Site icon Vistara News

Hassan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

Hasan pen drive case

ಬೆಂಗಳೂರು: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಪ್ರಕರಣದ ತನಿಖೆಗೆ ಸರ್ಕಾರ ಎಸ್​ಐಟಿ ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಲವಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ (Hassan pen drive cas) ಒಂದು ಬಹಿರಂಗಗೊಂಡಿದೆ. ಅದರ ಬಗ್ಗೆ ತನಿಖೆ ನಡೆಸುವುದಾಗಿ ಅವರು ಹೇಳಿದ್ದಾರೆ. ಈ ಕುರಿತು ಸಿಎಂ ಶನಿವಾರ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರದಿಂದ ತೀರ್ಮಾನ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಚಲನ ಮೂಡಿಸಿದ್ದ ಪೆನ್​ ಡ್ರೈವ್ ಪ್ರಕರಣ

ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಕೆಲವು ದಿನಗಳ ಹಿಂದೆ ಬಹಿರಂಗೊಂಡಿತ್ತು. ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು ಈ ಕುರಿತು ಸಾಕಷ್ಟು ಊಹಾಪೋಹಗಳು ಎದ್ದಿವೆ. ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ವಿಡಿಯೊ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.

ಇದನ್ನೂ ಓದಿ: Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಕೊನೇ ಹಂತದಲ್ಲಿ ರಾಸಲೀಲೆಯ ವಿಡಿಯೋಗಳು ಬಹಿರಂಗಗೊಂಡಿವೆ. ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದರು. ಇದೀಗ ಸಿಎಂ ತನಿಖೆಗೆ ಆದೇಶ ನೀಡಿದ್ದಾರೆ.

ಮಹಿಳಾ ಆಯೋಗದ ಪತ್ರ ಇಲ್ಲಿದೆ

ಈ ಪೆನ್‌ಡ್ರೈನಲ್ಲಿ ಸಾವಿರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಪ್ರಜ್ವಲ್​ ಅವರು ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಅಲ್ಲದೆ, ಲೈಂಗಿಕ ಕ್ರಿಯೆಯ ವಿಡಿಯೊಗಳನ್ನು ಮಾಡಿಟ್ಟುಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ.

ಈ ಹಿಂದೆ ಹಾಸನದ ವಕೀಲ ದೇವರಾಜೇಗೌಡ ಎಂಬುವವರು ಅಭ್ಯರ್ಥಿಯ ಹಲವು ಅಶ್ಲೀಲ ವಿಡಿಯೋಗಳು ತಮ್ಮ ಬಳಿ ಇವೆ ಎಂದು ಹೇಳಿಕೆ ನೀಡಿದ್ದರು. ಆ ವಿಡಿಯೋಗಳನ್ನು ತಾವು ಬಹಿರಂಗಗೊಳಿಸಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

Exit mobile version