ಹಾಸನ
Hassan : ಪೌರ ಕಾರ್ಮಿಕರ ಮುಷ್ಕರ, ಮನೆಗಳ ಕಸ ಸಂಗ್ರಹಕ್ಕೆ ಸ್ವತಃ ಆಟೊ ಚಲಾಯಿಸಿದ ಹಾಸನ ನಗರಸಭೆ ಅಧ್ಯಕ್ಷ
ಹಾಸನದಲ್ಲಿ ಪೌರ ಕಾರ್ಮಿಕರ ಮುಷ್ಕರದ ಪರಿಣಾಮ ಮನೆಮನೆಗಳಿಂದ ಕಸ ಸಂಗ್ರಹ ಸ್ಥಗಿತವಾಗಿತ್ತು. ಇದೀಗ ನಗರಸಭೆ ಅಧ್ಯಕ್ಷರೇ ಸ್ವತಃ ಆಟೊ ಚಲಾಯಿಸಿ ಕಸ ಸಂಗ್ರಹಿಸುವ ಮೂಲಕ ಸಾರ್ವಜನಿಕರ (Hassan) ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಹಾಸನ : ಹಾಸನದಲ್ಲಿ ನಗರಸಭೆಯ ಪೌರಕಾರ್ಮಿಕರ ಅನಿರ್ಧಿಷ್ಟಾವಧಿಯ ಮುಷ್ಕರ ಹಿನ್ನೆಲೆಯಲ್ಲಿ, ಕಳೆದ ಒಂದು ವಾರದಿಂದ ಮನೆ-ಮನೆ ಕಸ ಸಂಗ್ರಹ ಕಾರ್ಯ ಸ್ಥಗಿತವಾಗಿದೆ. ಇದರ ಪರಿಣಾಮವಾಗಿ (Hassan) ಮನೆಗಳಲ್ಲೇ ಕಸ ಸಂಗ್ರಹವಾಗಿ ಜನತೆ ಪರದಾಡುವಂತಾಗಿತ್ತು. ಈ ಹಿನ್ನೆಲೆಯಲ್ಲಿ ಹಾಸನ ನಗರಸಭೆ ಅಧ್ಯಕ್ಷ ಮೋಹನ್ ಅವರು ಸ್ವತಃ ಆಟೋ ಚಲಾಯಿಸಿಕೊಂಡು ಮನೆ ಮನೆಯಿಂದ ಕಸ ಸಂಗ್ರಹ ಮಾಡಿದ್ದಾರೆ.
34 ನೇ ವಾರ್ಡ್ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಮಾಡಿದ್ದಾರೆ. ನಗರಸಭೆಯ ಇತರೆ ಸದಸ್ಯರೂ ಕೂಡಾ ಅವರವರ ವ್ಯಾಪ್ತಿಯಲ್ಲಿ ಕಸ ಸಂಗ್ರಹ ಮಾಡಿದ್ದಾರೆ. ಮಾಸ್ಕ್ ಧರಿಸಿ ಮನೆ ಮನೆ ಬಾಗಿಲಿಗೆ ತೆರಳಿ ನಗರಸಭೆ ಅಧ್ಯಕ್ಷ ಹಾಗೂ ಕೆಲವು ಸದಸ್ಯರು ಕಸ ಸಂಗ್ರಹಿಸಿದ್ದಾರೆ.
ನಗರಸಭೆ ಅಧ್ಯಕ್ಷರ ಹಾಗೂ ಸದಸ್ಯರ ಕಾರ್ಯಕ್ಕೆ ಸಾರ್ವಜನಿಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ವೇತನ ಹಾಗೂ ಹೊರಗುತ್ತಿಗೆ ಸೇವೆ ಖಾಯಂಗೊಳಿಸುವಂತೆ ಆಗ್ರಹಿಸಿ ಪೌರಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕರ್ನಾಟಕ
Dharma Dangal : ಬೇಲೂರು ರಥೋತ್ಸವದ ವೇಳೆ ನಡೆಯುವ ಕುರಾನ್ ಪಠಣ ಅಧಿಕೃತವಲ್ಲ; ದಾಖಲೆಗಳಲ್ಲಿ ಹೇಳಿಲ್ಲ ಎಂದ ಆಗಮ ಪಂಡಿತರು
ಬೇಲೂರು ಚನ್ನಕೇಶವ ದೇವಾಲಯ (Beluru channakeshava temple) ರಥೋತ್ಸವದ ಸಂದರ್ಭದಲ್ಲಿ ಇದುವರೆಗೆ ನಡೆದುಕೊಂಡು ಬರುತ್ತಿರುವ ಕುರಾನ್ ಪಠಣದ ವಿಚಾರದಲ್ಲಿ ಆಗಮ ಪಂಡಿತರ ವರದಿ ಕೇಳಲಾಗಿದೆ. ಅವರ ವರದಿಯಲ್ಲಿ ಏನಿದೆ? ಈ ವರದಿ ನೋಡಿ..
ಹಾಸನ: ಬೇಲೂರಿನ ಐತಿಹಾಸಿಕ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯ (Beluru channakeshava temple) ರಥೋತ್ಸವದ ವೇಳೆ ನಡೆದುಕೊಂಡು ಬರುತ್ತಿರುವ ಕುರಾನ್ ಪಠಣ ಅಧಿಕೃತವಲ್ಲ, ಕುರಾನ್ ಪಠಣ ಮಾಡಬೇಕು ಎಂದು ಯಾವ ದಾಖಲೆಗಳಲ್ಲೂ ಹೇಳಲಾಗಿಲ್ಲ- ಹೀಗೆಂದು ದೇಗುಲಕ್ಕೆ ಭೇಟಿ ನೀಡಿದ ಪುರಾತತ್ವ ಇಲಾಖೆಯ ಹಿರಿಯ ಆಗಮ ಪಂಡಿತ ಜಿ.ಎ.ವಿಜಯ್ ಕುಮಾರ್ ಹೇಳಿದ್ದಾರೆ.
