Wild Animals Attack : ಕರೆಯದೆ ಬಂದ ಅತಿಥಿ; ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ ಕೋತಿ!ಮುಂದೇನಾಯ್ತು? - Vistara News

ಹಾಸನ

Wild Animals Attack : ಕರೆಯದೆ ಬಂದ ಅತಿಥಿ; ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ ಕೋತಿ!ಮುಂದೇನಾಯ್ತು?

Wild Animals Attack : ಕರೆಯದೇ ಮದುವೆಗೆ ಬಂದ ಕೋತಿಯೊಂದು ರಂಪಾಟವನ್ನೇ ನಡೆಸಿದೆ. ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ್ದಲ್ಲದೇ, ಊಟ ಮಾಡಲು ಹೋದವರ ಮೇಲೂ ಎರಗಿದೆ. ಮತ್ತೊಂದು ಕಾಡಾನೆ, ಕರಡಿ ಪ್ರತ್ಯಕ್ಷಗೊಂಡು ಅವಾಂತರವನ್ನೇ ಸೃಷ್ಟಿಸಿದೆ.

VISTARANEWS.COM


on

wild animals Attack
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಮದುವೆ ಮನೆಗೆ ನುಗ್ಗಿದ ಕೋತಿಯೊಂದು ರಂಪಾಟ (Wild Animals Attack) ನಡೆಸಿದೆ. ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ್ದಲ್ಲದೇ, ಊಟ ಮಾಡಲು ಹೋದವರಿಗೂ ತೊಂದರೆ ಕೊಟ್ಟಿದೆ. ಇಷ್ಟು ಮಾತ್ರವಲ್ಲದೇ ಮದುವೆಗೆ ಬಂದವರಿಗೆ ಮಂಗ (Monkey Attack) ಕಚ್ಚಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆಯಲ್ಲಿ ಘಟನೆ ನಡೆದಿದೆ.

wild Animals Attack

ಹಿರಿಸಾವೆಯ ನುಗ್ಗೆಹಳ್ಳಿ ರಸ್ತೆಯಲ್ಲಿ ನಡೆಯುತ್ತಿದ್ದ ಮದುವೆಗೆ ಕರೆಯದೇ ಬಂದ ಕೋತಿ ಕಾಟಕ್ಕೆ ಜನರು ಹೈರಣಾದರು. ಡೈನಿಂಗ್ ಹಾಲ್‌ನಲ್ಲಿ ಊಟ ಮಾಡುತ್ತಿದ್ದವರಿಗೂ ಕಿರಿಕಿರಿ ಮಾಡಿ, ಊಟ ಕಸಿದುಕೊಂಡಿದೆ. 8-10 ಮಂದಿ ಮೇಲೆ ದಾಳಿ ಮಾಡಿ ಕಚ್ಚಿದೆ. ಸುಶೀಲಮ್ಮ, ಲೀಲಾವತಿ, ನಿಂಗೇಗೌಡ, ಗೌರಮ್ಮ, ಗಿರಿಜಮ್ಮ , ತಿಮ್ಮೇಗೌಡ, ಗಿರಿಗೌಡ ಎಂಬುವವರಿಗೆ ಕೋತಿ ಕಚ್ಚಿದ್ದು, ಗಾಯಾಳುಗಳಿಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸುತ್ತಮುತ್ತಲಿನ ಹಳ್ಳಿಯಲ್ಲಿ ಓಡಾಡುತ್ತಿರುವ ಕೋತಿ ಹಿಡಿದು ಸ್ಥಳಾಂತರ ಮಾಡಲು ಆಗ್ರಹಿಸಿದ್ದಾರೆ.

wild animals Attack

ಇದನ್ನೂ ಓದಿ: Leopard attack : ರಸ್ತೆ ಮೇಲೆ ಸತ್ತಂತೆ ಬಿದ್ದಿದ್ದ ಚಿರತೆ; ಮುಟ್ಟಲು ಹೋದ ಬೈಕ್‌ ಸವಾರ, ಕ್ಯಾಬ್‌ ಚಾಲಕನ ಮೇಲೆ ದಾಳಿ

wild Animals Attack

ವಿಜಯನಗರದ ಎಪಿಎಂಸಿ ಆವರಣಕ್ಕೆ ಎಂಟ್ರಿ ಕೊಟ್ಟ ಕರಡಿ

ಇತ್ತೀಚೆಗೆ ಕರಡಿಗಳ ಹಾವಳಿ ಹೆಚ್ಚಾಗಿದೆ. ವಿಜಯನಗರದ ಹಗರಿಬೊಮ್ಮನ ಹಳ್ಳಿಯಲ್ಲಿರುವ ಎಪಿಎಂಸಿ (APMC) ಆವರಣದಲ್ಲಿ ಕರಡಿಯೊಂದು ಪತ್ತೆಯಾಗಿದೆ. ಮಂಗಳವಾರ ಬೆಳಗಿನ ಜಾವ ಕರಡಿ ಓಡಾಟ ಕಂಡು ರೈತರು ಹೌಹಾರಿದ್ದಾರೆ. ಕರಡಿ ಓಡಾಟವು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಹಿಂದೆಯೂ ನಾನಾ ಕಡೆ ಕರಡಿ ಪ್ರತ್ಯಕ್ಷವಾಗಿತ್ತು.

