ಹಾವೇರಿ: ಹಾವೇರಿ ಜಿಲ್ಲೆಯ ಹಾವೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ರುದ್ರಪ್ಪ ಲಮಾಣಿ ಅವರು 93,827 ಮತಗಳನ್ನು ಪಡೆದು ಜಯಭೇರಿ ಬಾರಿಸಿದ್ದಾರೆ.
ಮೀಸಲು ಕ್ಷೇತ್ರವಾದ ಇಲ್ಲಿ ಈ ಬಾರಿ ಇಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ತುಕಾರಾಂ ಮಾಳಗಿ, ಬಿಜೆಪಿ ಅಭ್ಯರ್ಥಿಯಾಗಿ ಗವಿಸಿದ್ದಪ್ಪ ದ್ಯಾಮನ್ನವರ್, ಕಾಂಗ್ರೆಸ್‌ನಿಂದ ರುದ್ರಪ್ಪ ಲಮಾಣಿ ಕಣದಲ್ಲಿದ್ದರು. ಬಿಜೆಪಿ ಅಭ್ಯರ್ಥಿ ಗವಿಸಿದ್ದಪ್ಪ ದ್ಯಾಮನ್ನವರ್ 81,912 ಮತ ಪಡೆದು ಎರಡನೇ ಸ್ಥಾನಕ್ಕೆ ಹೋಗಿದ್ದಾರೆ.
2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ನೆಹರೂ ಓಲೇಕಾರ 86,565 ಮತ ಪಡೆದು ಗೆಲುವು ಸಾಧಿಸಿದ್ದರು. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನ ರುದ್ರಪ್ಪ ಮಾನಪ್ಪ ಲಮಾಣಿ 11304 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು.
ಇಲ್ಲಿ ಇರುವ ಒಟ್ಟು ಮತಗಳು 217,107. ಪುರುಷರು 112,695 ಹಾಗೂ ಸ್ತ್ರೀಯರು 104,405.
Read more: Madhugiri Election Results: ಮಧುಗಿರಿಯಲ್ಲಿ ಗೆಲುವಿನ ನಗೆ ಬೀರಿದ ಕೆ.ಎನ್. ರಾಜಣ್ಣ