ಚನ್ನಕೇಶವ ದೇವಾಲಯದ ಜಾತ್ರೆಯ ಸಂದರ್ಭದಲ್ಲಿ ರಥೋತ್ಸವದ ವೇಳೆ ಕುರಾನ್ ಪಠಣ ನಡೆದು ನಂತರ ರಥ ಮುಂದುವರಿಯುವ ವಾಡಿಕೆ ಇದೆ. ಇದರ ವಿರುದ್ಧ ಕಳೆದ ಕೆಲವು ವರ್ಷಗಳಿಂದ ಹಿಂದು ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗುತ್ತಿದೆ. ಈ ಬಾರಿ ಅದು ಸ್ವಲ್ಪ ದೊಡ್ಡ ಮಟ್ಟದ ಪ್ರತಿಭಟನೆಯೇ ನಡೆದಿದೆ. ಈ ಹಿನ್ನೆಲೆಯಲ್ಲಿ ಹಾಸನದ ಜಿಲ್ಲಾಧಿಕಾರಿಯಾಗಿರುವ ಎಂ.ಎಸ್.ಅರ್ಚನಾ ಆಗಮ ಪಂಡಿತರನ್ನು ಕರೆಸಿ ಅವರಿಂದ ವಿವರ ಪಡೆಯಲು ನಿರ್ಧರಿಸಿದ್ದರು.
ಜಿಲ್ಲಾಧಿಕಾರಿ ಅರ್ಚನಾ ಅವರು ಹೇಳಿದ್ದೇನು?
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು, ʻʻಇಷ್ಟು ವರ್ಷದಿಂದ ನಡೆದುಕೊಂಡು ಬಂದಿರುವ ಪದ್ಧತಿಯನ್ನು ನಮ್ಮ ಸ್ವಂತ ವಿವೇಚನೆಯಿಂದ ನಿಲ್ಲಿಸಲು ಸಾಧ್ಯವಿಲ್ಲ. ಇದು ಹೊಸದಾಗಿ ಸೃಷ್ಟಿಯಾದುದಲ್ಲ. 1929ರಿಂದಲೂ ಈ ಪದ್ಧತಿ ಇದೆ. ಅದು ಮ್ಯಾನುಯಲ್‌ನಲ್ಲಿಯೂ ಸೇರಿದೆ. ರಥೋತ್ಸವದ ವೇಳೆ ಮೌಲ್ವಿಗಳು ಬಂದು ಮುಜ್ರೆ ಸೇವೆ ಅಂತ ಮಾಡುತ್ತಾರೆ. ಕಳೆದ ವರ್ಷ ಇದನ್ನು ನಿಲ್ಲಿಸಲು ಒತ್ತಡ ಬಂದಿತ್ತು. ಆ ಬಗ್ಗೆ ಮುಜರಾಯಿ ಇಲಾಖೆಗೆ ಸ್ಪಷ್ಟನೆ ಕೇಳಿದ್ದೆವು. ಹಿಂದಿನ ಪದ್ಧತಿಯನ್ನು ಬದಲಾವಣೆ ಮಾಡುವುದು ಬೇಡ ಎಂದಿದ್ದರು. ಅದರಂತೆ ಕಳೆದ ವರ್ಷ ಪದ್ಧತಿ ಪ್ರಕಾರ ನಡೆದುಕೊಂಡು ಹೋಗಿದೆ ಎಂದು ಅರ್ಚನಾ ತಿಳಿಸಿದರು.
ಈ ವರ್ಷ ಮತ್ತೆ ಪದ್ಧತಿ ಬದಲಾಯಿಸಿ ಎಂದು ಕೇಳಿದ್ದಾರೆ. ದಿಢೀರ್ ಆಗಿ ಇಂತಹ ಪದ್ಧತಿಗಳನ್ನು ಬದಲಾವಣೆ ಮಾಡಲು ಆಗುವುದಿಲ್ಲ. ನಿನ್ನೆ ಪ್ರತಿಭಟನೆ ಮಾಡಿದ್ದಾರೆ, ಆ ವೇಳೆ ಯಾರೋ ಒಬ್ಬ ಯುವಕ ಘೋಷಣೆ ಕೂಗಿದ ಅನ್ನುವ ಕಾರಣಕ್ಕೆ ಘರ್ಷಣೆ ಶುರುವಾಗಿದೆ. ತಕ್ಷಣ ಪೊಲೀಸರು ನಿಯಂತ್ರಿಸಿದ್ದಾರೆ. ಆಮೇಲೆ ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾರೆ. ಅದನ್ನು ಸದ್ಯ ನಿಯಂತ್ರಣಕ್ಕೆ ತರಲಾಗಿದೆ. ಇಷ್ಟು ವರ್ಷದಿಂದ ನಡೆದುಕೊಂಡು ಬಂದಿರುವ ಪದ್ಧತಿಯನ್ನು ನಮ್ಮ ಸ್ವಂತ ವಿವೇಚನೆಯಿಂದ ನಿಲ್ಲಿಸಲಾಗುವುದಿಲ್ಲ. ಪರಿಸ್ಥಿತಿಯನ್ನು ಮುಜರಾಯಿ ಇಲಾಖೆಗೂ ತಿಳಿಸಿದ್ದು, ಪರಿಶೀಲನೆಗೆ ಆಗಮ ಪಂಡಿತರು ಬರುತ್ತಿದ್ದಾರೆ. ಅವರು ನೋಡಿ ರಿಪೋರ್ಟ್ ಕೊಟ್ಟ ನಂತರ ಆ ಬಗ್ಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸದ್ಯಕ್ಕೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದರು.
ದೇವಾಲಯಕ್ಕೆ ಆಗಮಿಸಿ ಪರಿಶೀಲಿಸಿದ ಆಗಮ ಪಂಡಿತರ ತಂಡ
ಜಿಲ್ಲಾಧಿಕಾರಿಯವರ ಮನವಿಯ ಮೇರೆಗೆ ಪುರಾತತ್ವ ಇಲಾಖೆಯ ಹಿರಿಯ ಆಗಮ ಪಂಡಿತ ಜಿ.ಎ.ವಿಜಯ್ ಕುಮಾರ್ ಅವರ ನೇತೃತ್ವದ ತಂಡ ಗುರುವಾರ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಈ ವೇಳೆ ಮಾತನಾಡಿದ ವಿಜಯ ಕುಮಾರ್ ಅವರು, ʻʻರಥೋತ್ಸವ ದಿನ ಯಾರು ಯಾರು ಯಾವ ಕರ್ತವ್ಯ ನಿರ್ವಹಿಸಬೇಕು? ಏನೇನು ವ್ಯತ್ಯಾಸ ಆಗಿದೆ? ಜನರಲ್ಲಿ ಏನು ಗೊಂದಲ ಆಗಿದೆ? ಅವುಗಳ ಪರಿಶೀಲನೆಗೆ ಮೇಲಾದಿಕಾರಿಗಳ ಸೂಚನೆ ಇದೆ. ಹೀಗಾಗಿ ಬಂದಿದ್ದೇವೆʼʼ ಎಂದು ಹೇಳಿದರು.
ʻʻದೇವಾಲಯದಲ್ಲಿ ಯಾರು, ಯಾವ ಸಂದರ್ಭದಲ್ಲಿ ಯಾವ ಕರ್ತವ್ಯವನ್ನು ಹೇಗೆ ಮಾಡಬೇಕು ಎಂಬುದರ ಬಗ್ಗೆ ಮ್ಯಾನ್ಯುಯಲ್ ಇದೆ. ಇದು ಮೈಸೂರು ಮಹಾರಾಜರ ಸಂಸ್ಥಾನದಿಂದ ಬಿಡುಗಡೆ ಆಗಿರುವ ಮ್ಯಾನ್ಯುಯಲ್. ಅದರಂತೆ ಎಲ್ಲ ವಿಧಿ ವಿಧಾನ, ಪೂಜಾ ಕೈಂಕರ್ಯ ಕರ್ತವ್ಯ ನಡೆಯುತ್ತಿದೆ. ಈ ಮಧ್ಯೆ ಸ್ವಲ್ಪ ವ್ಯತ್ಯಾಸ ಉಂಟಾಗಿ ಜನರಲ್ಲಿ ಗೊಂದಲ ಆಗಿದೆ. ಹಾಗಾಗಿ ನಾವು ಬಂದು ಆ ಗ್ರಂಥ ಪರಿಶೀಲನೆ ಮಾಡಿದ್ದೇವೆ. ವ್ಯವಸ್ಥಾಪನಾ ಸಮಿತಿ, ಆಡಳಿತ ಅಧಿಕಾರಿ, ಧಾರ್ಮಿಕ ಪರಿಷತ್ ಸದಸ್ಯರ ಸಮ್ಮುಖದಲ್ಲಿ ಪರಿಶೀಲನೆ ನಡೆದಿದೆ. ಮ್ಯಾನ್ಯುಯಲ್‌ನಲ್ಲಿ ಏನು ಹೇಳಿದೆ? ಯಾರು ಏನೇನು ಮಾಡುತ್ತಿದ್ದಾರೆ? ಏನು ತಪ್ಪು ಆಗಿದೆ ಎನ್ನುವ ಬಗ್ಗೆ ಪರಿಶೀಲನೆ ಮಾಡಲಾಗಿದೆ. ಈ ಬಗ್ಗೆ ಇನ್ನೂ ಅನೇಕ ಗ್ರಂಥಗಳನ್ನು ಅದ್ಯಯನ ಮಾಡಿ ಎಲ್ಲವನ್ನೂ ತಿಳಿದು ನಾನು ಹಿರಿಯ ಅಧಿಕಾರಿಗಳಿಗೆ ವರದಿ ಕೊಡಬೇಕಾಗುತ್ತದೆʼʼ ಎಂದು ಹೇಳಿದು ವಿಜಯಕುಮಾರ್.
ಮೂರು ದಿನದಲ್ಲಿ ವರದಿ ಕೊಡುತ್ತೇನೆ
ʻʻಇನ್ನು ಎರಡು ಮೂರು ದಿನದಲ್ಲಿ ನಮ್ಮ ವರದಿಯನ್ನು ನೀಡುತ್ತೇನೆ. ಕೈಪಿಡಿಯಲ್ಲಿ ಏನಿದೆಯೋ ಅದನ್ನು ಮಾಡಬೇಕು, ಆಗಿರುವ ಲೋಪದೋಷ ಸರಿಪಡಿಸಿಕೊಳ್ಳಬೇಕು. ಮ್ಯಾನ್ಯುಯಲ್ ಪ್ರಕಾರ ಎಲ್ಲರಿಗೂ ಹಿಂದು ಧಾರ್ಮಿಕ ದತ್ತಿ ಕಾಯಿದೆ ಸೆಕ್ಷನ್ 58ರ ಪ್ರಕಾರ ದೇವಾಲಯದ ಸಂಪ್ರದಾಯ ನಡೆಸಿಕೊಂಡು ಹೋಗಬೇಕು ಎಂದಿದೆ. ಅದರಂತೆ ಸರ್ಕಾರ ಮುಂದಿನ ಕ್ರಮ ತೆಗೆದುಕೊಳ್ಳುತ್ತದೆʼʼ ಎಂದು ವಿಜಯಕುಮಾರ್ ಹೇಳಿದರು.
ಕುರಾನ್ ಪಠಣ ಮಾಡಬೇಕು ಎಂದು ಹೇಳಿಲ್ಲ
ಈ ಮಧ್ಯೆ ತಮ್ಮ ಪರಿಶೀಲನೆಯ ಅತ್ಯಂತ ಮಹತ್ವದ ಅಂಶವನ್ನ ವಿಜಯಕುಮಾರ್ ಬಿಚ್ಚಿಟ್ಟರು. ಅವರು ಕಂಡಕೊಂಡ ಪ್ರಕಾರ ರಥದ ಮುಂದೆ ಕುರಾನ್ ಪಠಣ ಮಾಡಬೇಕು ಎಂದು ಎಲ್ಲಿಯೂ ಹೇಳಿಲ್ಲ.
ʻʻನಾನು ಓದಿದ ಪ್ರಕಾರ ರಥದ ಮುಂದೆಯಾಗಲಿ, ದೇವಾಲಯದ ಮುಂದೆಯಾಗಲಿ ಕುರಾನ್ ಪಠಣ ಮಾಡಬೇಕು ಎಂದು ಹೇಳಿಲ್ಲ. ಮುಸ್ಲಿಮರಿಗೆ ಗೌರವ ಸಲ್ಲಿಸಬೇಕು, ಅವರು ನಮಸ್ಕರಿಸಬೇಕು ಎಂದು ಹೇಳಲಾಗಿದೆ. ಅವರು ಮರ್ಯಾದೆ ಸಲಾಂ ಮಾಡಬೇಕು ಎಂದಿದೆ. ಅವರು ಮರ್ಯಾದೆ ಮಾಡಬೇಕು ಎಂದು ಉಲ್ಲೇಖ ಇದೆ. ಯಾರಿಗೆ ನಮಸ್ಕಾರ ಮಾಡಬೇಕು, ದೇವಸ್ಥಾನಕ್ಕೆ ಮಾಡಬೇಕೋ, ಅಧಿಕಾರಿಗಳಿಗೆ ನಮಸ್ಕಾರ ಮಾಡಬೇಕೋ ಎಂಬುದರ ಉಲ್ಲೇಖವಿಲ್ಲ. ನಮಸ್ಕಾರ ಯಾರಿಗೆ ಮಾಡಬೇಕು ಎಂಬುದನ್ನು ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ. ಈ ಎಲ್ಲ ವಿಚಾರಗಳನ್ನು ಒಳಗೊಂಡ ವರದಿಯನ್ನು ನಾವು ಕೊಡಲಿದ್ದೇವೆʼʼ ಎಂದರು ಹಿರಿಯ ಆಗಮ ಪಂಡಿತ ವಿಜಯ್ ಕುಮಾರ್.
