ಹಾಸನ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಘಟನೆ ನಡೆದಿದೆ. 13 ವರ್ಷದ ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ದಂಪತಿ ಮೃತಪಟ್ಟಿದ್ದಾರೆ. ಶ್ರೀನಿವಾಸ್ (43), ಶ್ವೇತಾ (36) ಹಾಗೂ ನಾಗಶ್ರೀ (13) ಮೃತ ದುರ್ದೈವಿಗಳು.
ಶ್ರೀನಿವಾಸ್ ಕಾರು ಚಾಲಕರಾಗಿದ್ದರೆ, ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಶ್ರೀನಿವಾಸ್ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಕಳೆದ ಮಂಗಳವಾರ ಈ ಮೂವರು ಏಕಾಏಕಿ ಕಾಣಿಯಾಗಿದ್ದರು. ಸಂಬಂಧಿಗಳು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಆದರೆ ಇವರ ಸುಳಿವು ಸಿಕ್ಕಿರಲಿಲ್ಲ.
ಕುಟುಂಬಸ್ಥರು ನಂತರ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಿನ್ನೆ ಬುಧವಾರ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ನಾಲೆಯಲ್ಲಿ ಶ್ರೀನಿವಾಸ್, ಶ್ವೇತಾ ಶವ ಪತ್ತೆಯಾಗಿದೆ. ಹೇಮಾವತಿ ನಾಲೆಗೆ ಹಾರಿ ಮೂವರು ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ದಂಪತಿಯ ಶವವನ್ನು ಹೊರ ತೆಗೆದಿದ್ದಾರೆ. ಸದ್ಯ ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಎಸ್‌ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: Bike Wheeling: ಸ್ವಾತಂತ್ರ್ಯ ದಿನಾಚರಣೆ ಹೆಸರಲ್ಲಿ ಹೈವೇಯಲ್ಲಿ ಡೆಡ್ಲಿ ವ್ಹೀಲಿಂಗ್!
ಬಾವಿಯಲ್ಲಿ ಅಪರಿಚಿತ ಶವ ಪತ್ತೆ
ಕಪಿಲೇಶ್ವರ ಮಂದಿರ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತನ ಗುರುತು ಪತ್ತೆಯಾಗಿಲ್ಲ. ಕುಡಿದ ಮತ್ತಿನಲ್ಲಿ ಬಾವಿಗೆ ಬಿದ್ದಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಬೆಳಗ್ಗೆ ಪಾಲಿಕೆಯ ಪೌರ ಕಾರ್ಮಿಕರು ಶುಚಿಗೊಳಿಸುವಾಗ ಶವ ಪತ್ತೆಯಾಗಿದೆ. ಮಾರ್ಕೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