ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದು (Murder Case) ತಾನು ಆತ್ಮಹತ್ಯೆ (Self Harming) ಮಾಡಿಕೊಂಡು ಪತಿಯೊಬ್ಬ ಮೃತಪಟ್ಟಿದ್ದಾನೆ. ಹರೀಶ್ (50) ಎಂಬಾತ ಪತ್ನಿ ಜಾಜಿ (45) ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ಘಟನೆ ನಡೆದಿದೆ. ಹರೀಶ್ ಹಾಗೂ ಜಾಜಿ ನಡುವೆ ಪ್ರತಿನಿತ್ಯ ಒಂದಲ್ಲ ಒಂದು ಕಾರಣಕ್ಕೆ ಜಗಳ ನಡೆಯುತ್ತಲೇ ಇತ್ತು. ಸೋಮವಾರ ರಾತ್ರಿಯೂ ಇಬ್ಬರ ನಡುವೆ ಜಗಳ ನಡೆದಿದ್ದು, ವಿಕೋಪಕ್ಕೆ ತಿರುಗಿದೆ.
ಈ ವೇಳೆ ಸಿಟ್ಟಾದ ಹರೀಶ್ ಮನೆಯಲ್ಲಿದ್ದ ನಾಡ ಬಂದೂಕಿನಿಂದ ಗುಂಡು ಹಾರಿಸಿ ಪತ್ನಿ ಜಾಜಿಯನ್ನು ಹತ್ಯೆ ಮಾಡಿದ್ದಾನೆ. ನಂತರ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇನ್ನೂ ಈ ದಂಪತಿಗೆ ಮೂವರು ಮಕ್ಕಳಿದ್ದು, ಬೇರೆಡೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ.
ಇದನ್ನೂ ಓದಿ: Murder Case : ಸ್ಮಶಾನಕ್ಕೆ ಕರೆದೊಯ್ದು ಸ್ನೇಹಿತನನ್ನೇ ಕೊಂದು ಹಾಕಿದ ಮಿತ್ರದ್ರೋಹಿ
ರಸ್ತೆಯಲ್ಲಿ ಅಡ್ಡಗಟ್ಟಿ ಚಿಕ್ಕಮ್ಮನನ್ನು ಹೊಡೆದು ಕೊಂದ ದುಷ್ಟ
ಬೆಂಗಳೂರು: ಕೌಟುಂಬಿಕ ಕಲಹ (Family Dispute) ಹಿನ್ನೆಲೆ ಮಗನಿಂದಲೆ ಚಿಕ್ಕಮ್ಮನ ಕೊಲೆಯಾಗಿದೆ. ಬೆಂಗಳೂರು ಗ್ರಾಮಾಂತರದ ಹೊಸಕೋಟೆಯ ಸಿದ್ದಾರ್ಥ ನಗರದ ಬಳಿ ತಡರಾತ್ರಿ ಘಟನೆ (Murder Case) ನಡೆದಿದೆ. ಬೆಂಗಳೂರಿನ ದೊಮ್ಮಸಂದ್ರ ಮೂಲದ ಚಂದ್ರಮ್ಮ ( 40 ) ಮೃತ ದುರ್ದೈವಿ. ಆರೋಪಿ ವೆಂಕಟೇಶ್ ಎಂಬಾತ ಕೊಲೆ ಮಾಡಿ ಎಸ್ಕೇಪ್ ಆದವನು.
ಚಂದ್ರಮ್ಮ ಕೈವಾರಕ್ಕೆ ದೇವಸ್ಥಾನಕ್ಕೆ ಹೋಗಿ ರಾತ್ರಿ ವಾಪಸ್ ಆಗುತ್ತಿದ್ದರು. ಈ ವೇಳೆ ಹೊಸಕೋಟೆ ಬಳಿ ಚಂದ್ರಮ್ಮ ಇದ್ದ ಬೈಕ್ ಅಡ್ಡ ಗಟ್ಟಿದ ವೆಂಕಟೇಶ್ ಗಲಾಟೆ ಶುರು ಮಾಡಿದ್ದ. ಗಲಾಟೆಯಲ್ಲಿ ಮಾತಿಗೆ ಮಾತು ಬೆಳೆದಿದ್ದು, ಅಲ್ಲೆ ಇದ್ದ ದೊಣ್ಣೆಯಿಂದ ಚಂದ್ರಮ್ಮನ ತಲೆಗೆ ಹೊಡೆದಿದ್ದಾನೆ. ದೊಣ್ಣೆಯಿಂದ ಹೊಡೆದ ರಭಸಕ್ಕೆ ಚಂದ್ರಮ್ಮ ತೀವ್ರ ರಕ್ತವಾಗಿ ರಸ್ತೆಯಲ್ಲೆ ಬಿದ್ದು ಒದ್ದಾಡಿದ್ದಾರೆ.
ಮಾರಣಾಂತಿಕ ಹಲ್ಲೆ ಮಾಡಿದ ವೆಂಕಟೇಶ್ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಇತ್ತ ಗಂಭೀರ ಗಾಯಗೊಂಡಿದ್ದ ಚಂದ್ರಮ್ಮಳನ್ನು ಬೆಂಗಳೂರಿನ ಖಾಸಗಿ ಆಸ್ವತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಚಂದಮ್ಮ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪರಾರಿ ಆಗಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