Site icon Vistara News

Basavaraja Bommai : ಚುನಾವಣೆ ಬಳಿಕ ಕಾಂಗ್ರೆಸ್‌ ಇಬ್ಭಾಗ, ಸರ್ಕಾರ ಪತನ; ಬೊಮ್ಮಾಯಿ ಭವಿಷ್ಯ

Basavaraja Bommai gadaga

ಗದಗ: ಲೋಕಸಭಾ ಚುನಾವಣೆ (Lok Sabha Election 2024) ಮುಗಿದ ಮೂರು ತಿಂಗಳಲ್ಲಿ ಕಾಂಗ್ರೆಸ್ ದೇಶದಲ್ಲಿ ಎರಡು ಹೋಳಾಗುತ್ತದೆ (Congress will be divided). ಅದರ ಪರಿಣಾಮ ಕರ್ನಾಟಕದ ಮೇಲೆ ಆಗಲಿದ್ದು, ಕಾಂಗ್ರೆಸ್ ನಲ್ಲಿನ ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಹಳ ದಿನ ಉಳಿಯಲು ಸಾಧ್ಯವಾಗುವುದಿಲ್ಲ (Congress Government Collapse) ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದ್ದಾರೆ.

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ ಉದಾಸಿಯವರು ಈ ಕ್ಷೇತ್ರದಲ್ಲಿ ಸಾಕಷ್ಡು ಅಭಿವೃದ್ಧಿ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ, ಕೇಂದ್ರದ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಮೋದಿಯವರು ಮೂರನೇ ಬಾರಿ ಪ್ರಧಾನಿಯಾದ ನಂತರ ನೂರಕ್ಕೆ ನೂರು ಕೇಂದ್ರದ ಎಲ್ಲ ಯೋಜನೆಗಳನ್ನು ಈ ಕ್ಷೇತ್ರದಲ್ಲಿ ಜಾರಿಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಹಾವೇರಿ ಗದಗ ಲೋಕಸಭಾ ಕ್ಷೇತ್ರದಲ್ಲಿ ಎಲ್ಲ ವರ್ಗದ ಜನರಿಂದ ಅಭೂತಪೂರ್ವವಾದ ಬೆಂಬಲ ದೊರೆಯುತ್ತಿದೆ. ವಿಶೇಷ ವಾಗಿ ನಮ್ಮ ಪಕ್ಷದ ಕಾರ್ಯಕರ್ತರು ಬಹಳ ಉತ್ಸಾಹದಿಂದ ಚುನಾವಣೆ ಮಾಡುವ ನಿರ್ಧಾರ ಮಾಡಿದ್ದಾರೆ.
ಕೆ ಎಸ್ ಈಶ್ವರಪ್ಪ ಅವರು ಹಿರಿಯರಿದ್ದಾರೆ ಪಕ್ಷ ಕಟ್ಟುವಲ್ಲಿ ಅವರ ಪಾತ್ರ ದೊಡ್ಡದಿದೆ. ಪಕ್ಷದ ಮುಖಂಡರು ಅವರ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನೂ ಸಮಯವಿದೆ. ಅವರು ಪಕ್ಷದ ತೀರ್ಮಾನವನ್ನು ಒಪ್ಪುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಹಾವೇರಿ ಕ್ಷೇತ್ರದಲ್ಲಿ ತಾವು ಮನಸಿಲ್ಲದೇ ಸ್ಪರ್ಧೆ ಮಾಡಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸ್ಪರ್ಧೆ ಮಾಡುವಂತೆ ವರಿಷ್ಠರು ಸೂಚನೆ ಕೊಟ್ಟಾಗ ಇಲ್ಲಿ ನನ್ನ ಮನಸ್ಸಿನ ಪ್ರಶ್ನೆ ಬರುವುದಿಲ್ಲ. ವರಿಷ್ಠರ ಸೂಚನೆ ಪಾಲಿಸುವುದು ನನ್ನ ಕರ್ತವ್ಯ. ಅದಕ್ಕಾಗಿ ಕರ್ತವ್ಯ ಪಾಲಿಸುತ್ತಿದ್ದೇನೆ ಎಂದು ಹೇಳಿದರು ಬಸವರಾಜ ಬೊಮ್ಮಾಯಿ.

