Site icon Vistara News

ಕನ್ನಡ ಸಾಹಿತ್ಯ ಸಮ್ಮೇಳನ | ಹಾವೇರಿಯ ಶಾಲೆಗಳಿಗೆ ಜ.6 ಮತ್ತು7 ರಂದು ರಜೆ ಘೋಷಣೆ

ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿ: ನಗರದಲ್ಲಿ ಜನವರಿ 6,7, 8 ರಂದು 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜನವರಿ 6 ಮತ್ತು 7 ರಂದು ರಜೆ ಘೋಷಿಸಲಾಗಿದೆ.

ಹೊರಗಿನಿಂದ ಬರುವ ಅತಿಥಿಗಳಿಗೆ ನಗರದ ಕೆಲವು ಶಾಲೆಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದ್ದು, ಈ ಶಾಲೆಗಳಿಗೆ ಜನವರಿ 4 ರಂದು ಕೂಡ ರಜೆ ನೀಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿಕೊಂಡಿತ್ತು. ಶಾಲೆಗಳಲ್ಲಿ ಅತಿಥಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ರಜೆ ನೀಡುವುದು ಅವಶ್ಯವಾಗಿದೆ ಎಂದು ಕೋರಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ತೀರ್ಮಾನ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ | ಕನ್ನಡ ಸಾಹಿತ್ಯ ಸಮ್ಮೇಳನ | ಶಾಮಿಯಾನ ಗುತ್ತಿಗೆ ನೀಡದ್ದಕ್ಕೆ ಪುರುಷೋತ್ತಮ ಬಿಳಿಮಲೆ ಸುಳ್ಳು ಆರೋಪ: ಡಾ. ಮಹೇಶ್‌ ಜೋಶಿ ಹೇಳಿಕೆ

Exit mobile version