ಹಾವೇರಿ
ಹಾವೇರಿ ‘ಹೊಂಡ’ ಸಿಟಿ; ರಸ್ತೆಯಲ್ಲಿ ಗಾಡಿ ಪಲ್ಟಿ!
ಕಬ್ಬಿಣದ ರಾಡ್ ಗಳನ್ನು ಹೆರಿಕೊಂಡು ಸಾಗುತ್ತಿದ್ದ ವಾಹನವೊಂದು ಹೊಂದಕ್ಕೆ ಹೋಗಿದ್ದು ಸಂಪೂರ್ಣ ಗಾಡಿ ಮಗಚಿಬಿದ್ದಿದೆ. ಗಾಯಗೊಂಡ ವಾಹನ ಚಾಲಕನನ್ನು ಅ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹಾವೇರಿ: ಹಾವೇರಿಯಲ್ಲಿ ರಸ್ತೆ ಗುಂಡಿಯಾಗಿದ್ದು ಒಂದು ಟಂಟಂ ವಾಹನ ಬಿದ್ದ ಘಟನೆ ಸಾರ್ವಜನಿಕರಿಗೆ ರಸ್ತೆ ಕಾಮಗಾರಿಯ ಬಗ್ಗೆ ಅಸಡ್ಡೆ ಉಂಟುಮಾಡಿದೆ. ರಸ್ತೆಯಲ್ಲಿದ್ದ ಹೊಂಡದಲ್ಲಿ ಟಂಟಂ ವಾಹನ ಸಾಗಿದ್ದು, ವಾಹನ ಪಲ್ಟಿ ಯಾಗಿದೆ.
ಗುತ್ತಲ ಪಟ್ಟಣದ ರಾಣೆಬೆನ್ನೂರು ರಸ್ತೆಯ ಪೆಟ್ರೋಲ್ ಬಂಕ್ ಎದುರು ಈ ಘಟನೆ ಸಂಭವಿಸಿದೆ. ಅಲ್ಲದೆ, ಈ ಅಪಘಾತದಲ್ಲಿ ವಾಹನ ಚಾಲಕ ಸಂಪೂರ್ಣ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಬ್ಬಿಣದ ರಾಡ್ ಗಳನ್ನು ಹೆರಿಕೊಂಡು ಸಾಗುತ್ತಿದ್ದ ವಾಹನವೊಂದು ಹೊಂದಕ್ಕೆ ಹೋಗಿದ್ದು ಸಂಪೂರ್ಣ ಗಾಡಿ ಮಗಚಿಬಿದ್ದಿದೆ.
ಈ ರೀತಿಯ ಘಟನೆ ಅನೇಕ ಬಾರಿ ಸಂಭವಸಿದ್ದು ಸ್ಥಳೀಯರು ಈ ಕುರಿತು ಜನಪ್ರತಿನಿಧಿಗಳಿಗೆ ದೂರು ನೀಡಿದ್ದರು. ಆದರೆ, ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ. ಮಳೆ ಬಂದಾಗ ಹೊಂಡಗಳಲ್ಲಿ ನೀರು ತುಂಬಿಕೊಂಡು ಕೆರೆಯಂತಾಗುವ ರಸ್ತೆಗಳಲ್ಲಿ ಸುರಕ್ಷಿತವಾಗಿ ಸಂಚರಿಸುವುದು ಹೇಗೆ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ರಸ್ತೆ ಕಾಮಗಾರಿ ನಡೆದುದನ್ನು ಕಾಣದ ಸ್ಥಳೀಯರು ಈ ವಿಷಯದ ಬಗ್ಗೆ ಸರ್ಕಾರವು ಅಸಡ್ಡೆ ಮಾಡದೆ ಗಂಭೀರವಾಗಿ ಕಾರ್ಯನಿರ್ವಹಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಜೊಮ್ಯಾಟೋ ವಿರುದ್ಧ ದಾವಣಗೆರೆಯಲ್ಲಿ ಪ್ರತಿಭಟನೆ
ಉಡುಪಿ
Weather Report: ಭಾನುವಾರ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ; ಗಾಳಿ ವೇಗವೂ ಹೆಚ್ಚಲಿದೆ ಎಂದ ಹವಾಮಾನ ಇಲಾಖೆ
Weather report: ಉತ್ತರ ಒಳನಾಡಿನಲ್ಲಿ ಬ್ರೇಕ್ ನೀಡಿರುವ ಮಳೆರಾಯ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ (Rain News) ಅಬ್ಬರಿಸಲಿದ್ದಾನೆ. ಭಾನುವಾರ (ಮೇ 28) ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ (Bangalore Rain) ಸಾಧ್ಯತೆ ಇದೆ.
ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಏರಿಕೆಯ ನಡುವೆಯು ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುವ (Weather Report) ಸಾಧ್ಯತೆ ಇದೆ. ಚಾಮರಾಜನಗರ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Update) ಮುನ್ಸೂಚನೆಯನ್ನು ನೀಡಿದೆ.
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಸೇರಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವೂ ಗಂಟೆಗೆ 30-40 ಕಿ.ಮೀ ವ್ಯಾಪಿಸಲಿದೆ.
ಪ್ರಮುಖ ನಗರಗಳಲ್ಲಿನ ಪ್ರಸ್ತುತ ಹವಾಮಾನ ಹೀಗಿದೆ
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 40 ಡಿ.ಸೆ – 26 ಡಿ.ಸೆ
ಗದಗ: 38 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 23 ಡಿ.ಸೆ
ಬೆಳಗಾವಿ: 34 ಡಿ.ಸೆ – 21 ಡಿ.ಸೆ
ಕಾರವಾರ: 36 ಡಿ.ಸೆ – 27 ಡಿ.ಸೆ
ಮಂಗಳೂರು: 34 ಡಿ.ಸೆ – 25 ಡಿ.ಸೆ
ಹೊನ್ನಾವರ: 34 ಡಿ.ಸೆ- 25 ಡಿ.ಸೆ
ಬೆಂಗಳೂರು ನಗರ: 33 ಡಿ.ಸೆ – 22 ಡಿ.ಸೆ
ಕರ್ನಾಟಕ
Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
State Cabinet Expansion: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಈಗ ಭರ್ತಿಯಾಗಿದೆ. ಹೀಗಾಗಿ ಮುಂದಿನ ಬದಲಾವಣೆವರೆಗೂ ಯಾರಿಗೂ ಅವಕಾಶ ಇಲ್ಲ. ಇದು ಕೆಲವು ಸಚಿವಾಕಾಂಕ್ಷಿಗಳ ತೀವ್ರ ಅಸಮಾಧಾನಕ್ಕೆ ಕಾರಣವಾಗಿದ್ದು, ಕೆಲವರು ಬಹಿರಂಗವಾಗಿಯೇ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹಾವೇರಿ ಜಿಲ್ಲೆಯ ಐವರು ಸಚಿವರು ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿ ತಮ್ಮ ಕ್ಷೇತ್ರಗಳತ್ತ ತೆರಳಿದ್ದಾರೆ.
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ವಿಸ್ತರಣೆ (Karnataka Cabinet expansion) ಆಗಿದ್ದು, ಶನಿವಾರ (ಮೇ 27) 24 ಮಂದಿ ಸೇರ್ಪಡೆಯಾಗುವ ಮೂಲಕ ಎಲ್ಲ 34 ಸ್ಥಾನಗಳೂ ಭರ್ತಿಯಾಗಿವೆ. ಇದು ಈಗ ಪಕ್ಷದೊಳಗಿನ ಅಸಮಾಧಾನಕ್ಕೆ ಕಾರಣವಾಗಿದ್ದು, ಆಕಾಂಕ್ಷಿತ ನಾಯಕರು ತಮ್ಮ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಈ ವೇಳೆ ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್‌ನಿಂದ ಐವರು ಶಾಸಕರು ಆಯ್ಕೆಯಾಗಿದ್ದರೂ ಒಬ್ಬರಿಗೂ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಎಲ್ಲರೂ ಮುನಿಸಿಕೊಂಡಿದ್ದು, ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿ ತಮ್ಮ ತಮ್ಮ ಕ್ಷೇತ್ರಗಳತ್ತ ಮುಖ ಮಾಡಿದ್ದಾರೆ.
