ಹಾಸನ: ಬೆಂಗಳೂರಿನ ಹಂಜಳಿಗೆ ಕಾಳಿಂಗಪ್ಪ ವೆಲ್ಪೇರ್ ಅಸೋಸಿಯೇಷನ್ ವತಿಯಿಂದ ಹಾಸನ ಜಿಲ್ಲೆಯ (Hassan News) ಆಲೂರು ತಾಲೂಕಿನ ಎಲ್ಲ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು.
ಬೆಂಗಳೂರಿನ ಹಂಜಳಿಗೆ ಕಾಳಿಂಗಪ್ಪ ವೆಲ್ಪೇರ್ ಅಸೋಸಿಯೇಷನ್‌ನ ಸಂಸ್ಥಾಪಕ ಎಚ್.ಕೆ. ಮಂಜುನಾಥ್ ಅವರು, “ನಮ್ಮ ನಡಿಗೆ ಸರ್ಕಾರಿ ಶಾಲೆಯ ಕಡೆಗೆ ” ಎಂಬ ಅಭಿಯಾನವನ್ನು ಹಮ್ಮಿಕೊಂಡು ಸರ್ಕಾರಿ ಶಾಲೆಗಳ ಸಬಲೀಕರಣಗೊಳಿಸಲು ಕಳೆದ 12 ವರ್ಷಗಳಿಂದ ಈ ಕಾಯಕವನ್ನು ಮಾಡಿಕೊಂಡು ಬರುತಿದ್ದಾರೆ.
ಅಸೋಸಿಯೇಷನ್‌ನ ಸಂಸ್ಥಾಪಕ ಎಚ್.ಕೆ. ಮಂಜುನಾಥ್, 30 ಸಾವಿರ ನೋಟ್ ಪುಸ್ತಕಗಳು, 1100 ಶಾಲಾ ಬ್ಯಾಗ್‌ಗಳನ್ನು ಆಲೂರು ತಾಲೂಕಿನ ಎಲ್ಲ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನೋಟ್ ಪುಸ್ತಕಗಳನ್ನು, ಬ್ಯಾಗ್‌ಗಳನ್ನು ಉಚಿತವಾಗಿ ವಿತರಿಸಿದರು.
ಇದನ್ನೂ ಓದಿ: Stock Market: ಷೇರು ಮಾರುಕಟ್ಟೆಯಲ್ಲಿ ಮುಂದುವರಿದ ಗೂಳಿಯ ಅಬ್ಬರ; ಸಾರ್ವಕಾಲಿಕ ಎತ್ತರಕ್ಕೆ ಜಿಗಿದ ಸೆನ್ಸೆಕ್ಸ್
ನೋಟ್ ಬುಕ್ಸ್‌ನ ಕವರ್ ಪೇಜ್‌ನಲ್ಲಿ ಮುದ್ರಿಸಿರುವ 5 ಪಂಚ ಸೂತ್ರಗಳು ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿಯನ್ನು ನೀಡುವುದಲ್ಲದೇ ಪ್ರತಿ ಶಾಲೆಯಲ್ಲಿ ಪ್ರಮಾಣ ವಚನ ಬೋಧಿಸುವುದರೊಂದಿಗೆ ನೀಡಲಾಯಿತು. ಗುರುಹಿರಿಯರಲ್ಲಿ ಭಕ್ತಿ ಭಾವ, ವಿನಯ, ತಂದೆ ತಾಯಿಯನ್ನು ಕೊನೆಯವರೆಗೂ ನೋಡಿಕೊಳ್ಳುವುದು, ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಇರುವುದು, ಶಾಲೆಯೊಂದಿಗೆ ನಿಕಟ ಸಂಪರ್ಕ, ಯಾವುದೇ ಸಂದರ್ಭದಲ್ಲಿಯೂ ಹಣದ ಆಮಿಷಕ್ಕೆ ಒಳಗಾಗದೆ ಇರುವುದು ಇವು ಪಂಚ ಸೂತ್ರಗಳಾಗಿವೆ.
ಈ ಸಂದರ್ಭದಲ್ಲಿ ಹಂಜಳಿಗೆ ಕಾಳಿಂಗಪ್ಪ ವೆಲ್ಪೇರ್ ಅಸೋಸಿಯೇಷನ್‌ನ ಸಂಸ್ಥಾಪಕ ಎಚ್.ಕೆ. ಮಂಜುನಾಥ್, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಬ್ಯಾಗ್‌ಗಳನ್ನು ವಿತರಣೆ ಮಾಡಿ, ಬಳಿಕ ಮಾತನಾಡಿದರು.
ಇದನ್ನೂ ಓದಿ: Toyota Kirloskar Motor: ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬ್ ಸ್ಥಾಪಿಸಲು ಐಐಎಸ್‌ಸಿಯೊಂದಿಗೆ ಕೈಜೋಡಿಸಿದ ಟಿಕೆಎಂ
ಕಾರ್ಯಕ್ರಮದಲ್ಲಿ ಪಿಯು ಕಾಲೇಜು ಪ್ರಾಚಾರ್ಯ ಕುಮಾರಪ್ಪ, ಎಚ್.ಎಂ. ಮಹಾದೇವಪ್ಪ, ಎಸ್‌ಡಿಎಂಸಿಯ ಶೇಖರ್, ಕಾಂತರಾಜ್, ರಾಜಣ್ಣ, ಶಾಲಾ ಶಿಕ್ಷಕರು, ಪೋಷಕರು ಪಾಲ್ಗೊಡಿದ್ದರು.