Site icon Vistara News

Congress Politics : ಲೋಕಸಭೆ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ; ಯತೀಂದ್ರ ಸ್ಫೋಟಕ ಹೇಳಿಕೆ

Siddaramaiah Yatindra Siddaramaiah

ಹಾಸನ: 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ (Parliamentary Elections 2024) ಕಾಂಗ್ರೆಸ್‌ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿದರೆ ಸಿದ್ದರಾಮಯ್ಯ (CM Siddaramaiah) ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ (siddaramaiah Full time Chief Minister) ಮುಂದುವರಿಯಲಿದ್ದಾರೆ ಎಂಬ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ. (Yatindra siddaramaiah) ಇದು ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಸಂಚಲನವನ್ನು (Congress Politics) ಸೃಷ್ಟಿಸಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಅಣ್ಣೆಚಾಕನಹಳ್ಳಿ ಗ್ರಾಮದಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದರು. ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಯತೀಂದ್ರ ಈ ಸ್ಪೋಟಕ‌ ಹೇಳಿಕೆ ನೀಡಿದ್ದಾರೆ. ʻʻಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತದೆ. ಹೆಚ್ಚು ಸ್ಥಾನ ಗೆದ್ದರೆ ಯಾವುದೇ ಅಡೆತಡೆ ಇಲ್ಲದೆ ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಭವಿಷ್ಯ ನುಡಿದರು.

ʻʻಚುನಾವಣೆಗೂ ಮೊದಲು ಐದು ಗ್ಯಾರಂಟಿ ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಸಿದ್ದರಾಮಯ್ಯ ಅವರು ಐದು ಗ್ಯಾರಂಟಿ ಜಾರಿ ಮಾಡಿದ್ದಾರೆ. ಮತ್ತೊಮ್ಮೆ ನುಡಿದಂತೆ ನಡೆಯುವುದಾಗಿ ಸಾಬೀತು ಮಾಡಿದ್ದಾರೆʼʼ ಎಂದು ತಂದೆಯನ್ನು ಕೊಂಡಾಡಿದರು ಯತೀಂದ್ರ ಸಿದ್ದರಾಮಯ್ಯ.

ʻʻಬಡವರಿಗಾಗಿ, ಶೋಷತರಿಗೆ ಕೆಲಸ ಮಾಡುವ ಹಂಬಲ ಕಾಂಗ್ರೆಸ್‌ಗೆ ಇದೆ. ಹಾಗಾಗಿ ಸಿದ್ದರಾಮಯ್ಯ ಅವರಿಗೆ ನಿಮ್ಮ ಬೆಂಬಲ ನೀಡಬೇಕು. ಮುಂದೆ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಬೇಕಾಗಿದೆ. ಹೆಚ್ಚು ಸ್ಥಾನಗಳನ್ನು ಗೆದ್ದರೆ ತಿಕವಾಗಿ ಅವರಿಗೆ ಮತ್ತಷ್ಟು ಬೆಂಬಲ ಸಿಗುತ್ತದೆʼʼ ಎಂದು ಹೇಳಿದರು ಯತೀಂದ್ರ.

ʻʻಗ್ಯಾರೆಂಟಿ ಯೋಜನೆಗೆ ವರ್ಷಕ್ಕೆ 56 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ. ಈ ಹಿಂದೆ ಸಾಮಾಜಿಕ ಕಾರ್ಯಕ್ರಮಕ್ಕಾಗಿ ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣ ಖರ್ಚು ಮಾಡಿಲ್ಲ. ಇಷ್ಟೊಂದು ಹಣ ಖರ್ಚು ಮಾಡುತ್ತಿರುವಾಗ ಜನರ ಬೆಂಬಲ ಬೇಕುʼʼ ಎಂದು ಹೇಳಿದ ಯತೀಂದ್ರ ಸಿದ್ದರಾಮಯ್ಯ ಅವರು, ಹೆಚ್ಚು ಸ್ಥಾನ ಗೆದ್ದರೆ ನಮಗೆ ಬಲ ಬರುತ್ತೆ. ಇದನ್ನು ಲೋಕಸಭಾ ಚುನಾವಣೆಯಲ್ಲಿ ತೋರಿಸಬೇಕು ಎಂದರು.

ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆದರೆ ಸಿದ್ದರಾಮಯ್ಯನವರ ಬಲ ಹೆಚ್ಚಲಿದೆ. ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಡೆತಡೆ ಇಲ್ಲದೆ ಮುಂದುವರಿಯಲು ಸಾಧ್ಯವಾಗುತ್ತದೆ. ಮುಂದಿನ ಐದು ವರ್ಷ ಗ್ಯಾರಂಟಿ ಯೋಜನೆ ಮುಂದುವರಿಸುತ್ತಾರೆ. ಹಾಗಾಗಿ ನಿಮ್ಮ‌ ಬಂಬಲ ಆಶೀರ್ವಾದ ಅವರ ಮೇಲೆ ಇರಲಿ ಎಂದು ಕೋರಿದರು ಯತೀಂದ್ರ ಸಿದ್ದರಾಮಯ್ಯ.

ಇದನ್ನೂ ಓದಿ : Congress Politics : 3 ಡಿಸಿಎಂ ಹುದ್ದೆ ಬೇಕಾದವರು 2 ಎಂಪಿ ಸೀಟ್‌ ಗೆಲ್ಲಿಸಿಕೊಂಡು ಬರ್ಲಿ ; ಬಾಲಕೃಷ್ಣ ಸಲಹೆ

ಸಿದ್ದರಾಮಯ್ಯ ಅವರು ಕನಕ ಜಯಂತಿ ಆಚರಣೆಯನ್ನು ಆರಂಭ ಮಾಡಿದರು. ಒಂದು ಸಮುದಾಯ ರಾಜಕೀಯವಾಗಿ ಬೆಳೆದರೆ ಅಭಿವೃದ್ಧಿ ಸಾಧ್ಯ. ನೀವು ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದ್ದರಿಂದ ಅವರು ಎರಡನೇ ಬಾರಿ ಸಿಎಂ ಆದರು ಎಂದರು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಮುಂದಿನ ಪ್ರಧಾನಿ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದ ಅಭಿಮಾನಿಗಳು

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆದ್ದರೆ ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಎಂದು ಯತೀಂದ್ರ ಅವರು ಹೇಳುತ್ತಿದ್ದಂತೆಯೇ ಅಭಿಮಾನಿಗಳು ಹುಚ್ಚೆದ್ದು ಕುಣಿದರು. ಈ ನಡುವೆ ಮುಂದಿನ ಪ್ರದಾನಿ ಸಿದ್ದರಾಮಯ್ಯ ಎಂದೂ ಅಭಿಮಾನಿಗಳು ಘೋಷಣೆ ಕೂಗಿದರು.

Exit mobile version