ಬೆಂಬಲಿಗರ ಒತ್ತಡಕ್ಕೆ ಮಣಿದ ಐವರು ಶಾಸಕರು
ಸಚಿವ ಸಂಪುಟದಲ್ಲಿ ಹಾವೇರಿ ಜಿಲ್ಲೆಗೆ ಪ್ರಾತಿನಿಧ್ಯ ಸಿಗದ ಹಿನ್ನೆಲೆಯಲ್ಲಿ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಿಂದ ಹಾವೇರಿ ಜಿಲ್ಲೆಯ 5 ಐವರು ಶಾಸಕರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ, ಪ್ರಕಾಶ ಕೋಳಿವಾಡ, ಯು.ಬಿ. ಬಣಕಾರ, ಶ್ರೀನಿವಾಸ ಮಾನೆ ಅವರು ದೂರ ಉಳಿದಿದ್ದಾರೆ. ತಮಗೆ ಸ್ಥಾನ ಸಿಗದೆ ಇರುವುದಕ್ಕೆ ತೀವ್ರ ಬೇಸರ ಹೊರಹಾಕಿರುವ ಈ ನಾಯಕರು, ಬೆಂಗಳೂರಿನಿಂದ ಹಾವೇರಿಯತ್ತ ಮುಖ ಮಾಡಿದ್ದಾರೆ. ಈಗಾಗಲೇ ಬೆಂಗಳೂರು ಬಿಟ್ಟು ತಮ್ಮ ಕ್ಷೇತ್ರಗಳತ್ತ ಇವರೆಲ್ಲರೂ ಪ್ರಯಾಣ ಬೆಳೆಸಿದ್ದಾರೆ.
ಇದನ್ನೂ ಓದಿ: Karnataka Cabinet expansion: ಸಿದ್ದರಾಮಯ್ಯ ಸಂಪುಟದಲ್ಲಿ ಸಿಗದ ಸ್ಥಾನ; ಅಸಮಾಧಾನ ಸ್ಫೋಟ
ಹಾವೇರಿ ಬಿಜೆಪಿ ಭದ್ರಕೋಟೆಯಾಗಿದ್ದರೂ 5 ಕಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದರು. ಆದರೂ ಇವರಿಗೆ ಪ್ರಾತಿನಿಧ್ಯ ಸಿಗದ ಕಾರಣ ಹಾವೇರಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ಸಾಮಾಜಿಕ ಜಾಲತಾಣ ಸೇರಿದಂತೆ ಹಲವು ಕಡೆ ಆಕ್ರೋಶವನ್ನು ಹೊರ ಹಾಕಿದ್ದಾರೆ. ಅಲ್ಲದೆ, ಪ್ರಮಾಣ ವಚನ ಕಾರ್ಯಕ್ರಮಕ್ಕೆ ಶಾಸಕರು ಗೈರಾಗುವಂತೆ ಆಗ್ರಹಿಸಿದ್ದರು. ಹೀಗಾಗಿ ಕಾರ್ಯಕರ್ತರ ಒತ್ತಡಕ್ಕೆ ಮಣಿದ ಹಾವೇರಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಬೆಂಗಳೂರಿನಿಂದ ನಿರ್ಗಮಿಸಿದ್ದಾರೆ.
