Site icon Vistara News

Hassan Murder Case: ಎಣ್ಣೆ ಪಾರ್ಟಿಗೆ ಹೋದ ಯುವಕನ ಕೊಲೆ; ತಲೆ ಮೇಲೆ ಕಲ್ಲು ಎತ್ತಿಹಾಕಿದ ದುಷ್ಕರ್ಮಿಗಳು

one killed, condition of another critical in Attack with deadly weapons in Shivamogga

one killed, condition of another critical in Attack with deadly weapons in Shivamogga

ಹಾಸನ: ಸಕಲೇಶಪುರ ತಾಲೂಕಿನ ಬ್ಯಾಗಡಹಳ್ಳಿ ಗ್ರಾಮದ ಯುವಕನೊಬ್ಬ ಮದ್ಯದ ಪಾರ್ಟಿಗೆಂದು ಹೋದವನು ಕೊಲೆಯಾಗಿ (Hassan Murder Case) ಹೋಗಿದ್ದಾನೆ. ಸುನಿಲ್ ಕುಮಾರ್ (30) ಹತ್ಯೆಯಾದ ಯುವಕ ಎಂದು ಗುರುತಿಸಲಾಗಿದೆ.

ಸುನಿಲ್‌ ಕುಮಾರ್‌ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಭಾನುವಾರ ರಾತ್ರಿ ಹತ್ಯೆ ಮಾಡಲಾಗಿದ್ದು, ಆರೋಪಿಗಳು ಪರಾರಿ ಆಗಿದ್ದಾರೆ. ಗ್ರಾಮದ ಹೊರವಲಯದ ತೋಟವೊಂದರಲ್ಲಿ ಹತ್ಯೆ ಆಗಿದೆ. ಈತ ಸ್ನೇಹಿತರೊಂದಿಗೆ ಮದ್ಯದ ಪಾರ್ಟಿ ಮಾಡಲು ಹೋಗಿದ್ದ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: B.S. Yediyurappa Birthday: ಅವತ್ತು ಯಡಿಯೂರಪ್ಪನವರ ಮಾತು ಕೇಳಿ ಕಣ್ಣಲ್ಲಿ ನೀರು ತುಂಬಿ ಬಂದಿತ್ತು: ನಟ ದ್ವಾರಕೀಶ್‌ ಲೇಖನ

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಘಟನೆ ನಡೆದಿದ್ದು, ಆರೋಪಿಗಳ ಪತ್ತೆಗೆ ಖಾಕಿ ಬಲೆ‌‌ ಬೀಸಿದೆ. ಪ್ರಕರಣವನ್ನು ದಾಖಲು ಮಾಡಿಕೊಂಡಿರುವ ಪೊಲೀಸರು ಹತ್ಯೆಗೆ ಕಾರಣವೇನು ಎಂಬುದರ ಕುರಿತು ತನಿಖೆಯನ್ನು ಮುಂದುವರಿಸಿದ್ದಾರೆ.

ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

Exit mobile version