Dharma Dangal:‌ ಬೇಲೂರು ದೇವಸ್ಥಾನದಲ್ಲಿ ಕುರಾನ್‌ ಪಠಣ: ಆಗಮ ಪಂಡಿತರ ಮೊರೆ ಹೋದ ಜಿಲ್ಲಾಡಳಿತ - Vistara News

ಪ್ರಮುಖ ಸುದ್ದಿ

Dharma Dangal:‌ ಬೇಲೂರು ದೇವಸ್ಥಾನದಲ್ಲಿ ಕುರಾನ್‌ ಪಠಣ: ಆಗಮ ಪಂಡಿತರ ಮೊರೆ ಹೋದ ಜಿಲ್ಲಾಡಳಿತ

ಇಷ್ಟು ವರ್ಷದಿಂದ ನಡೆದುಕೊಂಡು ಬಂದಿರುವ ಪದ್ಧತಿಯನ್ನು ನಮ್ಮ ಸ್ವಂತ ವಿವೇಚನೆಯಿಂದ ನಿಲ್ಲಿಸಲು ಸಾಧ್ಯವಿಲ್ಲ. ಸದ್ಯಕ್ಕೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

VISTARANEWS.COM


on

archana hasan dc
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಬೇಲೂರು ಶ್ರೀ ಚನ್ನಕೇಶವಸ್ವಾಮಿ ದೇವಾಲಯದ ರಥೋತ್ಸವದ ವೇಳೆ ಕುರಾನ್ ಪಠಣ ವಿವಾದ ವಿಚಾರದಲ್ಲಿ ಮುಜರಾಯಿ ಇಲಾಖೆಯ ಆಗಮ ಪಂಡಿತರ ಮೊರೆ ಹೋಗಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ತಿಳಿಸಿದ್ದಾರೆ.

ಈ ಬಗ್ಗೆ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ. ಇಷ್ಟು ವರ್ಷದಿಂದ ನಡೆದುಕೊಂಡು ಬಂದಿರುವ ಪದ್ಧತಿಯನ್ನು ನಮ್ಮ ಸ್ವಂತ ವಿವೇಚನೆಯಿಂದ ನಿಲ್ಲಿಸಲು ಸಾಧ್ಯವಿಲ್ಲ. ಇದು ಹೊಸದಾಗಿ ಸೃಷ್ಟಿಯಾಗಿರುವಂತಹದ್ದಲ್ಲ. 1929ರಿಂದಲೂ ಈ ಪದ್ಧತಿ ಇದೆ. ಅದು ಮ್ಯಾನುಯಲ್‌ನಲ್ಲಿಯೂ ಸೇರಿದೆ. ರಥೋತ್ಸವದ ವೇಳೆ ಮೌಲ್ವಿಗಳು ಬಂದು ಮುಜ್ರೆ ಸರ್ವಿಸ್ ಅಂತ ಮಾಡುತ್ತಾರೆ. ಕಳೆದ ವರ್ಷ ಇದನ್ನು ನಿಲ್ಲಿಸಲು ಒತ್ತಡ ಬಂದಿತ್ತು. ಆ ಬಗ್ಗೆ ಮುಜರಾಯಿ ಇಲಾಖೆಗೆ ಸ್ಪಷ್ಟನೆ ಕೇಳಿದ್ದೆವು. ಹಿಂದಿನ ಪದ್ಧತಿಯನ್ನು ಬದಲಾವಣೆ ಮಾಡುವುದು ಬೇಡ ಎಂದಿದ್ದರು. ಅದರಂತೆ ಕಳೆದ ವರ್ಷ ಪದ್ಧತಿ ಪ್ರಕಾರ ನಡೆದುಕೊಂಡು ಹೋಗಿದೆ ಎಂದು ಅರ್ಚನಾ ತಿಳಿಸಿದ್ದಾರೆ.

ಈ ವರ್ಷ ಮತ್ತೆ ಪದ್ಧತಿ ಬದಲಾಯಿಸಿ ಎಂದು ಕೇಳಿದ್ದಾರೆ. ದಿಢೀರ್ ಆಗಿ ಇಂತಹ ಪದ್ಧತಿಗಳನ್ನು ಬದಲಾವಣೆ ಮಾಡಲು ಆಗುವುದಿಲ್ಲ. ನಿನ್ನೆ ಪ್ರತಿಭಟನೆ ಮಾಡಿದ್ದಾರೆ, ಆ ವೇಳೆ ಯಾರೋ ಒಬ್ಬ ಯುವಕ ಘೋಷಣೆ ಕೂಗಿದ ಅನ್ನುವ ಕಾರಣಕ್ಕೆ ಘರ್ಷಣೆ ಶುರುವಾಗಿದೆ. ತಕ್ಷಣ ಪೊಲೀಸರು ನಿಯಂತ್ರಿಸಿದ್ದಾರೆ. ಆಮೇಲೆ ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾರೆ. ಅದನ್ನು ಸದ್ಯ ನಿಯಂತ್ರಣಕ್ಕೆ ತರಲಾಗಿದೆ. ಇಷ್ಟು ವರ್ಷದಿಂದ ನಡೆದುಕೊಂಡು ಬಂದಿರುವ ಪದ್ಧತಿಯನ್ನು ನಮ್ಮ ಸ್ವಂತ ವಿವೇಚನೆಯಿಂದ ನಿಲ್ಲಿಸಲಾಗುವುದಿಲ್ಲ. ಪರಿಸ್ಥಿತಿಯನ್ನು ಮುಜರಾಯಿ ಇಲಾಖೆಗೂ ತಿಳಿಸಿದ್ದು, ಪರಿಶೀಲನೆಗೆ ಆಗಮ ಪಂಡಿತರು ಬರುತ್ತಿದ್ದಾರೆ. ಅವರು ನೋಡಿ ರಿಪೋರ್ಟ್ ಕೊಟ್ಟ ನಂತರ ಆ ಬಗ್ಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸದ್ಯಕ್ಕೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇದೇ ವೇಳೆ ಮೇಲಧಿಕಾರಿಗಳ ಜೊತೆ ಚರ್ಚೆ ಮಾಡದೆ ಈ ಕುರಿತು ಹೇಳಿಕೆ ನೀಡಿರುವ ಶ್ರೀ ಚನ್ನಕೇಶವ ದೇವಸ್ಥಾನದ ಆಡಳಿತಾಧಿಕಾರಿ ವಿರುದ್ಧ ಡಿಸಿ ಗರಂ ಆದರು. ದೇವಸ್ಥಾನದ ಮೆಟ್ಟಿಲ‌ ಮೇಲೆ ನಿಂತು ಕುರಾನ್ ಪಠಣ ಮಾಡುವ ಪದ್ಧತಿ ನಾಲ್ಕಾರು ವರ್ಷಗಳ ಹಿಂದೆ ಇತ್ತು. ರಥದ ಮುಂದೆ ಕುರಾನ್ ಪಠಣ ಮಾಡುವ ಪದ್ಧತಿ ಇರಲಿಲ್ಲ. ಕಳೆದ ನಾಲ್ಕೈದು ವರ್ಷದಿಂದ ರಥದ ಮುಂದೆ ಬಂದು ಕುರಾನ್ ಪಠಣ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ದೇವಸ್ಥಾನದ ಮೆಟ್ಟಿಲುಗಳ ಮೇಲೆ ನಿಂತು ಕುರಾನ್ ಪಠಣ ಮಾಡುವ ಪದ್ಧತಿಯನ್ನು ಮುಂದುವರಿಸುವಂತೆ ಸೂಚನೆ ಕೊಟ್ಟಿದ್ದೇವೆ ಎಂದವರು ಹೇಳಿದ್ದಾರೆ.

