Site icon Vistara News

Road Accident | ಸ್ಕೂಟರ್‌ಗೆ ಕೆಎಸ್‌ಆರ್‌ಟಿಸಿ ಡಿಕ್ಕಿ; ಸ್ಥಳದಲ್ಲೇ ಸವಾರ ಸಾವು, ಮತ್ತೊಬ್ಬ ಗಂಭೀರ

road accident

ಹಾಸನ: ಆ್ಯಕ್ಟಿವ್‌ ಹೊಂಡಾ ಸ್ಕೂಟರ್‌ಗೆ ಹಿಂಬದಿಯಿಂದ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದು (Road Accident) ಸ್ಥಳದಲ್ಲೇ ಸವಾರರೊಬ್ಬರು ಮೃತಪಟ್ಟಿರುವ ಘಟನೆ ಕುಪ್ಪಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರಿನ ಬೆಳವಾಡಿ ಗ್ರಾಮದ ಗಣೇಶ್ (55) ಮೃತ ದುರ್ದೈವಿ.

ನಿವೃತ್ತ ಬ್ಯಾಂಕ್ ನೌಕರ ಗಣೇಶ್ ಹಾಗೂ ಸ್ನೇಹಿತ ಆ್ಯಕ್ಟಿವ್ ಹೋಂಡಾ ಸ್ಕೂಟರ್‌ನಲ್ಲಿ ಹಾಸನದ ಕಡೆಯಿಂದ ಬರುತ್ತಿದ್ದರು. ಚಿಕ್ಕಮಗಳೂರಿನಿಂದ ಹಾಸನದ ಕಡೆಗೆ ಸಾರಿಗೆ ಬಸ್ ಆಗಮಿಸುತ್ತಿತ್ತು. ಈ ವೇಳೆ ಹಿಂಬದಿಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ರಸ್ತೆಗೆ ಬಿದ್ದ ಗಣೇಶ್ ಮೇಲೆ ಬಸ್‌ ಹರಿದಿದೆ. ಪರಿಣಾಮ ಸ್ಥಳದಲ್ಲಿಯೇ ಗಣೇಶ್‌ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುವಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ | Accident | ಬಸ್‌ ಬ್ರೇಕ್‌ ಫೇಲ್‌ ಆಗಿ ಸರಣಿ ಅಪಘಾತ: ಕಾರು, ಬೈಕ್‌, ಎರಡು ಬಸ್‌ ಜಖಂ, 15 ಮಂದಿಗೆ ಗಾಯ

Exit mobile version