Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ - Vistara News

ಹಾವೇರಿ

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

Haveri News : ಹಾವೇರಿಯಲ್ಲಿ ಸಾಕುನಾಯಿ ಜಗಳ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದರೆ, ಇತ್ತ ಬಾಗಲಕೋಟೆಯಲ್ಲಿ ಚಿರತೆಯೊಂದು ಪ್ರತ್ಯಕ್ಷಗೊಂಡಿದೆ. ಬಳ್ಳಾರಿಯಲ್ಲಿ ದಾಂಧಲೆ ಮಾಡುತ್ತಿದ್ದ ಕರಡಿಯನ್ನು ಸೆರೆಹಿಡಿಯಲಾಗಿದೆ.

VISTARANEWS.COM


on

haveri News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಹಾವೇರಿ: ಹಾವೇರಿಯಲ್ಲಿ (Haveri News) ಸಾಕುನಾಯಿ ಜಗಳವೊಂದು (Dog Fight) ಪೊಲೀಸ್ ಠಾಣೆ ಮೆಟ್ಟಿಲೇರಿದೆ. ರಾಕೇಶ್ ಬಾರಂಗಿ ಎಂಬುವವರು ರಾಣಾ ಮತ್ತು ರಕ್ಷಿತಾ ಎಂಬ ಹೆಸರಿನ ನಾಯಿಗಳನ್ನು ಸಾಕಿದ್ದರು. ಮನೆಯಲ್ಲಿ ಜಾಗದ ಕೊರತೆ ಹಿನ್ನೆಲೆಯಲ್ಲಿ ರಾಕೇಶ್ ತನ್ನ ಸ್ನೇಹಿತ ಮದನ್‌ಗೆ ಶ್ವಾನಗಳನ್ನು ಸಾಕಲು ಕೊಟ್ಟಿದ್ದರು.

ಆದರೆ ಇಲ್ಲೇ ಆಗಿದ್ದು ಯಡವಟ್ಟು ಮಧನ್ ತಾನು ಸಾಕದೆ ಮತ್ತೊಬ್ಬ ಸ್ನೇಹಿತ ಚಂದ್ರು ಎಂಬುವವರಿಗೆ ಶ್ವಾನ ನೀಡಿದ್ದರು. ಎರಡು ಜರ್ಮನ್ ಶೆಪರ್ಡ್ ತಳಿಯ ಶ್ವಾನಗಳನ್ನು ಚಂದ್ರು ಒಂದುವರೆ ತಿಂಗಳು ಪೋಷಣೆ ಮಾಡಿದ್ದರು. ಈ ನಡುವೆ ಶ್ವಾನಗಳು ನಾಪತ್ತೆಯಾಗಿದೆ ಎಂದು ಈ ಬಗ್ಗೆ ಮಾಲೀಕ ರಾಕೇಶ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಶ್ವಾನಗಳ ಮಾಲೀಕ ರಾಕೇಶ ಬಾರಂಗಿ ಮತ್ತು ಸಾಕಿ ಸಲುಹಿದ್ದ ಚಂದ್ರು ಎಂಬುವವರ ನಡುವೆ ಜಗಳ‌ ನಡೆದಿದೆ. ಇವರಿಬ್ಬರ ನಾಯಿ ಜಗಳವು ಠಾಣೆಮೆಟ್ಟಿಲೇರಿದ್ದು, ಪೊಲೀಸರ ಮಧ್ಯಸ್ಥಿಕೆಯಿಂದ ಜರ್ಮನ್ ಶೆಪರ್ಡ್ ಶ್ವಾನಗಳು ಮಾಲೀಕರ ಮನೆ ಸೇರಿವೆ. ಜತೆಗೆ ತಿಂಗಳ ಕಾಲ ಶ್ವಾನಗಳನ್ನು ಸಾಕಿದ್ದ ಚಂದ್ರುಗೆ ನಿರ್ವಹಣೆ ವೆಚ್ಚ ಕೊಡಿಸಿದ್ದಾರೆ.

ಇದನ್ನೂ ಓದಿ: Road Accident : ಲಾಂಗ್‌ ಡ್ರೈವ್‌ ಹೋದ ಯುವಕರಿಬ್ಬರು ಹಿಟ್ ಆ್ಯಂಡ್ ರನ್‌ಗೆ ಬಲಿ; ನಿಲ್ಲದ ನಿಶಾಚರಿಗಳ ಕಾಟ

ಬಾಗಲಕೋಟೆಯಲ್ಲಿ ಚಿರತೆ ಓಡಾಟ

ಆಹಾರ ಅರಸಿ ಕಾಡಂಚಿನ ಗ್ರಾಮಗಳಿಗೆ ಕಾಡುಪ್ರಾಣಿಗಳು ಆಗಮಿಸುತ್ತಿದ್ದು, ಜನರು ಭಯಭೀತಿಗೊಂಡಿದ್ದಾರೆ. ಬಾಗಲಕೋಟೆಯ ಕಿಶೋರಿ, ಅಮಲಜರಿ, ಹಲಗಲಿ ಗ್ರಾಮದ ಸುತ್ತ-ಮುತ್ತ ಚಿರತೆ ಓಡಾಡಿದೆ. ಮುಧೋಳ ತಾಲೂಕಿನ ಕಿಶೋರಿ ಗ್ರಾಮದಲ್ಲಿ ನಾಯಿ, ಎಮ್ಮೆ, ಕರು, ಮೇಕೆ ಮೇಲೆ ಚಿರತೆ ದಾಳಿ ನಡೆದಿದೆ.

ಮುಧೋಳ, ಬೀಳಗಿ, ಜಮಖಂಡಿ ಭಾಗದಲ್ಲಿ ಚಿರತೆ ಆತಂಕವಿದ್ದು, ರಾತ್ರಿ ಹೊತ್ತು ಆಹಾರ ಅರಸಿ ಗ್ರಾಮದ ಬಳಿ ಓಡಾಡುತ್ತಿದೆ. ಸದ್ಯ ಚಿರತೆ ಓಡಾಡಿರುವಲ್ಲಿ ಪೊಲೀಸ್ ಹಾಗೂ ಅರಣ್ಯ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಗ್ರಾಮಸ್ಥರು ಜಮೀನುಗಳಿಗೆ ತೆರಳಲು ಭಯ ಪಡುವಂತಾಗಿದೆ.

ಊರಿನೊಳಗೆ ನುಗ್ಗಿ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಊರಿನೊಳಗೆ ನುಗ್ಗಿ ದಾಂಧಲೆ ಮಾಡುತ್ತಿದ್ದ ಕರಡಿಯನ್ನು ಸೆರೆಹಿಡಿಯಲಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೊಣಸಿಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಕರಡಿಯನ್ನು ಸೆರೆಹಿಡಿಯಲಾಗಿದೆ. ಸದ್ಯ ಕರಡಿ ಸೆರೆಯಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ತಡರಾತ್ರಿಯಿಂದಲೂ ಮನೆಗಳ ಬಳಿ ಕರಡಿ ವಾಸ್ತವ್ಯ ಹೂಡಿತ್ತು. ಗ್ರಾಮದ ಮನೆಯೊಂದಕ್ಕೆ ತೆರಳಿ ಪೂಜೆಗೆ ಸಿದ್ಧವಾಗಿದ್ದ ಬಾಳೆಹಣ್ಣು, ದೀಪದ ಎಣ್ಣೆ ಸೇರಿ ಆಹಾರ ಪದಾರ್ಥ ಸೇವನೆ ಮಾಡಿತ್ತು. ಸದ್ಯ ಸಂಡೂರಿನ ಅರಣ್ಯ ಸಿಬ್ಬಂದಿ ಬೋನಿನ ಮೂಲಕ ಕರಡಿ ಸೆರೆ ಹಿಡಿದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ರಾಜಕೀಯ

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ: ಸಿಎಂ ಸಿದ್ದರಾಮಯ್ಯ ಕರೆ

VISTARANEWS.COM


on

ರಾಣೇಬೆನ್ನೂರು: ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ರಾಣಿಬೆನ್ನೂರಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀಬೀರೇಶ್ವರ ಸ್ವಾಮಿ ದೇವಸ್ಥಾನದ 50 ನೇ ವರ್ಷದ ಸುವರ್ಣ ಮಹೋತ್ಸವ ಹಾಗೂ ಶ್ರೀ ಭಕ್ತ ಕನಕದಾಸರ ಮಹಾದ್ವಾರದ ಉದ್ಘಾಟನೆ ಹಾಗೂ ಧರ್ಮ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಿಟ್ಟೂರಿನ ದೇವಸ್ಥಾನಕ್ಕೆ ವಿವಿಧ ಜಿಲ್ಲೆಗಳಿಂದ ಭಕ್ತರು ಆಗಮಿಸುತ್ತಾರೆ. ಬೀರಲಿಂಗೇಶ್ವರ ದೇವಸ್ಥಾನ ನಿಟ್ಟೂರಿಗೆ ಮಾತ್ರ ಸೀಮಿತವಾಗಿಲ್ಲ. ದೇವನೊಬ್ಬ ನಾಮ ಹಲವು ಎಂದು ಅರ್ಥೈಸಿಕೊಳ್ಳಬೇಕು. ನಮ್ಮ ನಾಡು, ನಮ್ಮ ದೇಶ ಸರ್ವಜನಾಂಗದ ಶಾಂತಿಯ ತೋಟವಾಗಬೇಕೆಂದು ಬುದ್ಧ, ಬಸವ, ಮಹಾತ್ಮಾ ಗಾಂಧಿ, ಅಂಬೇಡ್ಕರ್ , ಕುವೆಂಪು ಬಯಸಿದ್ದರು. ಅದನ್ನೇ ನಮ್ಮ ಸರ್ಕಾರ ಪಾಲಿಸುತ್ತಿದೆ ಎಂದರು.
ಕೇವಲ 13 ಕುರುಬರ ಕುಟುಂಬಗಳಿರುವ ಊರಿನಲ್ಲಿ ಬೀರಲಿಂಗೇಶ್ವರ ದೇವಾಲಯ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವುದು ನಿಟ್ಟೂರಿನ ಸಾಮರಸ್ಯಕ್ಕೆ ದ್ಯೋತಕವಾಗಿದೆ ಎಂದು ಹೇಳಿದರು.
ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ:
ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಎಂಬ ವಿಚಾರಗಳು ಸಂವಿಧಾನದ ಆಧಾರ ಸ್ತಂಭಗಳು. ದೇವರ ಪೂಜೆ ಮಾಡಬೇಕು ಆದರೆ ಮೂಢ ನಂಬಿಕೆಗಳನ್ನು ಇಟ್ಟುಕೊಳ್ಳಬಾರದು. ಬಸವಣ್ಣ ಕರ್ಮಸಿದ್ಧಾಂತವನ್ನು ತಿರಸ್ಕರಿಸಿದ್ದರು ಎನ್ನಿವುದನ್ನು ಸ್ಮರಿಸಬೇಕು. ಅಂಬೇಡ್ಕರ್ ಅವರು ದೇಶದ ಸ್ವಾತಂತ್ರ್ಯ ಸಮಾಜಿಕ, ಆರ್ಥಿಕ ಸ್ವಾತಂತ್ರ್ಯದ ತಳಹದಿಯ ಮೇಲೆ ನಿಂತಿದೆ, ಇಲ್ಲದಿದ್ದರೆ ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗುವುದಿಲ್ಲ ಎಂದಿದ್ದರು. ಸಮಾನತೆಯ ಆಶಯದಿಂದಲೇ ಭಾಗ್ಯಗಳನ್ನು, ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವುದು ಎಂದರು.
ಇಸ್ಲಾಂ, ಹಿಂದೂ, ಕ್ರಿಶ್ಚಿಯನ್ ಧರ್ಮಗಳು ಜನರನ್ನು ಪ್ರೀತಿಸಬೇಕೆಂದು ಬೋಧಿಸುತ್ತವೆ. ಇದಾದಾಗ ಮಾತ್ರ ಮಾನವ ಸಮಾಜ ನಿರ್ಮಾಣ ಸಾಧ್ಯ.‌ ಸೈದ್ಧಾಂತಿಕವಾಗಿ ನಮ್ಮ ವಿರೋಧಿಗಳಾದರೂ ಜನರನ್ನು ಪ್ರೀತಿಸಬೇಕು. ಕುಲದ ನೆಲೆಯನ್ನು ಬಲ್ಲಿರಾ ಎಂದ ಕನಕದಾಸರ ಹಾಗೂ ಇವ ನಮ್ಮವ ಎಂಬ ಬಸವಣ್ಣನ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಉನ್ನತ ವಿದ್ಯೆ ಕಲಿತವರೇ ಜಾತಿ ವ್ಯವಸ್ಥೆಯನ್ನು ಪೋಷಿಸುವುದು ನಮ್ಮ ಸಮಾಜದ ದುರಂತ ಎಂದರು.
ನಾನು ಬಸವಣ್ಣನ ಅನುಯಾಯಿ:
ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ನಮ್ಮ ಸರ್ಕಾರ ಘೋಷಣೆ ಮಾಡಿದೆ. ನಮ್ಮ ಸರ್ಕಾರ ಸರ್ವ ಜನಾಂಗದ ಶಾಂತಿಯ ತೋಟವಾಗಿಸಬೇಕೆನ್ನುವ ಉದ್ದೇಶ ಹೊಂದಿದ್ದು, ನಾನೂ ಕೂಡ ಬಸವಣ್ಣನ ಅನುಯಾಯಿ ಎಂದರು.
ಈ ಬಾರಿ ಮಳೆ ಕೊರತೆಯಾಗಲಿದೆ ಎಂಬ ಮುನ್ಸೂಚನೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿಸಲಾಗಿದೆ. ರಾಣೆಬೆನ್ನೂರಿನ ವರ್ತುಲ ರಸ್ತೆ ಹಾಗೂ ಸಮುದಾಯ ಭವನಕ್ಕೆ ಅನುದಾನ ನೀಡುವ ಭರವಸೆ ನೀಡಿದರು.
ವಿಧಾನಸಭೆಯ ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಬಸವರಾಜ ಶಿವಣ್ಣನವರ್, ಪ್ರಕಾಶ್ ಕೋಳಿವಾಡ, ಯಾಸಿರ್ ಖಾನ್ ಪಠಾಣ್, ಯು. ಬಿ.ಬಣಕಾರ್, ಹುಬ್ಬಳ್ಳಿ ವಿದ್ಯುತ್ ಪ್ರಸರಣ ನಿಗಮದ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನ ಮರದ ಮೊದಲಾದವರು ಉಪಸ್ಥಿತರಿದ್ದರು.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading

ಮಳೆ

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Karnataka Rain : ಸತತ ಮಳೆ ಹಿನ್ನೆಲೆಯಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಶಾಲೆಗಳಿಗೆ ಇಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Karnataka Rain

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ (Karnataka Rain) ನಿರಂತರವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿ ಮಾರ್ಪಾಡಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಮೌಖಿಕವಾಗಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading
Advertisement
galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