ಏಪ್ರಿಲ್ ನಾಲ್ಕು ಮತ್ತು ಐದರಂದು ಇಲ್ಲಿ ರಥೋತ್ಸವ ನಡೆಯಲಿದ್ದು, ಈ ವೇಳೆ ಹೇಗೆ ಪ್ರಕ್ರಿಯೆ ನಡೆಯಲಿದೆ ಎನ್ನುವುದು ಕುತೂಹಲಕಾರಿಯಾಗಿದೆ. ಜಿಲ್ಲಾಧಿಕಾರಿ ಮತ್ತು ಮುಜರಾಯಿ ಇಲಾಖೆ ದಾಖಲೆಗಳ ಆಧಾರದಲ್ಲಿ ಇದನ್ನು ಅಂತಿಮಗೊಳಿಸಲಿದೆ.
ಇದನ್ನೂ ಓದಿ : Dharma Dangal: ಬೇಲೂರು ದೇವಸ್ಥಾನದಲ್ಲಿ ಕುರಾನ್ ಪಠಣ: ಆಗಮ ಪಂಡಿತರ ಮೊರೆ ಹೋದ ಜಿಲ್ಲಾಡಳಿತ
ಕರ್ನಾಟಕ
Road Accident : ಹಾಸನದಲ್ಲಿ ಬೈಕ್ ಮೇಲೆಯೇ ಹರಿದ ಬಸ್: ಸವಾರ ಸ್ಥಳದಲ್ಲೇ ಮೃತ್ಯು, ಯುವತಿಗೆ ಗಾಯ
ಹಾಸನ ಹೊರವಲಯದಲ್ಲಿ ಬಸ್ಸೊಂದು ಬೈಕ್ ಮೇಲೆ ಹರಿದು (Road Accident) ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ. ಹಿಂಬದಿಯಲ್ಲಿ ಕುಳಿತಿದ್ದ ಯುವತಿ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದಾಳೆ.
ಹಾಸನ: ನಗರದ ಹೊರವಲಯದ ಹೊಸಕೊಪ್ಪಲು ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಯುವಕನೊಬ್ಬ ಮೃತಪಟ್ಟು, ಯುವತಿಯೊಬ್ಬಳು ಗಾಯಗೊಂಡಿದ್ದಾಳೆ. ಬಸ್ ಬೈಕ್‌ನ ಮೇಲೆಯೇ ಹರಿದು ದುರಂತ ಸಂಭವಿಸಿದೆ. ಇದರ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಹಾಸನದ ಖಾಸಗಿ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಧನು (24) ಮೃತ ಯುವಕ. ಧನು ಹೊಳೆನರಸೀಪುರದ ದೇವರಗುಡ್ಡೇನಹಳ್ಳಿ ಗ್ರಾಮದವನು.
ಗಾರ್ಮೆಂಟ್ಸ್‌ನ ಉದ್ಯೋಗಿ ಧನು ಪಿಯುಸಿ ವಿದ್ಯಾರ್ಥಿನಿ ವಿದ್ಯಾ ಎಂಬಾಕೆಯನ್ನು ಕರೆದುಕೊಂಡು ಬೈಕ್‌ನಲ್ಲಿ ಹೋಗುತ್ತಿದ್ದ. ವಿದ್ಯಾ ಪಿಯು ಪರೀಕ್ಷೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಳು. ಅವರಿಬ್ಬರು ಸಾಗುತ್ತಿದ್ದ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಮಾತ್ರವಲ್ಲ ರಸ್ತೆಗೆ ಉರುಳಿಬಿದ್ದ ಧನುವಿನ ಮೇಲೆಯೇ ಚಕ್ರ ಹರಿದಿದೆ.
ಹಿಂಬದಿ ಕುಳಿತಿದ್ದ ವಿದ್ಯಾಗೆ ಗಾಯವಾಗಿದ್ದು, ಆಕೆಗೆ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಸನ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಲಹಂಕ ಬಳಿ ಬೈಕ್ ಡಿವೈಡರ್‌ಗೆ ಬಡಿದು ಇಬ್ಬರು ಮೃತ್ಯು; ಏರ್‌ಪೋರ್ಟ್‌ಗೆ ಹೋಗುತ್ತಿದ್ದಾಗ ಅಪಘಾತ
ಬೆಂಗಳೂರು: ದೇವನಹಳ್ಳಿಯಿಂದ ನಗರಕ್ಕೆ ಬರುವ ದಾರಿಯಲ್ಲಿ ಯಲಹಂಕ ಕಾಫಿ ಡೇ ಬಳಿ ಬೈಕೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು (Road accident) ಪಲ್ಟಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟರು. ಗುದ್ರಾಮ್, ಜುಗ್ ರಾಜ್ ಪ್ರಹಾಪತ್ ಮೃತರು. ಇವರಲ್ಲಿ ಒಬ್ಬರು ರಾಜಸ್ಥಾನಕ್ಕೆ ಹೋಗಲು ವಿಮಾನ ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದರು. ಇನ್ನೊಬ್ಬರು ಅವರನ್ನು ವಿಮಾನ ನಿಲ್ದಾಣಕ್ಕೆ ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದರು.