wild animals Attack

ಕೊಡಗಿನಲ್ಲಿ ಆಟೋ ಜಖಂ ಮಾಡಿದ ಕಾಡಾನೆ

ಕೊಡಗಿನಲ್ಲಿ ಆನೆ -ಮಾನವ ಸಂಘರ್ಷ ಮುಂದುವರಿದಿದೆ. ಮನೆ ಸಮೀಪ ನಿಲ್ಲಿಸಿದ್ದ ಆಟೋ ಮೇಲೆ ಕಾಡಾನೆ ದಾಳಿ ಮಾಡಿದೆ. ನಾಪೋಕ್ಲು ಸಮೀಪದ ಕಕ್ಕಬ್ಬೆಯ ಗ್ರಾಮದ ನಾಲಡಿ ವಾಟೆಕಾಡು ಎಂಬಲ್ಲಿ ಘಟನೆ ನಡೆದಿದೆ. ವಾಟೆಕಾಡು ನಿವಾಸಿ ದೇವಯ್ಯ ಎಂಬುವರ ಆಟೋವನ್ನು ಜಖಂಗೊಳಿಸಿ, ಸಮೀಪದ ತೋಟದಲ್ಲೂ ದಾಂಧಲೆ ನಡೆಸಿ ಕಾಲ್ಕಿತ್ತಿದೆ. ಆನೆ ಹಾವಳಿಯಿಂದ ಮುಕ್ತಿ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

wild Animals Attack

ಕೊಪ್ಪಳದಲ್ಲಿ ನಿಲ್ಲದ ಕರಡಿ ಆತಂಕ

ಕಳೆದ ಒಂದು ವಾರದಿಂದ ಕೊಪ್ಪಳ ಸುತ್ತಮುತ್ತ ಕರಡಿ ಪ್ರತ್ಯಕ್ಷಗೊಳ್ಳುತ್ತಿದೆ. ಇದೀಗ ಬಸ್‌ನಲ್ಲಿ ಹೋಗುತ್ತಿರುವವರಿಗೆ ಕರಡಿಯೊಂದು ದರ್ಶನ ಕೊಟ್ಟಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಿ – ಮಾಟಲದಿನ್ನಿ ಮಧ್ಯೆ ಕರಡಿ ಕಾಣಿಸಿಕೊಂಡಿದೆ. ಮಂಗಳವಾರ ಮುಂಜಾನೆ ಬಸ್‌ವೊಂದಕ್ಕೆ ಕರಡಿಯು ಅಡ್ಡಬಂದಿದೆ. ಇದನ್ನೂ ಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

Karnataka Weather Forecast : ಅಬ್ಬರಿಸುತ್ತಿರುವ ಮಳೆಯಿಂದಾಗಿ ನಾನಾ ಅವಾಂತರವೇ ಸೃಷ್ಟಿ ಆಗಿದೆ. ಮಳೆಗೆ (Rain News) ಲಾರಿಗಳ ನಡುವೆ ಮುಖಾಮುಖಿ (Road Accident) ಡಿಕ್ಕಿಯಾದರೆ, ಮತ್ತೊಂದು ಕಡೆ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್‌ ಮರ ಬಿದ್ದು ಜಖಂಗೊಂಡಿದೆ. ಹಲವಾರು ಗ್ರಾಮಗಳು ನೀರಿನಿಂದ ಮುಳುಗಡೆಯಾಗಿದೆ.

VISTARANEWS.COM


on

By

karnataka Rain
Koo

ಬೆಳಗಾವಿ/ಶಿವಮೊಗ್ಗ/ಉಡುಪಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯು (Karnataka rain) ಅವಾಂತರವನ್ನೇ (Rain Effect) ಸೃಷ್ಟಿಸಿದೆ. ತೀವ್ರ ಮಳೆಯಿಂದಾಗಿ ಚಾಲಕರ ನಿಯಂತ್ರಣ ತಪ್ಪಿ ಲಾರಿಗಳ ಮಧ್ಯೆ ಮುಖಾಮುಖಿ (Road Accident) ಡಿಕ್ಕಿಯಾಗಿದೆ. ಬೆಳಗಾವಿ ತಾಲೂಕಿನ ಹಲಗಾ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಾರಿ ಚಾಲಕರಿಬ್ಬರಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿಗಳು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿವೆ. ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Rain

ಮಳೆಗೆ ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಭಾಗದಲ್ಲಿ ಭಾರೀ ಗಾಳಿಯೊಂದಿಗೆ ಮಳೆಯಾಗತ್ತಿದೆ. ಪರಿಣಾಮ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಬೃಹತ್ ಮರ ಬಿದ್ದಿದೆ. ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಓಮಿನಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓಮಿನಿ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರಿನ ಮೇಲೆ ಮರ ಬಿದ್ದ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

karnataka Rain

ಉಡುಪಿಯಲ್ಲಿ ಮುಳುಗಡೆಯಾದ ಗ್ರಾಮಗಳು

ಪ್ರತಿ ವರ್ಷದಂತೆ ಈ ವರ್ಷವೂ ಉಡುಪಿಯ ಬೈಂದೂರು ತಾಲೂಕಿನಲ್ಲಿ ನೆರೆಹಾವಳಿ ಸೃಷ್ಟಿಯಾಗಿದೆ. ತಾಲೂಕಿನ ನಾವುಂದ, ಬಡಾಕೇರಿ, ಮರವಂತೆ, ಸಾಲ್ಬುಡ, ಅರೆಹೊಳೆ ಕೋಣ್ಕಿ ಹಾಗೂ ಕುದ್ರು ಚಿಕ್ಕಳ್ಳಿ ಪಡುಕೋಣೆ ಭಾಗದಲ್ಲಿ ನೆರೆಹಾವಳಿಗೆ ತುತ್ತಾಗಿವೆ.

