕೊಂಡ ಖುಷಿ, ದೇವರ ದರ್ಶನದ ಖುಷಿ ಎಲ್ಲರೂ ಜತೆಯಾಗಿ ಅವರೆಲ್ಲರೂ ಸಂಭ್ರಮದಿಂದ ಇದ್ದರು.

33 ವರ್ಷದ ಚೈತ್ರ ಇನ್ನೇನು ಕೆಲವೇ ದಿನಗಳಲ್ಲಿ ಕೋವಿಡ್‌ನಿಂದ ಸತ್ತ ತಂದೆಯ ಅನುಕಂಪದ ಕೆಲಸಕ್ಕೆ ಹೋಗಬೇಕಿತ್ತು. ಆದರೆ, ಜವರಾಯ ಆಕೆಯ ಆಸೆಗೆ ತಣ್ಣೀರೆರಚಿದ್ದಾನೆ.

ʻʻಸಮರ್ಥನಿಗೆ ಸಂಗೊಳ್ಳಿ ರಾಯಣ್ಣ ಎಂದು ಹೆಸರಿಟ್ಟಿದ್ದೆವು. ನನ್ನ ತಮ್ಮ ಎರಡು ವರ್ಷದ ಹಿಂದೆ ಕೋವಿಡ್ ನಿಂದ ತೀರಿಕೊಂಡಿದ್ದ. ಇವತ್ತು ಅವನ ಮಕ್ಕಳು ತೀರಿಕೊಂಡಿದ್ದಾವೆʼʼ ಎಂದು ಒಬ್ಬರು ಕಣ್ಣೀರು ಹಾಕಿದರು. ಯಾವ ಕಾರಣಕ್ಕೂ ಒಂದೇ ಕುಟುಂಬದವರು ಜತೆಯಾಗಿ ಎಲ್ಲರೂ ಹೋಗಬೇಡಿ, ಕುಟುಂಬವೂ ಸರ್ವನಾಶವಾಗಿಬಿಡುತ್ತದೆ ಎಂದು ಕಣ್ಣೀರು ಹಾಕಿದರು.

ಮುಗಿಲು ಮುಟ್ಟಿದ ಆಕ್ರಂದನ
ಪ್ರವಾಸಕ್ಕೆ ಹೊರಟ ಒಂದೇ ಕುಟುಂಬದ 14 ಜನ ಶುಕ್ರವಾರ ಹಿರಿಯರ ಪೂಜೆ ಮಾಡಿ ಹಿರಿಯರಿಗೆ ಎಡೆ ಇಟ್ಟು ಊಟ ಮಾಡಿ ಹೋಗಿದ್ದರು. ಆದರೆ, ಹೋದವರ್ಯಾರು ವಾಪಸ್ಸು ಬರಲಿಲ್ಲವೆಂದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಅಪಘಾತದ ಬಗ್ಗೆ ಮಾತನಾಡಿದ ಹೊಸ್ಚಿನಲ್ಲಿ ಪ್ರಯಾಣ ಮಾಡುತ್ತಿದ್ದ ವ್ಯಕ್ತಿ ಈ ಅನಾಹುತಕ್ಕೆ ಹಾಲಿನ ಟ್ಯಾಂಕರ್ ವಾಹನದ ಚಾಲಕನತೆ ನಿರ್ಲಕ್ಷ ಎಂದು ಚಾಲಕನ ವಿರುದ್ಧ ಸಮಾಧಾನ ಹೊರಹಾಕಿದ್ದಾರೆ. ಮೃತ ವಂದನಾ ಸ್ನೇಹಿತರು ಆಸ್ಪತ್ರೆ ಬಳಿ ಬಂದು ನೆಚ್ವಿನ ಗೆಳತಿ ನೋಡಿ ಕಣ್ಣೀರಿಟ್ಟರು. ಇನ್ನೂ ಒಂಬತ್ತು ಮೃತ ದೇಹವನ್ನ ಮೂರು ಆಂಬುಲೆನ್ಸ್ ನಲ್ಲಿ ಮೂರು ದಿಕ್ಕಿಗೆ ಕೊಂಡೊಯ್ದು. ಅಂತ್ಯ ಸಂಸ್ಕಾರ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Rave party: ರೇವ್‌ ಪಾರ್ಟಿ ಕೇಸ್‌; ಹೆಬ್ಬಗೋಡಿ ಠಾಣೆಯ ಪಿಎಸ್‌ಐ ಸೇರಿ ಮೂವರ ಸಸ್ಪೆಂಡ್‌