ನಗರದ ಹೂಡಿ ಬಳಿ ಫರ್ನಿಚರ್ ಹಾಗು ಇತರೆ ವಸ್ತುಗಳ ಶಾಪ್ ಮಾಲೀಕ ರಾಜಸ್ಥಾನಕ್ಕೆ ಹೊರಟಿದ್ದ ಸಂಬಂಧಿಕರೊಬ್ಬರನ್ನು ವಿಮಾನ ನಿಲ್ದಾಣಕ್ಕೆ ಬಿಡಲು ಎನ್‌ಫೀಲ್ಡ್ ಬುಲೆಟ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಅತಿಯಾದ ವೇಗದಿಂದಾಗಿ ದ್ವಿಚಕ್ರ ವಾಹನ ಕಂಟ್ರೋಲ್ ಸಿಗದೆ ಅಪಘಾತ ಪಲ್ಟಿಯಾದ ಕೂಡಲೇ ಒಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ ಇನ್ನೊಬ್ಬರನ್ನು ಕೂಡಲೇ ಆಸ್ಪತ್ರೆಗೆ ಒಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ : Road Accident: ನೆಲಮಂಗಲದ ಬಳಿ ಲಾರಿ ಹರಿದು ಯುವತಿ ಸ್ಥಳದಲ್ಲೇ ಸಾವು
ಪ್ರಮುಖ ಸುದ್ದಿ
Dharma Dangal: ಬೇಲೂರು ದೇವಸ್ಥಾನದಲ್ಲಿ ಕುರಾನ್ ಪಠಣ: ಆಗಮ ಪಂಡಿತರ ಮೊರೆ ಹೋದ ಜಿಲ್ಲಾಡಳಿತ
ಇಷ್ಟು ವರ್ಷದಿಂದ ನಡೆದುಕೊಂಡು ಬಂದಿರುವ ಪದ್ಧತಿಯನ್ನು ನಮ್ಮ ಸ್ವಂತ ವಿವೇಚನೆಯಿಂದ ನಿಲ್ಲಿಸಲು ಸಾಧ್ಯವಿಲ್ಲ. ಸದ್ಯಕ್ಕೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಹಾಸನ: ಬೇಲೂರು ಶ್ರೀ ಚನ್ನಕೇಶವಸ್ವಾಮಿ ದೇವಾಲಯದ ರಥೋತ್ಸವದ ವೇಳೆ ಕುರಾನ್ ಪಠಣ ವಿವಾದ ವಿಚಾರದಲ್ಲಿ ಮುಜರಾಯಿ ಇಲಾಖೆಯ ಆಗಮ ಪಂಡಿತರ ಮೊರೆ ಹೋಗಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ತಿಳಿಸಿದ್ದಾರೆ.
ಈ ಬಗ್ಗೆ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ. ಇಷ್ಟು ವರ್ಷದಿಂದ ನಡೆದುಕೊಂಡು ಬಂದಿರುವ ಪದ್ಧತಿಯನ್ನು ನಮ್ಮ ಸ್ವಂತ ವಿವೇಚನೆಯಿಂದ ನಿಲ್ಲಿಸಲು ಸಾಧ್ಯವಿಲ್ಲ. ಇದು ಹೊಸದಾಗಿ ಸೃಷ್ಟಿಯಾಗಿರುವಂತಹದ್ದಲ್ಲ. 1929ರಿಂದಲೂ ಈ ಪದ್ಧತಿ ಇದೆ. ಅದು ಮ್ಯಾನುಯಲ್‌ನಲ್ಲಿಯೂ ಸೇರಿದೆ. ರಥೋತ್ಸವದ ವೇಳೆ ಮೌಲ್ವಿಗಳು ಬಂದು ಮುಜ್ರೆ ಸರ್ವಿಸ್ ಅಂತ ಮಾಡುತ್ತಾರೆ. ಕಳೆದ ವರ್ಷ ಇದನ್ನು ನಿಲ್ಲಿಸಲು ಒತ್ತಡ ಬಂದಿತ್ತು. ಆ ಬಗ್ಗೆ ಮುಜರಾಯಿ ಇಲಾಖೆಗೆ ಸ್ಪಷ್ಟನೆ ಕೇಳಿದ್ದೆವು. ಹಿಂದಿನ ಪದ್ಧತಿಯನ್ನು ಬದಲಾವಣೆ ಮಾಡುವುದು ಬೇಡ ಎಂದಿದ್ದರು. ಅದರಂತೆ ಕಳೆದ ವರ್ಷ ಪದ್ಧತಿ ಪ್ರಕಾರ ನಡೆದುಕೊಂಡು ಹೋಗಿದೆ ಎಂದು ಅರ್ಚನಾ ತಿಳಿಸಿದ್ದಾರೆ.
ಈ ವರ್ಷ ಮತ್ತೆ ಪದ್ಧತಿ ಬದಲಾಯಿಸಿ ಎಂದು ಕೇಳಿದ್ದಾರೆ. ದಿಢೀರ್ ಆಗಿ ಇಂತಹ ಪದ್ಧತಿಗಳನ್ನು ಬದಲಾವಣೆ ಮಾಡಲು ಆಗುವುದಿಲ್ಲ. ನಿನ್ನೆ ಪ್ರತಿಭಟನೆ ಮಾಡಿದ್ದಾರೆ, ಆ ವೇಳೆ ಯಾರೋ ಒಬ್ಬ ಯುವಕ ಘೋಷಣೆ ಕೂಗಿದ ಅನ್ನುವ ಕಾರಣಕ್ಕೆ ಘರ್ಷಣೆ ಶುರುವಾಗಿದೆ. ತಕ್ಷಣ ಪೊಲೀಸರು ನಿಯಂತ್ರಿಸಿದ್ದಾರೆ. ಆಮೇಲೆ ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾರೆ. ಅದನ್ನು ಸದ್ಯ ನಿಯಂತ್ರಣಕ್ಕೆ ತರಲಾಗಿದೆ. ಇಷ್ಟು ವರ್ಷದಿಂದ ನಡೆದುಕೊಂಡು ಬಂದಿರುವ ಪದ್ಧತಿಯನ್ನು ನಮ್ಮ ಸ್ವಂತ ವಿವೇಚನೆಯಿಂದ ನಿಲ್ಲಿಸಲಾಗುವುದಿಲ್ಲ. ಪರಿಸ್ಥಿತಿಯನ್ನು ಮುಜರಾಯಿ ಇಲಾಖೆಗೂ ತಿಳಿಸಿದ್ದು, ಪರಿಶೀಲನೆಗೆ ಆಗಮ ಪಂಡಿತರು ಬರುತ್ತಿದ್ದಾರೆ. ಅವರು ನೋಡಿ ರಿಪೋರ್ಟ್ ಕೊಟ್ಟ ನಂತರ ಆ ಬಗ್ಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸದ್ಯಕ್ಕೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಇದೇ ವೇಳೆ ಮೇಲಧಿಕಾರಿಗಳ ಜೊತೆ ಚರ್ಚೆ ಮಾಡದೆ ಈ ಕುರಿತು ಹೇಳಿಕೆ ನೀಡಿರುವ ಶ್ರೀ ಚನ್ನಕೇಶವ ದೇವಸ್ಥಾನದ ಆಡಳಿತಾಧಿಕಾರಿ ವಿರುದ್ಧ ಡಿಸಿ ಗರಂ ಆದರು. ದೇವಸ್ಥಾನದ ಮೆಟ್ಟಿಲ ಮೇಲೆ ನಿಂತು ಕುರಾನ್ ಪಠಣ ಮಾಡುವ ಪದ್ಧತಿ ನಾಲ್ಕಾರು ವರ್ಷಗಳ ಹಿಂದೆ ಇತ್ತು. ರಥದ ಮುಂದೆ ಕುರಾನ್ ಪಠಣ ಮಾಡುವ ಪದ್ಧತಿ ಇರಲಿಲ್ಲ. ಕಳೆದ ನಾಲ್ಕೈದು ವರ್ಷದಿಂದ ರಥದ ಮುಂದೆ ಬಂದು ಕುರಾನ್ ಪಠಣ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ದೇವಸ್ಥಾನದ ಮೆಟ್ಟಿಲುಗಳ ಮೇಲೆ ನಿಂತು ಕುರಾನ್ ಪಠಣ ಮಾಡುವ ಪದ್ಧತಿಯನ್ನು ಮುಂದುವರಿಸುವಂತೆ ಸೂಚನೆ ಕೊಟ್ಟಿದ್ದೇವೆ ಎಂದವರು ಹೇಳಿದ್ದಾರೆ.