ಚಾಮರಾಜನಗರದಲ್ಲಿ ಶಾಸಕ ಪುಟ್ಟರಂಗಶೆಟ್ಟಿ ಬೆಂಬಲಿಗರ ಆಕ್ರೋಶ
ಸಚಿವ ಸಂಪುಟದಲ್ಲಿ ಉಪ್ಪಾರ ಸಮುದಾಯವನ್ನು ಕಡೆಗಣನೆ ಮಾಡಲಾಗಿದೆ ಎಂದು ಚಾಮರಾಜನಗರದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಉಪ್ಪಾರ ಸಮುದಾಯ ಮುಖಂಡರು ಆಕ್ರೋಶ ಹೊರಹಾಕಿದ್ದು, ನಾಲ್ಕು ಬಾರಿ ಗೆದ್ದಿರುವ ಶಾಸಕರಿಗೆ ಸಚಿವ ಸ್ಥಾನ ಕೊಡದಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ಮಳವಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ನರೇಂದ್ರ ಸ್ವಾಮಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಪಿ.ಎಂ. ನರೇಂದ್ರ ಸ್ವಾಮಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ ವ್ಯಕ್ತಪಡಿಸಿದ್ದಾರೆ. ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.
ತನ್ವೀರ್ ಸೇಠ್ ಬೆಂಬಲಿಗರಿಂದ ಪ್ರತಿಭಟನೆ
ಶಾಸಕ ತನ್ವೀರ್ ಸೇಟ್‌ಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರಿಂದ ಮೈಸೂರಿನಲ್ಲಿ ಪ್ರತಿಭಟನೆ ನಡೆದಿದೆ. ಮೈಸೂರಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆದಿದ್ದು, ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಲಾಗಿದೆ. ತನ್ವೀರ್ ಸೇಠ್ ಹಳೇ ಮೈಸೂರು ಭಾಗದಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈ ಬಾರಿ ಅವರನ್ನು ಕೈಬಿಟ್ಟಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: Karnataka Cabinet expansion: ಸಂಪುಟದಲ್ಲಿನ್ನು ಸೀಟಿಲ್ಲ; ನಾಯಕರ, ಬೆಂಬಲಿಗರ ಆಕ್ರೋಶಕ್ಕೆ ಬೆಲೆ ಇಲ್ಲ
ಟಿ. ರಘುಮೂರ್ತಿಗೆ ಸಚಿವ ಸ್ಥಾನ ನೀಡಿ
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿಗೆ ಸಚಿವ ಸ್ಥಾನ ನೀಡುವಂತೆ ವಿಜಯಸೇನೆ ವತಿಯಿಂದ ಸರ್ಕಾರಕ್ಕೆ ಒತ್ತಾಯ ಮಾಡಲಾಗಿದೆ. ಮುಖಂಡರು ರಕ್ತದಲ್ಲಿ ಪತ್ರ ಬರೆದು ಆಕ್ರೋಶವನ್ನು ಹೊರಹಾಕಿದ್ದಾರೆ. ವಿಜಯಸೇನೆ ಅಧ್ಯಕ್ಷ ಕೆ.ಟಿ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಬಲಿಗರು ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಕುಳಿತು ಘೋಷಣೆ ಕೂಗಿದ್ದಾರೆ. ಮೂರು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರೂ ಅವರಿಗೆ ಸಚಿವ ಸ್ಥಾನ ಕೊಡದೇ ಇರುವುದು ಇವರ ಅಸಮಾಧಾನಕ್ಕೆ ಕಾರಣವಾಗಿದೆ.
ಕರ್ನಾಟಕ
Congress Guarantee: ಕರೆಂಟ್ ಬಿಲ್ ಕೇಳಿದ್ರೆ ಕಟ್ಟಿ ಹಾಕ್ತೇವೆ; ಸಿದ್ದರಾಮಯ್ಯ ಸ್ಟೈಲಲ್ಲೇ ಡೈಲಾಗ್!
