Site icon Vistara News

Prajwal Revanna Case: ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್‌; ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ

Prajwal Revannas anticipatory bail plea adjourned to September 5

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಜಾಮೀನು ಅರ್ಜಿ ವಿಚಾರಣೆಯನ್ನು ಮತ್ತೊಮ್ಮೆ ಹೈಕೋರ್ಟ್ ಮುಂದೂಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು, ಜಾಮೀನು ಹಾಗೂ ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಮುಂದೂಡಿದೆ.

ಇನ್ನು ಇದೇ ವೇಳೆ ಹೈಕೋರ್ಟ್‌ಗೆ ಎಸ್‌ಪಿಪಿ ರವಿವರ್ಮ ಕುಮಾರ್ ಸಂತ್ರಸ್ತೆಯ ಗುರುತು ಮರೆಮಾಚಲು ಇನ್ ಕ್ಯಾಮೆರಾ ವಿಚಾರಣೆಗೆ ಮನವಿ ಮಾಡಿದ್ದರು. ಇನ್ ಕ್ಯಾಮರಾ ವಿಚಾರಣೆ ಅಂದರೆ ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ನಡೆಸುವುದಾಗಿದೆ. ಇನ್ನೂ ಇನ್‌ ಕ್ಯಾಮೆರಾ ವಿಚಾರಣೆ ಕುರಿತು ಮುಖ್ಯ ನ್ಯಾಯಮೂರ್ತಿಗಳು ತೀರ್ಮಾನಿಸುತ್ತಾರೆ ಎಂದು ನ್ಯಾ. ಎಂ.ನಾಗಪ್ರಸನ್ನರವರ ಹೈಕೋರ್ಟ್ ಪೀಠ ಪ್ರತಿಕ್ರಿಯಿಸಿದೆ. ಮುಂದಿನ ವಿಚಾರಣೆ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

ಇದನ್ನೂ ಓದಿ: Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ!

ಪ್ರಜ್ವಲ್‌ ರೇವಣ್ಣ ವಿರುದ್ಧ 2144 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಹಾಗೂ ಎಚ್‌.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 137 ಸಾಕ್ಷಿಗಳ ಹೇಳಿಕೆ ಸೇರಿ 2144 ಪುಟಗಳ ದೋಷಾರೋಪ ಪಟ್ಟಿಯನ್ನು 42ನೇ ವಿಶೇಷ ಜನಪ್ರತಿನಿಗಳ ಕೋರ್ಟ್‌ಗೆ ಎಸ್‌ಐಟಿ ಸಲ್ಲಿಸಿತ್ತು.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪೂರ್ಣಗೊಳಿಸಿರುವ ತನಿಖಾಧಿಕಾರಿ ಸುಮಾರಾಣಿ ಅವರು ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. 137 ಸಾಕ್ಷಿಗಳ ಹೇಳಿಕೆ ಸೇರಿದಂತೆ 2144 ಪುಟಗಳ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪ ಕುರಿತ ಎಫ್‌ಐಆರ್‌ ರದ್ದುಪಡಿಸಲು ಕೋರಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಆಗಸ್ಟ್ 29ಕ್ಕೆ ಇತ್ತೀಚೆಗೆ ಮುಂದೂಡಿತ್ತು.

ಇನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಜುಲೈ 24ರಂದು ವಜಾಗೊಂಡಿತ್ತು. ನಾಲ್ಕನೇ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಇದಕ್ಕೂ ಮೊದಲು ಮೂರು ಅರ್ಜಿಗಳನ್ನು ಸೆಷನ್ಸ್ ಕೋರ್ಟ್ ವಜಾ ಮಾಡಿತ್ತು. ಇದರಲ್ಲಿ ಒಂದು ಜಾಮೀನು ಅರ್ಜಿ, ಎರಡು ನಿರೀಕ್ಷಣಾ ಜಾಮೀನು ಅರ್ಜಿ ಸೇರಿತ್ತು. ಜುಲೈ 24ರಂದು ಮೂರನೇ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತಿರಸ್ಕೃತಗೊಂಡಿತ್ತು. ಇದರಿಂದ ನಾಲ್ಕನೇ ಕೇಸ್‌ನಲ್ಲಿಯೂ ಪ್ರಜ್ವಲ್‌ಗೆ ಹಿನ್ನಡೆಯಾಗಿತ್ತು. ಇದೀಗ ಐದನೇ ಬಾರಿಯೂ ಪ್ರಜ್ವಲ್‌ಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಆಗಿದೆ.

ಏನಿದು ಪ್ರಕರಣ?

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದ ಭೀತಿಯಿಂದ 35 ದಿನ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಮೂರು ತಿಂಗಳ ಹಿಂದೆ ಬೆಂಗಳೂರಿಗೆ ವಾಪಸಾದಾಗ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅದನ್ನು ಚಿತ್ರೀಕರಿಸಿದ ಆರೋಪ ಪ್ರಜ್ವಲ್‌ ವಿರುದ್ದ ಕೇಳಿ ಬಂದಿದೆ. ಆರೋಪಿ ಪ್ರಜ್ವಲ್‌ ರೇವಣ್ಣ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version