ಹಾಸನ: ಬೈಕ್ಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದ ಬೇಲೂರು ತಾಲೂಕಿನ ನಾಗೇನಹಳ್ಳಿ ಗ್ರಾಮದ ಬಳಿ ಅಪಘಾತ (Road Accident) ನಡೆದಿದೆ. ಗೋಣಿಬೀಡು ಗ್ರಾಮದ ಶರತ್ (26) ಮೃತ ದುರ್ದೈವಿ.
ಟಿಪ್ಪರ್ ಲಾರಿ ಚಾಲಕನ ಅಜಗಾರೂಕತೆಯಿಂದ ಈ ಅಪಘಾತ ನಡೆದಿದೆ ಎನ್ನಲಾಗಿದೆ. ತಿರುವಿನಲ್ಲಿ ವೇಗವಾಗಿ ಬಂದು ಬೈಕ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ರಸ್ತೆ ಬದಿಗೆ ಹಾರಿ ಬಿದ್ದ ಶರತ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:Love Case : ಪ್ರೀತಿಸಿದ ಹುಡುಗಿಗೆ ಅಬಾರ್ಷನ್ ಮಾಡಿಸಿ ಕೈಕೊಟ್ಟು ಪರಾರಿಯಾದ ಪ್ರೇಮಿ
ಚಾರ್ಮಾಡಿ ಘಾಟ್ನಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ
ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿನ 10ನೇ ತಿರುವಿನಲ್ಲಿ 16 ಚಕ್ರದ ಲಾರಿಯೊಂದು ಕೆಟ್ಟು ನಿಂತಿತ್ತು. ಇದರಿಂದಾಗಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಚಿಕ್ಕಮಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿಯಲ್ಲಿ 10 ಚಕ್ರದ ವಾಹನಕ್ಕಿಂತ ದೊಡ್ಡ ವಾಹನಗಳು ಸಂಚರಿಸುವಂತಿಲ್ಲ.
ಸಿಮೆಂಟ್ ಲಾರಿಯು ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿತ್ತು. ಅರ್ಧಕ್ಕೆ ಕೆಟ್ಟು ನಿಂತ ಪರಿಣಾಮದಿಂದಾಗಿ ಇತರೆ ವಾಹನ ಸವಾರರು ಪರದಾಡಿದರು. ಕೊಟ್ಟಿಗೆಹಾರ ಚೆಕ್ ಪೋಸ್ಟ್ನಲ್ಲಿ ಪೊಲೀಸರು ಇದ್ದರೂ ಹೇಗೆ ಹೋದರು ಎಂದು ಸ್ಥಳೀಯರು ಪ್ರಶ್ನಿಸಿದರು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