Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾದ ಸೆಕ್ಷನ್‌ಗಳು ಏನು ಹೇಳುತ್ತವೆ? ಆರೋಪ ಸಾಬೀತಾದ್ರೆ ಶಿಕ್ಷೆ ಏನು? - Vistara News

ಕರ್ನಾಟಕ

Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾದ ಸೆಕ್ಷನ್‌ಗಳು ಏನು ಹೇಳುತ್ತವೆ? ಆರೋಪ ಸಾಬೀತಾದ್ರೆ ಶಿಕ್ಷೆ ಏನು?

Hassan Pen Drive Case: ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354A, 354D, 506, 509 ಅಡಿ ಕೇಸ್‌ ದಾಖಲಾಗಿದ್ದು ಕೇಸ್‌ ದಾಖಲಾಗಿದೆ. ಒಂದು ವೇಳೆ ಆರೋಪ ಸಾಬೀತಾದರೆ ಏನು ಶಿಕ್ಷೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

VISTARANEWS.COM


on

Hassan Pen Drive Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ (Hassan Pen Drive Case) ದಾಖಲಾಗಿದೆ. ಐಪಿಸಿ ಸೆಕ್ಷನ್ 354A, 354D, 506, 509 ಅಡಿ ಕೇಸ್‌ ದಾಖಲಾಗಿದ್ದು, ಆರೋಪ ಸಾಬೀತಾದರೆ ಏನೆಲ್ಲಾ ಶಿಕ್ಷೆ ಆಗುತ್ತದೆ ಎಂಬ ಚರ್ಚೆಗಳು ನಡೆಯುತ್ತಿವೆ. ಸಂಸದರ ವಿರುದ್ಧ ದಾಖಲಾಗಿರುವ ಸೆಕ್ಷನ್‌ಗಳು ಏನು ಹೇಳುತ್ತವೆ? ಕೃತ್ಯಕ್ಕೆ ಎಷ್ಟು ವರ್ಷ ಶಿಕ್ಷೆ ಎಂಬ ಮಾಹಿತಿ ಇಲ್ಲಿದೆ.

ಯಾವ ಸೆಕ್ಷನ್‌ಗೆ ಏನು ಶಿಕ್ಷೆ?

ಐಪಿಸಿ ಸೆಕ್ಷನ್ 354A: ಮಹಿಳೆಯ ಜತೆ ಲೈಂಗಿಕ ಸಂಪರ್ಕ ಬೆಳೆಸುವುದು, ಲೈಂಗಿಕ‌ ಅನುಕೂಲಕ್ಕಾಗಿ ಬೇಡಿಕೆ ಇಡುವುದು. ಮಹಿಳೆಗೆ ಇಚ್ಛೆಗೆ ವಿರುದ್ಧವಾಗಿ ಅಶ್ಲೀಲತೆ ತೋರಿಕೆ ಮಾಡಿದವರ ವಿರುದ್ಧ ಐಪಿಸಿ ಸೆಕ್ಷನ್ 354A ಅಡಿ ಸೆಕ್ಷನ್ ದಾಖಲು ಮಾಡಲಾಗುತ್ತದೆ. ಈ ಸೆಕ್ಷನ್ ಅಡಿ ಆರೋಪಿತ ವ್ಯಕ್ತಿಗೆ ಒಂದು ವರ್ಷ ಜೈಲು ಅಥವಾ ದಂಡ ವಿಧಿಸಲಾಗುತ್ತದೆ.

ಐಪಿಸಿ ಸೆಕ್ಷನ್ 354D– ಪದೇ ಪದೇ ಮಹಿಳೆಯರ ಸಂಪರ್ಕ ಬೆಳೆಸಲು ಪ್ರಯತ್ನ, ಇಂಟರ್ನೆಟ್ ಅಥವಾ ಇಮೇಲ್ ಅಥವಾ ವಿಡಿಯೊ ಕಾಲ್ ಸಂವಹನ ಮಾಡಿದರೆ ಈ ಸೆಕ್ಷನ್ ಅಡಿ ಪ್ರಕರಣ ದಾಖಲಾಗುತ್ತದೆ. ಇದಕ್ಕೆ ದಂಡ ಅಥವಾ ಮೂರು ವರ್ಷ ಜೈಲು ವಿಧಿಸುವ ಸಾಧ್ಯತೆ.

