Officer Dismissed: ಸುಳ್ಳು ದಾಖಲೆ ನೀಡಿ ನೇಮಕ; ಸಹಾಯಕ ತೋಟಗಾರಿಕೆ ಅಧಿಕಾರಿ ವಜಾ - Vistara News

ಕರ್ನಾಟಕ

Officer Dismissed: ಸುಳ್ಳು ದಾಖಲೆ ನೀಡಿ ನೇಮಕ; ಸಹಾಯಕ ತೋಟಗಾರಿಕೆ ಅಧಿಕಾರಿ ವಜಾ

Officer Dismissed: ಸತ್ಯಾಂಶ ಮರೆಮಾಚಿ ಅಕ್ರಮವಾಗಿ ನೇಮಕವಾದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ದೂರರ್ಜಿ ಪರಿಶೀಲನಾ ಸಮಿತಿ ಆರೋಪಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡಿತ್ತು. ಹೀಗಾಗಿ ಹಾವೇರಿ ಸಹಾಯಕ ತೋಟಗಾರಿಕೆ ಅಧಿಕಾರಿ ಅಮಾನತುಗೊಂಡಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾವೇರಿ: ಸುಳ್ಳು ದಾಖಲೆ ನೀಡಿ ಅಕ್ರಮವಾಗಿ ನೇಮಕವಾಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಹಾವೇರಿ ಸಹಾಯಕ ತೋಟಗಾರಿಕೆ ಅಧಿಕಾರಿ ಬಸವರಾಜಪ್ಪ ನಿಂಗಪ್ಪ ಬರೇಗಾರ ವಜಾಗೊಂಡಿದ್ದಾರೆ. ಸತ್ಯಾಂಶ ಮರೆಮಾಚಿ ಅಕ್ರಮವಾಗಿ ನೇಮಕವಾದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ದೂರರ್ಜಿ ಪರಿಶೀಲನಾ ಸಮಿತಿಯು ಪರಿಶೀಲನೆ ನಡೆಸಿ ವರದಿ ನೀಡಿತ್ತು. ನಿಯಮಬಾಹಿರವಾಗಿ ನೇಮಕಾಗಿರುವುದು ತಿಳಿದುಬಂದ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ವಜಾಗೊಳಿಸಿ (Officer Dismissed) ತೋಟಗಾರಿಕಾ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ತೋಟಗಾರಿಕೆ ಇಲಾಖೆಯಲ್ಲಿ ಬಸವರಾಜಪ್ಪ ನಿಂಗಪ್ಪ ಬರೇಗಾರ ದಿನಗೂಲಿ ನೌಕರನಾಗಿದ್ದುಕೊಂಡು ಹಾವೇರಿ ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆ ಬಡ್ತಿ ಪಡೆದಿದ್ದರು. 1981 ರಿಂದ 1991ರವರೆಗೆ ದಿನಗೂಲಿ ನೌಕರನಾಗಿ ಸೇವೆ ಸಲ್ಲಿಸಿದ್ದಾಗಿ ಸುಳ್ಳು ದಾಖಲೆ ನೀಡಿದ್ದರು. ಇದರಿಂದ 1992ರಲ್ಲಿ ತೋಟಗಾರ ಹುದ್ದೆಗೆ ನೇಮಕವಾಗಿದ್ದರು. ನಂತರ 2012ರಲ್ಲಿ ಜ್ಯೇಷ್ಠತೆಯನ್ನು ಪರಿಗಣಿಸಿ ಸಹಾಯಕ ತೋಟಗಾರಿಕೆ ಅಧಿಕಾರಿಯಾಗಿ ಮುಂಬಡ್ತಿ ನೀಡಲಾಗಿತ್ತು. ಆದರೆ ಇವರ ಹುದ್ದೆಯನ್ನು ನಿಯಮಬಾಹಿರವಾಗಿ ಸಕ್ರಮಗೊಳಿಸಲಾಗಿದೆ ಎಂದು ದೂರು ಸಲ್ಲಿಕೆಯಾಗಿತ್ತು.

ಇದನ್ನೂ ಓದಿ | PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

1981ರಿಂದ 1991ರವರೆಗೆ ದಿನಗೂಲಿ ನೌಕರನಾಗಿ ಕೆಲಸ ಮಾಡಿರುವುದಾಗಿ ದಾಖಲೆ ನೀಡಿದ್ದರು. ಆದರೆ, ಆ ಅವಧಿಯಲ್ಲಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ರೆಗ್ಯುಲರ್‌ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡಿದ್ದರು ಎಂಬುವುದು ದೃಢಪಟ್ಟಿದೆ. 10 ವರ್ಷಗಳ ನಿರಂತರ ಸೇವೆ ಪೂರೈಸದೆ ಸಕ್ರಮಾತಿ ಷರತ್ತುಗಳನ್ನು ಉಲ್ಲಂಘಿಸಿ ನೇಮಕವಾಗಿರುವುದು ಸಮಿತಿ ಪರಿಶೀಲನೆ ವೇಳೆ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಹಾವೇರಿ ಸಹಾಯಕ ತೋಟಗಾರಿಕೆ ಅಧಿಕಾರಿ ಬಸವರಾಜಪ್ಪ ನಿಂಗಪ್ಪ ಬರೇಗಾರ ಅವರನ್ನು ಇಲಾಖೆ ನಿರ್ದೇಶಕರು ಸೇವೆಯಿಂದ ವಜಾಮಾಡಿದ್ದಾರೆ.

