Site icon Vistara News

Road accident : ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಐಷರ್‌ ವಾಹನ; ದಂಪತಿ ಸ್ಥಳದಲ್ಲೇ ಸಾವು

Hassana accident

ಹಾಸನ: ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಐಷರ್ ವಾಹನ ಡಿಕ್ಕಿ ಹೊಡೆದು (Road Accident) ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ (Couple dead in accident) ಪ್ರಾಣ ಕಳೆದುಕೊಂಡ ದಾರುಣ ಘಟನೆ ಹಾಸನ ಜಿಲ್ಲೆ (Hassan News) ಅರಕಲಗೂಡು ತಾಲ್ಲೂಕಿನ ತೇಜೂರು ಕೊಪ್ಪಲು ಗ್ರಾಮದ ಬಳಿ ನಡೆದಿದೆ.

ಅರಕಲಗೂಡಿನಿಂದ ಅರಸೀಕಟ್ಟೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಪ್ರಕಾಶ್ (38), ಸರಸ್ವತಿ (36) ಮೃತ ದುರ್ದೈವಿಗಳು. ಅರಕಲಗೂಡಿನಿಂದ ಕೊಣನೂರು ಕಡೆಗೆ ಡಾಂಬರ್ ತುಂಬಿಕೊಂಡು ಹೋಗುತ್ತಿದ್ದ ಐಶರ್ ವಾಹನ ಇವರು ಸಾಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ತೇಜೂರುಕೊಪ್ಪಲು ಕಣಿವೆ ಬಸವಪ್ಪ ದೇವಸ್ಥಾನದ ಎದುರು ಹೋಗುತ್ತಿದ್ದಾಗ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್‌ನಿಂದ ಉರುಳಿ ಬಿದ್ದ ದಂಪತಿಗಳ ಮೇಲೆ ಐಷರ್‌ ವಾಹನ ಹರಿದಿದೆ. ಡಿಕ್ಕಿಯ ರಭಸ ಮತ್ತು ವಾಹನ ಅವರ ಮೇಲೆಯೇ ಸಾಗಿ ಹೋದ ಪರಿಣಾಮವಾಗಿ ದಂಪತಿy ಮೃತದೇಹ ಛಿದ್ರ ಛಿದ್ರವಾಗಿದೆ.

ಮೃತ ದಂಪತಿ ಅರಕಲಗೂಡು ತಾಲ್ಲೂಕಿನ ಅತ್ನಿಉಪ್ಪಾರಕೊಪ್ಪಲು ಗ್ರಾಮದವರಾಗಿದ್ದು, ಕಾರ್ಯಕ್ರಮವೊಂದಕ್ಕೆ ಹೋಗುವ ವೇಳೆ ಈ ದುರ್ಘಟನೆ ನಡೆದಿದೆ. ಪೊಲೀಸರು ಐಷರ್‌ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

ಇದನ್ನೂ ಓದಿ : Fraud case: ಸರ್ಕಾರಿ ಜಾಬ್‌ ಬೇಕಾ? ದಯವಿಟ್ಟು ಇವರನ್ನು ಸಂಪರ್ಕಿಸಬೇಡಿ; ವಂಚಕ ಅವನು ಮತ್ತು ಅವಳು ಅರೆಸ್ಟ್‌

ಕನಕಪುರ ಅಪಘಾತದಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದರು

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿಯ ಸಾತನೂರು ಮುಖ್ಯರಸ್ತೆಯಲ್ಲಿ ಕಾರು ಮತ್ತು ಕೆಎಸ್ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿಯಾಗಿ (Kanakapura Road Accident) ಸ್ಥಳದಲ್ಲೇ ಆರು ಮಂದಿ ದುರ್ಮರಣ ಹೊಂದಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.

ಮಹದೇಶ್ವರ ಬೆಟ್ಟದಿಂದ ವಾಪಸ್ ಆಗುವ ವೇಳೆ ಘಟನೆ ನಡೆದಿದೆ. ಕಾರಿನಲ್ಲಿದ್ದ 6 ಪ್ರಯಾಣಿಕರು ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಓವರ್ ಟೇಕ್ ಮಾಡಲು ಹೋಗಿ ಕಾರಿಗೆ ಡಿಕ್ಕಿಯಾಗಿದೆ. ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‌ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತ ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Exit mobile version