ಇದನ್ನೂ ಓದಿ: Dharma dangal : ಬೇಲೂರಿನಲ್ಲಿ ಭುಗಿಲೆದ್ದ ಕುರಾನ್ ಪಠಣ ವಿವಾದ; ಬಜರಂಗ ದಳ ಪ್ರತಿಭಟನೆ ವೇಳೆ ಮುಸ್ಲಿಂ ಯುವಕನ ಕಿರಿಕ್
ಕರ್ನಾಟಕ
Dharma dangal : ಬೇಲೂರಿನಲ್ಲಿ ಭುಗಿಲೆದ್ದ ಕುರಾನ್ ಪಠಣ ವಿವಾದ; ಬಜರಂಗ ದಳ ಪ್ರತಿಭಟನೆ ವೇಳೆ ಮುಸ್ಲಿಂ ಯುವಕನ ಕಿರಿಕ್
ಬೇಲೂರಿನ ಚನ್ನಕೇಶವ ದೇವಸ್ಥಾನದ ರಥೋತ್ಸವದ ವೇಳೆ ಕುರಾನ್ ಪಠನಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಬಜರಂಗದಳದ ವತಿಯಿಂದ ಪ್ರತಿಭಟನೆ (Dharma dangal) ನಡೆಯಿತು. ಈ ವೇಳೆ ಮುಸ್ಲಿಂ ಯುವಕನೊಬ್ಬ ಕಿರಿಕ್ ಮಾಡಿದ್ದಾನೆ.
ಹಾಸನ: ಇತಿಹಾಸ ಪ್ರಸಿದ್ದ ಬೇಲೂರು ಶ್ರೀ ಚನ್ನಕೇಶವ ದೇವಸ್ಥಾನದ ರಥೋತ್ಸವ ಸಂದರ್ಭದಲ್ಲಿ ವರ್ಷಂಪ್ರತಿ ನಡೆಸುವ ಕುರಾನ್ ಪಠನವನ್ನು ನಿಲ್ಲಿಸಬೇಕು (Dharma dangal) ಆಗ್ರಹಿಸಿ ಬೇಲೂರಿನಲ್ಲಿ ಆಯೋಜಿಸಿದ ಬಜರಂಗ ದಳ ಪ್ರತಿಭಟನೆ ಹಿಂಸಾಚಾರ ಸ್ವರೂಪ ಪಡೆದಿದೆ. ಏಪ್ರಿಲ್ ನಾಲ್ಕರಂದು ಬೇಲೂರಿನ ರಥೋತ್ಸವ ಮುಕ್ತಾಯಗೊಳ್ಳಲಿದ್ದು, ಅಂದು ತೇರು ಎಳೆಯುವ ಮುನ್ನ ಕುರಾನ್ ಪಠಿಸಬಾರದು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ನುಗ್ಗಿದ ಯುವಕನೊಬ್ಬ ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಈ ವೇಳೆ ಪ್ರತಿಭಟನಾಕಾರರು ಆತನನ್ನು ಅಡ್ಡಾಡಿಸಿದರು. ಈ ವೇಳೆ ಉಂಟಾದ ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರವನ್ನು ನಡೆಸಬೇಕಾಯಿತು.
ದೇವಸ್ಥಾನಗಳ ಜಾತ್ರೆ ವೇಳೆ ಅನ್ಯ ಧರ್ಮೀಯರ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂಬ ವಿಚಾರ ತೀವ್ರ ಚರ್ಚೆಯಲ್ಲಿರುವ ನಡುವೆಯೇ ಬೇಲೂರಿನ ವಿವಾದ ತೀವ್ರಗೊಂಡಿದೆ. ಬೇಲೂರು ಚೆನ್ನಕೇಶವನಿಗೆ ಮುಸ್ಲಿಮರ ಕುರಾನ್ ಪಠಣ ಸೇವೆ ಎನ್ನುವುದು ಇತ್ತೀಚಿನವರೆಗೆ ಒಂದು ಸಾಮಾಜಿಕ ಸೌಹಾರ್ದದ ಭಾಗ ಎಂಬಂತೆ ಬಿಂಬಿತವಾಗಿತ್ತು. ಆದರೆ, ಈಗ ಚೆನ್ನಕೇಶವನಿಗೇಕೆ ಕುರಾನ್ ಪಠಣ ಎನ್ನುವ ವಾದ ಮೇಲೆದ್ದು ಬಂದಿದೆ.