ಜಾತಿ ನಿಂದನೆ ಆರೋಪ; ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ, ಕುಲಸಚಿವರ ವಿರುದ್ಧ ಕೇಸ್‌

ಕಲಬುರಗಿ: ಜಾತಿ ನಿಂದನೆ ಆರೋಪದಲ್ಲಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ) ಕುಲಪತಿ ಹಾಗೂ ಕುಲಸಚಿವರ ವಿರುದ್ಧ ಪ್ರಕರಣ ದಾಖಲಾಗಿದೆ. ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿ ನಂದಪ್ಪ ನೀಡಿದ ದೂರಿನ ಮೇರೆಗೆ ನರೋಣಾ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ | Abu Salem: ಮುಂಬೈ ಸ್ಫೋಟದ ಪ್ರಮುಖ ಆರೋಪಿ, ಭೂಗತ ಪಾತಕಿ ಅಬು ಸಲೇಂನನ್ನು ಮನ್ಮಾಡ್‌ಗೆ ರೈಲಿನಲ್ಲಿ ಕರೆತಂದ ಪೊಲೀಸರು

ಆ.1 ರಂದು ಸಿಯುಕೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ವೇಳೆ ಸಂಶೋಧನಾ ವಿದ್ಯಾರ್ಥಿ ನಂದಪ್ಪ ಅವರನ್ನು ವಿವಿ ಕ್ಯಾಂಪಸ್ ಒಳಗೆ ಸಿಬ್ಬಂದಿ ಬಿಟ್ಟಿಲ್ಲ. ಎಸ್‌ಸಿ ಎಂಬ ಕಾರಣಕ್ಕೆ ನನ್ನನ್ನು ಒಳಗೆ ಬಿಡಬೇಡಿ ಎಂದು ಕುಲಪತಿ ಬಟ್ಟೂ ಸತ್ಯನಾರಾಯಣ ಹಾಗೂ ಕುಲಸಚಿವ ಆರ್.ಆರ್. ಬಿರಾದಾರ್ ಹೇಳಿದ್ದಾರೆ. ಹೀಗಾಗಿ ಇಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Road Accident : ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು

Road Accident : ಬೊಮ್ಮಸಂದ್ರ ಫ್ಲೈ ಓವರ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ವ್ಯಕ್ತಿ ಮೃತಪಟ್ಟರೆ, ಹಿಂಬದಿ ಕುಳಿತಿದ್ದ ಮಹಿಳೆಗೆ ಕಾಲುಗಳು ತುಂಡಾಗಿದ್ದು, ಮಗುವೊಂದು ಪವಾಡ ಸದೃಶವಾಗಿ ಪಾರಾಗಿದೆ.

VISTARANEWS.COM


on

By

Road Accident
Koo

ಆನೇಕಲ್: ಬೆಂಗಳೂರು- ಹೊಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದೆ. ಬೊಮ್ಮಸಂದ್ರ ಫ್ಲೈ ಓವರ್ ಬಳಿ ಮುಂದೆ ಸಾಗುತ್ತಿದ್ದ ಬೈಕ್‌ಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟರೆ, ಸವಾರನ ಪತ್ನಿಗೆ ಎರಡು‌ ಕಾಲು ಕಟ್ ಆಗಿವೆ. ಸಣ್ಣ ಪುಟ್ಟ ಗಾಯಗಳಿಂದ ಮಗು ಪ್ರಾಣಪಾಯದಿಂದ ಪಾರಾಗಿದ್ದಾರೆ.

ದಂಪತಿ ಬೈಕ್‌ನಲ್ಲಿ ಬೆಂಗಳೂರು ಕಡೆಯಿಂದ ಬರುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಹಾರಿ ಬಿದ್ದಿದ್ದಾರೆ. ಕೆಳಗೆ ಬಿದ್ದ ಸವಾರನ ಮೇಲೆ ಹರಿದು, ಕರುಳು ಹೊರಗೆ ಬಂದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ಮಹಿಳೆಯ ಎರಡು ಕಾಲುಗಳ ಹರಿದಿದೆ. ರಸ್ತೆಯಲ್ಲಿ ಒದ್ದಾಡುತ್ತಿದ್ದ ಗಾಯಾಳು ಮಹಿಳೆಯನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಲಾರಿಯನ್ನು ವಶಕ್ಕೆ ಪಡೆಯಲಾಗಿದ್ದು, ಅಪಘಾತದ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Road Accident : ಇನ್ನೊಂದು ವಾರದಲ್ಲಿ ಮಗಳ ಮದುವೆ ಅಂತ ಓಡಾಡುತ್ತಿದ್ದ ಅಪ್ಪ.. ಅಪಘಾತದಲ್ಲಿ ಸಾವು

ಸ್ಟೇರಿಂಗ್ ರಾಡ್ ತುಂಡಾಗಿ ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿ

ಹಳ್ಳದ ಸೇತುವೆ ತಡೆಗೋಡೆಗೆ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಉಳಿದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನಂದಿಹಾಳ ಬಳಿ ಅಪಘಾತ ನಡೆದಿದೆ.