Rave party: ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡಿ ಅವರು ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರೇವ್ ಪಾರ್ಟಿ ಬಗ್ಗೆ ಮಾಹಿತಿ ಕಲೆ ಹಾಕಲು ವಿಫಲವಾಗಿರುವ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಇದೇ ವೇಳೆ ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್‌ಗಳಿಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್‌ ಬಾಲದಂಡಿ ಚಾರ್ಜ್ ಮೆಮೋ‌ ನೀಡಿದ್ದು, ಇಷ್ಟೆಲ್ಲ ಆಗುತ್ತಿದ್ದರೂ ನಿಮ್ಮ ಗಮನಕ್ಕೆ ಯಾಕೆ ಬಂದಿಲ್ಲ? ಇದಕ್ಕೆ ಕಾರಣ ನೀಡಿ ಎಂದು ವಿವರಣೆಯನ್ನು ಕೇಳಿದ್ದಾರೆ. ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್‌ ಅವರ ಉತ್ತರ ಆಧರಿಸಿ ಅವರ ಮೇಲೂ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

VISTARANEWS.COM


on

Rave party case Three persons including a PSI of Hebbagodi police station have been suspended
Koo

ಬೆಂಗಳೂರು: ಮೇ 19ರ ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (electronic city) ಫಾರಂ ಹೌಸ್‌ನಲ್ಲಿ (Farm house) ನಡೆದಿದ್ದ ರೇವ್‌ ಪಾರ್ಟಿಗೆ (Rave party) ಸಂಬಂಧಪಟ್ಟಂತೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿನ ಎಎಸ್ಐ ಸೇರಿ ಮೂವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.

ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡಿ ಅವರು ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರೇವ್ ಪಾರ್ಟಿ ಬಗ್ಗೆ ಮಾಹಿತಿ ಕಲೆ ಹಾಕಲು ವಿಫಲವಾಗಿರುವ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಇದೇ ವೇಳೆ ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್‌ಗಳಿಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್‌ ಬಾಲದಂಡಿ ಚಾರ್ಜ್ ಮೆಮೋ‌ ನೀಡಿದ್ದು, ಇಷ್ಟೆಲ್ಲ ಆಗುತ್ತಿದ್ದರೂ ನಿಮ್ಮ ಗಮನಕ್ಕೆ ಯಾಕೆ ಬಂದಿಲ್ಲ? ಇದಕ್ಕೆ ಕಾರಣ ನೀಡಿ ಎಂದು ವಿವರಣೆಯನ್ನು ಕೇಳಿದ್ದಾರೆ. ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್‌ ಅವರ ಉತ್ತರ ಆಧರಿಸಿ ಅವರ ಮೇಲೂ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ಠಾಣೆಯ ಎಸ್.ಬಿ. ಗಿರೀಶ್, ಎಎಸ್ಐ ನಾರಾಯಣ ಸ್ವಾಮಿ ಮತ್ತು ಬೀಟ್ ಕಾನ್ಸ್‌ಟೇಬಲ್ ದೇವರಾಜು ಅಮಾನತಾದವರು. ಸಿಸಿಬಿ ಪೊಲೀಸರಿಗೆ ಸಿಕ್ಕ ಮಾಹಿತಿ ಸ್ಥಳೀಯ ಪೊಲೀಸರಿಗೆ ಯಾಕೆ ಇರಲಿಲ್ಲ ಎಂದು ಪ್ರಶ್ನೆ ಮಾಡಲಾಗಿದ್ದು, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಹೇಮಾ, ಆಶಿ ಸೇರಿ 86 ಮಂದಿಯಿಂದ ಮಾದಕ ವಸ್ತು ಸೇವನೆ; ಬ್ಲಡ್‌ ರಿಪೋರ್ಟ್‌ ಪಾಸಿಟಿವ್‌

ರೇವ್‌ ಪಾರ್ಟಿಯಲ್ಲಿ ತೆಲುಗು ನಟಿಯರಾದ ಹೇಮಾ (Telugu actress Hema) ಹಾಗೂ ಆಶಿ ರಾಯ್ (Aashi Roy) ಒಳಗೊಂಡಂತೆ 103 ಮಂದಿ ಭಾಗಿಯಾಗಿದ್ದರು. ಇಲ್ಲಿ ಮಾದಕ ವಸ್ತುಗಳನ್ನು ಸೇವನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಅಷ್ಟೂ ಮಂದಿಯನ್ನು ತಪಾಸಣೆಗೊಳಪಡಿಸಲಾಗಿತ್ತು. ಈಗ ವೈದ್ಯಕೀಯ ವರದಿ ಬಂದಿದ್ದು, ಅವರಲ್ಲಿ 86 ಮಂದಿಯ ರಿಪೋರ್ಟ್ ಪಾಸಿಟಿವ್ ಬಂದಿದೆ. ನಟಿಯರಾದ ಹೇಮಾ ಹಾಗೂ ಆಶಿ ರಾಯ್‌ ಸಹ ಮಾದಕ ವಸ್ತುಗಳನ್ನು ಸೇವಿಸಿದ್ದಾರೆಂಬುದು ಸಾಬೀತಾಗಿವೆ ಎನ್ನಲಾಗಿದೆ.