ಸ್ಥಳೀಯ ಯುವಕರು ನೆರೆಹಾವಳಿ ಪೀಡಿತ ಪ್ರದೇಶಗಳಿಗೆ ತೆರಳಿ ಅಗತ್ಯ ನೆರವು ನೀಡುತ್ತಿದ್ದಾರೆ. ಮೂರು ದೋಣಿಗಳನ್ನು ಬಳಸಿ ರಕ್ಷಣಾ ಕಾರ್ಯದ ಜತೆಗೆ ಅಗತ್ಯ ವಸ್ತು ಪೂರೈಸುತ್ತಿದ್ದಾರೆ. ಹೆಚ್ಚುವರಿಯಾಗಿ ಬೈಂದೂರು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನೆರೆಪೀಡಿತ ಪ್ರದೇಶಕ್ಕೆ ಕುಂದಾಪುರ ಸಹಾಯಕ ಕಮೀಶನರ್ ರಶ್ಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಮನೆಗಳು ಜಲಾವೃತ

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಬಿಳೆಹೊಂಯ್ಗಿ, ಮಂಜಗುಣಿ ಸೇರಿದಂತೆ 5ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದೆ. ಹೊನ್ನೆಬೈಲ್ ಗ್ರಾಮದಲ್ಲಿ 20 ಮನೆಗಳು ಜಲಾವೃತಗೊಂಡಿದೆ. ಅಂಕೋಲಾ ತಾಲೂಕಿನ 5 ಗ್ರಾಮಗಳಲ್ಲಿ ರಸ್ತೆ ನೀರಿನಿಂದ ಮುಳುಗಿದೆ. ಹೀಗಾಗಿ ಬಿಳೆಹೊಂಯ್ಗಿ, ಹೊನ್ನೆಬೈಲು, ಶಿಂಗನಮಕ್ಕಿ, ಮಂಜಗುಣಿ ಶಾಲೆಗಳಲ್ಲಿ ಕಾಳಜಿ ಕೇಂದ್ರವನ್ನು ಜಿಲ್ಲಾಡಳಿತ ತೆರೆದಿದೆ. ನೆರೆ ಪರಿಸ್ಥಿತಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

karnataka rain

50ಕ್ಕೂ ಅಧಿಕ ನಿವಾಸಿಗಳು ಕಾಳಜಿ ಕೇಂದ್ರಕ್ಕೆ ರವಾನೆಯಾಗಿದ್ದಾರೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದೆ. ವರುಣನ ಅಬ್ಬರಕ್ಕೆ ತಗ್ಗು ಪ್ರದೇಶದ ನಿವಾಸಿಗಳಲ್ಲಿ ಆತಂಕ ಹೆಚ್ಚಿದೆ. ಇತ್ತ ಭಟ್ಕಳದಲ್ಲೂ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನೀರು ನಿಂತು ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಹಿನ್ನಲೆ ಭಟ್ಕಳ ರಂಗಿನಕಟ್ಟೆ ಪ್ರದೇಶ ಹೊಳೆಯಂತಾಗಿದೆ. ಭಟ್ಕಳ ತಹಸೀಲ್ದಾರ ನಾಗರಾಜ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುರಸಭಾ ಸಿಬ್ಬಂದಿ ಚರಂಡಿಯಲ್ಲಿ ತುಂಬಿರುವ ಮಣ್ಣು, ಕಲ್ಲನ್ನು ತೆರವುಗೊಳಿಸುತ್ತಿದ್ದಾರೆ. ಪಟ್ಟಣದ ಜಾಮೀಯಾಬಾದ್‌ ನಲ್ಲಿಯೂ ಮನೆಗಳಿಗೆ ನೀರು ನುಗ್ಗಿದೆ. ಕೋಗ್ತಿ ರೋಡ್, ಡೊಂಗರಪಳ್ಳಿ, ಆಝಾದ್‌ನಗರ, ಕಾರಗದ್ದೆ ರಸ್ತೆ ಜಲಾವೃತಗೊಂಡಿದೆ.

ಉಡುಪಿಯಲ್ಲಿ ಉಕ್ಕಿಹರಿದ ಮಡಿಸಾಲು ಹೊಳೆ

ಬ್ರಹ್ಮಾವರ ತಾಲೂಕಿನ ಆಲೂರು ಬಳಿ ಮಡಿಸಾಲು ಹೊಳೆಯು ಉಕ್ಕಿಹರಿದಿದೆ. ಆರೂರು- ಬೆಳ್ಮಾರು ಗ್ರಾಮದ ಮಧ್ಯ ಹರಿಯಲಿದ್ದು, ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನೆರೆಹಾವಳಿ ಸೃಷ್ಟಿಯಾಗಿದೆ. ಕೃಷಿಕರಿಗೆ ಜೀವನದಿಯಾಗಿದ್ದ ಮಡಿಸಾಲು ಹೊಳೆ ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಹೊಳೆಯ ಪಕ್ಕದ ಎಕರೆಗಟ್ಟಲೆ ಕೃಷಿ ಭೂಮಿ ಜಲಾವೃತಗೊಂಡಿದೆ. ಕೆಲವು ದಿನಗಳ ಹಿಂದೆಯಷ್ಟೆ ಭತ್ತದ ನಾಟಿ ಮಾಡಿ ಮಾಡಿದ್ದ ಪ್ರದೇಶದಲ್ಲಿ ಈಗ ನೆರೆಹಾವಳಿ ಸೃಷ್ಟಿಯಾಗಿದೆ. ನೆರೆಯಿಂದಾಗಿ ಆರೂರು ಬೆಳ್ಮಾರು ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಮತ್ತೆ ಮಳೆ ಮುಂದುವರಿದರೆ ಕಿರು ಸೇತುವೆ ಮುಳುಗಡೆಯಾಗುವ ಭೀತಿ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Wild Animal Attack : ಮತ್ತೆ ಕಾಡು ಪ್ರಾಣಿಗಳು ಹಾವಳಿ ನೀಡುತ್ತಿದ್ದು, ಗ್ರಾಮದೊಳಗೆ ಎಲ್ಲೆಂದರಲ್ಲಿ ಕಾಣಿಸಿಕೊಳ್ಳುತ್ತಿದೆ. ಮಾಗಡಿಯಲ್ಲಿ ರೈತನ ಮೇಲೆ ಕರಡಿಯೊಂದು ದಾಳಿ ಮಾಡಿದ್ದರೆ, ಕೊಡಗು, ಹಾಸನ, ಚಿಕ್ಕಮಗಳೂರಲ್ಲಿ ಕಾಡಾನೆಗಳು ಪ್ರತ್ಯಕ್ಷಗೊಂಡಿವೆ.