Drowned in Water
Drowned in Water

ಕಲ್ಯಾಣ ಸಾರಿಗೆ ಬಸ್ ಸ್ಟೇರಿಂಗ್ ರಾಡ್ ತುಂಡಾಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿಯಾಗಿದೆ. ಮಾನ್ವಿ- ಸಿಂಧನೂರು ಮಾರ್ಗದ ಬಸ್ ಇದಾಗಿದ್ದು, ಗಾಯಾಳುಗಳು ಮಾನ್ವಿ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Zameer Ahmed Khan: ಎಚ್‌ಡಿಕೆ ಪ್ಯಾಂಟ್‌ನಲ್ಲಿ ಖಾಕಿ ಚೆಡ್ಡಿ ಇದೆ, ಅವರ ಆಸ್ತಿಯಿಂದ 3 ಬಜೆಟ್‌ ಮಾಡಬಹುದು ಎಂದ ಜಮೀರ್‌

ಚನ್ನಪಟ್ಟಣದಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಸಚಿವ ಜಮೀರ್ ಅಹ್ಮದ್‌ ಮಾತನಾಡಿದ್ದಾರೆ. ಬಿಜೆಪಿ ಅಧಿಕಾರದಲ್ಲಿ ಬಡವರಿಗೆ ಒಂದು‌ ಮನೆಯನ್ನೂ ಕೊಟ್ಟಿಲ್ಲ. ಯಾಕೆ ಬಿಜೆಪಿ-ಜೆಡಿಎಸ್‌ಗೆ ಬಡವರ ಬಗ್ಗೆ ಕಾಳಜಿ ಇಲ್ವಾ ಎಂದು ಪ್ರಶ್ನಿಸಿದ್ದಾರೆ.

VISTARANEWS.COM


on

Zameer Ahmed Khan
Koo

ರಾಮನಗರ: ಕುಮಾರಸ್ವಾಮಿ ಕೇವಲ 37 ಸೀಟ್ ಗೆದ್ದು ನಮ್ಮ ಜೊತೆ ಬಂದಿದ್ದರು. ಅವರದು ಮ್ಯಾಚ್ ಫಿಕ್ಸಿಂಗ್, ಅವರನ್ನು ನಂಬಬೇಡಿ ಅಂತ ಕಾಂಗ್ರೆಸ್‌ನವರಿಗೆ ಅಂದೇ ಹೇಳಿದ್ದೆ. ನಾನು ಅವರನ್ನು ತುಂಬಾ ಹತ್ತಿರದಿಂದ ನೋಡಿದ್ದೇನೆ. ಕುಮಾರಸ್ವಾಮಿ ಪ್ಯಾಂಟ್‌ನಲ್ಲಿ ಖಾಕಿ ಚೆಡ್ಡಿ ಇದೆ. ಬಿಜೆಪಿಗಿಂತ ಬಿಗಿಯಾದ ಖಾಕಿ ಚೆಡ್ಡಿ ಹಾಕಿದ್ದಾರೆ ಎಂದು ನಾನು ಹೇಳಿದಾಗ ಕೆಲವರು ಕೇಳಲಿಲ್ಲ ಎಂದು ಸಚಿವ ಜಮೀರ್ ಅಹ್ಮದ್‌ (Zameer Ahmed Khan) ವಾಗ್ದಾಳಿ ನಡೆಸಿದರು.

ಚನ್ನಪಟ್ಟಣದಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿ ಬಡವರಿಗೆ ಒಂದು‌ ಮನೆಯನ್ನೂ ಕೊಟ್ಟಿಲ್ಲ. ಯಾಕೆ ಬಿಜೆಪಿ-ಜೆಡಿಎಸ್‌ಗೆ ಬಡವರ ಬಗ್ಗೆ ಕಾಳಜಿ ಇಲ್ವಾ? ಕುಮಾರಸ್ವಾಮಿ ಅವರೇ ರಾಮನಗರದ ಜನ್ಮಕೊಟ್ಟ ಕ್ಷೇತ್ರ ಅಂತೀರಿ. ರಾಮನಗರದಲ್ಲಿ ಎಷ್ಟು ಮನೆ ಕೊಟ್ಟಿದ್ದೀರಿ? ನಿಮಗೆ ಓಪನ್ ಚಾಲೆಂಜ್ ಹಾಕುತ್ತೀನಿ, ಕೇವಲ 330 ಮನೆ ಕೊಟ್ಟಿದ್ದೀರಿ. ನಾವು ಎಷ್ಟು ಮನೆ ಕೊಟ್ಟಿದ್ದೀವಿ ಬನ್ನಿ ಚರ್ಚೆ ಮಾಡೋಣ ಎಂದು ಸವಾಲು ಹಾಕಿದರು.