ಈಗಾಗಲೇ ಪಾರ್ಟಿ ಮಾಡಿದ ಐವರನ್ನು ಬಂಧಿಸಲಾಗಿದೆ. 73 ಮಂದಿ ಪುರುಷರಲ್ಲಿ 59 ಮಂದಿ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದ್ದರೆ, 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಹೀಗಾಗಿ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿದ್ದಾರೆ.

ವಾಸು ಎಂಬಾತನ ಬರ್ತ್‌ ಡೇ ಪಾರ್ಟಿಗಾಗಿ ಏರ್ಪಡಿಸಲಾಗಿದ್ದ ಈ ರೇವ್ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಮಾದಕ ವಸ್ತು ಬಳಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ದೊಡ್ಡ ಪ್ರಮಾಣದಲ್ಲಿ ಎಂಡಿಎಂಎ, ಕೊಕೇನ್, ಹೈಡ್ರೋ ಗಾಂಜಾ ಪತ್ತೆಯಾಗಿದ್ದವು.

Sunset To Sun Rise victory ಶೀರ್ಷಿಕೆಯಲ್ಲಿ ಈ ರೇವ್ ಪಾರ್ಟಿಯನ್ನು ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ ಸುಮಾರು ನೂರೈವತ್ತು ಮಂದಿ ಸೇರಿದ್ದರು. ಪೊಲೀಸ್‌ ದಾಳಿ ವೇಳೆ ಕೆಲವರು ತಪ್ಪಿಸಿಕೊಂಡು ಓಡಿದ್ದರು. ಆದರೆ, ಬಹುತೇಕ ಮಂದಿ ಸಿಕ್ಕಿಬಿದ್ದಿದ್ದರು. ಈಗ ಸಿಕ್ಕಿಬಿದ್ದವರಲ್ಲಿ ಬಹುತೇಕರ ಬ್ಲಡ್ ರಿಪೋರ್ಟ್‌ನಲ್ಲಿ ಮಾದಕ ವಸ್ತು ಸೇವನೆ ಸಂಬಂಧ ಪಾಸಿಟಿವ್ ಅಂಶ ಪತ್ತೆಯಾಗಿದೆ. ಹೀಗಾಗಿ ಪಾಸಿಟಿವ್‌ ರಿಪೋರ್ಟ್‌ ಬಂದವರಿಗೆ ಸಿಸಿಬಿ ನೋಟಿಸ್ ನೀಡಲಿದ್ದು, ಅವರನ್ನು ಕರೆಸಿ ವಿಚಾರಣೆ ನಡೆಸಲಾಗುತ್ತದೆ.

ʼರೇವ್‌ ಪಾರ್ಟಿಯಲ್ಲಿ ನಾನಿಲ್ಲʼ ಎಂದು ವಿಡಿಯೋ ಮಾಡಿದ್ದ ಹೇಮಾ!

ಈ ರೇವ್‌ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಭಾಗಿಯಾಗಿದ್ದು, ಪೊಲೀಸ್‌ ವಶದಲ್ಲಿದ್ದಾರೆ ಎಂದು ಸುದ್ದಿಯಾಗಿದ್ದಂತೆ ವಿಡಿಯೊವೊಂದನ್ನು ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದ ಹೇಮಾ, ನಾನು ಆ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಲೇ ಇಲ್ಲ. ಹೈದರಾಬಾದ್‌ನ ಫಾರ್ಮ್‌ ಹೌಸ್‌ನಲ್ಲಿದ್ದೇನೆ ಎಂದು ವಿಡಿಯೊ ಸಂದೇಶವನ್ನು ಹರಿಬಿಟ್ಟಿದ್ದರು. ಆದರೆ, ಮುಜುಗರ ತಪ್ಪಿಸಲು ಅವರು ಅದೇ ಫಾರಂ ಹೌಸ್‌ನ ಒಂದು ಕಡೆ ಬಂದು ವಿಡಿಯೊ ಮಾಡಿದ್ದಾರೆ ಎಂದು ಹಲವರು ಅಂದೇ ಹೇಳಿದ್ದರು. ಹೆಬ್ಬಗೋಡಿ ಫಾರ್ಮ್ ಹೌಸ್ ಒಳಗಡೆಯೇ ವಿಡಿಯೋ ಮಾಡಿ, ತಾನು ಹೈದರಾಬಾದ್‌ ಫಾರ್ಮ್ ಹೌಸ್‌ನಲ್ಲಿದ್ದೀನಿ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಹಲವರು ವಾದಿಸಿದ್ದರು. ಈಗ ಈ ಸಂಬಂಧ ಪೊಲೀಸರಿಗೆ ಬಂದಿರುವ ರಿಪೋರ್ಟ್‌ ವೈರಲ್‌ ಆಗಿದ್ದು, ಅವರು ಸಹ ಮಾದಕ ವಸ್ತು ಸೇವನೆ ಮಾಡಿರುವುದು ಸಾಬೀತಾಗಿದೆ ಎಂದು ತಿಳಿದುಬಂದಿದೆ.

ಕಮೋಡ್‌ನಲ್ಲಿ ಫ್ಲಶ್‌ ಮಾಡಿದರು!