VISTARANEWS.COM


on

By

wild animal attack
Koo

ಮಾಗಡಿ: ಇತ್ತೀಚೆಗೆ ರಾಜ್ಯದ ಹಲವೆಡೆ ಕರಡಿ ಹಾವಳಿ (Wild Animal Attack ) ಹೆಚ್ಚಾಗಿದೆ. ಆಹಾರ ಅರಸಿ ಕಾಡು ಬಿಟ್ಟು ನಾಡಿಗೆ ಬರುತ್ತಿರುವ ಕರಡಿ (Bear Attack) ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿದೆ. ಚಿರತೆ, ಹುಲಿ, ಕಾಡಾನೆ ಬಳಿಕ ಕರಡಿ ಕಾಟಕ್ಕೆ ಜನರು ಬೇಸತ್ತು ಹೋಗಿದ್ದಾರೆ. ಗುರುವಾರ ಬೆಳಗಿನ ಜಾವ ರೈತರೊಬ್ಬರು ಜಮೀನಿಗೆ ತೆರಳುವಾಗ ಕರಡಿ ದಾಳಿ ಮಾಡಿದ್ದು, ಗಂಭೀರ ಗಾಯಗೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರದ ಮಾಗಡಿ ತಾಲೂಕಿನ ಚಕ್ಕಳ್ಳಿ ಗ್ರಾಮದ ಟಿಎನ್‌ ಕೆರೆ ಬಳಿ ಘಟನೆ ನಡೆದಿದೆ. ಮಹೇಂದ್ರ (45) ಕರಡಿ ದಾಳಿಯಿಂದ ಗಾಯಗೊಂಡವರು. ಮಹೇಂದ್ರ ಅವರು ಬೆಳಗ್ಗೆ ಜಮೀನಿಗೆ ತೆರಳುವಾಗ ಏಕಾಏಕಿ ಹಿಂದಿನಿ ಬಂದು ದಾಳಿ ಮಾಡಿದೆ.

ಕರಡಿ ದಾಳಿಯಿಂದ ಮುಗ್ಗರಿಸಿ ಕೆಳಗೆ ಬಿದ್ದ ಮಹೇಂದ್ರ ಅವರ ತಲೆಗೆ ಬಾಯಿ ಹಾಕಿ ಗಾಯಗೊಳಿಸಿದೆ. ಜೋರಾಗಿ ಕಿರುಚಾಡಿದ ಕಾರಣಕ್ಕೆ ಕರಡಿ ಅಲ್ಲಿಂದ ಕಾಲ್ಕಿತ್ತಿದೆ. ಸದ್ಯ ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ತಾಲೂಕು ಅರಣ್ಯಾಧಿಕಾರಿ ಚೈತ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರಡಿಯನ್ನು ಹಿಡಿದು ಕಾಡಿಗೆ ಸ್ಥಳಾಂತರ ಮಾಡುವಂತೆ ಗ್ರಾಮಾಸ್ಥರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

wild animal attack

ಕೊಡಗಿನಲ್ಲಿ ಕಾಡಾನೆ ಪ್ರತ್ಯಕ್ಷ

ಕೊಡಗಿನ ಆನೆಕಾಡು ಬಳಿಯ ಮೆಟ್ನಳನ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕಾಡಾನೆಯೊಂದು ಪ್ರತ್ಯಕ್ಷಗೊಂಡಿತ್ತು. ಹೆದ್ದಾರಿಯಲ್ಲಿ ಸಾಗಿದ ಕಾಡಾನೆಯಿಂದ ಕೆಲಕಾಲ‌ ಆತಂಕ ಸೃಷ್ಟಿಯಾಗಿತ್ತು. ಆಹಾರ ಅರಸಿ ಕಾಡಿನಿಂದ ನಾಡಿಗೆ ಸಲಗವೊಂದು ಲಗ್ಗೆ ಇಟ್ಟಿತ್ತು. ಕಾಡಾನೆ ಓಡಾಟದ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಹಾಸನನಲ್ಲೂ ಕಾಡಾನೆಗಳ ಉಪಟಳ

ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದೆ. ಆನೆಗಳ ದಾಳಿಗೆ ಅಪಾರ ಪ್ರಮಾಣದ ಬಾಳೆ, ಕಾಫಿ ಬೆಳೆ ನಾಶವಾಗಿವೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಂಗಡಹಳ್ಳ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ.

ಪರಮೇಶ್ ಎಂಬುವವರ ಮನೆಯ ಸಮೀಪವೇ ಬಂದಿದ್ದ ಕಾಡಾನೆಗಳು, ಬಾಳೆ ಮತ್ತು ಕಾಫಿ ತೋಟವನ್ನು ಸಂಪೂರ್ಣ ನಾಶಪಡಿಸಿವೆ. ಬೆಳೆ ಕಳೆದುಕೊಂಡು ಪರಮೇಶ್ ಕಂಗಾಲಾಗಿದ್ದಾರೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಗ್ರಾಮದ ಅನತಿ ದೂರದಲ್ಲೇ ಕಾಡಾನೆಗಳ ಹಿಂಡು ಬೀಡುಬಿಟ್ಟಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಸೂಕ್ರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

wild animal attack

ಬಿಳಿಗಿರಿರಂಗನ ಬೆಟ್ಟಕ್ಕೆ ಕಾಡಾನೆ ಎಂಟ್ರಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಡಾನೆಯೊಂದು ಪ್ರತ್ಯಕ್ಷಗೊಂಡಿತ್ತು. ಪದೆ ಪದೇ ಬಿಳಿಗಿರಿರಂಗನ ಬೆಟ್ಟಕ್ಕೆ ಕಾಡಾನೆ ಬರುತ್ತಿದ್ದು, ಜನರು ಆತಂಕದಲ್ಲೇ ದಿನದೂಡುವಂತಾಗಿದೆ. ಬಿಳಿಗಿರಿರಂಗನ ಬೆಟ್ಟದ ಹಾಡಿಯಲ್ಲಿ ಕಾಡಾನೆ ಸಂಚಾರ ಮಾಡುತ್ತಿದ್ದು, ಸ್ಥಳೀಯರು ಸೈರನ್ ಹಾಕಿ ಓಡಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆಯೂ ಕೂಡ ಪೋಡಿಯಲ್ಲಿ ಆನೆಯೊಂದು ಕಾಣಿಸಿಕೊಂಡಿತ್ತು. ಇದೀಗ ಎಲ್ಲೆಂದರಲ್ಲಿ ಕಾಡಾನೆ ಸಂಚಾರದಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾಸನ

Hassan News: ಆಲೂರಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್‌ಬುಕ್‌, ಬ್ಯಾಗ್‌ ವಿತರಣೆ

Hassan News: ಬೆಂಗಳೂರಿನ ಹಂಜಳಿಗೆ ಕಾಳಿಂಗಪ್ಪ ವೆಲ್ಪೇರ್‌ ಅಸೋಸಿಯೇಷನ್‌ನ ಸಂಸ್ಥಾಪಕ ಎಚ್‌.ಕೆ. ಮಂಜುನಾಥ್‌, 30 ಸಾವಿರ ನೋಟ್ ಪುಸ್ತಕಗಳು, 1100 ಶಾಲಾ ಬ್ಯಾಗ್‌ಗಳನ್ನು ಹಾಸನ ಜಿಲ್ಲೆಯ ಆಲೂರು ತಾಲೂಕಿನ ಎಲ್ಲ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತವಾಗಿ ವಿತರಿಸಿದ್ದಾರೆ.

VISTARANEWS.COM


on

Hassan News Distribution of free notebook bag to government primary schools in Alur
Koo

ಹಾಸನ: ಬೆಂಗಳೂರಿನ ಹಂಜಳಿಗೆ ಕಾಳಿಂಗಪ್ಪ ವೆಲ್ಪೇರ್‌ ಅಸೋಸಿಯೇಷನ್ ವತಿಯಿಂದ ಹಾಸನ ಜಿಲ್ಲೆಯ (Hassan News) ಆಲೂರು ತಾಲೂಕಿನ ಎಲ್ಲ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು.

ಬೆಂಗಳೂರಿನ ಹಂಜಳಿಗೆ ಕಾಳಿಂಗಪ್ಪ ವೆಲ್ಪೇರ್‌ ಅಸೋಸಿಯೇಷನ್‌ನ ಸಂಸ್ಥಾಪಕ ಎಚ್‌.ಕೆ. ಮಂಜುನಾಥ್‌ ಅವರು, “ನಮ್ಮ ನಡಿಗೆ ಸರ್ಕಾರಿ ಶಾಲೆಯ ಕಡೆಗೆ ” ಎಂಬ ಅಭಿಯಾನವನ್ನು ಹಮ್ಮಿಕೊಂಡು ಸರ್ಕಾರಿ ಶಾಲೆಗಳ ಸಬಲೀಕರಣಗೊಳಿಸಲು ಕಳೆದ 12 ವರ್ಷಗಳಿಂದ ಈ ಕಾಯಕವನ್ನು ಮಾಡಿಕೊಂಡು ಬರುತಿದ್ದಾರೆ.

ಅಸೋಸಿಯೇಷನ್‌ನ ಸಂಸ್ಥಾಪಕ ಎಚ್‌.ಕೆ. ಮಂಜುನಾಥ್‌, 30 ಸಾವಿರ ನೋಟ್ ಪುಸ್ತಕಗಳು, 1100 ಶಾಲಾ ಬ್ಯಾಗ್‌ಗಳನ್ನು ಆಲೂರು ತಾಲೂಕಿನ ಎಲ್ಲ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನೋಟ್ ಪುಸ್ತಕಗಳನ್ನು, ಬ್ಯಾಗ್‌ಗಳನ್ನು ಉಚಿತವಾಗಿ ವಿತರಿಸಿದರು.

ಇದನ್ನೂ ಓದಿ: Stock Market: ಷೇರು ಮಾರುಕಟ್ಟೆಯಲ್ಲಿ ಮುಂದುವರಿದ ಗೂಳಿಯ ಅಬ್ಬರ; ಸಾರ್ವಕಾಲಿಕ ಎತ್ತರಕ್ಕೆ ಜಿಗಿದ ಸೆನ್ಸೆಕ್ಸ್

ನೋಟ್ ಬುಕ್ಸ್‌ನ ಕವರ್ ಪೇಜ್‌ನಲ್ಲಿ ಮುದ್ರಿಸಿರುವ 5 ಪಂಚ ಸೂತ್ರಗಳು ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿಯನ್ನು ನೀಡುವುದಲ್ಲದೇ ಪ್ರತಿ ಶಾಲೆಯಲ್ಲಿ ಪ್ರಮಾಣ ವಚನ ಬೋಧಿಸುವುದರೊಂದಿಗೆ ನೀಡಲಾಯಿತು. ಗುರುಹಿರಿಯರಲ್ಲಿ ಭಕ್ತಿ ಭಾವ, ವಿನಯ, ತಂದೆ ತಾಯಿಯನ್ನು ಕೊನೆಯವರೆಗೂ ನೋಡಿಕೊಳ್ಳುವುದು, ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಇರುವುದು, ಶಾಲೆಯೊಂದಿಗೆ ನಿಕಟ ಸಂಪರ್ಕ, ಯಾವುದೇ ಸಂದರ್ಭದಲ್ಲಿಯೂ ಹಣದ ಆಮಿಷಕ್ಕೆ ಒಳಗಾಗದೆ ಇರುವುದು ಇವು ಪಂಚ ಸೂತ್ರಗಳಾಗಿವೆ.

