ಹಾಸನ: ಹಾಸ್ಟೆಲ್ನ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಲಾಗಿದೆ.
ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ. ವಸತಿ ಶಾಲೆಯ ಪ್ರಾಂಶುಪಾಲ ಶಿವಕುಮಾರ್ ಬಂಧಿತ ಆರೋಪಿ. ಲೈಂಗಿಕ ಕಿರುಕುಳದ ಬಗ್ಗೆ ಹಾಸ್ಟೆಲ್ ವಿದ್ಯಾರ್ಥಿನಿಯರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದರು. ದೂರಿನ ಅನ್ವಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಿದ್ದರು. ಈ ವೇಳೆ ಪ್ರಾಂಶುಪಾಲ ಲೈಂಗಿಕ ಕಿರುಕುಳ ನೀಡಿರುವುದು ಗೊತ್ತಾಗಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಹೆಚ್.ಟಿ.ಕೋಮಲ ಪೊಲೀಸರಿಗೆ ದೂರು ನೀಡಿದ್ದರು. ಕೊಡಗು ಮೂಲದ ಶಿವಕುಮಾರ್ ಶಿವಕುಮಾರ್ ವಿರುದ್ಧ ಪೋಕ್ಸೋ ಅಡಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ | Sexual harassment | ಪೋಷಕರ ಆರೈಕೆಗಾಗಿ ಕರೆಸಿಕೊಂಡ ಯುವತಿಯ ಮೇಲೆ ಮನೆ ಮಾಲೀಕನಿಂದ ಅತ್ಯಾಚಾರ