ಸಿಸಿಬಿ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಪಾರ್ಟಿ ಆಯೋಜಕರು ಸ್ಥಳದ ಡೋರ್‌ಲಾಕ್ ಮಾಡಿಕೊಂಡಿದ್ದಲ್ಲದೆ, ಎಂಡಿಎಂಎ ಮತ್ತು ಇನ್ನಿತರೆ ಮಾದಕ ವಸ್ತುಗಳನ್ನು ಸಿಕ್ಕಸಿಕ್ಕಲ್ಲಿ ಎಸೆದಿದ್ದರು. ಪೊಲೀಸರು ಎಂದು ಗೊತ್ತಾಗುತ್ತಿದ್ದಂತೆ ಓಡಿಹೋಗಲು ಯತ್ನಿಸಿದ್ದರು. ಡ್ರಗ್ಸ್‌ ಅನ್ನು ಬಾತ್ ರೂಂನ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ್ದರು.. ಪೊಲೀಸರು ಬಲವಂತವಾಗಿ ಡೋರ್ ತೆಗಿಸಿ ಒಳಹೋಗಿದ್ದು, ಫಾರ್ಮ್ ಹೌಸ್‌ನ ಇಂಚಿಂಚನ್ನೂ ಜಾಲಾಡಿದ್ದರು.

3 ಜನ ಡ್ರಗ್ ಪೆಡ್ಲರ್‌ಗಳು, ಆಯೋಜಕ ವಾಸು ಸೇರಿ ಐದು ಜನರನ್ನು ಅಂದೇ ಪೊಲೀಸರು ಬಂಧಿಸಿದ್ದರು. ಪಾರ್ಟಿಯಲ್ಲಿ ಡ್ರಗ್ ಪೆಡ್ಲರ್‌ಗಳೂ ಭಾಗಿಗಳಾಗಿದ್ದರು. ಇವರು ಯಥೇಚ್ಛವಾಗಿ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದರು. ವಾಸು ಹುಟ್ಟಿದ ಹಬ್ಬಕ್ಕೆ ಪಾರ್ಟಿ ಆಯೋಜಿಸಿದ ಆರ್ಗನೈಸರ್ ಅರುಣ್, ಸಿದ್ಧಿಕಿ, ರಣಬೀರ್, ನಾಗಬಾಬುರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಮಾದಕ ವಸ್ತು ಸಿಕ್ಕಿದಂತಹ ಐಷಾರಾಮಿ ಮರ್ಸಿಡಿಸ್‌ ಬೆಂಜ್‌, ರೇಂಜ್ ರೋವರ್, ಆಡಿ ಕಾರುಗಳನ್ನು ವಶಕ್ಕೆ ಪಡೆಯಲಾಗಿತ್ತು.

ಎಂಟ್ರಿಗೆ ಪಾಸ್‌ವರ್ಡ್‌ ನೀಡಿದ್ದ ವಾಸು

ಪಾರ್ಟಿ ಆಯೋಜಕ, ಆರೋಪಿ ವಾಸು ಪೊಲೀಸರಿಂದ ಬಚಾವಾಗಲು ʼನಾನು ಪಾರ್ಟಿಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆದಿದ್ದೇನೆಂದುʼ ಸುಳ್ಳು ಹೇಳಿಕೆ ನೀಡಿದ್ದ. ಆದರೆ, ಫಾರ್ಮ್ ಹೌಸ್ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದೆ. ಪಾರ್ಟಿಗೆ ಬಂದವರು ಫಾರ್ಮ್ ಹೌಸ್ ಒಳಗೆ ಹೋಗಬೇಕಾದರೆ ಸೆಕ್ಯೂರಿಟಿಗೆ ಪಾಸ್ ವರ್ಡ್ ಹೇಳಬೇಕಿತ್ತು. ವಾಸು ನೀಡಿದ ಪಾಸ್‌ವರ್ಡ್ ಹೇಳಿದರೆ ಮಾತ್ರ ಒಳಗೆ ಎಂಟ್ರಿಯಾಗಬಹುದಿತ್ತು. ಡ್ರಗ್ ಪಾರ್ಟಿ ಹಿನ್ನೆಲೆಯಲ್ಲಿ ಬೇರೆ ಯಾರೂ ಬಾರದಿರಲಿ ಎಂಬ ಕಾರಣಕ್ಕೆ ವಾಸು ಪಾಸ್‌ವರ್ಡ್ ನೀಡಿದ್ದ.

