ಹಾಸನ: ಕರಡಿ ದಾಳಿಯಿಂದ (Bear Attack ) ಗಾಯಗೊಂಡಿದ್ದ ರೈತರೊಬ್ಬರು ಮೃತಪಟ್ಟಿದ್ದಾರೆ. ಮಹಾಲಿಂಗಪ್ಪ (75) ಮೃತ ದುರ್ದೈವಿ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿಯ ಜನ್ನಾವರ ಗ್ರಾಮದಲ್ಲಿ ಘಟನೆ ನಡೆದಿದೆ.
ಜು.25ರಂದು ಬೆಳಗ್ಗೆ ಮಹಾಲಿಂಗಪ್ಪ ಅವರು ತೋಟದ ಮನೆಯ ಬಳಿ ನಿಂತಿದ್ದರು. ಈ ವೇಳೆ ಹಿಂದಿನಿಂದ ಬಂದ ಕರಡಿ ಡೆಡ್ಲಿ ಅಟ್ಯಾಕ್ ಮಾಡಿತ್ತು. ವೃದ್ಧ ಮಹಾಲಿಂಗಪ್ಪ ಅವರ ತಲೆಯ ಚರ್ಮವನ್ನೇ ಕಿತ್ತು, ಮುಖವನ್ನು ಪರಚಿ ತೀವ್ರವಾಗಿ ಗಾಯಗೊಳಿಸಿತ್ತು.
ಗಂಭೀರ ಗಾಯಗೊಂಡಿದ್ದ ಅವರನ್ನು ಅರಸೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸಾವು ಬದುಕಿನ ಮಧ್ಯೆ ಹೋರಾಡಿದ ಮಹಾಲಿಂಗಪ್ಪ ಅವರು ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 11ರಂದು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ: Hidden Camera : ಲೇಡಿಸ್ ವಾಶ್‌ರೂಮ್‌ನ ಕಸದ ಬುಟ್ಟಿಯಲ್ಲಿತ್ತು ಮೊಬೈಲ್; ರೆಕಾರ್ಡ್ ಆಯ್ತು 2 ಗಂಟೆಗಳ ವಿಡಿಯೊ!
ದೀಪದ ಎಣ್ಣೆ ಕುಡಿದು ಹೋದ ಕರಡಿ
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಲಿಂಗನಹಳ್ಳಿ ಆಂಜನೇಯ ದೇವಸ್ಥಾನದಲ್ಲಿ ಕರಡಿ ಪ್ರತ್ಯಕ್ಷಗೊಂಡಿದೆ. ಆಂಜನೇಯ ದೇವಸ್ಥಾನಕ್ಕೆ ಬಂದ ಕರಡಿಯೊಂದು ದೀಪದ ಎಣ್ಣೆ ಕುಡಿದು ಹೋಗಿದೆ. ರಾತ್ರಿ ಕಾಣಿಸಿಕೊಂಡ ಕರಡಿ ಓಡಿಸಲು ಗ್ರಾಮಸ್ಥರು ಹರಸಾಹಸ ಪಟ್ಟರು.
ಕರಡಿಯಿಂದ ಜೀವ ಹಾನಿ ಆಗುವ ಭಯದಲ್ಲಿದ್ದು, ಹಲವು ಬಾರಿ ಕರಡಿ ಸೆರೆಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಮನವಿಗೆ ಸ್ಪಂದಿಸದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