Site icon Vistara News

ಮಕ್ಕಳನ್ನು ನೋಡಲು ಬಿಡದಿದ್ದಕ್ಕೆ ಮಡದಿ ಮಕ್ಕಳನ್ನೂ ಸೇರಿಸಿ ಮನೆಗೇ ಬೆಂಕಿ ಹಚ್ಚಿದ!

crime news

ಹಾಸನ: ಮಕ್ಕಳನ್ನು ನೋಡಲು ಬಿಡದಿದ್ದಕ್ಕೆ ಪಾಪಿ ಪತಿಯೊಬ್ಬ ಮಡದಿ ಮಕ್ಕಳನ್ನೂ ಸೇರಿಸಿ ಮನೆಗೇ ಬೆಂಕಿ ಹಚ್ಚಿದ ಘಟನೆ ಹಾಸನ ತಾಲ್ಲೂಕಿನ ದೊಡ್ಡಬೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯೊಳಗಿದ್ದ ಪತ್ನಿ, ಇಬ್ಬರು ಗಂಡು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.

ತಾಯಿ ಮಕ್ಕಳಾದ ಗೀತಾ, ಚಿರಂತನ್ (7), ನಂದನ್ (5)ರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳಿಗೆ ಹಾಸನದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಂಕನಹಳ್ಳಿಯ ರಂಗಸ್ವಾಮಿ ಮನೆಗೆ ಬೆಂಕಿ ಹಚ್ಚಿದ ಆರೋಪಿ. ಜಮೀನು ವಿಚಾರಕ್ಕೆ ರಂಗಸ್ವಾಮಿ ಹಾಗೂ ಗೀತಾ ನಡುವೆ ಜಗಳವಾಗಿದ್ದು, ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ನಾಲ್ಕು ತಿಂಗಳಿನಿಂದ ಪತಿಯಿಂದ ಪ್ರತ್ಯೇಕವಾಗಿದ್ದ- ಪತ್ನಿ, ಮಕ್ಕಳು ತವರಿನಲ್ಲಿದ್ದರು. ರಂಗಸ್ವಾಮಿ ಆಗಾಗ್ಗೆ ಬಂದು ಮಕ್ಕಳನ್ನು ನೋಡಿಕೊಂಡು ಹೋಗುತ್ತಿದ್ದ. ನಿನ್ನೆ ಮಕ್ಕಳನ್ನು ನೋಡಲು ಬಂದಾಗ ಬಿಡದ ಪತ್ನಿ ಗೀತಾ ವಿರುದ್ಧ ಸಿಟ್ಟಿಗೆದ್ದ ಈತ ಈ ರಾಕ್ಷಸೀ ಕೃತ್ಯ ನಡೆಸಿದ್ದಾನೆ.

ಪೆಟ್ರೋಲ್ ಬಂಕ್‌ನಿಂದ ಪೆಟ್ರೋಲ್ ತಂದ ಈತ ಮಧ್ಯರಾತ್ರಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸ್ಥಳೀಯರ ನೆರವಿನಿಂದ ಗೀತಾ ಹಾಗೂ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ವಸ್ತುಗಳೆಲ್ಲಾ ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Crime News | ಅತ್ತೆಯ ಕೊಂದ ಅಳಿಯ, ನಕಲಿಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ, ತಲೆ ಇಲ್ಲದ ವ್ಯಕ್ತಿಯ ರುಂಡ ಪತ್ತೆ

Exit mobile version