ಚನ್ನಪಟ್ಟಣಕ್ಕೆ 5 ಸಾವಿರ ಮನೆ ಮಂಜೂರು ಮಾಡುತ್ತೇವೆ

ಡಿ.ಕೆ.ಸುರೇಶ್ ಸೋತಿದ್ದು ನನಗೆ ಹೊಟ್ಟೆ ಉರೀತಿದೆ. ಕ್ಷೇತ್ರದಲ್ಲಿ ಕ್ಲರ್ಕ್ ರೀತಿ ಕೆಲಸ ಮಾಡಿದ್ದಾರೆ. ಅವರು ಕ್ಷೇತ್ರಕ್ಕಾಗಿ ಹಲವು ರಾತ್ರಿ ಕೆಲಸ ಮಾಡಿದ್ದಾರೆ. ಅಂತವರು ಸೋತಿದ್ದರಿಂದ ಹೊಟ್ಟೆ ಉರೀತಿದೆ. ಡಿ.ಕೆ. ಸುರೇಶ್ ಅವರ 1 ಪರ್ಸೆಂಟ್ ಕೆಲಸ ಕುಮಾರಸ್ವಾಮಿ ಮಾಡಿಲ್ಲ. ಕೇವಲ ಡಂಗುರ ಹೊಡೆದುಕೊಂಡು ಬರುತ್ತಾರೆ. ಚನ್ನಪಟ್ಟಣಕ್ಕೆ ಸಾಕಷ್ಟು ಅಭಿವೃದ್ಧಿ ಕಾಮಗಾರಿ ಬೇಕು ಅಂತ ಡಿ.ಕೆ.ಸುರೇಶ್ ಕೇಳಿದ್ದರು. ಹೀಗಾಗಿ ಚನ್ನಪಟ್ಟಣಕ್ಕೆ ಐದು ಸಾವಿರ ಮನೆ ಮಂಜೂರು ಮಾಡುತ್ತೇವೆ, ಇನ್ನು 15 ದಿನಗಳಲ್ಲಿ 5 ಸಾವಿರ ಮನೆ ಮಂಜೂರು ಮಾಡುತ್ತೇವೆ. ಮೈನಾರಿಟಿ ಅಭಿವೃದ್ಧಿಗೆ 10ಕೋಟಿ ಹಣ ಕೊಡುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್‌ ಘೋಷಣೆ ಮಾಡಿದರು.

ಬಿಜೆಪಿ-ಜೆಡಿಎಸ್ ಪಾದಯಾತ್ರೆಯಿಂದ ಏನೂ ಆಗಲ್ಲ. ನಾವೆಲ್ಲಾ ಇರೋವರೆಗೂ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಏನೂ‌ ಮಾಡೋಕಾಗಲ್ಲ. ಯಾರೋ ಅವರನ್ನು ಮುಟ್ಟೋಕೆ ಸಾಧ್ಯವಿಲ್ಲ. ನಾವೆಲ್ಲಾ ನಮ್ಮ ನಾಯಕರ ಜೊತೆ ಇದ್ದೀವಿ. ಡಿಕೆಶಿ ಆಸ್ತಿ ಬಗ್ಗೆ ಬಿಚ್ಚಿಡ್ತೀನಿ ಅಂತ ಕುಮಾರಸ್ವಾಮಿ ಹೇಳುತ್ತಿದ್ದಾರೆ. ಕುಮಾರಸ್ವಾಮಿ ನಿಮ್ಮ ಕುಟುಂಬದ ಆಸ್ತಿ ತೆಗೆದರೆ ಕರ್ನಾಟಕದ 3 ಬಜೆಟ್ ಮಾಡಬಹುದು. ನಿಮ್ಮ ಅಣ್ಣ, ಅಕ್ಕ, ಬಾವ, ಅನುಸೂಯಕ್ಕ ಎಲ್ಲರ ಆಸ್ತಿ ತೆಗಿಯಿರಿ. ದಯಮಾಡಿ ಎರಡು ಬಜೆಟ್ ಗಾಗುವಷ್ಟಾದರೂ ಜನರಿಗೆ ಕೊಡಿ ಎಂದು ಕುಮಾರಸ್ವಾಮಿಗೆ ಒತ್ತಾಯ ಮಾಡಿದರು.

