ಹಾವೇರಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ (Basavaraja Bommai) ಶನಿವಾರ ಹಾವೇರಿ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಇದರ ಮಧ್ಯೆಯೇ ಮಠಗಳು ಹಾಗೂ ದೇವಸ್ಥಾನಗಳಿಗೆ ಭೇಟಿ ನೀಡಿ, ಆಶೀರ್ವಾದ (Haveri News) ಪಡೆದುಕೊಂಡರು.
ಶನಿವಾರ ಬೆಳಗ್ಗೆಯಿಂದಲೇ ಪ್ರಚಾರ ಆರಂಭಿಸಿದ ಬಸವರಾಜ ಬೊಮ್ಮಾಯಿ ಅವರು, ಭಾರತೀಯ ಜನತಾ ಪಕ್ಷದ ಹಾವೇರಿ ಜಿಲ್ಲಾ ಘಟಕದಿಂದ ಏರ್ಪಡಿಸಲಾಗಿದ್ದ ಹಾವೇರಿ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದರು.
ಇದನ್ನೂ ಓದಿ: Karnataka Weather : ಕಲಬುರಗಿ ಸೇರಿ 3 ಜಿಲ್ಲೆಗಳಿಗೆ ತಟ್ಟಿದ ಬೇಸಿಗೆ ಬಿಸಿ
ವಿವಿಧೆಡೆ ರೋಡ್ ಷೋ
ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದಲ್ಲಿರುವ ಪಾರ್ವತಿ ಪರಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ರೋಡ್ ಷೋ ಮಾಡುವ ಮೂಲಕ ಮತಯಾಚನೆ ಮಾಡಿದರು.
ಗುತ್ತಲ ಪಟ್ಟಣದ ಕಲ್ಮಠಕ್ಕೆ ಭೇಟಿ ನೀಡಿ ಶ್ರೀ ಗುರುಸಿದ್ದ ಸ್ವಾಮೀಜಿಗಳ ದರ್ಶನ ಪಡೆದು, ಪ್ರಮುಖ ಬೀದಿಗಳಲ್ಲಿ ರೋಡ್ ಷೋ ಮಾಡುವ ಮೂಲಕ ಮತಯಾಚನೆಯನ್ನು ಮಾಡಿದರು. ತದನಂತರ ಹೇಮಗಿರಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಹಾವನೂರು ಗ್ರಾಮದ ಪ್ರಮುಖ ಬೀದಿಗಳಲ್ಲಿ ರೋಡ್ ಷೋ ಮಾಡುವ ಮೂಲಕ ಮತಯಾಚನೆಯನ್ನು ಮಾಡಿದರು. ಅಲ್ಲದೇ ಗ್ರಾಮದ ಆದಿದೇವತೆ ಶ್ರೀ ಗ್ರಾಮದೇವಿಯ ದರ್ಶನ ಪಡೆದರು. ಇನ್ನು ಇದೇ ಸಂಧರ್ಭದಲ್ಲಿ ಗ್ರಾಮದ ಮುಸ್ಲಿಂ ಬಾಂಧವರು ಸ್ವಾಗತಿಸುವ ಮೂಲಕ ಬಸವರಾಜ ಬೊಮ್ಮಾಯಿಯವರಿಗೆ ತಮ್ಮ ಬೆಂಬಲ ಸೂಚಿಸಿದರು.
ನೆಗಳೂರು ಗ್ರಾಮದ ಪ್ರಮುಖ ಬೀದಿಗಳಲ್ಲಿ ರೋಡ್ ಷೋ ಮಾಡುವ ಮೂಲಕ ಮತಯಾಚನೆಯನ್ನು ಮಾಡಿದರು. ಇದೇ ಸಂದರ್ಭದಲ್ಲಿ ಗ್ರಾಮದ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠಕ್ಕೆ ಭೇಟಿ ನೀಡಿ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು. ನಂತರ ಹೊಸರಿತ್ತಿ, ಕರ್ಜಗಿ, ದೇವಗಿರಿ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು.
ಇದನ್ನೂ ಓದಿ: Drink Water In Summer: ಬೇಸಿಗೆಯಲ್ಲಿ ನೀರು ಎಷ್ಟು ಮತ್ತು ಹೇಗೆ ಕುಡಿಯಬೇಕೆನ್ನುವುದು ತಿಳಿದಿರಲಿ
ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಖಂಡಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಈ ಚುನಾವಣೆಯಲ್ಲಿ ತಮಗೆ ಮತ ನೀಡಿ ಆಶೀರ್ವದಿಸುವಂತೆ ಮನವಿ ಮಾಡಿದರು.