ಈ ಸಂದರ್ಭದಲ್ಲಿ ಹಂಜಳಿಗೆ ಕಾಳಿಂಗಪ್ಪ ವೆಲ್ಪೇರ್‌ ಅಸೋಸಿಯೇಷನ್‌ನ ಸಂಸ್ಥಾಪಕ ಎಚ್‌.ಕೆ. ಮಂಜುನಾಥ್, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್‌ ಪುಸ್ತಕ, ಬ್ಯಾಗ್‌ಗಳನ್ನು ವಿತರಣೆ ಮಾಡಿ, ಬಳಿಕ ಮಾತನಾಡಿದರು.

ಇದನ್ನೂ ಓದಿ: Toyota Kirloskar Motor: ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬ್ ಸ್ಥಾಪಿಸಲು ಐಐಎಸ್‌ಸಿಯೊಂದಿಗೆ ಕೈಜೋಡಿಸಿದ ಟಿಕೆಎಂ

ಕಾರ್ಯಕ್ರಮದಲ್ಲಿ ಪಿಯು ಕಾಲೇಜು ಪ್ರಾಚಾರ್ಯ ಕುಮಾರಪ್ಪ, ಎಚ್‌.ಎಂ. ಮಹಾದೇವಪ್ಪ, ಎಸ್‌ಡಿಎಂಸಿಯ ಶೇಖರ್, ಕಾಂತರಾಜ್, ರಾಜಣ್ಣ, ಶಾಲಾ ಶಿಕ್ಷಕರು, ಪೋಷಕರು ಪಾಲ್ಗೊಡಿದ್ದರು.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain : ರಾಜ್ಯದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಮನೆ ಕುಸಿತ, ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಗುಡ್ಡ ಕುಸಿತಕ್ಕೆ ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್ ಆಗಿದ್ದರಿಂದ ಇತ್ತ ಯಕ್ಷಗಾನ ಕಲಾವಿದನ ಮನೆಗೆ ಹಾನಿಯಾಗಿದೆ.

VISTARANEWS.COM


on

By

karnataka Rain
Koo

ಕಾರವಾರ/ಶಿವಮೊಗ್ಗ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ (Karnataka Rain) ಪ್ರಕರಣ ಹೆಚ್ಚಾಗುತ್ತಿದೆ. ರಸ್ತೆ ಮೇಲೆ ಗುಡ್ಡ ಕುಸಿದ ಪರಿಣಾಮ ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-206 ಬಂದ್ ಆಗಿದೆ. ವರ್ನಕೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕಾಏಕಿ ಗುಡ್ಡ ಕುಸಿದಿದೆ. ಗುಡ್ಡ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿ ಮೇಲೆ ದೊಡ್ಡ ಮರ ಹಾಗೂ ಮಣ್ಣು ಬಿದ್ದಿದೆ. ಇದರಿಂದ ವಾಹನ ಸವಾರರು ಆತಂಕಗೊಂಡಿದ್ದಾರೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಭಾರಿ ಮಳೆಗೆ ಕುಸಿದು ಬಿದ್ದ ಯಕ್ಷಗಾನ ಕಲಾವಿದನ ಮನೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮದಲ್ಲಿ ಭಾರಿ ಮಳೆಯಾಗುತ್ತಿದೆ. ಭಾರಿ ಮಳೆಗೆ ಹೊನ್ನೆತಾಳು ಗ್ರಾಮದ ಯಕ್ಷಗಾನ ಕಲಾವಿದ ನಂದನ್‌ ಶೆಟ್ಟಿ ಅವರ ಮನೆ ಕುಸಿದು ಬಿದ್ದಿದೆ. ನಂದನ ಶೆಟ್ಟಿ‌ ಮಂದಾರ್ತಿ ಮೇಳದಲ್ಲಿ ಯಕ್ಷಗಾನ ಕಲಾವಿದರಾಗಿದ್ದಾರೆ. ಮನೆ ಕುಸಿಯುವಾಗ ಅದೃಷ್ಟ ವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಕಳೆದುಕೊಂಡು ಕಂಗಲಾಗಿರುವ ಕಲಾವಿದನ ಕುಟುಂಬವು ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

karnataka Rain

ಕೊಡಗಿನಲ್ಲಿ ಇಲ್ಲೆಲ್ಲ ನಿಷೇಧ

ಮಹಾರಾಷ್ಟ್ರ ಫಾಲ್ಸ್ ದುರಂತದ ಬೆನ್ನೆಲ್ಲೆ ಪ್ರವಾಸಿ ತಾಣಗಳ ಬಗ್ಗೆ ಕೊಡಗು ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದೆ. ಪ್ರವಾಸಿಗರು ಜಲಪಾತಗಳು, ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ನಿಷೇಧ ಹೇರಿದೆ. ನೀರಿನಲ್ಲಿ ಇಳಿದು ಕ್ರೀಡೆ, ಫೋಟೋ ತೆಗೆಯುವ ದುಸ್ಸಾಹಕ್ಕೆ ಕಡಿವಾಣ ಹಾಕಲಾಗಿದೆ. ಮಳೆಗಾಲದಲ್ಲಿ ಹೆಚ್ಚುತ್ತಿರುವ ಜಲ ಸಂಬಂಧಿ ಸಾವಿನ ಪ್ರಕರಣಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಆದೇಶ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ. ನದಿಗಳಲ್ಲಿ ನಡೆಯುವ ರ‍್ಯಾಫ್ಟಿಂಗ್ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇಲ್ಲ ಎಂದಿದ್ದಾರೆ.