ಇದನ್ನೂ ಓದಿ: Dharma dangal : ಬೇಲೂರಿನಲ್ಲಿ ಭುಗಿಲೆದ್ದ ಕುರಾನ್‌ ಪಠಣ ವಿವಾದ; ಬಜರಂಗ ದಳ ಪ್ರತಿಭಟನೆ ವೇಳೆ ಮುಸ್ಲಿಂ ಯುವಕನ ಕಿರಿಕ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lok Sabha Election: ರಾಜ್ಯಾದ್ಯಂತ 1 ಗಂಟೆ ವೇಳೆಗೆ 38.23% ಮತದಾನ; ಎಲ್ಲಿ ಹೆಚ್ಚು? ಎಲ್ಲಿ ಕಡಿಮೆ?

Lok Sabha Election: ಮೊದಲ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ. ಬಿಸಿಲನ್ನೂ ಲೆಕ್ಕಿಸದೆ ಜನ ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಸೆಲೆಬ್ರಿಟಿಗಳು ಕೂಡ ಮತದಾನಕ್ಕೆ ಸಾಥ್‌ ನೀಡುತ್ತಿರುವುದು ಪ್ರಮುಖ ಸಂಗತಿಯಾಗಿದೆ.

VISTARANEWS.COM


on

Lok Sabha Election 2024: Karnataka records 38.23% voter turnout; highest in Dakshina Kannda
Koo

ಬೆಂಗಳೂರು: ಕರ್ನಾಟಕದಲ್ಲಿ (Karnataka) ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಹೆಚ್ಚಿನ ಉತ್ಸಾಹ ತೋರುತ್ತಿದ್ದಾರೆ. ಬಿಸಿಲನ್ನೂ ಲೆಕ್ಕಿಸದೆ ಮತದಾರರು ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಸೆಲೆಬ್ರಿಟಿಗಳು, ಸಿನಿಮಾ ತಾರೆಯರು, ರಾಜಕಾರಣಿಗಳು ಕೂಡ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುವ ಜತೆಗೆ, ಸಾಮಾನ್ಯರೂ ಮತದಾನ ಮಾಡಲು ಜಾಗೃತಿ ಮೂಡಿಸುತ್ತಿದ್ದಾರೆ. ಹಾಗಾಗಿ, ಮಧ್ಯಾಹ್ನ 1 ಗಂಟೆ ವೇಳೆಗೆ ಕರ್ನಾಟಕದಾದ್ಯಂತ ಶೇ.38.23ರಷ್ಟು ಮತದಾನ ದಾಖಲಾಗಿದೆ.

ಚುನಾವಣೆ ಆಯೋಗದ ಮಾಹಿತಿ ಪ್ರಕಾರ, ಮಧ್ಯಾಹ್ನ 1 ಗಂಟೆ ವೇಳಗೆ ಶೇ.38.23ರಷ್ಟು ಮತದಾನ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.48.10ರಷ್ಟು ಮತದಾನ ದಾಖಲಾಗಿದ್ದು, ಇದೇ ಜಿಲ್ಲೆಯಲ್ಲಿ ಹೆಚ್ಚು ಮತದಾನ ದಾಖಲಾಗಿದೆ. ಬೆಂಗಳೂರು ಕೇಂದ್ರದಲ್ಲಿ ಶೇ.30.10ರಷ್ಟು ಮತದಾನ ನಡೆದಿದ್ದು, ಅತಿ ಕಡಿಮೆ ಮತದಾನ ದಾಖಲಾದ ಜಿಲ್ಲೆ ಎನಿಸಿದೆ. ಉಡುಪಿ-ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರಿನಲ್ಲೂ ಹೆಚ್ಚಿನ ಜನ ಮತದಾನ ಮಾಡಿದ್ದಾರೆ.

ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ?

ಮತ ಚಲಾವಣೆ ಮಾಡಿದ ವರ ಚೇತನ್‌

ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿಯಲ್ಲಿ ವರನೊಬ್ಬ ಮತಗಟ್ಟೆಗೆ ಓಡೋಡಿ ಬಂದು ಮತ ಚಲಾಯಿಸಿದ್ದಾರೆ. ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಮತಕೇಂದ್ರಕ್ಕೆ ಓಡೋಡಿ ಹೋದ ವರ ವೋಟ್‌ ಹಾಕಿ ನಿರಾಳರಾದರು. ವರ ಚೇತನ್ ಎಂಬುವವರು ಮತಗಟ್ಟೆ ಸಂಖ್ಯೆ 60ರಲ್ಲಿ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿ ಇತರರಿಗೂ ಮಾದರಿ ಆದರು. ಚೇತನ್‌ ಅವರು ದೀಪಿಕಾ ಎಂಬುವರ ಜತೆಗೆ ವಿವಾಹವಾಗುತ್ತಿದ್ದು, ತಮ್ಮ ಮುಹೂರ್ತದ ವಸ್ತ್ರದಲ್ಲೇ ಬಂದು ವೋಟ್‌ ಹಾಕಿದ್ದಾರೆ.

ಮುಹೂರ್ತಕ್ಕೂ ಮುನ್ನ ವಧುವಿನ ಮತದಾನ

ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಕೊತ್ತುಗೋಡು ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮುಹೂರ್ತಕ್ಕೂ ಮುನ್ನ ನವ ವಧುವೊಬ್ಬರು ಮತದಾನ ಮಾಡಿ ಗಮನ ಸೆಳೆದಿದ್ದಾರೆ. ರೇಷ್ಮೆ ಸೀರೆ ಉಟ್ಟಿದ್ದ ಮದುವಣಗಿತ್ತಿ ಸಂಪೂರ್ಣ ರೆಡಿಯಾಗಿ ಬಂದು ಮತ ಚಲಾಯಿಸಿ ಮದುವೆ ಮಂಟಪಕ್ಕೆ ಹೋಗಿದ್ದಾರೆ. ಬಳಿಕ ಹಸೆಮಣೆ ಏರಿದ್ದಾರೆ. ಈ ಮೂಲಕ ತಮ್ಮ ಹಕ್ಕನ್ನು ಚಲಾವಣೆ ಮಾಡಿದ್ದಾರೆ. ಕುಂದೂರಿನ ತಳವಾರದ ಸೌಮ್ಯಾ ಅವರು ಮೂಡಿಗೆರೆಯ ಕಲ್ಯಾಣ ಮಂಟಪಕ್ಕೆ ತೆರಳುವ ವೇಳೆ ಕುಟುಂಬ ಸಮೇತ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ.

ಇದನ್ನೂ ಓದಿ: Gold Rate Today: ಮತದಾನದ ದಿನ ಬಂಗಾರದ ದರ ತೇಜಿ, ಬೆಂಗಳೂರಿನಲ್ಲಿ 24K ಚಿನ್ನಕ್ಕೆ ₹440 ಏರಿಕೆ

Continue Reading

Lok Sabha Election 2024

Lok Sabha Election 2024: ಕನಕಪುರದಲ್ಲಿ 505 ರೂ, ಮಲೆ ಮಹದೇಶ್ವರದ ಲಾಡು, ಗ್ಯಾರಂಟಿ ಕಾರ್ಡ್ ಹಂಚಿಕೆ; ಎಚ್‌ಡಿಕೆ ಗಂಭೀರ ಆರೋಪ

Lok Sabha Election 2024: ನನಗೆ ಇರುವ ಮಾಹಿತಿ ಪ್ರಕಾರ 14 ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಒಳ್ಳೆಯ ರೀತಿ ಮತದಾನ ನಡೆಯುತ್ತಿದೆ. ಆದರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಒಂದು ಕಪ್ಪು ಚುಕ್ಕೆ ರೀತಿ ಪ್ರಕ್ರಿಯೆಗಳು ನಡೆಯುತ್ತಿವೆ. ನಿನ್ನೆ ಸಹ ಕನಕಪುರದಲ್ಲೂ ಧೈರ್ಯದಿಂದ ಎದರಿಸುವ ವಾತಾವರಣ ನಿರ್ಮಾಣವಾಗಿದೆ. ಆದರೆ, ಕನಕಪುರದ ಸೊರಕಾಯಿ ದೊಡ್ಡಿ ಸೇರಿದಂತೆ ಹಲವು ಕಡೆ ಕಾಂಗ್ರೆಸ್ ತನ್ನ ಹಳೇ ಚಾಳಿಯನ್ನು ಮುಂದುವರಿಸಿದೆ‌. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ, ಮಾಗಡಿ, ಕುಣಿಗಲ್ ಸೇರಿದಂತೆ ಹಲವು ಭಾಗದಲ್ಲಿ ಬೆಳಗಿನ ಜಾವ ಐದು ಗಂಟೆಗೆ ಮನೆ ಮನೆಗೆ ಹೋಗಿ ಗ್ಯಾರಂಟಿ ಕಾರ್ಡ್ ಕೊಟ್ಟು 4 ರಿಂದ 5 ಸಾವಿರ ರೂಪಾಯಿಯ ಕೂಪನ್ ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

VISTARANEWS.COM


on

Lok Sabha Election 2024 DK brothers distribute Rs 505 in Bengaluru Rural constituency HD Kumaraswamy allegations
Koo

ಬೆಂಗಳೂರು: ಈ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಬೆಂಗಳೂರು ಗ್ರಾಮಾಂತರ ಕ್ಷೇತ್ರದ (Bangalore Rural Constituency) ಕನಕಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ 505 ರೂ, ಮಲೆ ಮಹದೇಶ್ವರದ ಲಾಡು, ಗ್ಯಾರಂಟಿ ಕಾರ್ಡ್ ಹಂಚಿಕೆ ಮಾಡಲಾಗುತ್ತಿದೆ. ಈ ಬಗ್ಗೆ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೂ ಕಣ್ಣು ಮುಚ್ಚಿ ಕುಳಿತಿದ್ದು, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದ್ದಾರೆ.

ಕೇತಗಾನಹಳ್ಳಿಯಲ್ಲಿ ಕುಟುಂಬ ಸಮೇತ ಬಂದು ಮತಚಲಾಯಿಸಿದ ಎಚ್.ಡಿ. ಕುಮಾರಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿ, ನನಗೆ ಇರುವ ಮಾಹಿತಿ ಪ್ರಕಾರ 14 ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಒಳ್ಳೆಯ ರೀತಿ ಮತದಾನ ನಡೆಯುತ್ತಿದೆ. ಆದರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಒಂದು ಕಪ್ಪು ಚುಕ್ಕೆ ರೀತಿ ಪ್ರಕ್ರಿಯೆಗಳು ನಡೆಯುತ್ತಿವೆ. ನಿನ್ನೆ ಸಹ ಕನಕಪುರದಲ್ಲೂ ಧೈರ್ಯದಿಂದ ಎದರಿಸುವ ವಾತಾವರಣ ನಿರ್ಮಾಣವಾಗಿದೆ. ಆದರೆ, ಕನಕಪುರದ ಸೊರಕಾಯಿ ದೊಡ್ಡಿ ಸೇರಿದಂತೆ ಹಲವು ಕಡೆ ಕಾಂಗ್ರೆಸ್ ತನ್ನ ಹಳೇ ಚಾಳಿಯನ್ನು ಮುಂದುವರಿಸಿದೆ‌. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ, ಮಾಗಡಿ, ಕುಣಿಗಲ್ ಸೇರಿದಂತೆ ಹಲವು ಭಾಗದಲ್ಲಿ ಬೆಳಗಿನ ಜಾವ ಐದು ಗಂಟೆಗೆ ಮನೆ ಮನೆಗೆ ಹೋಗಿ ಗ್ಯಾರಂಟಿ ಕಾರ್ಡ್ ಕೊಟ್ಟು 4 ರಿಂದ 5 ಸಾವಿರ ರೂಪಾಯಿಯ ಕೂಪನ್ ಕೊಟ್ಟಿದ್ದಾರೆ. ಈ ಹಿಂದೆ ಕುಕ್ಕರ್ ಎಲ್ಲ ಕೊಟ್ಟಿದ್ದಾರೆ. ಈಗ ಕಾರ್ಡ್ ಮತ್ತು ಕೂಪನ್ ಕೊಟ್ಟಿದ್ದಾರೆ. ಈಗ ಎಲ್ಲ ಕಡೆ ಇದನ್ನು ಶುರು ಮಾಡಿದ್ದಾರೆ. ಹಾಲಿ ಶಾಸಕರ ಫೋಟೋ ಹಾಕಿ 10 ಸಾವಿರದ ರೂಪಾಯಿಯ ಕೂಪನ್ ಕೊಡುತ್ತಿದ್ದಾರೆ. ಕ್ಯೂ ಆರ್ ಕೋಡ್ ಕೊಡುವ ಚಾಳಿಯನ್ನು ಶುರು ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದರು.

ಚುನಾವಣಾ ಆಯೋಗದ ವಿರುದ್ಧ ಎಚ್‌ಡಿಕೆ ಗರಂ

ಚುನಾವಣಾ ಆಯೋಗವು ಈ ರೀತಿ ಚುನಾವಣೆಯನ್ನು ನಡೆಸುವ ಬದಲು ನೇರವಾಗಿ ಹಣ ಕೊಡುವ ವ್ಯವಸ್ಥೆಯನ್ನು ಜಾರಿಗೆ ತರಬಹುದು. ಆಯಾಯ ಅಭ್ಯರ್ಥಿಗಳು ತಮ್ಮ ಶಕ್ತಿ ಅನುಸಾರ ಹಣ ನೀಡುತ್ತಾರೆ. ದೇಶದಲ್ಲಿ ಈ ರೀತಿಯ ವ್ಯವಸ್ಥೆಯನ್ನು ತಂದರೆ ಒಳ್ಳೆಯದು ಎಂದು ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಇದನ್ನು ಚುನಾವಣಾ ಅಂತ ಕರೆಯುತ್ತಾರಾ? ಪ್ರಜಾಪ್ರಭುತ್ವದ ಹಬ್ಬ ಎಂದು ಹೇಳಲಾಗುತ್ತದೆಯೇ? ದುಡ್ಡು ಇರುವವರಿಗೆ, ಲೂಟಿ ಮಾಡುವವರಿಗೆ ಮಾತ್ರ ಇದು ಹಬ್ಬ. ಜನಸಾಮಾನ್ಯರಿಗೆ ಅಲ್ಲ. ಈ ರೀತಿಯಾಗಿ ಮತ ಪಡೆಯೋದು ಅಂದರೆ ಹೇಗೆ? ಮಹಾನಭಾವರು ಬುದ್ಧಿ ಹೇಳಿದ್ದೇ ಹೇಳಿದ್ದು ಎಂದು ಡಿ.ಕೆ. ಸಹೋದರರ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

ಮತಗಟ್ಟೆ ಮುಂದೆ ಡಿಕೆ ಶಿವಕುಮಾರ್‌ ರಿಯಾಕ್ಷನ್;‌ ಇಲ್ಲಿದೆ ವಿಡಿಯೊ

ಜ್ಯೋತಿಷಿ ಹೇಳಿದಂತೆ ಹಣ ಹಂಚಿಕೆ

ಕನಕಪುರದಲ್ಲಿ ಜ್ಯೋತಿಷಿ ಹೇಳಿದಂತೆ ಹಣ ಹಂಚಿದ್ದಾರೆ. ಯಾರೋ ಶಾಸ್ತ್ರದವರು ಹೇಳಿದ್ದಾರೆ ಎಂದು 505 ರೂಪಾಯಿ, ಮಲೆ ಮಹದೇಶ್ವರ ದೇವರ ಲಾಡು ಮತ್ತು ಗ್ಯಾರಂಟಿ ಕಾರ್ಡ್‌ಗಳನ್ನು ರಾತ್ರಿಯಲ್ಲ ಹಂಚಿದ್ದಾರೆ. ಈ ಬಗ್ಗೆ ನಮ್ಮ ಡಿಸಿ ಮತ್ತು ಚುನಾವಣಾ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮುಕ್ತವಾದ ಚುನಾವಣೆ ನಡೆಯುತ್ತಿಲ್ಲ. ಇವತ್ತು ಸೋಲಿನ ಭೀತಿಯಿಂದ ಕುತಂತ್ರದ ರಾಜಕಾರಣ ಮಾಡುತ್ತಿದ್ದಾರೆ. ಚುನಾವಣಾ ಅಕ್ರಮಗಳ ಮೂಲಕ ಗೆಲ್ಲುತ್ತೇವೆ ಎಂದು ಹೋಗುತ್ತಿದ್ದಾರೆ. ಅಕ್ರಮ ಮಾಡಿದರೂ ಜನತೆ ಬಲಿಯಾಗಿದೆ ನ್ಯಾಯಯುತವಾಗಿ ಮತದಾನ ಮಾಡಿ ಎಂದು ಮನವಿ ಮಾಡುತ್ತೇನೆ. ಚುನಾವಣಾ ಆಯೋಗ ಬಾಗಿಲು ಹಾಕಿಕೊಳ್ಳೋದು ಒಳ್ಳೆಯದು. ಚುನಾವಣಾ ಆಯೋಗ ತನ್ನ ವ್ಯವಸ್ಥೆಯನ್ನು ಬದಲಾವಣೆ ಮಾಡಿಕೊಳ್ಳಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಕಿವಿಮಾತು ಹೇಳಿದರು.

Continue Reading

ಕರ್ನಾಟಕ

Narendra Modi: ಭ್ರಷ್ಟರ ಬೇಟೆಯಾಡಿದ, ಉಗ್ರರ ಓಡಿಸಿದ; ಮೋದಿಗಾಗಿ ಕನ್ನಡದಲ್ಲಿ ಹಾಡು ಹಾಡಿದ ಅಜ್ಜಿ!

Narendra Modi: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಜನ ಮತದಾನ ಮಾಡುತ್ತಿದ್ದಾರೆ. ಇದರ ಮಧ್ಯೆಯೇ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೆಚ್ಚಿ, ಅಜ್ಜಿಯೊಬ್ಬರು ಕನ್ನಡದಲ್ಲಿ ಹಾಡು ಬರೆದು, ಅದನ್ನು ರಾಗವಾಗಿ ಹಾಡಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Narendra Modi
Koo

ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election 2024) ಭರಾಟೆ ಜೋರಾಗಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಪರವಾದ ಅಲೆ ಇದೆ ಎಂದು ಹೇಳಲಾಗುತ್ತಿದೆ. ಚುನಾವಣೆ ಇರಲಿ, ಇಲ್ಲದಿರಲಿ, ಮಕ್ಕಳಿಂದ ಹಿಡಿದು ಹಿರಿಯರವರೆಗೆ ಮೋದಿ ಅವರು ಅಚ್ಚುಮೆಚ್ಚಾಗಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಕರ್ನಾಟಕದಲ್ಲಿ ಅಜ್ಜಿಯೊಬ್ಬರು ನರೇಂದ್ರ ಮೋದಿ ಅವರಿಗಾಗಿ ಹಾಡೊಂದನ್ನು ಬರೆದು, ಹಾಡಿದ್ದಾರೆ. ಕರ್ನಾಟಕ ಬಿಜೆಪಿ (Karnataka BJP) ಘಟಕವು ಅಜ್ಜಿಯ ಈ ವಿಡಿಯೊವನ್ನು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವಿಡಿಯೊ (Viral Video) ವೈರಲ್‌ ಆಗಿದೆ.

“ಮೋದಿಯ ನಿಂದಿಸದಿರೋ ಅಣ್ಣಗಳಿರಾ…” ಎಂಬುದಾಗಿ ಅಜ್ಜಿಯು ಹಾಡು ಬರೆದಿದ್ದು, ರಾಗವಾಗಿ ಮೋದಿ ಅವರನ್ನು ಮೆಚ್ಚಿ ಹಾಡು ಹಾಡಿದ್ದಾರೆ. ನರೇಂದ್ರ ಮೋದಿ ಅವರು ದೊರೆ, ಉತ್ತಮ ಆಡಳಿತಗಾರ, ಭ್ರಷ್ಟಾಚಾರವನ್ನು ನಿಗ್ರಹಿಸಿದವರು, ಭಯೋತ್ಪಾದಕರನ್ನು ಓಡಿಸಿದವರು, ವಿವೇಕಾನಂದರಿಗೆ ಸಮಾನವಾದವರು, ಭಾರತೀಯರ ಮೇಲೆ ಮೋದಿ ಹೊಂದಿರುವ ಪ್ರೇಮ, ದೇಶದ ಮೇಲೆ ಅಭಿಮಾನ ಸೇರಿ ಹಲವು ಅಂಶಗಳನ್ನು ಉಲ್ಲೇಖಿಸಿ ಅಜ್ಜಿಯೊಬ್ಬರು ಹಾಡು ಹಾಡಿದ್ದಾರೆ.

ಅಜ್ಜಿ ಹಾಡಿನ ಸ್ಯಾಂಪಲ್

ಮೋದಿಯ ನಿಂದಿಸದಿರೋ ಅಣ್ಣಗಳಿರಾ
ಸಂತಾನ ನಿಂತಿಸದಿರೋ
ಧರೆಯನುದ್ಧರಿಸಲು ಬಂದ
ದೊರೆಯ ನಿಂದಿಸದರಿ ಅಣ್ಣಗಳಿರಾ
ಮೋದಿಯ ನಿಂದಿಸದಿರೋ…

ಅಜ್ಜಿಯ ವಿಡಿಯೊವನ್ನು ಹಂಚಿಕೊಂಡಿರುವ ಬಿಜೆಪಿಯು, ಕಾಂಗ್ರೆಸ್‌ಗೆ ತಿರುಗೇಟು ನೀಡಿದೆ. “ಸ್ಟುಡಿಯೋದಲ್ಲಿ ರೆಕಾರ್ಡಿಂಗ್‌ ಮಾಡಿಸಿ ಪ್ರಚಾರ ಪಡೆದುಕೊಂಡು ತಮ್ಮ ಬೆನ್ನನ್ನು ತಾವು ತಟ್ಟಿಕೊಳ್ಳುವುದಲ್ಲ ಸಿದ್ದರಾಮಯ್ಯನವರೇ, ಈ ಇಳಿ ವಯಸ್ಸಿನಲ್ಲೂ ತಂತ್ರ‌ಜ್ಞಾನ ಬಳಸದೆ ಮೋದಿಯವರ ಸಾಧನೆಯನ್ನು ವೃದ್ಧೆ ಓರ್ವರು ಹಾಡಿರುವ ಹಾಡನ್ನೊಮ್ಮೆ ಕೇಳಿ” ಎಂಬುದಾಗಿ ಸಿದ್ದರಾಮಯ್ಯ ಅವರು ಹಂಚಿಕೊಂಡ ವಿಡಿಯೊಗೆ ಬಿಜೆಪಿ ತಿರುಗೇಟು ನೀಡಿದೆ.

ಕಾಂಗ್ರೆಸ್‌ಅನ್ನು ಟೀಕಿಸಿದ ಅಜ್ಜಿ

ಅಜ್ಜಿಯು ಹಾಡು ಹಾಡುವ ಮುನ್ನ ಕಾಂಗ್ರೆಸ್ಸಿಗರನ್ನು ಟೀಕಿಸಿದ್ದಾರೆ. “500 ವರ್ಷದಿಂದ ದೇಶದಲ್ಲಿ ರಾಮಮಂದಿರ ನಿರ್ಮಾಣ ಆಗಿರಲಿಲ್ಲ. ಅದನ್ನು ನರೇಂದ್ರ ಮೋದಿ ಅವರು ಸಾಕಾರಗೊಳಿಸಿದ್ದಾರೆ. ಈಗ ಮೋದಿ ಬಗ್ಗೆ ಇಲ್ಲಸಲ್ಲದ ಮಾತನಾಡುತ್ತಾರೆ. ರಾಮ ಎದೆಯಲ್ಲಿದ್ದಾನೆ ಎಂದೆಲ್ಲ ಹೇಳುತ್ತಿದ್ದಾರೆ. ಇವರು ಇಷ್ಟು ದಿನ ಎಲ್ಲಿದ್ದರು” ಎಂಬುದಾಗಿ ಅಜ್ಜಿಯು ಟೀಕಿಸಿದ್ದಾರೆ. ಇದಾದ ಬಳಿಕ ಮೋದಿ ಕುರಿತು ಹಾಡುಹಾಡಿದ್ದಾರೆ.

ಇದನ್ನೂ ಓದಿ: Narendra Modi: ಪ್ರಧಾನಿ ಮೋದಿಗೆ ಜಿ 7 ಶೃಂಗಸಭೆಯ ಆಹ್ವಾನ ನೀಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

Continue Reading

Lok Sabha Election 2024

Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

Lok Sabha Election 2024: ಬೆಂಗಳೂರು ದಕ್ಷಿಣ ಲೋಕಸಭೆ ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ವೃದ್ಧೆಯೊಬ್ಬರು ಆಕ್ಸಿಜನ್‌ ಸಹಾಯದಿಂದಲೇ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ ಮಾಡಿದ್ದಾರೆ. 78 ವರ್ಷದ ಕಲಾವತಿ ಎಂಬುವವರೇ ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆಯಾಗಿದ್ದಾರೆ. ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ಪುಟ್ಟಮ್ಮ (90) ಮೃತರು. ಇವರು ಪ್ರತಿ ಚುನಾವಣೆಯಂತೆ ಈ ಬಾರಿಯೂ ತಮ್ಮ ಹಕ್ಕನ್ನು ತಪ್ಪದೇ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಅದೇ ಖುಷಿಯಲ್ಲಿ ವಾಪಸಾಗುತ್ತಿದ್ದಾಗ ದಿಢೀರ್‌ ಕುಸಿದುಬಿದ್ದಿದ್ದು, ಅಲ್ಲಿಯೇ ಮೃತಪಟ್ಟಿದ್ದಾರೆ.

VISTARANEWS.COM


on

Lok Sabha Election 2024 Woman casts her vote with the help of oxygen elderly woman dies after casting her vote
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ವೃದ್ಧೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರೂ, ಆಕ್ಸಿಜನ್‌ ಸಮೇತ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದಾರೆ. ಇನ್ನು ಮೈಸೂರಿನ ಹುಣಸೂರಿನಲ್ಲಿ ವೃದ್ಧೆಯೊಬ್ಬರು ಮತ ಚಲಾಯಿಸಿ ಮೃತಪಟ್ಟಿದ್ದಾರೆ.

ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ (Bangalore South Lok Sabha constituency) ಜಯನಗರದಲ್ಲಿ ವೃದ್ಧೆಯೊಬ್ಬರು ಆಕ್ಸಿಜನ್‌ ಸಹಾಯದಿಂದಲೇ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ ಮಾಡಿದ್ದಾರೆ. 78 ವರ್ಷದ ಕಲಾವತಿ ಎಂಬುವವರೇ ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆಯಾಗಿದ್ದಾರೆ. ಕಲಾವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರನ್ನು ಏಪ್ರಿಲ್‌ 23ರಂದು ಜಯನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಅವರನ್ನು ಆಂಬ್ಯುಲೆನ್ಸ್‌ ಮೂಲಕ ವೈದ್ಯಕೀಯ ಸಿಬ್ಬಂದಿ ಜತೆ ಕರೆತರಲಾಗಿದ್ದು, ಮತ ಚಲಾವಣೆಗೆ ಅವಕಾಶ ಕಲ್ಪಿಸಲಾಗಿತ್ತು. ಕೊನೆಗೂ ಅವರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

ವೋಟು ಹಾಕಿ ಬಂದು ವೃದ್ಧೆ ನಿಧನ

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ (Mysore Lok Sabha constituency) ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ವೃದ್ಧೆಯೊಬ್ಬರು ತಿಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 172ರಲ್ಲಿ ಮತ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಹೊರ ಬರುತ್ತಿದ್ದಂತೆ ಅವರು ಕುಸಿದು ಮೃತಪಟ್ಟಿದ್ದಾರೆ.

Lok Sabha Election 2024 Woman casts her vote with the help of oxygen elderly woman dies after casting her vote

ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ಪುಟ್ಟಮ್ಮ (90) ಮೃತರು. ಇವರು ಪ್ರತಿ ಚುನಾವಣೆಯಂತೆ ಈ ಬಾರಿಯೂ ತಮ್ಮ ಹಕ್ಕನ್ನು ತಪ್ಪದೇ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಅದೇ ಖುಷಿಯಲ್ಲಿ ವಾಪಸಾಗುತ್ತಿದ್ದಾಗ ದಿಢೀರ್‌ ಕುಸಿದುಬಿದ್ದಿದ್ದು, ಅಲ್ಲಿಯೇ ಮೃತಪಟ್ಟಿದ್ದಾರೆ.

ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ (First phase of polling) ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತ ಚಲಾಯಿಸಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನ (cardiac arrest) ಆಗಿದೆ. ಬಳಿಕ ಅಲ್ಲಿಯೇ ಮತ ಚಲಾಯಿಸಲು ಬಂದಿದ್ದರಿಂದ ಅವರ ಜೀವ ಉಳಿದಿದೆ.

ಜೆ.ಪಿ. ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದಾರೆ. ಅವರು ಆಯಾಸವಾಗಿದೆ ಎಂದು ಮತಗಟ್ಟೆಯಲ್ಲಿ ಇಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ. ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ.

ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್‌ ರೇಟ್‌ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್‌ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೊದಲೆರಡು ಗಂಟೆಗಳ ಮತದಾನ ಚುರುಕು, ಶೇ.9.21 ಚಲಾವಣೆ, ಕೆಲವೆಡೆ ಚಕಮಕಿ

ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಲ್ಲಿ (lok sabha constituency) ನಡೆಯುತ್ತಿರುವ ಲೋಕಸಭೆ ಚುನಾವಣೆ (lok sabha election 2024) ಮತದಾನ (voting) ಬೆಳಗ್ಗಿನ ಹೊತ್ತಿನಲ್ಲಿ ಚುರುಕಾಗಿ ನೆರವೇರಿತು. 7 ಗಂಟೆಗೆ ಮತದಾನ ಆರಂಭವಾಗಿದ್ದು, ಮೊದಲ ಎರಡು ಗಂಟೆಗಳಲ್ಲಿ ಸರಾಸರಿ 10% ಮತದಾನ ಕಂಡುಬಂತು.

ಯಾವ ಕ್ಷೇತ್ರದಲ್ಲಿ ಎಷ್ಟೆಷ್ಟು ಮತ ಚಲಾವಣೆ?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 9 ಗಂಟೆಯವರೆಗೆ 14.33% ಹಾಗೂ ಉಡುಪಿ ಜಿಲ್ಲೆಯಲ್ಲಿ 12.82% ಮತದಾನ ದಾಖಲಾಗಿದೆ. ತುಮಕೂರು 9.6%, ಚಾಮರಾಜನಗರ 7.7%, ಮಂಡ್ಯ 7.70%, ಚಿಕ್ಕಬಳ್ಳಾಪುರ 8.70%, ಹಾಸನ 8.2%, ಚಿಕ್ಕಮಗಳೂರು 11.02%, ಮೈಸೂರು 11.04% ಮತದಾನ ನಡೆದಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಈವರೆಗೆ 9.8%, ಬೆಂಗಳೂರು ಕೇಂದ್ರ 8.14%, ಬೆಂಗಳೂರು ಉತ್ತರ 8.64%, ಬೆಂಗಳೂರು ಗ್ರಾಮಾಂತರ 8.34% ಮತದಾನ ದಾಖಲಿಸಿವೆ.

ಹತ್ತು ಗಂಟೆಯ ಬಳಿಕ ಬಿಸಿಲು ಏರುವುದರಿಂದ, ಬಿಸಿಲಿನ ಹೊಡೆತ ತಪ್ಪಿಸಿಕೊಳ್ಳಲು ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸಿದರು. ಮಧ್ಯಾಹ್ನದ ಹೊತ್ತಿನಲ್ಲಿ ಮತದಾನ ಇಳಿಕೆಯಾಗಿ, ಸಂಜೆ ಮತ್ತೆ ಏರುವ ನಿರೀಕ್ಷೆ ಇದೆ. ರಾಜಧಾನಿಯಲ್ಲಿ ಹಲವಾರು ಗಣ್ಯರು ಮುಂಜಾನೆಯೇ ಮತ ಚಲಾಯಿಸಿದರು.

ಇನ್‌ಫೋಸಿಸ್‌ ಸ್ಥಾಪಕ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ಮುಂಜಾನೆ ಸರತಿ ಸಾಲಿನಲ್ಲಿ ನಿಂತು ಮತ ಹಾಕಿದರು. ನಾರಾಯಣ ಮೂರ್ತಿಯವರು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಿಸಿಕೊಂಡು ನೇರವಾಗಿ ಮತಗಟ್ಟೆಗೇ ಬಂದು ಮತ ಹಾಕಿ ತೆರಳಿದರು. ಕ್ರಿಕೆಟಿಗ ರಾಹುಲ್‌ ದ್ರಾವಿಡ್‌, ನಟ ನಟಿಯರಾದ ಸಪ್ತಮಿ ಗೌಡ, ಪ್ರಕಾಶ್‌ ರೈ, ಗೋಲ್ಡನ್‌ ಸ್ಟಾರ್‌ ಗಣೇಶ್, ಶರಣ್‌, ಧ್ರುವ ಸರ್ಜಾ, ಅಮೂಲ್ಯ ಮುಂತಾದವರು ಮತ ಹಾಕಿದರು. ಧಾರ್ಮಿಕ ಗಣ್ಯರಾದ ಉಡುಪಿಯ ಅಷ್ಟ ಮಠಾಧೀಶರು, ಸಿದ್ದಲಿಂಗ ಸ್ವಾಮಿ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ ಹಾಕಿದರು.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ರಾಜಕೀಯ ನಾಯಕರು ಹಾಗೂ ಅಭ್ಯರ್ಥಿಗಳಾದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಸದಾನಂದ ಗೌಡ, ಕೆಜೆ ಜಾರ್ಜ್‌, ಜಮೀರ್‌ ಅಹಮದ್‌ ಖಾನ್‌, ರಾಮಲಿಂಗಾರೆಡ್ಡಿ, ಸೌಮ್ಯ ರೆಡ್ಡಿ, ಸೋಮಣ್ಣ, ಪಿಸಿ ಮೋಹನ್‌ ಮೊದಲಾದವರು ಹಕ್ಕು ಚಲಾಯಿಸಿದರು. ಮತದಾನಕ್ಕೆ ಆಗಮಿಸುವ ಮುನ್ನ ಎಚ್‌ಡಿ ದೇವೇಗೌಡ, ಡಿ.ಕೆ. ಸುರೇಶ್‌, ಡಿ.ಕೆ. ಶಿವಕುಮಾರ್‌ ಮೊದಲಾದ ನಾಯಕರು ಟೆಂಪಲ್‌ ರನ್‌ ಮಾಡಿದರು.