ಇದನ್ನೂ ಓದಿ | PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

ಯಾವ ಉದ್ದೇಶಕ್ಕೆ ಪಾದಯಾತ್ರೆ ಮಾಡುತ್ತಿದ್ದೀರಿ: ಪರಮೇಶ್ವರ್

ಗೃಹಸಚಿವ ಜಿ.ಪರಮೇಶ್ವರ್ ಮಾತನಾಡಿ, ಪಾದಯಾತ್ರೆ ಬೇಡ ಅಂದವರು ಪೋಟೊದಲ್ಲಿ ಮುಂದೆ ನಿಂತಿದ್ದಾರೆ. ಪಾದಯಾತ್ರೆ ಮಾಡಲೇಬೇಕು ಅಂತಿರುವ ಬಿಜೆಪಿ ಅಧ್ಯಕ್ಷರು ಹಿಂದೆ ನಿಂತಿದ್ದಾರೆ. ಇದರ ಅರ್ಥ ಏನು ಅಂತ ಹೇಳಬೇಕು. ನಿನ್ನೆ ಬಿಜೆಪಿ ನಾಯಕ ಯತ್ನಾಳ್ ಒಂದು ಮಾತು ಹೇಳಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಭ್ರಷ್ಟಾಚಾರಿಗಳು ಪಾದಯಾತ್ರೆ ಮಾಡ್ತಿದ್ದಾರೆ ಎಂದಿದ್ದಾರೆ. ನಿಮಗೆ ನಾಚಿಕೆ ಆಗಬೇಕು, ಯಾವ ಉದ್ದೇಶಕ್ಕೆ ಪಾದಯಾತ್ರೆ ಮಾಡುತ್ತಿದ್ದೀರಿ. ಅಸತ್ಯ ಹೇಳಲು ಪಾದಯಾತ್ರೆ ಮಾಡುತ್ತಿದ್ದೀರಿ, ಜನ ನಿಮಗೆ ಬುದ್ಧಿ ಕಲಿಸಿ ಅಧಿಕಾರ ಕಿತ್ತುಕೊಂಡಿದ್ದಾರೆ ಎಂದು ಕಿಡಿಕಾರಿದರು.‌

ಇದನ್ನೂ ಓದಿ | HD Deve Gowda: ದೆಹಲಿ ಮೆಟ್ರೋದಲ್ಲಿ ಸಂಚರಿಸಿದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

ನಿಮ್ಮದು 40% ಭ್ರಷ್ಟಾಚಾರ ಇಡೀ ದೇಶಕ್ಕೆ ಗೊತ್ತು. ನೀವು ನಮ್ಮ ಸರ್ಕಾರದ ಮೇಲೆ ಆಪಾದನೆ ಮಾಡ್ತಿದ್ದೀರಿ. ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ, ನಮ್ಮ ತಟ್ಟೆಯ ನೊಣದ ಬಗ್ಗೆ ಮಾತನಾಡ್ತೀರಿ. ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ 47 ಕೋಟಿ ಹಗರಣ ಆಗಿದೆ. ಅದರ ಎಂಡಿಯನ್ನು ಬಂಧನ ಮಾಡಲಾಗಿದೆ. 30 ಅಕೌಂಟ್‌ಗೆ ಚೆಕ್ ಮೂಲಕ ಹಣ ಹೋಗಿದೆ. ಭೋವಿ ನಿಗಮದಲ್ಲಿ ಹಗರಣ ಮಾಡಿದ್ದೀರಿ, ಇದರ ಲೆಕ್ಕ ಕೊಡಿ. ಮಾಜಿ ಪ್ರಧಾನಿ ಎಡಿಡಿ ಭೂಕಬಳಿಕೆಯ ಬಗ್ಗೆ ಪತ್ರಿಕೆಯಲ್ಲಿ ನೋಡಿದ್ದೇವೆ. ಇದನ್ನ ಪ್ರಕಟಣೆ ಮಾಡಿದ್ದು ಇದೇ ಬಿಜೆಪಿ ನಾಯಕರು. ದೇವೇಗೌಡರ ಕುಟುಂಬ ಮುಡಾದಲ್ಲಿ 36 ಸೈಟ್ ಪಡೆದಿದೆ. ಇದಕ್ಕೆ ಉತ್ತರ ಕೊಡಿ ಅಂತ ಬಿಜೆಪಿಯವರು ಕೇಳಿದ್ದರು. ಕುಮಾರಸ್ವಾಮಿ ಇದಕ್ಕೆ ನೀವು ಉತ್ತರ ಕೊಡಿ, ನಿಮಗೆ ಪಾದಯಾತ್ರೆ ಮಾಡಲು ಮಾನ-ಮರ್ಯಾದೆ ಇದ್ಯಾ. ಎಂದು ಪ್ರಶ್ನಿಸಿದರು.

Continue Reading

ಬೆಂಗಳೂರು

Drugs Seized : ಉತ್ತರ ಭಾರತದಿಂದ ಬರ್ತಿದ್ದ ಕೋಟಿ ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ; ಕರ್ನಾಟಕದ ಪೆಡ್ಲರ್‌ ಲಾಕ್‌

Drugs Seized : ಉತ್ತರ ಭಾರತದಿಂದ ಬರುತ್ತಿದ್ದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಒಡಿಶಾ ಹಾಗೂ ಕರ್ನಾಟಕದ ಡ್ರಗ್‌ ಪೆಡ್ಲರ್‌ನಗ ಗ್ಯಾಂಗ್‌ ಲಾಕ್‌ ಆಗಿದೆ.