ಮನೆ ಮೇಲೆ ಬಿದ್ದ ರಸ್ತೆ ಬದಿಯ ತಡೆಗೋಡೆ; ಜೀಪ್ ಸಂಪೂರ್ಣ ಜಖಂ

ಚಿಕ್ಕಮಗಳೂರಿನಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮನೆಯ ಮೇಲೆ ರಸ್ತೆ ಬದಿಯ ತಡೆಗೋಡೆ ಬಿದ್ದು,
ಮನೆಯಂಗಳದಲ್ಲಿ ನಿಲ್ಲಿಸಿದ್ದ ಜೀಪ್ ಸಂಪೂರ್ಣ ಜಖಂಗೊಂಡಿದೆ. ಕಳಸ ತಾಲೂಕಿನ ಕಚ್ಚಿ ಗಾನೆ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ರಂಗನಾಥ್ ಎಂಬುವರ ಮನೆಗೆ ಹಾನಿಯಾಗಿದ್ದು, ಧರೆ ಇನ್ನಷ್ಟು ಕುಸಿಯುವ ಆತಂಕ ಹೆಚ್ಚಿದೆ.
ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಈ ತಾಣಗಳಿಗೆ ಹೋಗಬೇಡಿ

ಮಂಗಳೂರು: ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದಾಗಿ (Rain News) ಹೊಳೆ- ಹಳ್ಳಗಳು ತುಂಬಿಕೊಂಡಿದ್ದು, ಜಲಪಾತಗಳು (falls) ಭೋರ್ಗರೆಯುತ್ತಿವೆ. ಆದರೆ ಅಪಾಯವೂ ಇರುವುದರಿಂದಾಗಿ, ಜಲಪಾತಗಳತ್ತ ತೆರಳದಂತೆ ಪ್ರವಾಸಿಗರಿಗೆ ನಿರ್ಬಂಧ (No Entry) ವಿಧಿಸಲಾಗಿದೆ. ಬೆಟ್ಟಗುಡ್ಡಗಳಿಗೆ ಟ್ರೆಕ್ಕಿಂಗ್‌ (Trekking) ಹೋಗುವವರಿಗೂ ಮುಂದಿನ ಸೂಚನೆ ಸಿಗುವವರೆಗೂ ಮುಂದುವರಿಯದಂತೆ ಸೂಚಿಸಲಾಗಿದೆ.

ಈ ನಾಲ್ಕು ಜಿಲ್ಲೆಗಳಲ್ಲಿ ಹಲವು ಪ್ರವಾಸಿ ಸ್ಥಳಗಳಿಗೆ (tourist places) ಭೇಟಿ ನೀಡಲು ಅರಣ್ಯ ಇಲಾಖೆ (Forest Department) ನಿರ್ಬಂಧ ವಿಧಿಸಿದೆ. ವನ್ಯಜೀವಿ (Wildlife) ವಲಯದ ವ್ಯಾಪ್ತಿಗೆ ಬರುವ ಕಾಡುಗಳು, ಬೆಟ್ಟಗಳು- ಜಲಪಾತಗಳ ಪ್ರವೇಶ ನಿರ್ಬಂಧಿಸಲಾಗಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ನರಸಿಂಹಗಡ (ಗಡಾಯಿಕಲ್ಲು) ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಜಲಪಾತಗಳತ್ತ ತೆರಳದಂತೆ ನಿರ್ಬಂಧಿಸಲು ಬೆಳ್ತಂಗಡಿ ಆರ್‌ಎಫ್‌ಓಗೆ ಕುದುರೆಮುಖ ಸಿಎಫ್ ಆದೇಶ ನೀಡಿದ್ದಾರೆ.

ಯಲ್ಲಾಪುರ ಫಾಲ್ಸ್‌ಗಳಿಗೆ ನಿರ್ಬಂಧ

ಕಾರವಾರ: ಯಲ್ಲಾಪುರ ತಾಲೂಕಿನಾದ್ಯಂತ ಅಬ್ಬರದ ಮಳೆ ಹಿನ್ನೆಲೆಯಲ್ಲಿ ಧಾರಾಕಾರ ಮಳೆಗೆ ಜಲಪಾತ ಮೈದುಂಬಿ ಧುಮುಕುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಲವು ಜಲಪಾತಗಳಿಗೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಯಲ್ಲಾಪುರದ ಸಾತೊಡ್ಡಿ ಜಲಪಾತ ಇದರಲ್ಲಿ ಮುಖ್ಯವಾಗಿದ್ದು, ಮಳೆಗಾಲದಲ್ಲಿ ವಿವಿಧೆಡೆಗಳಿಂದ ಜಲಪಾತ ವೀಕ್ಷಣೆಗೆ ಇಲ್ಲಿ ಪ್ರವಾಸಿಗರು ಬರುತ್ತಾರೆ. ಜಲಪಾತ ಅಪಾಯಕಾರಿ ಮಟ್ಟದಲ್ಲಿ ತುಂಬಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ತಪ್ಪಿಸಲು ಸ್ಥಳೀಯ ಆಡಳಿತ ಕ್ರಮ ಕೈಗೊಂಡಿದೆ.

ಗಂಗಾವಳಿ ನದಿ ನೀರಿ‌ನ ಪ್ರಮಾಣ ಹೆಚ್ಚಳದಿಂದ ತಾಲೂಕಿನ ಹಲವು ಫಾಲ್ಸ್‌ಗಳಿಗೆ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹಾಕಲಾಗಿದೆ. ಯಲ್ಲಾಪುರದ ಶಿರಲೆ ಫಾಲ್ಸ್, ಕಾನೂರು ಫಾಲ್ಸ್, ಕುಳಿ ಮಾಗೋಡು ಜಲಪಾತಗಳಲ್ಲಿ ಅರಣ್ಯ ಇಲಾಖೆ, ಸ್ಥಳೀಯ ಗ್ರಾಮ ಅರಣ್ಯ ಸಮಿತಿಯಿಂದ ಪ್ರವೇಶ ನಿಷೇಧ ಮಾಡಲಾಗಿದೆ. ತಾಲೂಕಿನ ಪಣಸಗುಳಿ ಸೇತುವೆ ಮುಳುಗಡೆ ಹಾಗೂ ಗಂಗಾವಳಿ ನದಿ ಉಕ್ಕಿ ಹರಿಯುತ್ತಿರುವ ಹಿನ್ನಲೆ ಸಂಚಾರ ನಿರ್ಬಂಧಿಸಲಾಗಿದೆ.