ಎರಡು ವರ್ಷದ ಹಿಂದೆಯೂ ಈ ವಿವಾದ ಎದ್ದುಬಂದಿತ್ತು. ಆಗ ಮುಜರಾಯಿ ಇಲಾಖೆಯ ಕೈಪಿಡಿಯಲ್ಲೇ ಈ ವಿಚಾರ ಉಲ್ಲೇಖವಾಗಿದೆ. ತೇರಿನ ದಿನ ದೇವಾಲಯದ ಬಳಿ ನಿಂತು ಕುರಾನ್ ಪಠನ ಮಾಡುವುದು ರೂಢಿಗತ ಕ್ರಮ ಎಂದು ಧಾರ್ಮಿಕ ದತ್ತಿ ಇಲಾಖೆ ಸ್ಪಷ್ಟನೆ ನೀಡಿತ್ತು. ದೇವಾಲಯದಲ್ಲಿ ಹಿಂದಿನಿಂದ ಬಂದಿರುವ ರೂಢಿ, ಸಂಪ್ರದಾಯ, ಪದ್ಧತಿಯನ್ನು ಮೀರಲು ಅಧಿಕಾರ ಇರುವುದಿಲ್ಲ. ಈ ಕಾರಣ ಸದರಿ ದೇವಾಲಯದಲ್ಲಿ ವಾರ್ಷಿಕ ಬ್ರಹ್ಮರಥೋತ್ಸವವನ್ನು ಆಗಮ ಶಾಸ್ತ್ರ ರೀತಿ ಹಾಗೂ ಹಿಂದಿನಿಂದ ನಡೆದುಬರುತ್ತಿರುವ ರೂಢಿಯಲ್ಲಿರುವ ಸಂಪ್ರದಾಯ ಪದ್ಧತಿಯಂತೆ ನಡೆಸಲು ಸೂಚಿಸಬಹುದಾಗಿರುತ್ತದೆ ಎಂದು ಆಯುಕ್ತರ ಪರವಾಗಿ ಧಾರ್ಮಿಕ ದತ್ತಿ ಇಲಾಖೆ ಹೇಳಿತ್ತು.
ಪುಸ್ತಕ ಬಿಡುಗಡೆಯೊಂದಿಗೆ ತೀವ್ರಗೊಂಡ ವಿವಾದ
ಈ ವಿವಾದ ಪ್ರತಿ ವರ್ಷವೂ ಎದ್ದುಬರುತ್ತದೆ. ಆದರೆ, ಸ್ವಲ್ಪ ದಿನದಲ್ಲಿ ತಣ್ಣಗಾಗುತ್ತದೆ. ಕಳೆದ ವರ್ಷವೂ ಕುರಾನ್ ಪಠನದೊಂದಿಗೆ ತೇರು ಎಳೆಯಲಾಗಿತ್ತು. ಆದರೆ, ಈ ಬಾರಿ ಅದು ತೀವ್ರ ಸ್ವರೂಪ ಪಡೆಯಲು ಕಾರಣವಾಗಿದ್ದು ಮಾರ್ಚ್ 24ರಂದು ಬಿಡುಗಡೆಯಾಗಿರುವ ಒಂದು ಪುಸ್ತಕ.
ಹಾಸನದ ವೈದ್ಯ ಹಾಗೂ ಇತಿಹಾಸದ ಬಗ್ಗೆ ಅಧ್ಯಯನ ಮಾಡುತ್ತಿರುವ ಡಾ.ರಮೇಶ್ ಅವರು ʻʻಬೇಲೂರಿನ ಶ್ರೀ ಚನ್ನಕೇಶವನಿಗೆ ಬೇಕಿಲ್ಲ ಕುರಾನ್ ಪಠಣʼʼ ಎನ್ನುವ ಪುಸ್ತಕ ಬರೆದಿದ್ದಾರೆ. ಅದರಲ್ಲಿ 1932ರಲ್ಲಿ ಇಂತಹ ಒಂದು ಸಂಪ್ರದಾಯವನ್ನು ದೇವಾಲಯದ ಮ್ಯಾನ್ಯುಯಲ್‌ನಲ್ಲಿ ಸೇರಿಸುವ ಮೂಲಕ ಪರಂಪರೆಗೆ ಅಪಚಾರ ಎಸಗಲಾಗಿದೆ ಎನ್ನುವುದನ್ನು ದಾಖಲೆಗಳ ಮೂಲಕ ಮಂಡಿಸಿದ್ದಾರೆ.
ʻʻಚನ್ನಕೇಶವನ ಜಾತ್ರೆ ವೇಳೆ ಗೋವಿಂದ ನಾಮಸ್ಮರಣೆ ಮೊಳಗಬೇಕೇ ವಿನಃ, ಕುರಾನ್ ಪಠಣ ಸರಿಯಲ್ಲ. ದರ್ಗಾಗೆ ಹೋಗಿ ನಾವು ಹನುಮಾನ್ ಚಾಲಿಸ ಹೇಳೋಕೆ ಆಗುತ್ತಾ ಹಾಗೆಯೇ ಕೆಲವೇ ವರ್ಷಗಳ ಹಿಂದೆ ಸೇರಿಸಲಾಗಿರುವ ಇಂತಹ ಆಚರಣೆಯನ್ನು ಕೈಬಿಡಬೇಕು ಎಂದು ಪುಸ್ತಕದ ರಚನಕಾರ ಡಾ. ರಮೇಶ್ ಆಗ್ರಹಿಸಿದ್ದರು.
ಸ್ವತಂತ್ರ ಪೂರ್ವದಲ್ಲಿ ಮೈಸೂರಿನ ದಿವಾನರಾಗಿದ್ದ ಸರ್ ಮಿರ್ಜಾ ಇಸ್ಮಾಯಿಲ್ರವರು ಇದ್ದ ಸಮಯದಲ್ಲಿ ಬೆಂಗಳೂರಿನಲ್ಲಿ ನಡೆದ ಕೋಮು ಗಲಭೆಯಿಂದ ಅವರ ಹೆಸರಿಗೆ ಅಂಟಿದ್ದ ಕಳಂಕವನ್ನು ತೊಳೆದುಕೊಳ್ಳಲು ಇಂತಹ ಒಂದು ಅಸಂಬದ್ದ ಅಂಶಗಳನ್ನ ಸೌಹಾರ್ದತೆ, ಸಹಿಷ್ಣುತೆ ಹೆಸರಿನಲ್ಲಿ ದೇಗುಲದ ಮ್ಯಾನ್ಯುಯಲ್ಗೆ 1932ರಲ್ಲಿ ಸೇರಿಸಲಾಗಿದೆ ಎನ್ನುವುದು ರಮೇಶ್ ವಾದ.