ಐಪಿಸಿ ಸೆಕ್ಷನ್ 506-ಕ್ರಿಮಿನಲ್ ಬೆದರಿಕೆ ಒಡ್ಡುವುದು. ಕೊಲೆ ಬೆದರಿಕೆ ಅಥವಾ ತೀವ್ರ ದುಃಖ ಉಂಟುಮಾಡುವುದು. ಮಹಿಳೆಗೆ ಅಶ್ಲೀಲವಾಗಿ ಆರೋಪಿಸುವುದು. ಈ ಸೆಕ್ಷನ್ ಅಡಿ ಏಳು ವರ್ಷದ ವರೆಗೆ ಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತದೆ.

ಐಪಿಸಿ ಸೆಕ್ಷನ್ 509: ಮಹಿಳೆಯ ನಮ್ರತೆಯನ್ನು ಅವಮಾನಿಸುವ ಉದ್ದೇಶದಿಂದ ಪದ, ಸನ್ನೆ ಅಥವಾ ಕ್ರಿಯೆ.ಈ ಸೆಕ್ಷನ್ ಅಡಿ 3ವರ್ಷ ಸರಳ ಜೈಲು ಅಥವಾ ದಂಡ ವಿಧಿಸುವ ಸಾಧ್ಯತೆ ಇದೆ.

ಸದ್ಯ ಈ ಎಲ್ಲಾ ಸೆಕ್ಷನ್‌ಗಳ ಅಡಿ ಸಂಸದ ಪ್ರಜ್ವಲ್‌ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೀಗಾಗಿ ಪ್ರಕರಣದ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಎಲ್ಲಾ ಮಾಹಿತಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ಜತೆಗೆ ಎಚ್‌.ಡಿ.ರೇವಣ್ಣ ಮೇಲೂ ಎಫ್‌ಐಆರ್‌; ದೂರಿನಲ್ಲಿದೆ ಭಯಾನಕ ಡಿಟೇಲ್ಸ್‌!

ಹಾಸನ ಅಶ್ಲೀಲ ವಿಡಿಯೊ ಪ್ರಕರಣ; ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ

Hassan Pen Drive Case

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣದ (Hassan Pen Drive Case) ತನಿಖೆಗಾಗಿ ಎಸ್‌ಐಟಿ ರಚನೆಗೆ ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಆದೇಶಿಸಿದ್ದರು. ಇದೀಗ ಅಧಿಕೃತವಾಗಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದ್ದು, ಇದರಲ್ಲಿ ಇಬ್ಬರು ಮಹಿಳಾ ಐಪಿಎಸ್‌ ಅಧಿಕಾರಿಗಳು ಇದ್ದಾರೆ.