ಮಾದಕ ವಸ್ತುಗಳ ವಶಕ್ಕೆ

ಫಾರಂ ಹೌಸ್‌ನಲ್ಲಿ ಸದ್ಯ ಭಾರಿ ಪ್ರಮಾಣದಲ್ಲಿ ಎಂಡಿಎಂಎ, ಕ್ಯಾಪ್ಸೂಲ್, ಕೊಕೇನ್ ಇತ್ಯಾದಿ ಮಾದಕ ವಸ್ತುಗಳು ದೊರೆತಿದ್ದವು. 45 ಗ್ರಾಂನಷ್ಟು ಡ್ರಗ್ ವಶಕ್ಕೆ ಪಡೆಯಲಾಗಿತ್ತು. 1 ಗ್ರಾಂ ಕೊಕೇನ್‌ಗೆ 8ರಿಂದ 9 ಸಾವಿರ ರೂ. ದರವಿದೆ. ಇಂತಹ ಕೊಕೇನ್ ಭಾರಿ ಪ್ರಮಾಣದಲ್ಲಿ ಪಾರ್ಟಿಯಲ್ಲಿ ಪತ್ತೆಯಾಗಿದೆ. ಸದ್ಯ ಸಿಕ್ಕಿರುವ ಡ್ರಗ್ಸ್‌ನ ಮೌಲ್ಯ ಪರಿಶೀಲನೆಯನ್ನು ಸಿಸಿಬಿ ನಡೆಸುತ್ತಿದೆ.

ಇದನ್ನೂ ಓದಿ: Prajwal Revanna Case: ತಾಳ್ಮೆ ಪರೀಕ್ಷಿಸಬೇಡ, ಈಗಲೇ ಬಂದು ಶರಣಾಗು; ಪ್ರಜ್ವಲ್‌ಗೆ ದೇವೇಗೌಡರ ವಾರ್ನಿಂಗ್‌

ನಟಿ ಆಶಿ ರಾಯ್ ಹೇಳಿದ್ದೇನು?

ಈ ಪಾರ್ಟಿಯಲ್ಲಿ ಭಾಗಿಯಾಗಿದ್ದ ಆಶಿ ರಾಯ್‌ ಸಹ ವಿಡಿಯೊವೊಂದನ್ನು ಮಾಡಿ ಸ್ಪಷ್ಟನೆ ನೀಡಿದ್ದಾರೆ. ʻʻಅದೊಂದು ಬರ್ತ್‌ಡೇ ಪಾರ್ಟಿಯಾಗಿತ್ತು. ಒಳಗೆ ಏನು ನಡೀತಿತ್ತು ಎಂದು ಗೊತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ದಯವಿಟ್ಟು ನೀವೆಲ್ಲ ನನ್ನ ಬೆಂಬಲಿಸಿ. ನಾನು ಕಷ್ಟಪಟ್ಟು ಉದ್ಯಮದಲ್ಲಿ ಬೆಳೆಯುತ್ತಿರುವ ಹುಡುಗಿ. ದಯವಿಟ್ಟು ನನಗೆ ಸಹಾಯ ಮಾಡಿʼʼ ಎಂದು ವಿಡಿಯೊವನ್ನು ಹಂಚಿಕೊಂಡಿದ್ದರು. ಆಶಿ ರಾಯ್‌ ಹಲವು ಸಂದರ್ಶನದಲ್ಲಿ ಪಾರ್ಟಿಯಲ್ಲಿ ಹೇಮಾ ಅವರನ್ನು ನೋಡಿಲ್ಲ ಎಂದಿದ್ದಾರೆ. ಆಶಿರಾಯ್‌ ಅವರು ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ.

Continue Reading

ರಾಜಕೀಯ

Pralhad Joshi: ಕೇಜ್ರಿವಾಲ್‌ಗೆ ಸಿಎಂ ಆಗಿ ಮುಂದುವರಿಯುವ ನೈತಿಕ ಹಕ್ಕಿಲ್ಲ: ಪ್ರಲ್ಹಾದ್‌ ಜೋಶಿ

Pralhad Joshi: ಎಎಪಿ ಇಂದು ಭ್ರಷ್ಟಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳ ಪರ ನಿಲ್ಲುವ ಪಕ್ಷವಾಗಿ ಮಾರ್ಪಟ್ಟಿದ್ದು, ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಕೇಜ್ರಿವಾಲ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

VISTARANEWS.COM


on

Union Minister Pralhad Joshi latest statement in Hubli
Koo

ಹುಬ್ಬಳ್ಳಿ: ದೆಹಲಿ ಮುಖ್ಯಮಂತ್ರಿ ಆಗಿರಲು ಅರವಿಂದ ಕೇಜ್ರಿವಾಲ್ ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಟೀಕಿಸಿದ್ದಾರೆ.

ನಗರದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಸಚಿವರು, ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದ ಹಿನ್ನೆಲೆಯಲ್ಲಾದರೂ ಅರವಿಂದ್‌ ಕೇಜ್ರಿವಾಲ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Monsoon : ಮಳೆ ವರದಿ; ಕರ್ನಾಟಕದಲ್ಲಿ ಜೂನ್ 1ರಂದೇ ಮಾನ್ಸೂನ್ ಮಳೆ ಆರಂಭ

ತತ್ವಗಳಿಲ್ಲದ ಆಪ್‌

ಎಎಪಿ ಯಾವುದೇ ತತ್ವಗಳಿಲ್ಲದ ಪಕ್ಷವಾಗಿದೆ. ಭ್ರಷ್ಟಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಬಂಡಾಯವೆದ್ದು ಅಸ್ತಿತ್ವಕ್ಕೆ ಬಂದ ಪಕ್ಷ ಇಂದು ತಾನೇ ಆ ಹಾದಿ ತುಳಿದಿದೆ ಎಂದು ಜೋಶಿ ಆರೋಪಿಸಿದರು.