Congress Guarantee: ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಗೊಂದಲ ಮುಂದುವರಿದಿದೆ. ಈ ಯೋಜನೆಗಳು ಜಾರಿಯಾಗುವ ಮುನ್ನವೇ ವಿದ್ಯುತ್ ಬಿಲ್ ಕಟ್ಟಲು ಹಾಗೂ ಬಸ್‌ಗಳಲ್ಲಿ ಟಿಕೆಟ್ ಪಡೆಯಲು ನಿರಾಕರಿಸುತ್ತಿರುವ ಘಟನೆಗಳು ಕಂಡುಬರುತ್ತಿವೆ.
ಬೆಂಗಳೂರು: ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಅಸ್ತ್ರ ತಲೆನೋವಾಗಿದೆ. 200 ಯುನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿ 5 ಗ್ಯಾರಂಟಿಗಳನ್ನು (Congress Guarantee) ಸರ್ಕಾರ ಜಾರಿ ಮಾಡಬೇಕು ಎಂದು ವಿರೋಧ ಪಕ್ಷಗಳ ಜತೆಗೆ ಸಾರ್ವಜನಿಕರು ಕೂಡಾ ಒತ್ತಾಯಿಸುತ್ತಿದ್ದಾರೆ. ಅಲ್ಲದೆ ಕೆಲವೆಡೆ ಜನರು ಕರೆಂಟ್ ಬಿಲ್ ಕಟ್ಟಲು ಹಾಗೂ ಸಾರಿಗೆ ಬಸ್‌ಗಳಲ್ಲಿ ಟಿಕೆಟ್ ಪಡೆಯಲು ನಿರಾಕರಿಸುತ್ತಿರುವ ಘಟನೆಗಳು ನಡೆಯುತ್ತಿವೆ. ಇಂತಹ ಘಟನೆಗಳು ಶುಕ್ರವಾರವೂ ಕಂಡುಬಂದಿದೆ.
ಮಹದೇವಪ್ಪ ನಿಂಗೂ ಫ್ರೀ, ನಂಗೂ ಫ್ರೀ, ಎಲ್ಲರಿಗೂ ಫ್ರೀ
ಮಂಡ್ಯ: ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಉಚಿತ ಭಾಗ್ಯಗಳ ಪೇಚಿಗೆ ಚೆಸ್ಕಾಂ ಸಿಬ್ಬಂದಿ ಸಿಲುಕಿದ್ದಾರೆ. ವಿದ್ಯುತ್ ಬಿಲ್ ಕಟ್ಟಿ ಎಂದು ಹೋದರೆ ಜನರು ನಿರಾಕರಿಸುತ್ತಿರುವುದು ಕಂಡುಬಂದಿದೆ. ಹೀಗಾಗಿ ಬಾಕಿ ವಿದ್ಯುತ್ ಬಿಲ್ ವಸೂಲಿ ಮಾಡುವುದು ಚೆಸ್ಕಾಂ ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದೆ.
ಕರೆಂಟ್ ಬಿಲ್ ಕಟ್ಟಿ ಎಂದಿದ್ದಕ್ಕೆ ವ್ಯಕ್ತಿಯೊಬ್ಬ, ಸಿದ್ದರಾಮಯ್ಯರಂತೆ ಡೈಲಾಗ್ ಹೊಡೆದಿರುವ ಘಟನೆ ನಡೆದಿದೆ.
