ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪೆನ್‌ಡ್ರೈವ್ ಲೀಕ್ ಮಾಡಿದವರಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಪೆನ್‌ಡ್ರೈವ್ ಲೀಕ್ ಪ್ರಕರಣದಲ್ಲಿ ಈಗಾಗಲೇ ಪ್ರಜ್ವಲ್ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡ ಅವರಿಗೆ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ. ಹೀಗಾಗಿ ಕಾರ್ತಿಕ್ ಸೇರಿ ನಾಲ್ವರಿಗೆ ಬಂಧನ ಭೀತಿ ಎದುರಾಗಿದೆ. ಕಾರ್ತಿಕ್ ಬಳಿ ಇದ್ದ ವಿಡಿಯೊವನ್ನು ಹರಿಬಿಟ್ಟವರು ಯಾರು ಎನ್ನುವ ಬಗ್ಗೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಕಲೆ ಹಾಕಿರುವ ಸಾಕ್ಷಿಗಳ ಆಧರಿಸಿ ನಾಲ್ವರ ಮೇಲೆ ಎಸ್ಐಟಿಗೆ ಅನುಮಾನ ಮೂಡಿದ್ದು, ಕಾರ್ತಕ್ ಗೌಡ ಜತೆಗೆ ನವೀನ್ ಗೌಡ, ಪುಟ್ಟರಾಜ್ ಹಾಗೂ ಚೇತನ್ ವಿರುದ್ಧ ಕೇಸ್ ದಾಖಲಾಗಿದೆ. ಈಗಾಗಲೇ ಈ ನಾಲ್ವರ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ವಜಾ ಆಗಿದೆ. ಹೀಗಾಗಿ ಈ ನಾಲ್ವರು ವಿಚಾರಣೆಗೆ ಕರೆದು ಅರೆಸ್ಟ್ ಮಾಡುವ ಭಯದಲ್ಲಿದ್ದಾರೆ.
ಅಶ್ಲೀಲ ವಿಡಿಯೊ ಶೇರ್: ಕುದುರೆಮುಖದಲ್ಲಿ ಕೇಸ್ ದಾಖಲು!
ಚಿಕ್ಕಮಗಳೂರು: ಕಳಸ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸೋಷಿಯಲ್ ಮೀಡಿಯಾಗಳಲ್ಲಿ ಪ್ರಜ್ವಲ್ ರೇವಣ್ಣ ಕೇಸ್‌ಗೆ ಸಂಬಂಧಿಸಿದ ಅಶ್ಲೀಲ ವಿಡಿಯೊಗಳನ್ನು ಶೇರ್ ಮಾಡುತ್ತಿದ್ದಾನೆ ಎಂಬ ದೂರು ಬಂದಿದೆ. ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಫೋಟೊವನ್ನು ಅಪ್ಲೋಡ್ ಮಾಡಿದ ಹಿನ್ನೆಲೆಯಲ್ಲಿ ಕಳಸ ತಾಲೂಕಿನ ಸಂಸೆ ಮೂಲದ ಪ್ರಜ್ವಲ್ ಎಂಬಾತನ ಮೇಲೆ ಕಳಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೊ, ವಿಡಿಯೊಗಳನ್ನು ಅಪ್ಲೋಡ್ ಮಾಡುತ್ತಿದ್ದ ಆರೋಪ ಈಗ ಪ್ರಜ್ವಲ್ ಮೇಲಿದೆ. ಈತ ಅಶ್ಲೀಲ ವಿಡಿಯೊಗಳನ್ನು ಹಾಗೂ ಫೋಟೊಗಳನ್ನು ಟೆಲಿಗ್ರಾಂ, ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್ ಪೇಜ್‌ಗಳಲ್ಲಿ ಟ್ರೋಲ್ ದುಶ್ಯಾಸನ ಎಂಬ ಖಾತೆ ಮೂಲಕ ಅಪ್ಲೋಡ್ ಮಾಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಕುದುರೆಮುಖ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಟ ಕೊಟ್ಟವನನ್ನು ಬಿಡಲ್ಲ!
ಬೆಂಗಳೂರು: ಈಗಾಗಲೇ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸುಳ್ಳು ಕೇಸ್ ಹಾಕಲು ತನಗೆ ಒತ್ತಾಯಿಸಲಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆಯೊಬ್ಬರು ನೀಡಿರುವ ದೂರು ಹೊಸ ತಿರುವನ್ನು ಪಡೆದುಕೊಂಡಿದೆ. ಎಸ್‌ಐಟಿಯಿಂದ ಯಾರೂ ಆಕೆಯನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ. ಆದರೆ, ಸಂಪರ್ಕ ಮಾಡಿದವರ ಬಗ್ಗೆ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ತಿಳಿಸಿದೆ.
ಸಂತ್ರಸ್ತ ಮಹಿಳೆಗೆ ಎಸ್ಐಟಿ ಅಧಿಕಾರಿ ಎಂದು ಕರೆ ಮಾಡಿ ತೊಂದರೆ ಮಾಡಿರುವ ಆರೋಪ ವಿಚಾರವಾಗಿ ಎಸ್ಐಟಿ ಉನ್ನತ ಮೂಲಗಳು ಸ್ಪಷ್ಟನೆ ನೀಡಿದೆ. ಅಲ್ಲದೆ, ಎನ್‌ಸಿಡಬ್ಲ್ಯು ದೂರನ್ನು ಎಸ್‌ಐಟಿಗೆ ರವಾನಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್‌ಐಟಿ, ಗುರುವಾರವಷ್ಟೇ ಈ ಮಹಿಳೆಯ ಬಗ್ಗೆ ಎಸ್‌ಐಟಿಗೆ ತಿಳಿದುಬಂದಿದೆ.
ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣ ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ!