Site icon Vistara News

Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Haveri Lok Sabha Constituency

Haveri Lok Sabha Constituency: Basavaraj Bommai Vs Anandswamy Gaddadevarmath

ಹಾವೇರಿ: ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹೆಬ್ಬಾಗಿಲು ಆಗಿರುವ, ಅರೆ ಮಲೆನಾಡು ಎಂದು ಕೂಡ ಖ್ಯಾತಿ ಗಳಿಸಿರುವ ಹಾವೇರಿಯಲ್ಲಿ (Haveri Lok Sabha Constituency) ರಾಜಕೀಯ ಸನ್ನಿವೇಶ ಬದಲಾಗಿದೆ. ಇದೇ ಕಾರಣಕ್ಕಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ (Basavaraj Bommai) ಅವರು ಬಿಜೆಪಿಯಿಂದ ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ. ಇನ್ನು, ಇವರ ವಿರುದ್ಧ ಕಾಂಗ್ರೆಸ್‌ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಟಿಕೆಟ್‌ ನೀಡಿದ್ದು, ತೀವ್ರ ಜಿದ್ದಾಜಿದ್ದಿನ ಹೋರಾಟ ನಡೆದಿದೆ.

ಬಿಜೆಪಿಯ ಶಿವಕುಮಾರ್‌ ಉದಾಸಿ ಅವರು ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಸತತ ಮೂರು ಬಾರಿ ಗೆಲುವು ಸಾಧಿಸಿದ್ದು, ಈ ಬಾರಿ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. 2008ರಲ್ಲಿ ಹಾವೇರಿ ಲೋಕಸಭೆ ಕ್ಷೇತ್ರ ರಚನೆಯಾಗಿದ್ದು, ಇದುವರೆಗೆ ಬಿಜೆಪಿ ಭದ್ರಕೋಟೆಯೇ ಆಗಿದೆ. ಲಿಂಗಾಯತ ಸಮುದಾಯದವರೇ ನಿರ್ಣಾಯಕರಾಗಿರುವ, ಕುರುಬ ಸಮುದಾಯದ ಮತದಾರರೂ ಪ್ರಾಬಲ್ಯ ಇರುವ ಕ್ಷೇತ್ರದಲ್ಲಿ ಶಾಸಕ ಬಸವರಾಜ್‌ ಬೊಮ್ಮಾಯಿ ಅವರು ಸ್ಪರ್ಧಿಸಿದ್ದು, ಜಾತಿ ಬಲ, ಮೋದಿ ನಾಮಬಲದಿಂದ ಗೆಲುವಿನ ವಿಶ್ವಾಸದಲ್ಲಿದ್ದಾರೆ.

ಕಾಂಗ್ರೆಸ್‌ ಮಾಜಿ ಶಾಸಕ ಜಿ.ಎಸ್‌.ಗಡ್ಡದೇವರಮಠ ಅವರ ಪುತ್ರ, ವೀರಶೈವ ಲಿಂಗಾಯತ ಸಮುದಾಯದ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಟಿಕೆಟ್‌ ನೀಡುವ ಮೂಲಕ ಈ ಬಾರಿ ಕಾಂಗ್ರೆಸ್‌ ಚಾಣಾಕ್ಷತನ ಮೆರೆದಿದೆ. ಆನಂದಸ್ವಾಮಿ ಗಡ್ಡದೇವರ ಮಠ ಅವರು ಇದೇ ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ.

ಮತದಾರರ ಸಂಖ್ಯೆ

ಪುರುಷರು9.02 ಲಕ್ಷ
ಮಹಿಳೆಯರು8.90 ಲಕ್ಷ
ಲಿಂಗತ್ವ ಅಲ್ಪಸಂಖ್ಯಾತರು83
ಒಟ್ಟು17.92 ಲಕ್ಷ

ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಹಾವೇರಿಯ 5 ಹಾಗೂ ಗದಗದ 3 ವಿಧಾನಸಭೆ ಕ್ಷೇತ್ರಗಳು ಬರುತ್ತವೆ. ಶಿರಹಟ್ಟಿ, ಗದಗ, ರೋಣ, ಹಾನಗಲ್‌, ಹಾವೇರಿ, ಬ್ಯಾಡಗಿ, ರಾಣೆಬೆನ್ನೂರು, ಹಿರೇಕೆರೂರು ವಿಧಾನಸಭೆ ಕ್ಷೇತ್ರಗಳು ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಒಳಪಟ್ಟಿವೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪ್ರಾಬಲ್ಯ ಸಾಧಿಸಿದ್ದು, ಈ ಬಾರಿಯ ವಿಶ್ವಾಸ ಹೆಚ್ಚಾಗಲು ಕಾರಣ ಎಂದು ತಿಳಿದುಬಂದಿದೆ.

2019, 2014ರಲ್ಲಿ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವಕುಮಾರ್‌ ಉದಾಸಿ ಅವರು 1.40 ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್‌ನ ಡಿ.ಆರ್.ಪಾಟೀಲ್‌ ಅವರ ವಿರುದ್ಧ ಗೆಲುವು ಸಾಧಿಸಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿಯೂ ಶಿವಕುಮಾರ್‌ ಉದಾಸಿ ಅವರು ಕಾಂಗ್ರೆಸ್‌ನ ಸಲೀಂ ಅಹ್ಮದ್‌ ವಿರುದ್ಧ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

Exit mobile version