ಹಾಸನ: ಕೊಬ್ಬರಿ ಬೆಲೆ ಕುಸಿತದಿಂದ ರೈತರು ಸಂಕಷ್ಟಕ್ಕೀಡಾಗಿದ್ದು, ಈ ಹಿನ್ನೆಲೆಯಲ್ಲಿ ವೈಜ್ಞಾನಿಕ ಬೆಂಬಲ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಶುಕ್ರವಾರ ಕರೆ ನೀಡಿದ್ದ ಅರಸೀಕೆರೆ ಪಟ್ಟಣ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಾಸಕ ಕೆ.ಎಂ.ಶಿವಲಿಂಗೇಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ (Farmers Protest) ನೂರಾರು ಟ್ರ್ಯಾಕ್ಟರ್‌ಗಳಲ್ಲಿ ಸಾವಿರಾರು ರೈತರು ಭಾಗವಹಿಸಿದ್ದರು.
ಈ ವೇಳೆ ಕೊಬ್ಬರಿಗೆ ರಾಜ್ಯದ ಸರ್ಕಾರ ವೈಜ್ಞಾನಿಕ ಬೆಂಬಲ ಬೆಲೆ ಘೋಷಿಸಬೇಕು ಎಂದು ರೈತರು ಘೋಷಣೆಗಳನ್ನು ಕೂಗಿದರು. ದಶಕಗಳಿಂದಲೂ ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಬೆಲೆ ಕುಸಿದರೂ ಸರ್ಕಾರ ರೈತರ ನೆರವಿಗೆ ಬರುತ್ತಿಲ್ಲ. ಕೂಡಲೆ ಕೊಬ್ಬರಿಗೆ ವೈಜ್ಞಾನಿಕ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ರೈತರು ಒತ್ತಾಯಿಸಿದರು.
ಬಂದ್‌ಗೆ ಅಂಗಡಿ ಮುಂಗಟ್ಟು ಮುಚ್ಚುವ ಮೂಲಕ ವರ್ತಕರು, ವಿವಿಧ ಸಂಘ-ಸಂಸ್ಥೆಗಳು ಬೆಂಬಲ ನೀಡಿದ್ದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಇದನ್ನೂ ಓದಿ | Losing the land | ಸಾಗುವಳಿ ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿ ಬೆಳಲಕಟ್ಟೆಯ ಗ್ರಾಮಸ್ಥರು, ಉಗ್ರ ಹೋರಾಟಕ್ಕೆ ಸಿದ್ಧತೆ