ಆಪ್‌ ಇಂದು ಭ್ರಷ್ಟಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳ ಪರ ನಿಲ್ಲುವ ಪಕ್ಷವಾಗಿ ಮಾರ್ಪಟ್ಟಿದ್ದು, ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಆಪ್‌ ನಾಯಕಿ ಸ್ವಾತಿ ಮಲಿವಾಲ್ ಅವರನ್ನು ಬಾಯಿ ಮುಚ್ಚಿಸುವ ಪ್ರಯತ್ನ ಫಲಿಸದ ಕಾರಣ ಆಕೆಯ ಚಾರಿತ್ರ್ಯದ ಮೇಲೆ ಉಳಿದ ಆಪ್‌ ನಾಯಕರು ಈಗ ಮಸಿ ಬಳಿಯುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: koti kannada movie : ಕಾಂಚಾಣದ ಕನಸು; ಕೋಟಿ ಸಿನಿಮಾದ ‘ಜನತಾ ಸಿಟಿ’ ಹಾಡು ಬಿಡುಗಡೆ

ಕೇಜ್ರಿವಾಲ್ ಮನೆಯಲ್ಲಿದ್ದಾಗಲೇ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆದಿರುವುದು ನಾಚಿಕೆಗೇಡಿನ ಸಂಗತಿ. ಸಿಎಂ ಕೇಜ್ರಿವಾಲ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಸಚಿವ ಪ್ರಲ್ಹಾದ್‌ ಜೋಶಿ ಒತ್ತಾಯಿಸಿದರು.

Continue Reading

ವೈರಲ್ ನ್ಯೂಸ್

Miracle case : ಮುರ್ತುಜಾ ಖಾದ್ರಿ ಪವಾಡ; ಅಂತ್ಯಕ್ರಿಯೆ ಮಾಡುವಾಗಲೇ ಕೆಮ್ಮಿದ ಮಗು!

Miracle case : ಪ್ರಜ್ಞೆ ತಪ್ಪಿದ ಮಗುವನ್ನು ಸಾವನ್ನಪ್ಪಿದೆ ಎಂದು ಭಾವಿಸಿದ ಪೋಷಕರು ಸಂಬಂಧಿಕರು, ಆಪ್ತರಿಗೆ ಸಾವಿನ ಸುದ್ದಿ ಮುಟ್ಟಿಸಿದ್ದರು. ಇನ್ನೇನು ಮಗುವಿನ ಅಂತ್ಯಸಂಸ್ಕಾರ ಮಾಡಬೇಕು ಎಂದಾಗ ಕೆಮ್ಮುವ ಮೂಲಕ ಬದುಕಿ ಬಂದಿದ್ದು, ಇದೆಲ್ಲ ಮುರ್ತುಜಾ ಖಾದ್ರಿ ಪವಾಡ ಎಂದಿದ್ದಾರೆ.

VISTARANEWS.COM


on

By

Miracle case At Bagalakote News
Koo

ಬಾಗಲಕೋಟೆ: ಆ ದಂಪತಿ ತಮ್ಮ ಒಂದು ವರ್ಷದ ಮಗನ (Miracle case) ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರು. ಸಂಬಂಧಿಕರು, ಬಂಧು ಬಳಗದವರೆಲ್ಲರ ಆಕ್ರಂದನ ಮುಗಿಲು ಮುಟ್ಟಿತ್ತು. ಇನ್ನೇನು ಮಗುವನ್ನು ಮಣ್ಣು ಮಾಡಬೇಕು ಎನ್ನುವಾಗ ದಿಢೀರ್‌ ಕಣ್ಣು ಬಿಟ್ಟು, ಜೋರಾಗಿ ಕೆಮ್ಮಿ ಪುನಃ ಬದುಕಿ ಬಂದಿದೆ. ಬಾಗಲಕೋಟೆ ‌ಜಿಲ್ಲೆ ಇಳಕಲ್‌ ನಗರದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ.

ಒಂದು ವರ್ಷದ ದ್ಯಾಮಣ್ಣ ಭಜಂತ್ರಿ ಎಂಬ ಮಗುವಿಗೆ ಉಸಿರಾಟ ತೊಂದರೆ, ಹೃದಯ ಸಂಬಂಧಿ ಖಾಯಿಲೆ ಸೇರಿದಂತೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿತ್ತು. ಹುಟ್ಟಿದಾಗಿನಿಂದ ಖಾಯಿಲೆಯಿಂದ ಬಳಲುತ್ತಿದ್ದ ಮಗುವನ್ನು ಕಳೆದ ನಾಲ್ಕು ದಿನಗಳಿಂದ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ಈ ವೇಳೆ ವೈದ್ಯರು ಮಗು ಬದುಕೋದು ಕಷ್ಟ ಎಂದು ಹೇಳಿ ಡಿಸ್ಜಾರ್ಜ್‌ ಮಾಡಿದ್ದಾರೆ. ವಾಪಸ್ ವಾಹನದಲ್ಲಿ ಮನೆಗೆ ಬರುವಾಗ ಮಗು ಪ್ರಜ್ಞೆ ತಪ್ಪಿದೆ. ಪ್ರಜ್ಞೆ ತಪ್ಪಿದ ಮಗುವನ್ನು ಮೃತಪಟ್ಟಿದೆ ಎಂದು ಭಾವಿಸಿದ ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ದಂಪತಿ, ಸಂಬಂಧಿಕರಿಗೆ ಸಾವಿನ ಸುದ್ದಿ ಮುಟ್ಟಿಸಿದ್ದಾರೆ.

ಇತ್ತ ಮಗು ಸಾವಿನ ಸುದ್ದಿ ತಿಳಿದು ಬಂಧು ಬಳಗದವರು ಮನೆಗೆ ಬಂದಿದ್ದಾರೆ. ಅಂತ್ಯಸಂಸ್ಕಾರಕ್ಕೆ ತಯಾರಿ ನಡೆಸುತ್ತಿರುವಾಗಲೇ ಮಗು ಕೆಮ್ಮಿದೆ ಈ ಮೂಲಕ ಬದುಕಿದೆ ಎಂದು ಅಚ್ಚರಿಗೊಂಡಿದ್ದಾರೆ.ಇದು ಮುರ್ತುಜಾ ಖಾದ್ರಿ ಪವಾಡ ಎಂದು ತಿಳಿದ ಪೋಷಕರು ಅಂತ್ಯಸಂಸ್ಕಾರದ ಜಾಗದಿಂದ ದರ್ಗಾಕ್ಕೆ ಮಗುವನ್ನು ಕರೆದುಕೊಂಡು ಹೋಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಅಲ್ಲಿಂದ ಕೂಡಲೇ ಇಳಕಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಮಗುವಿಗೆ ಚಿಕಿತ್ಸೆ ಮುಂದುವರೆದಿದೆ.

ಇದನ್ನೂ ಓದಿ: Thunderbolt: ಮುಂಗಾರಿಗೆ ಮೊದಲೇ ಸಿಡಿಲಿನ ದುಃಸ್ವಪ್ನ, ಇಬ್ಬರು ಬಲಿ, ಇಬ್ಬರು ಗಂಭೀರ

ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು, ಆದರೆ ಆ ಹುಡುಗಿ ಒಪ್ಪಲಿಲ್ಲ ಎಂದ ಸಿದ್ದರಾಮಯ್ಯ

ಮೈಸೂರು: ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Mysore News) ಅಭಿಪ್ರಾಯಪಟ್ಟರು. ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಆ ಹುಡುಗಿ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ತಮ್ಮ ಕಾಲೇಜು ದಿನಗಳನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

ಮೈಸೂರಿನಲ್ಲಿ ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್‌ಸೈಟ್ ಉದ್ಘಾಟಿಸಿ ಮಾತನಾಡಿದ ಅವರು, ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮಾಜದಲ್ಲಿ ಚಲನೆಯುಂಟಾಗುತ್ತದೆ. ಸಮ ಸಮಾಜದ ಆಶಯ ಈಡೇರಲು, ಜಾತಿ ನಾಶವಾಗಲು ಸಾಧ್ಯ ಎಂದು ಹೇಳಿದರು.

ನಮ್ಮ ಸರ್ಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ ಎಂದ ಅವರು, ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿನ್ನದ ದರ

Gold Rate Today: ಬಂಗಾರದ ಬೆಲೆ ಮತ್ತೆ ತೀವ್ರ ಇಳಿಕೆ; ಇದು ಚಿನ್ನ ಕೊಳ್ಳುವವರ ವಾರ!

Gold Rate Today: ಇಂದು 10 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ ಕ್ರಮವಾಗಿ ₹900 ಹಾಗೂ ₹980 ಇಳಿಕೆಯಾಗಿವೆ. ನಿನ್ನೆಯೂ 10 ಗ್ರಾಂಗೆ 1000 ರೂ. ಮೀರಿ ಇಳಿಕೆಯಾಗಿತ್ತು. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