ಎಡಿಜಿಪಿ ಬಿ.ಕೆ. ಸಿಂಗ್ ಅವರು ಎಸ್‌ಐಟಿ ಮುಖ್ಯಸ್ಥರಾಗಿದ್ದು, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ ಸೀಮಾ ಲಾಟ್ಕರ್ ಸದಸ್ಯರಾಗಿದ್ದಾರೆ. ಸಿಐಡಿಯಲ್ಲಿ ಎಡಿಜಿಪಿಯಾಗಿರುವ ಬಿ.ಕೆ ಸಿಂಗ್ ಅವರು, ಈ ಹಿಂದೆ ಗೌರಿ ಲಂಕೇಶ್ ಕೊಲೆ ಕೇಸ್‌ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಹಾಸನ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿ ಕ್ರಮ ಜರುಗಿಸುವಂತೆ ರಾಜ್ಯ ಮಹಿಳಾ ಆಯೋಗ ದೂರು ನೀಡಿತ್ತು. ಅದೇ ರೀತಿ ಮಹಿಳೆಯೊಬ್ಬರು ಏ.28ರಂದು ನೀಡಿದ ದೂರಿನ ಅನ್ವಯ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕ್ರಿಮಿನಲ್ ಮೊಕದ್ದಮೆ ಸಂಖ್ಯೆ: 107/2024 ಕಲಂ 354A, 354D, 506, 509 ಐಪಿಸಿ ಅಡಿ ದಾಖಲಾದ ಪ್ರಕರಣದ ತನಿಖೆಗಾಗಿ ಸಿಐಡಿಯ ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಲಾಗಿದೆ ಎಂದು ಒಳಾಡಳಿತ ಇಲಾಖೆಯ(ಅಪರಾಧಗಳು) ಸರ್ಕಾರದ ಅಧೀನ ಕಾರ್ಯದರ್ಶಿ ಎಸ್‌.ಅಂಬಿಕಾ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಖಾಸಗಿ ವಿಡಿಯೊ ಚಿತ್ರೀಕರಣವು ಮಾಧ್ಯಮಗಳಲ್ಲಿ ಪ್ರಚಾರವಾಗಿದ್ದು, ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು ಮತ್ತು ಅದನ್ನು ಸಾರ್ವಜನಿಕ ಪಡಿಸಿದ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಲು ಆದೇಶ ನೀಡಬೇಕೆಂದು ಹಾಗೂ ಆರೋಪಿಗಳ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗ ಕೋರಿತ್ತು. ಈ ಹಿನ್ನೆಲೆ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ ಸಿಐಡಿಯ ಒಂದು ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಕರಣದ ಸಮಗ್ರ ತನಿಖೆ ನಡೆಸಲು ರಚಿಸಿರುವ ಎಸ್‌ಐಟಿ ಮುಖ್ಯಸ್ಥರಾಗಿ ಸಿಐಡಿ ಅಪರ ಪೊಲೀಸ್ ಮಹಾ ನಿರ್ದೇಶಕ ಬಿಜಯ ಕುಮಾರ್ ಸಿಂಗ್, ಸದಸ್ಯರಾಗಿ ಪೊಲೀಸ್ ಪ್ರಧಾನ ಕಚೇರಿಯ ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ ಪೆನ್ನೇಕರ್, ಮೈಸೂರು ಪೊಲೀಸ್ ಅಧೀಕ್ಷಕರಾದ ಸೀಮಾ ಲಾಟ್ಕರ್ ಅವರನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

ಈ ಪ್ರಕರಣದ ಕುರಿತು ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ, ದಾಖಲಾಗಬಹುದಾದ ಪ್ರಕರಣಗಳನ್ನು ಡಿಜಿ & ಐಜಿಪಿ ಅವರು, ಈ ವಿಶೇಷ ತನಿಖಾ ತಂಡ (Special Investigation Team) ಕ್ಕೆ ವರ್ಗಾಯಿಸಬೇಕು ಹಾಗೂ ತನಿಖೆಗಾಗಿ ಇತರೆ ಸದಸ್ಯರ ಅವಶ್ಯವಿದ್ದಲ್ಲಿ ಡಿಜಿ & ಐಜಿಪಿ ಅವರ ಅನುಮೋದನೆಯೊಂದಿಗೆ ತನಿಖಾ ತಂಡಕ್ಕೆ ಸೇರಿಸಿಕೊಳ್ಳಬೇಕು. ಸಿಐಡಿ ಪೊಲೀಸ್ ಮಹಾ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ (Special Investigation Team) ವು ಕಾರ್ಯನಿರ್ವಹಿಸಬೇಕು ಹಾಗೂ ಪ್ರಕರಣದ ಸಮಗ್ರ ತನಿಖೆಯನ್ನು ನಡೆಸಿ, ತನಿಖಾ ವರದಿಯನ್ನು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಮುಖಾಂತರ ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಆಗಸ್ಟ್‌ 31ರ ಒಳಗೆ GBA ಚುನಾವಣೆ ನಡೆಸಿ- ಸುಪ್ರೀಂ ಕೋರ್ಟ್‌

VISTARANEWS.COM


on

ಆಗಸ್ಟ್‌ 31ರ ಒಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದೆ. ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗದ ಮನವಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್‌, ಆಗಸ್ಟ್‌ 31ರವರೆಗೆ ಕಾಲಾವಕಾಶ ನೀಡಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಇನ್ನೂ ಮೂರು ತಿಂಗಳ ಗಡುವು ವಿಸ್ತರಣೆ ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು.