ʻʻಎಲ್ಲಿ ಗೆಲ್ಲುವ ವಿಶ್ವಾಸ ಇರುತ್ತದೆಯೋ ಅಲ್ಲಿ ಪೈಪೋಟಿ ಇರುತ್ತದೆ. ಕಾಂಗ್ರೆಸ್ ಗೆ ಇಲ್ಲಿ ಗೆಲ್ಲುವ ವಿಶ್ವಾಸ ಇಲ್ಲ ಹೀಗಾಗಿ ಅಲ್ಲಿ ಬಂಡಾಯದ ಪ್ರಶ್ನೆ ಬರುವುದಿಲ್ಲʼʼ ಎಂದು ಬಿಜೆಪಿಯ ಬಂಡಾಯದ ಬಗ್ಗೆ ಮಾತನಾಡಿದರು.

ಪ್ರತಿಸ್ಪರ್ಧಿಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ನನ್ನ ಪ್ರತಿಸ್ಪರ್ಧಿಯನ್ನು ಗೌರವಿಸುತ್ತೇನೆ. ಅವರನ್ನು ಹಗುರವಾಗಿ ತೆಗೆದುಕೊಳ್ಳುವುದಿಲ್ಲ. ಗದಗ ಜಿಲ್ಲೆಯಲ್ಲಿ ಗುಂಪುಗಾರಿಕೆ ಇಲ್ಲ. ಎಲ್ಲ ಮುಖಂಡರು ನನ್ನ ಜೊತೆಗಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ : Modi in Shivamogga : ಶಕ್ತಿಸ್ವರೂಪಿಣಿ ಮಹಿಳೆಯರ ನಾಶಕ್ಕೆ ಅವಕಾಶ ಕೊಡಲ್ಲ: ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

ಗದಗ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆ

ಗದಗ ಪಟ್ಟಣದ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಗದಗ ವಿಧಾನಸಭಾ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ವತಿಯಿಂದ ಏರ್ಪಡಿಸಲಾದ ಕಾರ್ಯಕರ್ತರ ಸಭೆ ಸೋಮವಾರ ನಡೆಯಿತು.

ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ನರಗುಂದ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಸಿ.ಸಿ.ಪಾಟೀಲ್, ಶಾಸಕರಾದ ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ ಭಾರತೀಯ ಜನತಾ ಪಕ್ಷದ ಜಿಲ್ಲಾ ಅಧ್ಯಕ್ಷರಾದ ರಾಜು ಕುರಡಗಿ, ಗದಗ ಶಹರ ಘಟಕದ ಅಧ್ಯಕ್ಷರಾದ ಅನಿಲ್ ಅಬ್ಬಿಗೇರಿ, ಗ್ರಾಮೀಣ ಘಟಕದ ಅಧ್ಯಕ್ಷರಾದ ದ್ಯಾಮಣ್ಣ ನೀಲಗುಂದ ಸೇರಿದಂತೆ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.

Basavaraja Bommai : ಲಕ್ಷ್ಮೇಶ್ವರದಲ್ಲಿ ಬಸವರಾಜ ಬೊಮ್ಮಾಯಿ ಬೃಹತ್ ರೋಡ್ ಶೋ

ಗದಗ ಜಿಲ್ಲೆ ಲಕ್ಷ್ಮೇಶ್ವರದಲ್ಲಿ ಬಸವರಾಜ ಬೊಮ್ಮಾಯಿ ಅವರ ಬೃಹತ್ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸಿದರು. ಕಾರ್ಯಕರ್ತರು ಬೃಹತ್ ಬೈಕ್ ರ‍್ಯಾಲಿ ಮೂಲಕ ಅದ್ಧೂರಿಯಾಗಿ ಸ್ವಾಗತ ಕೋರಿದರು.

ಲಕ್ಷ್ನೇಶ್ವರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಕ್ ರ‍್ಯಾಲಿ ನಡೆಸಿದರು. ಇದೇ ಸಂದರ್ಭದಲ್ಲಿ ಪಟ್ಟಣದ ಸೋಮೇಶ್ವರ ದೇವಸ್ಥಾನ ಹಾಗೂ ದೂದನಾನಾ ದರ್ಗಾಕ್ಕೆ ಬೊಮ್ಮಾಯಿಯವರು ಭೇಟಿ ‌ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಸಿ.ಸಿ.ಪಾಟೀಲ, ಅರವಿಂದ ಬೆಲ್ಲದ ಹಾಗೂ ಡಾ.ಚಂದ್ರು‌ ಲಮಾಣಿ ಜೊತೆಯಲ್ಲಿದ್ದರು.

Exit mobile version