VISTARANEWS.COM


on

By

Drugs Seized
Koo

ಬೆಂಗಳೂರು: ತೆಲಂಗಾಣದ ಸೈಬರಾಬಾದ್ ಮತ್ತು ಶಮ್ಶಾಬಾದ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಉತ್ತರ ಭಾರತದಿಂದ ಬರುತ್ತಿದ್ದ ಕೋಟಿ ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ (Drugs Seized) ಮಾಡಲಾಗಿದೆ. ಈ ಮೂಲಕ ಐವರು ಅಂತರಾಜ್ಯ ಡ್ರಗ್ ಪೆಡ್ಲರ್‌ಗಳನ್ನು ಸೈಬರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ಮಾದಕ ವಸ್ತು, ಸಾಗಾಟ ಮಾಡುತ್ತಿದ್ದ ವಾಹನ ಸೇರಿ 2 ಕೋಟಿ‌ 94 ಲಕ್ಷದ 75ಸಾವಿರ ಮೌಲ್ಯದ ವಸ್ತು ಜಪ್ತಿ ಮಾಡಲಾಗಿದೆ. ಒಡಿಶಾದಿಂದ ಮಹಾರಾಷ್ಟ್ರ- ಮಹಾರಾಷ್ಟ್ರದಿಂದ ತೆಲಂಗಾಣಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದರು. ಓಡಿಶಾ ಮತ್ತು ಕರ್ನಾಟಕ ಮೂಲದ ಡ್ರಗ್ ಪೆಡ್ಲರ್‌ಗಳು ಲಾಕ್‌ ಆಗಿದ್ದಾರೆ. ರಾಮು, ಸೋಮನಾಥ ಖರ, ಸುರೇಶ್ ಮಾರುತಿ ಪಾಟೀಲ್ ಹಾಗೂ ಹರಡೇ ಸಂಜೀವ್ ವಿಠ್ಠಲ್ ರೆಡ್ಡಿ, ಸಂಜೀವ್ ಕುಮಾರ್ ಹೊಲ್ಲಪ್ಪ, ಸುನೀಲ್ ಕೊಲಸ, ಜಗ ಸುನಾ ಗ್ಯಾಂಗ್ ಬಂಧನವಾಗಿದೆ.

Drugs Seized
Drugs Seized

ಬಂಧಿತರಿಂದ ಸುಮಾರು 803kg ಗಾಂಜಾ, ಎರ್ಟಿಗಾ ಕಾರು, ಏಳು ಮೊಬೈಲ್ ಸೇರಿ 2,94,75,000 ಮೌಲ್ಯದ ವಸ್ತುಗಳು ಜಪ್ತಿ ಮಾಡಲಾಗಿದೆ. ಈ ಗ್ಯಾಂಗ್‌ ಹಲವು ವರ್ಷಗಳಿಂದ ಗಾಂಜಾ ಮಾರಾಟ ದಂಧೆಯಲ್ಲಿ ಭಾಗಿಯಾಗಿದ್ದರು. ಸದ್ಯ ಗ್ಯಾಂಗ್‌ ಅನ್ನು ಬಂಧಿಸಿ ಸೈಬರಾಬಾದ್ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Drowned in water : ಮಾರ್ಕಂಡೇಯ ನದಿಗೆ ಆಯತಪ್ಪಿ ಬಿದ್ದು ಕಣ್ಮರೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಓಲಾ, ಊಬರ್ ಡ್ರೈವಿಂಗ್ ಜತೆಗೆ ಡ್ರಗ್ಸ್‌ ಮಾರಾಟ; 6 ಕೋಟಿ ರೂ.ಮೌಲ್ಯದ ಡ್ರಗ್ಸ್‌ ಸೀಜ್‌

ಬೆಂಗಳೂರು: ಸೆರಲ್ಯಾಕ್ ಪ್ಯಾಕ್‌ನಲ್ಲಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ (Drugs Seized) ಸಪ್ಲೈ ಮಾಡುತ್ತಿದ್ದವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಬಟ್ಟೆ ವ್ಯಾಪಾರ ಮಾಡಲು ಬ್ಯುಸಿನೆಸ್ ವೀಸಾದಲ್ಲಿ ಬಂದಿದ್ದ ವಿದೇಶಿ ಪ್ರಜೆಯೊಬ್ಬ ಸಿಸಿಬಿ ಬಲೆಗೆ ಬಿದ್ದಿದ್ದ.

ಮುಂಬೈನ ಫ್ಯಾಕ್ಟರಿಯಲ್ಲಿ ತಯಾರಾಗುತ್ತಿದ್ದ ಎಂಡಿಎಂ ಪೌಡರ್‌ ಅನ್ನು ಮಕ್ಕಳು ಸೇವಿಸುವ ಸೆರಲ್ಯಾಕ್, ಕಾರ್ನ್ ಪ್ಯಾಕೆಟ್‌ಗಳಲ್ಲಿ ಪ್ಯಾಕ್‌ ಮಾಡಿ, ರಾಜ್ಯಕ್ಕೆ ಸರಬರಾಜು ಮಾಡುತ್ತಿದ್ದರು. ಬಳಿಕ ಸಣ್ಣ ಸಣ್ಣ ಪ್ಯಾಕ್ ಮಾಡಿ ಡೀಲರ್‌ಗಳಿಗೆ ಮಾರಾಟ ಮಾಡಲಾಗುತ್ತಿತ್ತು.