ಈ ಹಿಂದೆ ಜೂನ್‌ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿತ್ತು. ಆದರೆ ಇದೀಗ ಸರ್ಕಾರದ ಮನವಿ ಮೇರೆಗೆ ಚುನಾವಣಾ ಗಡುವನ್ನು ಆಗಸ್ಟ್‌ ಅಂತ್ಯದವರೆಗೆ ವಿಸ್ತರಿಸಲಾಗಿದೆ.

ಸೆಪ್ಟೆಂಬರ್‌ ಅಂತ್ಯದವರೆಗೆ ಕಾಲಾವಕಾಶ ನೀಡಬೇಕೆಂದು ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗದ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದವು. ಮನವಿಯನ್ನು ಆಲಿಸಿದ ಸಿಜೆಐ ಅವರನ್ನು ಒಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳಲ್ಲಿ, ರಾಜ್ಯದಲ್ಲಿ ಚುನಾವಣಾ ಸಿಬ್ಬಂದಿ ವರ್ಗ ಜನಗಣತಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಗಳಲ್ಲಿ ನಿರತರಾಗಿದ್ದಾರೆ. ಹೀಗಾಗಿ ಜಿಬಿಎ ಚುನಾವಣೆ ನಡೆಸಲು ಮೂರು ತಿಂಗಳ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದವು.

Continue Reading

Latest

ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ ಬಂದ್‌

VISTARANEWS.COM


on

ಇ-ಫಾರ್ಮಸಿ ಹಾಗೂ ಆನ್‌ಲೈನ್‌ ಮೂಲಕ ಔಷಧ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ಗಳು ಬಂದ್‌ ಆಗಿವೆ. ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆ ಮೇರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಮೆಡಿಕಲ್‌ ಸ್ಟೋರ್‌ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಆನ್‌ಲೈನ್‌ ಔಷಧ ವ್ಯಾಪಾರಕ್ಕೆ ಕಟ್ಟುನಿಟ್ಟಾದ ನಿಯಮ ಜಾರಿಗೊಳಿಸಬೇಕು, ಕಾರ್ಪೊರೇಟ್‌ ಸಂಸ್ಥೆಗಳ ಭಾರಿ ರಿಯಾಯಿತಿ ದರ ಸಮರಕ್ಕೆ ಬ್ರೇಕ್‌ ಹಾಕಬೇಕು ಹಾಗೂ ಎಲ್ಲಾ ವ್ಯಾಪಾರಿಗಳಿಗೆ ಸಮಾನ ಮುಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆಗಳನ್ನು ಅಖಿಲ ಭಾರತ ಕೆಮಿಸ್ಟ್‌ ಮತ್ತು ಡ್ರಗ್ಗಿಸ್ಟ್‌ ಸಂಘ ಮುಂದಿಟ್ಟಿದೆ.

ಈ ಬಂದ್‌ನಿಂದ ಅನೇಕ ಕಡೆಗಳಲ್ಲಿ ಔಷಧ ಖರೀದಿಗೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ತುರ್ತು ಸೇವೆಗಳಿಗಾಗಿ ಕೆಲವು ಮೆಡಿಕಲ್‌ ಸ್ಟೋರ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ.

Continue Reading

Latest

ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ ಬಂದ್‌

VISTARANEWS.COM


on

ಆನ್‌ಲೈನ್‌ನಲ್ಲಿ ಔಷಧ ಮಾರಾಟವನ್ನು ವಿರೋಧಿಸಿ ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳ ಬಂದ್‌ಗೆ ಕರೆ ನೀಡಲಾಗಿದೆ. ದೇಶದಾದ್ಯಂತ ಸುಮಾರು 9 ಲಕ್ಷ ಔಷಧ ಅಂಗಡಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಕರ್ನಾಟಕದಲ್ಲೂ ಸುಮಾರು 26 ಸಾವಿರಕ್ಕೂ ಹೆಚ್ಚು ಮೆಡಿಕಲ್ ಶಾಪ್‌ಗಳು ಬಂದ್ ಆಗುವ ಸಾಧ್ಯತೆ ಇದ್ದು, ಗ್ರಾಹಕರು ಅಗತ್ಯ ಔಷಧಿಗಳನ್ನು ಮುಂಚಿತವಾಗಿ ಖರೀದಿಸಿಕೊಳ್ಳುವಂತೆ ಸಂಘಟನೆಗಳು ಮನವಿ ಮಾಡಿವೆ.

