ಹಾಸನ: ವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ (Suspicious death) ಮೃತಪಟ್ಟಿದ್ದಾಳೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ. ಸುರಭಿ (24) ಮೃತ ದುರ್ದೈವಿ.
ಹುಣಸೂರಿನ ಸುರಭಿ ಮೂರು ವರ್ಷದ ಹಿಂದೆ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಎಂಬಾತನ ಜತೆ ವಿವಾಹವಾಗಿದ್ದಳು. ನಿನ್ನೆ ಗುರುವಾರ ಅಳಿಯ ದರ್ಶನ್ ಸುರಭಿ ಪೋಷಕರಿಗೆ ಕರೆ ಮಾಡಿ, ನಿಮ್ಮ ಮಗಳು ಲೋ ಬಿಪಿಯಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾನೆ.
ಇತ್ತ ಸುರಭಿ ಪೋಷಕರು, ಪತಿಯೇ ಕೊಲೆ ಮಾಡಿದ್ದಾನೆಂದು ಆರೋಪಿಸಿದ್ದಾರೆ. ದರ್ಶನ್‌ಕ್ಕೆ ಬೇರೊಬ್ಬರ ಜತೆ ಅಕ್ರಮ ಸಂಬಂಧವಿತ್ತು. ಇದನ್ನು ಪ್ರಶ್ನಿಸುತ್ತಿದ್ದ ಸುರಭಿಯನ್ನು ನೇಣುಬಿಗಿದು ಕೊಲೆ ಮಾಡಿ ನಾಟಕವಾಡುತ್ತಿದ್ದಾರೆ ಎಂದು ಸುರಭಿ ಪೋಷಕರು ಗಂಭೀರ ಆರೋಪವನ್ನು ಮಾಡಿದ್ದಾರೆ.
ಮೃತದೇಹವನ್ನು ಶ್ರವಣಬೆಳಗೊಳ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಶ್ರವಣಬೆಳಗೊಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ: Murder Case: ಹೆಂಡತಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಬಳೆ ವ್ಯಾಪಾರಿಯ ಕತ್ತು ಸೀಳಿ ಕೊಲೆ
ನಿಶ್ಚಿತಾರ್ಥವಾದ ಯುವತಿಗೆ ಹಳೆಯ ಪ್ರಿಯಕರನ ಕಾಟ, ಆತ್ಮಹತ್ಯೆ
ಆನೇಕಲ್: ಪಕ್ಕದ ಮನೆಯಲ್ಲಿದ್ದು ನಿರಂತರ ಕಾಟ ಕೊಡುತ್ತಿದ್ದ ಪ್ರಿಯಕರನ ಕಾಟ (harassment) ತಾಳಲಾರದೆ, ನಿಶ್ಚಿತಾರ್ಥವಾಗಿದ್ದ (Engagement) ಯುವತಿಯೊಬ್ಬಳು ಆತ್ಮಹತ್ಯೆ (Self Harm) ಮಾಡಿಕೊಂಡ ಘಟನೆ ನಡೆದಿದೆ.
ಬೆಂಗಳೂರು ಹೊರವಲಯದ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಚಂದ್ರಕಲಾ (19) ಆತ್ಮಹತ್ಯೆಗೆ ಶರಣಾದ ಯುವತಿ. ಜಿಗಣಿ ಸಮೀಪದ ನಂಜಾಪುರದಲ್ಲಿ ಮೊನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಈ ಹಿಂದೆ ಪಕ್ಕದ ಮನೆಯ ಅರುಣ್ ಕುಮಾರ್ ಎಂಬಾತನನ್ನು ಚಂದ್ರಕಲಾ ಪ್ರೀತಿಸುತ್ತಿದ್ದಳು. ಪ್ರೀತಿಯ ವಿಚಾರ ಗೊತ್ತಾಗಿ ಮನೆಯವರು ಮನೆಯವರು ಹುಡುಗಿಗೆ ಬುದ್ಧಿವಾದ ಹೇಳಿದ್ದರು. ಅರುಣ್ ಜೈಲಿಗೆ ಹೋಗಿ ಬಂದವನಾಗಿದ್ದು, ಹುಡುಗನ ವ್ಯಕ್ತಿತ್ವ ಸರಿ ಇಲ್ಲ. ಆತನನ್ನು ಮದುವೆಯಾಗಬೇಡ ಎಂದು ಹುಡುಗಿಯ ಮನವೊಲಿಸಿದ್ದರು. ತಮ್ಮ ಪರಿಚಿತರ ಹುಡುಗನೊಬ್ಬನ ಜೊತೆ ಎಂಗೇಜ್‌ಮೆಂಟ್ ಮಾಡಿಸಿದ್ದರು.
ಬೇರೆಯವನನ್ನು ಮದುವೆಯಾದರೆ ನಿನ್ನನ್ನು ಕೊಲ್ಲುವುದಾಗಿ ಅರುಣ್ ಬೆದರಿಕೆ ಹಾಕಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಗಳ ಸಾವಿಗೆ ಆತನೇ ಕಾರಣವೆಂದು ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಘಟನೆಯ ನಂತರ ಅರುಣ್ ಕುಮಾರ್ ತಲೆ ಮರೆಸಿಕೊಂಡಿದ್ದಾನೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಯುವತಿ ಪೋಷಕರಿಂದ ಪ್ರಕರಣ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