ಇದನ್ನೂ ಓದಿ: Lok Sabha Election 2024: ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ ಗಣೇಶ್ ದಂಪತಿ: ಪ್ರಕಾಶ್‌ ರಾಜ್‌ ಮನವಿ ಏನು?

ಕೆಲವೆಡೆ ಸಣ್ಣ ಪ್ರಮಾಣದ ಚಕಮಕಿ ಕಂಡುಬಂತು. ಉಡುಪಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಮೋದ್‌ ಮತ ಹಾಕಲು ಸಂದರ್ಭ ಪ್ರಚಾರ ನಡೆಸಿದರು ಎಂದು ಬಿಜೆಪಿ ಕಾರ್ಯಕರ್ತರು ತಗಾದೆ ತೆಗೆದು ರಂಪಾಟ ನಡೆಸಿದರು. ಆನೇಕಲ್‌ನಲ್ಲಿ ಬಿಜೆಪಿ ಪೆಂಡಾಲ್‌ಗಳನ್ನು ತೆಗೆಸಿ ಕಾಂಗ್ರೆಸ್‌ ಪೆಂಡಾಲ್‌ ಹಾಕಿಸಿದ ಕುರಿತು ವಾಗ್ಯುದ್ಧ ನಡೆಯಿತು. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ಕೆಲವೆಡೆ ಮತಯಂತ್ರ ಕೈಕೊಟ್ಟು ಮತದಾರರು ಗಂಟೆಗಟ್ಟಲೆ ಕಾಯುವಂತಾಯಿತು. ತಂತ್ರಜ್ಞರು ಆಗಮಿಸಿ ಸರಿಪಡಿಸಿದ ಬಳಿಕ ಮತ ಹಾಕಲಾಯಿತು. ಮಹಿಳೆಯರಿಗಾಗಿ ವ್ಯವಸ್ಥೆ ಮಾಡಲಾಗಿದ್ದ ಪಿಂಕ್‌ ಬೂತ್‌ಗಳಲ್ಲಿಯೂ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಕೆಲವೆಡೆ ಬಿಸಿಲಿನ ಝಳಕ್ಕೆ ಸರತಿಯಲ್ಲಿ ನಿಂತ ಮತದಾರರು ಅಸ್ವಸ್ಥಗೊಂಡರು. ಇವರಿಗೆ ಪ್ರಥಮ ಚಿಕಿತ್ಸೆ ಒದಗಿಸಲಾಯಿತು.

Continue Reading
Advertisement
Lok Sabha Election 2024 sandalwood celebrities reaction
Lok Sabha Election 20242 mins ago

Lok Sabha Election 2024: ಬುದ್ಧಿ ಇರೋರು ವೋಟ್‌ ಹಾಕ್ತಿದ್ದಾರೆ ಎಂದ ಕಿಚ್ಚ! ಉಳಿದ ತಾರೆಗಳು ಹೇಳಿದ್ದೇನು?

ಕರ್ನಾಟಕ9 mins ago

Lok sabha Election 2024: ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ನೇರವಾಗಿ ಮತಗಟ್ಟೆಗೆ ಬಂದ ನಾರಾಯಣ ಮೂರ್ತಿ

Lok Sabha Election 2024: Karnataka records 38.23% voter turnout; highest in Dakshina Kannda
ಕರ್ನಾಟಕ25 mins ago

Lok Sabha Election: ರಾಜ್ಯಾದ್ಯಂತ 1 ಗಂಟೆ ವೇಳೆಗೆ 38.23% ಮತದಾನ; ಎಲ್ಲಿ ಹೆಚ್ಚು? ಎಲ್ಲಿ ಕಡಿಮೆ?

Lok Sabha Election 2024 Kannada Celeb vote Pictures
ಸ್ಯಾಂಡಲ್ ವುಡ್47 mins ago

Lok Sabha Election 2024: ಹಳ್ಳಿ ಸ್ಟೈಲ್‌ನಲ್ಲಿ ಬಂದು ಮತ ಹಾಕಿದ ಡಾಲಿ! ವೋಟ್ ಮಾಡಿದ ಸೆಲೆಬ್ರಿಟಿಗಳಿವರು!

Lok Sabha Election 2024 DK brothers distribute Rs 505 in Bengaluru Rural constituency HD Kumaraswamy allegations
Lok Sabha Election 202451 mins ago

Lok Sabha Election 2024: ಕನಕಪುರದಲ್ಲಿ 505 ರೂ, ಮಲೆ ಮಹದೇಶ್ವರದ ಲಾಡು, ಗ್ಯಾರಂಟಿ ಕಾರ್ಡ್ ಹಂಚಿಕೆ; ಎಚ್‌ಡಿಕೆ ಗಂಭೀರ ಆರೋಪ

Lok sabha election 2024
Lok Sabha Election 20241 hour ago

Lok Sabha Election 2024: ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಹೋದ ವರ; ವೋಟ್‌ ಹಾಕಿ ನಿರಾಳ

Narendra Modi
ಕರ್ನಾಟಕ1 hour ago

Narendra Modi: ಭ್ರಷ್ಟರ ಬೇಟೆಯಾಡಿದ, ಉಗ್ರರ ಓಡಿಸಿದ; ಮೋದಿಗಾಗಿ ಕನ್ನಡದಲ್ಲಿ ಹಾಡು ಹಾಡಿದ ಅಜ್ಜಿ!

Chocolate industry
ಪರಿಸರ1 hour ago

Chocolate: ಏನಿದು ಮೀಲಿಬಗ್‌ ವೈರಸ್‌? ಚಾಕೊಲೇಟ್ ದರ ಏರಿಕೆಗೂ ಇದಕ್ಕೂ ಏನು ಸಂಬಂಧ?

ವೈರಲ್ ನ್ಯೂಸ್1 hour ago

Viral News: ಸಿಂಗಾಪುರ ಏರ್‌ಲೈನ್ಸ್‌ ಪೈಲಟ್‌ ಅಂತಾ ಹೇಳ್ಕೊಂಡು ಪೋಸ್‌ ಕೊಡ್ತಿದ್ದವ ಲಾಕ್‌!

Lok Sabha Election 2024 Woman casts her vote with the help of oxygen elderly woman dies after casting her vote
Lok Sabha Election 20242 hours ago

Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20243 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20243 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ9 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ22 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ22 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