ನೈಜಿರೀಯ ಮೂಲದ ಆರೋಪಿಯೊಬ್ಬ ಸಿಸಿಬಿ ಮಾದಕ‌ದ್ರವ್ಯ ನಿಗ್ರಹದಳ‌ ಅಧಿಕಾರಿಗಳ ಬಲೆಗೆ ಬಿದ್ದಿದ್ದ. ನಾಲ್ಕು ಕೆಜಿ ಡ್ರಗ್‌ನನ್ನು ಮನೆಯಲ್ಲಿ ಸಂಗ್ರಹಿಸಿದ್ದ. ಎಲೆಕ್ಟ್ರಾನಿನ್ ಸಿಟಿ ಪೊಲೀಸ್ ಠಾಣ ವ್ಯಾಪ್ತಿಯ ಬೆಟ್ಟದಾಸನಪುರದಲ್ಲಿ ಸೀಜ್ ಮಾಡಲಾಗಿದ್ದು, ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಡ್ರಗ್ ಪೆಡ್ಲರ್ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು.

ಡ್ರೈವಿಂಗ್ ಜತೆಗೆ ಡ್ರಗ್ ಸೇಲ್

ಓಲಾ, ಉಬರ್‌ ಡ್ರೈವಿಂಗ್‌ ಜತೆ ಜತೆಗೆ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಬಂಧಿತನಿಂದ ಒಂದು ಕೋಟಿ 50 ಲಕ್ಷ ಮೌಲ್ಯದ 19.9 ಎಂಡಿಎಂಎ ಕ್ರಿಸ್ಟಲ್, 746 ಕೊಕೇನ್ ವಶಕ್ಕೆ ಪಡೆಯಲಾಗಿತ್ತು. ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ವಾಸವಾಗಿದ್ದ .

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Drowned in water : ಮಾರ್ಕಂಡೇಯ ನದಿಗೆ ಆಯತಪ್ಪಿ ಬಿದ್ದು ಕಣ್ಮರೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Drowned in water : ಕಟಿಂಗ್‌ ಮಾಡಿಸಲು ಬೈಕ್‌ನಲ್ಲಿ ಹೋಗುತ್ತಿದ್ದ ಸಹೋದರರಿಬ್ಬರು ನಿಯಂತ್ರಣ ತಪ್ಪಿ ಬೈಕ್‌ ಸಮೇತ ರಸ್ತೆಯ ಪಕ್ಕದ ನಾಲೆಗೆ ಬಿದ್ದಿದ್ದರು. ಒಬ್ಬ ಸಹೋದರ ಈಜಿ ದಡ ಸೇರಿದ್ದರೆ ಮತ್ತೊಬ್ಬ ನೀರುಪಾಲಾಗಿದ್ದ. ಇದೀಗ ಶೋಧ ಕಾರ್ಯಾಚರಣೆ ನಡೆಸಿದ್ದ ಅಧಿಕಾರಿಗಳು ಶವವನ್ನು ಮೇಲಿತ್ತಿದ್ದಾರೆ.

VISTARANEWS.COM


on

By

Drowned in water
Koo

ಬೆಳಗಾವಿ: ಆಯತಪ್ಪಿ ಮಾರ್ಕಂಡೇಯ ನದಿಯ (Drowned in water) ನಾಲೆಗೆ ಸಹೋದರರು ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಣ್ಮರೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಬೆಳಗಾವಿ ತಾಲೂಕಿನ ಆಲತಗಾ ಬಳಿ ನಿನ್ನೆ ಶನಿವಾರ ತಡರಾತ್ರಿ ಈ ದುರ್ಘಟನೆ ನಡೆದಿತ್ತು.

ಓಂಕಾರ ಪಾಟೀಲ್ ಹಾಗೂ ಜ್ಯೋತಿನಾಥ ಪಾಟೀಲ್ ಎಂಬ ಸಹೋದರರು ಬೈಕ್‌ನಲ್ಲಿ ಹೋಗುತ್ತಿದ್ದರು. ಶ್ರಾವಣ ಮಾಸ ಪ್ರಾರಂಭ ಹಿನ್ನೆಲೆಯಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ತೆರಳಿದ್ದರು.

ಈ ವೇಳೆ ಆಯತಪ್ಪಿ ಇಬ್ಬರು ನಾಲೆಗೆ ಬಿದ್ದಿದ್ದರು. ನಾಲೆಗೆ ಬೀಳುತ್ತಿದ್ದಂತೆ ಜ್ಯೋತಿನಾಥ ಪಾಟೀಲ್ ಹೇಗೋ ಈಜಿ ದಡ ಸೇರಿದ್ದರು. ಆದರೆ ಇತ್ತ ಓಂಕಾರ ಪಾಟೀಲ್ ಬೈಕ್‌ ಜತೆಗೆ ಕಣ್ಮರೆಯಾಗಿದ್ದರು.

ಬಳಿಕ ನಾಪತ್ತೆಯಾಗಿದ್ದ ಓಂಕಾರ ಪಾಟೀಲ್‌ಗಾಗಿ ಶೋಧ ನಡೆಸಲಾಗಿತ್ತು. ಇದೀಗ ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ನಿರಂತರ ಕಾರ್ಯಾಚರಣೆ ನಡೆಸಿದ ಎಸ್‌ಡಿಆರ್‌ಎಫ್ ತಂಡ ಶವ ಹೊರತೆಗೆದಿದ್ದಾರೆ.

ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

ಸ್ಟೇರಿಂಗ್ ರಾಡ್ ತುಂಡಾಗಿ ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿ

ಹಳ್ಳದ ಸೇತುವೆ ತಡೆಗೋಡೆಗೆ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಉಳಿದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನಂದಿಹಾಳ ಬಳಿ ಅಪಘಾತ ನಡೆದಿದೆ.

Drowned in Water
Drowned in Water

ಕಲ್ಯಾಣ ಸಾರಿಗೆ ಬಸ್ ಸ್ಟೇರಿಂಗ್ ರಾಡ್ ತುಂಡಾಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿಯಾಗಿದೆ. ಮಾನ್ವಿ- ಸಿಂಧನೂರು ಮಾರ್ಗದ ಬಸ್ ಇದಾಗಿದ್ದು, ಗಾಯಾಳುಗಳು ಮಾನ್ವಿ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Paris Olympics: Lakshya Sen lost in the semi-final
ಕ್ರೀಡೆ18 mins ago

Paris Olympics: ಸೆಮಿ ಫೈನಲ್​ನಲ್ಲಿ ಸೋಲು ಕಂಡ ಲಕ್ಷ್ಯ ಸೇನ್‌; ಕಂಚಿಗೆ ಸ್ಪರ್ಧೆ

Road Accident
ಬೆಂಗಳೂರು28 mins ago

Road Accident : ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು

Ranveer Singh mimics Orry funny interactions
ಬಾಲಿವುಡ್29 mins ago

Ranveer Singh: ಓರಿಯಂತೆ ನಟನೆ ಮಾಡಿದ ರಣವೀರ್‌ ಸಿಂಗ್‌; ವಿಡಿಯೊ ವೈರಲ್‌!

Paris Olympic 2024
ಪ್ರಮುಖ ಸುದ್ದಿ36 mins ago

Paris Olympics 2024 : ಪೋಲ್ ವಾಲ್ಟ್ ‌ಪಟುವಿಗೆ ಮರ್ಮಾಘಾತ! ಪದಕ ತಪ್ಪಿಸಿದ ಮರ್ಮಾಂಗ! ವಿಡಿಯೊ ನೋಡಿ

Zameer Ahmed Khan
ಕರ್ನಾಟಕ37 mins ago

Zameer Ahmed Khan: ಎಚ್‌ಡಿಕೆ ಪ್ಯಾಂಟ್‌ನಲ್ಲಿ ಖಾಕಿ ಚೆಡ್ಡಿ ಇದೆ, ಅವರ ಆಸ್ತಿಯಿಂದ 3 ಬಜೆಟ್‌ ಮಾಡಬಹುದು ಎಂದ ಜಮೀರ್‌

Rahul Gandhi
ದೇಶ41 mins ago

Rahul Gandhi: ರಾಹುಲ್‌ ಗಾಂಧಿಯನ್ನು ಬಂಧಿಸಿದರೆ ಬಿಜೆಪಿ ಶವಪೆಟ್ಟಿಗೆ ಸೇರೋದು ಖಚಿತ; ಸಿಂಘ್ವಿ ಎಚ್ಚರಿಕೆ

Viral Video
ವೈರಲ್ ನ್ಯೂಸ್52 mins ago

Viral Video: ಉ.ಪ್ರ ಪೊಲೀಸರ ʼಟ್ರೀಟ್‌‌ಮೆಂಟ್ʼ ಹೇಗಿತ್ತು ನೋಡಿ! ಹೆಣ್ಣು ಮಕ್ಕಳನ್ನು ಚುಡಾಯಿಸುತ್ತಿದ್ದ ಪುಂಡರು

Drugs Seized
ಬೆಂಗಳೂರು52 mins ago

Drugs Seized : ಉತ್ತರ ಭಾರತದಿಂದ ಬರ್ತಿದ್ದ ಕೋಟಿ ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ; ಕರ್ನಾಟಕದ ಪೆಡ್ಲರ್‌ ಲಾಕ್‌

Viral News
ವೈರಲ್ ನ್ಯೂಸ್55 mins ago

Viral News: 20 ವರ್ಷಗಳ ಹಿಂದೆ ಅಜ್ಜ ಖರೀದಿಸಿದ್ದ ಷೇರು; ಮೊಮ್ಮಗಳು ರಾತ್ರೋರಾತ್ರಿ ಕೋಟ್ಯಧಿಪತಿ!

Filmfare South 2024 mollywood tollywood 69th Filmfare Awards
South Cinema1 hour ago

Filmfare South 2024: ಫಿಲ್ಮ್‌ಫೇರ್ ಅವಾರ್ಡ್ಸ್ ಸೌತ್; ತೆಲುಗು, ತಮಿಳು ಹಾಗೂ ಮಲಯಾಳಂ ಪ್ರಶಸ್ತಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ3 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 day ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