ಇ-ಫಾರ್ಮಸಿ ವೇದಿಕೆಗಳ ಮೂಲಕ ಭಾರಿ ರಿಯಾಯಿತಿಯಲ್ಲಿ ಔಷಧ ಮಾರಾಟವಾಗುತ್ತಿರುವುದು ಸಣ್ಣ ಹಾಗೂ ಮಧ್ಯಮ ಮಟ್ಟದ ಮೆಡಿಕಲ್ ಅಂಗಡಿಗಳಿಗೆ ಹೊಡೆತ ನೀಡುತ್ತಿದೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ. ಜೊತೆಗೆ ಆನ್‌ಲೈನ್ ಮೂಲಕ ನಿಯಂತ್ರಣವಿಲ್ಲದೆ ಔಷಧ ವಿತರಣೆ ನಡೆಯುತ್ತಿರುವುದರಿಂದ ರೋಗಿಗಳ ಆರೋಗ್ಯಕ್ಕೂ ಅಪಾಯ ಉಂಟಾಗಬಹುದು ಎಂದು ಎಚ್ಚರಿಸಿದ್ದಾರೆ.
ಆನ್‌ಲೈನ್ ಮೂಲಕ ಔಷಧ ಖರೀದಿ ವ್ಯವಸ್ಥೆಯನ್ನು ನಿಯಂತ್ರಿಸುವುದು ಹಾಗೂ ಇ-ಫಾರ್ಮಸಿ ಕಂಪನಿಗಳ ವಿರುದ್ಧ ಕಠಿಣ ನಿಯಮ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ.

Continue Reading

Latest

ಕಂಜನ್ ದಾಳಿಗೆ ತುತ್ತಾಗಿದ್ದ ಮಾರ್ತಾಂಡ ದುರ್ಮರಣ

VISTARANEWS.COM


on

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ನಡೆದ ಸಾಕಾನೆಗಳ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ನಿನ್ನೆ ಕಂಜನ್ ಮತ್ತು ಮಾರ್ತಾಂಡ ನಡುವೆ ನಡೆದ ಕಾದಾಟ ನಡೆದಿತ್ತು. ಈ ವೇಳೆ ಆನೆಯ ಕೆಳಗೆ ಸಿಲುಕಿ ಪ್ರವಾಸಿ ಮಹಿಳೆ ದುರ್ಮರಣ ಹೊಂದಿದ್ದರು.

ಘಟನೆಯ ಬೆನ್ನಲ್ಲೇ ದುಬಾರೆ ಆನೆ ಶಿಬಿರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಇದೇ ವೇಳೆ ರಾಜ್ಯದ ಎಲ್ಲಾ ಸಾಕಾನೆ ಶಿಬಿರಗಳಿಗೆ ಹೊಸ SOP ಜಾರಿಗೊಳಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ ನೀಡಿದ್ದಾರೆ. ಹೊಸ ಮಾರ್ಗಸೂಚಿಗಳ ಪ್ರಕಾರ ಆನೆಗಳಿಂದ ಕನಿಷ್ಠ 100 ಅಡಿ ದೂರ ಕಾಪಾಡಿಕೊಳ್ಳಬೇಕು, ಆನೆಗಳ ಬಳಿ ಸೆಲ್ಫಿ ಹಾಗೂ ಫೋಟೋ ತೆಗೆದುಕೊಳ್ಳುವುದನ್ನು ನಿಷೇಧಿಸಲಾಗಿದೆ. ಜೊತೆಗೆ ಪ್ರವಾಸಿಗರು ಸಾಕಾನೆಗಳಿಗೆ ಯಾವುದೇ ಆಹಾರ ನೀಡಬಾರದು ಎಂದು ಸೂಚಿಸಲಾಗಿದೆ.

Continue Reading
Advertisement
galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