ಹಾಸನ: ಅನುಮಾನಾಸ್ಪದವಾಗಿ ಮೃತಪಟ್ಟ ಕಾಡಾನೆಯ ಮರಣೋತ್ತರ ಪರೀಕ್ಷೆ ವರದಿಯನ್ನು ವೈದ್ಯರು ಬಹಿರಂಗಪಡಿಸಿದ್ದಾರೆ. ಕಾಡಾನೆ ಗುಂಡೇಟಿನಿಂದ ಮೃತಪಟ್ಟಿದ್ದು ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಐವರು ಆರೋಪಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ | 15 ವರ್ಷದ ಸಲಗ ಅನುಮಾನಾಸ್ಪದ ಸಾವು
ಹಾಸನದ ಗೂರ್ಗಿಹಳ್ಳಿ ಸಮೀಪ ಈ ಕಾಡಾನೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣ ದಾಖಲಾಗಿತ್ತು. ಈ ಗ್ರಾಮದ ಭತ್ತದ ಗದ್ದೆಯಲ್ಲಿ 18 ವರ್ಷದ ಕಾಡಾನೆ ಮೃತಪಟ್ಟಿತ್ತು. ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ವನ್ಯಜೀವಿ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ್ದರು. ಈಗ ಪರೀಕ್ಷೆಯ ವರದಿಯನ್ನು ವೈದ್ಯರು ಪೊಲೀಸರಿಗೆ ನೀಡಿದ್ದಾರೆ.
ಈ ಪ್ರಕರಣದ ಕುರಿತು ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ತನಿಖೆ ನಡೆಸಿದ್ದಾರೆ. ಗುಂಡೇಟಿನಿಂದಲೇ ಸಾವನ್ನಪ್ಪಿರಬಹುದೆಂದು ಎಂಬ ಶಂಕೆ ಖಚಿತವಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆಯನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ | Acid Attack | ಆ್ಯಸಿಡ್ ನಾಗನಿಗೆ ಅತಿ ಬುದ್ಧಿವಂತಿಕೆಯೇ ಮುಳುವಾಯ್ತಾ?