ಹಾಸನ: ಕೋಡಿಮಠದ ಶ್ರೀಗಳು (Kodi Mutt Swamiji) ಮತ್ತೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮಳೆಯಿಂದ ಜಾಸ್ತಿ ತೊಂದರೆ ಇದೆ ಎಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ಗ್ರಾಮದ ಕೋಡಿಮಠದಲ್ಲಿ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಪ್ರಾಕೃತಿಕ ದೋಷ ಇದ್ದು, ಐದು ಕಡೆಯೂ ತೊಂದರೆ ಇದೆ. ಭೂಮಿ, ಅಗ್ನಿ, ವಾಯು, ಆಕಾಶ ಹೀಗೆ ಎಲ್ಲಾ ಕಡೆ ತೊಂದರೆ ಆಗುತ್ತದೆ. ಇನ್ನೂ ಒಂದು ಆಕಾಶದಲ್ಲಿ ಆಗುವ ದೊಡ್ಡ ಸುದ್ದಿ ಇದೆ.
ಈ ಹಿಂದೆ ಜನ ಇದ್ದಂಗೆ ಸಾಯುತ್ತಾರೆ. ಭೂಮಿ ಬಿರುಕು ಬಿಡುತ್ತೆ ಎಂದಿದ್ದೆ, ಗುಡ್ಡ ಹೋಗುತ್ತೆ ಎಂದು ಹೇಳಿದ್ದೆ. ಪ್ರವಾಹದಲ್ಲಿ ಜಗತ್ತಿನಾದ್ಯಂತ ಮುಳುಗುತ್ತವೆ ಅಂತಲೂ ಹೇಳಿದ್ದೆ. ಇನ್ನೂ ಮಳೆ ಇದೆ, ಅದರಲ್ಲಿ ಇನ್ನೂ ಅನಾಹುತಗಳು ಇವೆ. ಒಂದು ಆಕಾಶ ತತ್ವ ಪ್ರಕಾರ ತೊಂದರೆ ಆಗಬಹುದು. ಅದು ರಾಜನ ಮೇಲೆ ಭಂಗ ಬೀರುತ್ತೆ. ಅಭಿಮನ್ಯುವಿನ ಬಿಲ್ಲನ್ನು ಮೋಸದಿಂದ ಕರ್ಣನ ಕೈಯಲ್ಲಿ ದಾರ ಕಟ್ ಮಾಡಿಸಿದ್ದರು. ಮಹಾಭಾರತದಲ್ಲಿ ಕೃಷ್ಣ ಗೆದ್ದ, ಗದಾಯುದ್ಧದಲ್ಲಿ ಭೀಮಾ ಗೆದ್ದ. ಇದೀಗ ಕೃಷ್ಣ ಇಲ್ಲದೆ ದುರ್ಯೋಧನ ಗೆಲ್ಲುತ್ತಾನೆ. ಅದರ ಅರ್ಥ ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಇದೆ ಆಗುವುದು.