VISTARANEWS.COM


on

gold rate today rachita ram
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಶುಕ್ರವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಮತ್ತೆ ಭಾರೀ ಇಳಿಕೆ ಕಂಡಿದೆ. ಇಂದು 10 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ ಕ್ರಮವಾಗಿ ₹900 ಹಾಗೂ ₹980 ಇಳಿಕೆಯಾಗಿವೆ. ನಿನ್ನೆಯೂ 10 ಗ್ರಾಂಗೆ 1000 ರೂ. ಮೀರಿ ಇಳಿಕೆಯಾಗಿತ್ತು. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,640ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,120 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,400 ಮತ್ತು ₹6,64,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,244 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,952 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,440 ಮತ್ತು ₹7,24,400 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹92.50, ಎಂಟು ಗ್ರಾಂ ₹740 ಮತ್ತು 10 ಗ್ರಾಂ ₹925ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹9,250 ಮತ್ತು 1 ಕಿಲೋಗ್ರಾಂಗೆ ₹92,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,55072,590
ಮುಂಬಯಿ66,400 72,440
ಬೆಂಗಳೂರು66,400 72,440
ಚೆನ್ನೈ66,50072,550

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆ ಇನ್ನೂ ಇಳಿಕೆ; ಇಂದಿನ ಮಾರುಕಟ್ಟೆ ದರಗಳನ್ನು ಇಲ್ಲಿ ಗಮನಿಸಿಕೊಳ್ಳಿ

Continue Reading
Advertisement
Rave party case Three persons including a PSI of Hebbagodi police station have been suspended
ಕ್ರೈಂ2 mins ago

Rave party: ರೇವ್‌ ಪಾರ್ಟಿ ಕೇಸ್‌; ಹೆಬ್ಬಗೋಡಿ ಠಾಣೆಯ ಪಿಎಸ್‌ಐ ಸೇರಿ ಮೂವರ ಸಸ್ಪೆಂಡ್‌

Union Minister Pralhad Joshi latest statement in Hubli
ರಾಜಕೀಯ2 mins ago

Pralhad Joshi: ಕೇಜ್ರಿವಾಲ್‌ಗೆ ಸಿಎಂ ಆಗಿ ಮುಂದುವರಿಯುವ ನೈತಿಕ ಹಕ್ಕಿಲ್ಲ: ಪ್ರಲ್ಹಾದ್‌ ಜೋಶಿ

Miracle case At Bagalakote News
ವೈರಲ್ ನ್ಯೂಸ್10 mins ago

Miracle case : ಮುರ್ತುಜಾ ಖಾದ್ರಿ ಪವಾಡ; ಅಂತ್ಯಕ್ರಿಯೆ ಮಾಡುವಾಗಲೇ ಕೆಮ್ಮಿದ ಮಗು!

A: Film by Upendra
ಪ್ರಮುಖ ಸುದ್ದಿ12 mins ago

A: Film by Upendra : ರೀ ರಿಲೀಸ್ ನಲ್ಲೂ ದಾಖಲೆ ನಿರ್ಮಿಸಿದ ಉಪೇಂದ್ರ ನಿರ್ದೇಶನದ “A”

gold rate today rachita ram
ಚಿನ್ನದ ದರ15 mins ago

Gold Rate Today: ಬಂಗಾರದ ಬೆಲೆ ಮತ್ತೆ ತೀವ್ರ ಇಳಿಕೆ; ಇದು ಚಿನ್ನ ಕೊಳ್ಳುವವರ ವಾರ!

'Chow Chow Bath'
ಪ್ರಮುಖ ಸುದ್ದಿ26 mins ago

Chow Chow Bath : ‘ಚೌ ಚೌ ಬಾತ್’ ಸಿನಿಬಜಾರ್​​ ಡಿಜಿಟಲ್ ಥಿಯೇಟರ್​​ನಲ್ಲಿ ಬಿಡುಗಡೆ

Maarige Daari
ಪ್ರಮುಖ ಸುದ್ದಿ47 mins ago

Maarige Daari : ‘ಮಾರಿಗೆ ದಾರಿ” ಫಸ್ಟ್ ಲುಕ್ ಟೀಸರ್ ಬಿಡುಗಡೆ, ಇಲ್ಲಿದೆ ವಿಡಿಯೊ

Mansoon
ಪ್ರಮುಖ ಸುದ್ದಿ59 mins ago

Monsoon : ಮಳೆ ವರದಿ; ಕರ್ನಾಟಕದಲ್ಲಿ ಜೂನ್ 1ರಂದೇ ಮಾನ್ಸೂನ್ ಮಳೆ ಆರಂಭ

bbmp waste disposal
ಬೆಂಗಳೂರು1 hour ago

Waste Disposal: ಕಸ ವಿಲೇವಾರಿ ಇನ್ನು ಬಿಬಿಎಂಪಿ ಕೆಲಸ ಅಲ್ಲ! ಅದಕ್ಕಾಗಿಯೇ ಬರುತ್ತಿದೆ ಹೊಸ ಸಂಸ್ಥೆ

Aishwarya Rai
Latest1 hour ago

Aishwarya Rai : ಮುದ್ದಿನ ಮಗಳು ಆರಾಧ್ಯಳ ಜತೆ ಅಮ್ಮನ ಬರ್ತ್​​ಡೇ ಆಚರಿಸಿದ ಐಶ್ವರ್ಯಾ ರೈ; ಇಲ್ಲಿವೆ ಚಿತ್ರಗಳು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