ಮಂಡ್ಯ ಕೆರಗೊಡಿನಲ್ಲಿ ವ್ಯಕ್ತಿಯೊಬ್ಬರು, ಮಹದೇವಪ್ಪ ನಿಂಗೂ ಫ್ರೀ, ನಂಗೂ ಫ್ರೀ ಎಲ್ಲರಿಗೂ ಫ್ರೀ ಕಣಪ್ಪ. ಮಾತಿಗೆ ತಪ್ಪಲ್ಲಪ್ಪ, ನಮ್ಮ ಸರ್ಕಾರ ಬಂದ 24 ಗಂಟೆಯೊಳಗೆ ಯಾರೂ ಕರೆಂಟ್ ಬಿಲ್ ಕಂಟ್ಟಂಗಿಲ್ಲ, ಉಚಿತ ವಿದ್ಯುತ್ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದರಲ್ಲ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಈಗ ಯಾವುದೇ ಬಿಲ್ ಕಟ್ಟಲ್ಲ ಎಂದಿದ್ದಾರೆ. ಈ ವೇಳೆ ಹಳೆ ಬಿಲ್ ಕಟ್ಟಣ್ಣ ಎಂದು ಚೆಸ್ಕಾಂ ಸಿಬ್ಬಂದಿ ಕೇಳಿದಾಗ, ಹಳೆ ಬಿಲ್ ಕಟ್ಟುತ್ತೇವೆ ಎಂದು ವ್ಯಕ್ತಿ ತಿಳಿಸಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್
ಇದನ್ನೂ ಓದಿ | Congress Guarantee: ನಾನು ಕರೆಂಟ್ ಬಿಲ್ ಕಟ್ಟಲ್ಲ: ಮಾಜಿ ಸಚಿವ ಆರ್. ಅಶೋಕ್ ಘೋಷಣೆ
ಫ್ರೀ ಕೊಡ್ತೀವಿ ಅಂತ ಹೇಳಿದ್ದಾರೆ, ಕೊಡದಿದ್ದರೆ ಜನ ಬಿಡಲ್ಲ
ಹಾವೇರಿ: ಮಹಿಳೆಯವರಿಗೆ ಬಸ್ ಪ್ರಯಾಣ ಉಚಿತ ವಿಚಾರದಲ್ಲಿ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ಹೊರಹಾಕಿರುವ ಘಟನೆ ನಗರದಲ್ಲಿ ನಡೆದಿದೆ.
ಚುನಾವಣೆಗೆ ಮೊದಲು ಮಹಿಳೆಯರಿಗೆ ಬಸ್ ಪ್ರಯಾಣ ಎಂದು ಹೇಳಿದ್ದರು, ಇನ್ನೂ ಫ್ರೀ ಕೊಟ್ಟಿಲ್ಲ. ಹಣ ಕೊಟ್ಟು ಟಿಕೆಟ್ ಪಡೆದು ಪ್ರಯಾಣ ಮಾಡುತ್ತಿದ್ದೇವೆ. ಫ್ರೀ ಕೊಡುತ್ತೇವೆ ಅಂತ ಹೇಳಿದ್ದಾರೆ, ಕೊಡದಿದ್ದರೆ ಜನ ಬಿಡಲ್ಲ ಎಂದು ಬಸ್ ಪ್ರಯಾಣ ಉಚಿತ ಮಾಡದಿದ್ದಕ್ಕೆ ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ.
ಕಾಂಗ್ರೆಸ್‌ಗೆ ಮತಹಾಕಿದ್ದೇವೆ, ಬಿಲ್ ಕಟ್ಟಲ್ಲ
ಗದಗ: ಕಾಂಗ್ರೆಸ್ ಸರ್ಕಾರ ಉಚಿತ ವಿದ್ಯುತ್ ಭರವಸೆ ನೀಡಿದೆ. ಹೀಗಾಗಿ ನಾವು ವಿದ್ಯುತ್ ಬಿಲ್ ಕಟ್ಟಲ್ಲ ಎಂದು ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಪುಟಗಾಂವ್ ಬಡ್ನಿ ಗ್ರಾಮಸ್ಥರು ಹೇಳಿದ್ದಾರೆ.
ವಿದ್ಯುತ್ ಬಿಲ್ ವಸೂಲಿಗೆ ಬಂದಿದ್ದ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿರುವ ಜನರು, ಕಾಂಗ್ರೆಸ್‌ನವರು ನಮಗೆ ಉಚಿತ ಭರವಸೆ ನೀಡಿ ಓಟು ಹಾಕಿಸಿಕೊಂಡಿದ್ದಾರೆ. ಐದು ಗ್ಯಾರಂಟಿ ಭರವಸೆ ನೀಡಿದ್ದಾರೆ. ಅದರಂತೆ ಕಾಂಗ್ರೆಸ್‌ಗೆ ಮತ ಹಾಕಿ ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದೇವೆ. ನೀವು ಏನು ಮಾಡಿದರೂ ನಾವು ಬಿಲ್ ಕಟ್ಟಲ್ಲ ಎಂದು ವ್ಯಕ್ತಿಯೊಬ್ಬರು ಹೇಳಿದ್ದರಿಂದ ಬಂದ ದಾರಿಗೆ ಸುಂಕ ಇಲ್ಲ ಎಂದು ಕೆಇಬಿ ವಿದ್ಯುತ್ ಸಿಬ್ಬಂದಿ ಮರಳಿದ್ದಾರೆ.
ಇದನ್ನೂ ಓದಿ | Karnataka Politics: ಕುಮಾರಸ್ವಾಮಿಯವರನ್ನೇ ಬಿಜೆಪಿ ನಾಯಕನಾಗಿಸಿ ಎಂದ ಕಾರ್ಯಕರ್ತರು; ಕೊನೆಗೂ ಫೀಲ್ಡಿಗಿಳಿದ ಬಿಜೆಪಿ !
ಬೆಂಗಳೂರಿನಲಿ ಬಸ್ ಫ್ರೀ ಯಾವಾಗ ಎಂದ ಮಹಿಳೆಯರು
ಬೆಂಗಳೂರು: ಸರ್ಕಾರ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ಎಂದಿದ್ದೇ ತಡ ಕೆಲಕಡೆಗಳಲ್ಲಿ ಮಹಿಳೆಯರು ಟಿಕೆಟ್ ತೆಗೆದುಕೊಳ್ಳದೇ ಕಂಡಕ್ಟರ್ ಜತೆ ಜಗಳಕ್ಕಿಳಿದಿದ್ದ ಘಟನೆ ನಡೆದಿದ್ದವು. ಇದೀಗ ಸಿಲಿಕಾನ್ ಸಿಟಿಯ ಮಹಿಳೆಯರು ಕೂಡ ಸರ್ಕಾರ ಕೊಟ್ಟ ಮಾತನ್ನು ಆದಷ್ಟು ಬೇಗ ಜಾರಿಗೆ ತರಲಿ ಎನ್ನುತ್ತಿದ್ದಾರೆ.
ಇನ್ನು ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಎಂದು ಕಾಂಗ್ರೆಸ್ ಹೇಳಿತ್ತು. ಜಾರಿ ಮಾಡಲು ಸಾಧ್ಯವಿಲ್ಲದಿದ್ದರೆ ಯಾಕೆ ಭರವಸೆ ನೀಡಬೇಕು ಎಂದು ಪ್ರಶ್ನಿಸಿರುವ ಮಹಿಳೆಯರು, ಸರ್ಕಾರದ ದೃಷ್ಟಿಯಲ್ಲಿ ಯೋಚಿಸಿದರೆ ಇದು ಅಸಾಧ್ಯ ಅಂತ ಕೂಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ
Food Poisoning: ಮದುವೆ ಮನೆ ಕಾರ್ಯಕ್ರಮದಲ್ಲಿ ಊಟ ಸೇವಿಸಿದ್ದ ನೂರಾರು ಮಂದಿ ಅಸ್ವಸ್ಥ
ಮದುವೆ ಮನೆಯಲ್ಲಿ ಊಟ ಸೇವಿಸಿದ್ದ ನೂರಾರು ಮಂದಿಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಎಲ್ಲರನ್ನೂ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಎಲ್ಲರ ಆರೋಗ್ಯದಲ್ಲೂ ಸುಧಾರಣೆ ಕಂಡುಬಂದಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಹಾವೇರಿ: ರಟ್ಟಿಹಳ್ಳಿ ತಾಲೂಕಿನ ಚಪ್ಪರದಹಳ್ಳಿ ಗ್ರಾಮದಲ್ಲಿ ವಿಷ ಆಹಾರ ಸೇವನೆ (Food Poisoning) ಮಾಡಿದ ನೂರಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋಮವಾರ ಹಾಗೂ ಮಂಗಳವಾರ ನಡೆದ ಮದುವೆ ಮನೆಯೊಂದರ ಕಾರ್ಯಕ್ರಮದಲ್ಲಿ ಆಹಾರ ಸೇವನೆ ಮಾಡಿದ್ದ ನೂರಾರು ಜನರ ಆರೋಗ್ಯದಲ್ಲಿ ಏರುಪೇರಾಗಿದೆ. ಕೆಲವರಿಗೆ ವಾಂತಿ-ಭೇದಿಯಾಗಿದೆ. ಇದರಿಂದ ಬುಧವಾರ ರಟ್ಟಿಹಳ್ಳಿ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದೌಡಾಯಿಸಿದ್ದಾರೆ.
ಇದನ್ನೂ ಓದಿ: Education News : ಮೇ 29 ರಿಂದ ನೂತನ ಶೈಕ್ಷಣಿಕ ವರ್ಷ ಆರಂಭ; ಮೇ 31 ರಿಂದ ತರಗತಿಗಳು ಶುರು
ಟ್ರ್ಯಾಕ್ಟರ್, ಆಟೋ, ಟಂ ಟಂಗಳಲ್ಲಿ ಆಸ್ಪತ್ರೆಗೆ ಜನರು ಬರುತ್ತಿದ್ದಾರೆ. ಕೆಲವರನ್ನು ದಾಖಲು ಮಾಡಿಕೊಳ್ಳಲಾಗಿದೆ. ಈ ವೇಳೆ ಇನ್ನು ಕೆಲವರು ಆತಂಕಕ್ಕೊಳಗಾಗಿ ಆಸ್ಪತ್ರೆಗೆ ಧಾವಿಸಿದವರೂ ಇದ್ದಾರೆ ಎಂದು ಹೇಳಲಾಗಿದೆ. ಸದ್ಯ ಎಲ್ಲರೂ ಕ್ಷೇಮವಾಗಿದ್ದು, ಯಾವುದೇ ಆತಂಕವನ್ನು ಪಡಬೇಕಿಲ್ಲ ಎಂದು ವೈದ್ಯಾಧಿಕಾರಿಗಳು ಹೇಳಿದ್ದಾರೆ.
-
ಕರ್ನಾಟಕ23 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ23 hours ago
Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
-
ಕಿರುತೆರೆ21 hours ago
Deepak Gowda: ‘ಶ್ರೀರಸ್ತು ಶುಭಮಸ್ತು’ಧಾರಾವಾಹಿಯಿಂದ ಹೊರನಡೆದ ದೀಪಕ್ ಗೌಡ; ಪಾತ್ರಕ್ಕೆ ಬಂದವರು ಕಿರುತೆರೆಗೆ ಹೊಸಬರಲ್ಲ!
-
ಕರ್ನಾಟಕ17 hours ago
Karnataka Cabinet: ತಾತನನ್ನು ಮಿನಿಸ್ಟರ್ ಮಾಡಿ ಪ್ಲೀಸ್: ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು
-
ಕ್ರಿಕೆಟ್13 hours ago
World Cup 2023 : ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ
-
ದೇಶ6 hours ago
New Parliament Building: ಇಂದು ಹೊಸ ಸಂಸತ್ ಭವನ ಉದ್ಘಾಟನೆ; ಹೇಗೆ ನಡೆಯಲಿದೆ ಕಾರ್ಯಕ್ರಮ?
-
ಕರ್ನಾಟಕ14 hours ago
Tumkur News: ಹೆಜ್ಜೇನು ದಾಳಿ; ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ
-
EXPLAINER4 hours ago
ವಿಸ್ತಾರ Explainer: ಹೊಸ ಸಂಸತ್ ಭವನದಲ್ಲಿ ಸ್ಥಾಪಿತಗೊಂಡ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದರ ಮಹತ್ವ?