Site icon Vistara News

Road Accident : ತಿರುವಿನಲ್ಲಿ ಕಾದಿದ್ದ ಜವರಾಯ; ಬೈಕ್‌ಗೆ ಡಿಕ್ಕಿ ಹೊಡೆದ ಕಾರು, ದಂಪತಿ ಸಾವು

car collided with the bike Death of husband and wife

ಹಾಸನ: ಬೈಕ್‌ನಲ್ಲಿ ಬರುತ್ತಿದ್ದ ದಂಪತಿಗೆ ಹಿಂಬದಿಯಿಂದ ಬಂದ ಕಾರೊಂದು (Road Accident) ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಹಾರಿ ಬಿದ್ದ ದಂಪತಿ ದಾರುಣವಾಗಿ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ಅಪಘಾತ ನಡೆದಿದೆ. ಚಂದ್ರೇಗೌಡ (52) ಹೇಮಲತಾ (45) ಮೃತ ದುರ್ದೈವಿಗಳು.

ಚಂದ್ರೇಗೌಡ ಹಾಗೂ ಹೇಮಲತಾ ದಂಪತಿ ಉದಯಪುರದಿಂದ ಮದುವೆ ಮುಗಿಸಿ ಬೈಕ್‌ನಲ್ಲಿ ಚನ್ನರಾಯಪಟ್ಟಣಕ್ಕೆ ವಾಪಾಸ್ ಆಗುತ್ತಿದ್ದರು. ಬರಗೂರು ಹ್ಯಾಂಡ್‌ ಸಮೀಪ ಬರುತ್ತಿದ್ದಾಗ ತಿರುವಿನಲ್ಲಿ ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ದಂಪತಿ ತಲೆಗೆ ತೀವ್ರ ಪೆಟ್ಟಾಗಿತ್ತು. ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಚನ್ನರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident : ಅವಸರ ತಂದ ಆಪತ್ತು; ಬಸ್‌ ಇಳಿಯುವಾಗ ಜಾರಿ ಬಿದ್ದ ಕಂಡಕ್ಟರ್‌ನ ಕಾಲು ಕಟ್‌!

ಮಿನಿ ಬಸ್‌ ಪಲ್ಟಿ; 15 ಮಂದಿಗೆ ಗಾಯ

ಸೀಮಂತ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಆಗುತ್ತಿದ್ದಾಗ ಮಿನಿ ಬಸ್‌ವೊಂದು ಪಲ್ಟಿ ಹೊಡೆದಿದೆ. ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಕೃಷ್ಣಗಿರಿ ಚಿನ್ನಾರ್ ಬಳಿ ಅಪಘಾತ ನಡೆದಿದ್ದು, ಹದಿನೈದು ಮಂದಿ ಗಾಯಗೊಂಡಿದ್ದಾರೆ.

ಹೆದ್ದಾರಿಯಲ್ಲಿ ರಸ್ತೆಗೆ ಪೈಂಟ್ ಕೆಲಸ ಮಾಡಲಾಗುತ್ತಿತ್ತು. ಇದನ್ನು ಗಮನಿಸದೆ ಮಿನಿ ಬಸ್‌ ಚಾಲಕ ಅತಿವೇಗವಾಗಿ ಬಂದಿದ್ದ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬ್ರಿಡ್ಜ್‌ ಕೆಳಗೆ ಬಿದ್ದಿದೆ. ಮಿನಿ ಬಸ್‌ನಲ್ಲಿದ್ದ 12 ಮಂದಿ ಹಾಗೂ ಹೆದ್ದಾರಿ ಕೆಲಸ ಮಾಡುತ್ತಿದ್ದ ಮೂವರು ಗಾಯಗೊಂಡಿದ್ದಾರೆ.

ಬಸ್‌ನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ರಕ್ಷಿಸಿ, ಕೂಡಲೇ ಕೃಷ್ಣಗಿರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಕೃಷ್ಣಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ರಿಡ್ಜ್‌ ಕೆಳಗೆ ಬಿದ್ದ ಬಸ್ಸನ್ನು ಮೇಲಕ್ಕೆತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version