ಶೃಂಗೇರಿಯಲ್ಲಿ ತುಂಬಿಕೊಂಡ ತುಂಗೆ

ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಾಗಿ ತುಂಗಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಂದಿದೆ. ತುಂಗಾ ನದಿ ಅಪಾಯದ ಅಂಚಿನಲ್ಲಿ ಹರಿಯುತ್ತಿದೆ. ಶೃಂಗೇರಿ ಶಾರದಾಂಬಾ ದೇವಾಲಯದ ದಡದವರೆಗೆ ತುಂಗೆಯ ನೀರು ಬಂದಿದೆ. ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗಿವೆ.

ಶಾಲೆಗಳಿಗೆ ರಜೆ

ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಿ ಬೆಳ್ತಂಗಡಿ ಹಾಗೂ ಬಂಟ್ವಾಳ ತಹಶೀಲ್ದಾರ್ ಆದೇಶ ನೀಡಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ಶಿಕ್ಷಣ ವಲಯ ವ್ಯಾಪ್ತಿಯಲ್ಲಿ ಒಂದರಿಂದ ಹತ್ತನೇ ತರಗತಿವರೆಗೆ ರಜೆ ನೀಡಲಾಗಿದೆ. ಭೌಗೋಳಿಕವಾಗಿ ತಗ್ಗು ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ನೀಡಲಾಗಿದೆ ಎಂದು ಉಡುಪಿ ಡಿಸಿ ಡಾ. ವಿದ್ಯಾ ಕುಮಾರಿ ಮಾಹಿತಿ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Anganwadi workers should not be worried says Minister Lakshmi Hebbalkar
ಬೆಂಗಳೂರು5 mins ago

Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

FIR Against Customer
ವಿದೇಶ14 mins ago

Viral News: 1 ಸಾವಿರ ರೂ. ಬಿಲ್‌ಗೆ 2.5 ಲಕ್ಷ ರೂ. ಟಿಪ್ಸ್‌ ಕೊಟ್ಟ ಗ್ರಾಹಕ; ಕೇಸು ದಾಖಲಿಸಿದ ಕೆಫೆ!

Rohit Sharma
ಪ್ರಮುಖ ಸುದ್ದಿ17 mins ago

Rohit Sharma : ನರೇಂದ್ರ ಮೋದಿ ರೋಹಿತ್​ ಶರ್ಮಾಗೆ ಗುಟ್ಟಾಗಿ ಹೇಳಿದ್ದೇನು? ಹೆಚ್ಚಿದ ಕುತೂಹಲ

Hemant Soren
ದೇಶ21 mins ago

Hemant Soren: 5 ತಿಂಗಳ ಜೈಲುವಾಸದ ಬಳಿಕ ಮತ್ತೆ ಜಾರ್ಖಂಡ್‌ ಸಿಎಂ ಆಗಿ ಹೇಮಂತ್‌ ಸೊರೆನ್‌ ಪ್ರಮಾಣವಚನ!

Opposition party leader R Ashok latest statement about muda scam
ಕರ್ನಾಟಕ28 mins ago

R Ashok: ಮುಡಾದಲ್ಲಿ ಎಲ್ಲರೂ ಗ್ಯಾಂಗ್‌ ಮಾಡಿಕೊಂಡು ಹಗರಣ ಮಾಡಿದ್ದಾರೆ; ಆರ್‌. ಅಶೋಕ್‌ ಆರೋಪ

Pregnancy Fashion
ಫ್ಯಾಷನ್31 mins ago

Pregnancy Fashion: ಪ್ರೆಗ್ನೆನ್ಸಿ ಸ್ಟೈಲಿಂಗ್‌ನಲ್ಲಿ ಮರೆಯದೇ ಗಮನದಲ್ಲಿಟ್ಟುಕೊಳ್ಳಬೇಕಾದ ಸಂಗತಿಗಳಿವು!

Viral Video
Latest34 mins ago

Viral Video: ಬುಲೆಟ್‌ ಮೇಲೆ ಬಂದ ಹುಡುಗಿ ಆಟೊ ಚಾಲಕನ ಬುರುಡೆ ಒಡೆದಳು!

PM Modi Russia Visit
ದೇಶ39 mins ago

PM Modi Russia Visit: ಜುಲೈ 8ರಿಂದ ಮೋದಿ ರಷ್ಯಾ ಪ್ರವಾಸ; ಉಕ್ರೇನ್‌ ಆಕ್ರಮಣದ ಬಳಿಕ ಮೊದಲ ಭೇಟಿ

Job Alert
ಉದ್ಯೋಗ50 mins ago

Job Alert: ಧಾರವಾಡ ಕೃಷಿ ವಿಜ್ಞಾನ ವಿವಿಯಲ್ಲಿ 6 ಹುದ್ದೆಗಳಿಗೆ ಅರ್ಜಿ ಆಹ್ವಾನ

Reels Obsession who gave dummy gun To Reels Obsession Sandalwood technician now trouble
ಕ್ರೈಂ57 mins ago

Reels Obsession : ಶೋಕಿಲಾಲನ ವಿರುದ್ಧ ಚಿತ್ರದುರ್ಗದಲ್ಲೂ ಕೇಸ್‌; ಡಮ್ಮಿ ಗನ್‌ ಕೊಟ್ಟ ಸ್ಯಾಂಡಲ್‌ವುಡ್‌ ಟೆಕ್ನಿಷಿಯನ್‌ಗೆ ಸಂಕಷ್ಟ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ3 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ4 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ5 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ6 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ7 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

ಟ್ರೆಂಡಿಂಗ್‌