ಇದೀಗ ಈ ಪುಸ್ತಕವನ್ನು ಮುಂದಿಟ್ಟುಕೊಂಡು ರಥೋತ್ಸವದ ವೇಳೆ ಖುರಾನ್ ಪಠನ ನಿಲ್ಲಬೇಕು ಎಂಬ ಹೋರಾಟ ಜೋರಾಗಿದೆ. ಮಾರ್ಚ್ 24ರಂದು ಬೇಲೂರಿನಲ್ಲಿ ಹಿಂದೂ ಪರ ಸಂಘಟನೆಗಳು ತಹಶೀಲ್ದಾರ್ಗೆ ಮನವಿ ಸಲ್ಲಿಸಿ ಹಿಂದೂಭಾವನೆಗೆ ಧಕ್ಕೆ ತರುವ ಇಂತಹ ಆಚರಣೆ ಬೇಡ ಎಂದು ಮನವಿ ಮಾಡಿದ್ದವು. ಜತೆಗೆ ಮಾರ್ಚ್ 28ರಂದು ಬೃಹತ್ ಹೋರಾಟಕ್ಕೆ ಕರೆ ನೀಡಿದ್ದವು.
ಬೆಳಗ್ಗಿನಿಂದಲೇ ಪ್ರತಿಭಟನೆ
ಬಜರಂಗ ದಳದ ವತಿಯಿಂದ ಬೆಳಗ್ಗಿನಿಂದಲೇ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿದ್ದು, ಮಹಿಳೆಯರು, ಹಿರಿಯರು ಎಲ್ಲರೂ ಭಾಗವಹಿಸಿದ್ದರು. ಪ್ರತಿಭಟನೆ ವೇಳೆ ಬೈಕ್ ನಲ್ಲಿ ಬಂದ ಮುಸ್ಲಿಂ ಯುವಕನೊಬ್ಬ ಖುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರಿಂದ ಆಕ್ರೋಶ ಭುಗಿಲೆದ್ದಿತು.
ಪ್ರತಿಭಟನಾಕಾರರು ಯುವಕನನ್ನು ಅಟ್ಟಾಡಿಸಿದರು. ಈ ವೇಳೆ ಬಜರಂಗದಳ ಹಾಗೂ ಮುಸ್ಲಿಂ ಯುವಕ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿಚಾರ್ಜ್ ಮಾಡಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಯುವಕನನ್ನು ವಶಕ್ಕೆ ಪಡೆಯಲಾಯಿತು. ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ತಹಸಿಲ್ದಾರ್ ಕಚೇರಿಗೆ ಬಂದ ಪ್ರತಿಭಟನಾಕಾರರು ರಥೋತ್ಸವದ ದಿನ ಕುರಾನ್ ಪಠನ ನಿಲ್ಲಿಸುವಂತೆ ಮನವಿ ಮಾಡಿದರು. ಏಪ್ರಿಲ್ 3ರ ಒಳಗಾಗಿ ಕುರಾನ್ ಪಠನ ರದ್ದಾದ ಬಗ್ಗೆ ಸರ್ಕಾರ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು. ಬಳಿಕ ಧರಣಿ ಸ್ಥಳದಿಂದ ಮೆರವಣಿಗೆ ಮೂಲಕ ಚನ್ನಕೇಶವ ದೇಗುಲದ ಬಳಿ ಬಂದ ಹೋರಾಟಗಾರರು ಅಲ್ಲಿಯೂ ಧರಣಿ ನಡೆಸಿದರು.
ಇದನ್ನೂ ಓದಿ : Dharma Dangal : ಕಿಗ್ಗಾ ಋಷ್ಯಶೃಂಗೇಶ್ವರ ಸ್ವಾಮಿ ದೇವಳದ ಜಾತ್ರೆ ವಿಷಯದಲ್ಲಿ ಶುರುವಾಯಿತು ವ್ಯಾಪಾರ ದಂಗಲ್
-
ಕರ್ನಾಟಕ15 hours ago
High Court order: ತುಮಕೂರು ಗ್ರಾಮಾಂತರ ಜೆಡಿಸ್ ಶಾಸಕ ಗೌರಿಶಂಕರ್ ಶಾಸಕತ್ವದಿಂದ ಅನರ್ಹ: ಕೋರ್ಟ್ ಆದೇಶ
-
ಕ್ರಿಕೆಟ್16 hours ago
IND VS PAK: ಏಕದಿನ ವಿಶ್ವಕಪ್; ತಟಸ್ಥ ತಾಣದಲ್ಲಿ ನಡೆಯಲಿದೆ ಪಾಕಿಸ್ತಾನದ ಪಂದ್ಯಗಳು!
-
ಕರ್ನಾಟಕ12 hours ago
Karnataka BJP: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ಚಿಂತನೆ: ಖಚಿತಪಡಿಸಿದ ಬಿ.ಎಸ್. ಯಡಿಯೂರಪ್ಪ
-
ಕ್ರಿಕೆಟ್13 hours ago
ICC World Cup 2023: ಭಾರತದಲ್ಲೇ ನಡೆಯಲಿದೆ ವಿಶ್ವ ಕಪ್ ಪಂದ್ಯ; ಐಸಿಸಿ ಸ್ಪಷ್ಟನೆ
-
ಕರ್ನಾಟಕ13 hours ago
Anjanadri Hill: 101 ಕೆಜಿ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ ಹನುಮನ ಭಕ್ತ
-
ಕ್ರಿಕೆಟ್10 hours ago
IPL 2023: ಗುಜರಾತ್ vs ಚೆನ್ನೈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ಕರ್ನಾಟಕ14 hours ago
Karnataka BJP: ಮುಸ್ಲಿಂ ಬಾಂಧವರಿಗೆ ಬಿಜೆಪಿ ಅನ್ಯಾಯ ಮಾಡಿಲ್ಲ: ಮನವೊಲಿಸುತ್ತೇವೆ ಎಂದ ಬಿ.ಎಸ್. ಯಡಿಯೂರಪ್ಪ
-
ದೇಶ14 hours ago
ಸ್ಮೃತಿ ಇರಾನಿಯನ್ನು ಡಾರ್ಲಿಂಗ್ ಎಂದು ಬಿಜೆಪಿ ನಾಯಕ ಟ್ವೀಟ್, ಮಾನಹಾನಿ ನೋಟಿಸ್ ಕಳುಹಿಸಿದ ಕೈ ನಾಯಕ!