ಹಾವೇರಿ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಬಿರುಸಿನ ಪ್ರಚಾರ (Lok Sabha Election 2024) ನಡೆಸಿದರು.
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಜತೆ ಶಾಸಕ ಶ್ರೀನಿವಾಸ ಮಾನೆ, ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.
ಗದಗನಲ್ಲಿ ಯುವ ಚೈತನ್ಯ ಸಮಾವೇಶದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ, ಈ ಬಾರಿಯ ಚುನಾವಣೆಯಲ್ಲಿ ತಮಗೆ ಮತ ನೀಡಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ಇದನ್ನೂ ಓದಿ: IPL 2024: ಆರ್ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ; ಸದ್ಯದ ಲೆಕ್ಕಾಚಾರ ಹೇಗಿದೆ?
ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಮಾತನಾಡಿ, ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಭಾರೀ ಅನ್ಯಾಯವಾಗುತ್ತಿದೆ, ರೈತರಿಗೆ ಅಗೌರವ ತರುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಬರ ಪರಿಹಾರ ವಿಚಾರದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ನಾವಿದ್ದರೆ ಬಿಡುಗಡೆ ಮಾಡುತ್ತಿದ್ದೆವು ಎಂದು ಮಾಧ್ಯಮ ಮೂಲಕ ಬೆಂಗಳೂರು, ಹಾವೇರಿಯಲ್ಲಿ ಹೇಳಿದರೇ ವಿನಃ ಒಂದು ಬಾರಿಯು ಅಮಿತ್ ಶಾ ಹಾಗೂ ಮೋದಿ ಅವರನ್ನು ಭೇಟಿಯಾಗಲಿಲ್ಲ ಎಂದು ಆರೋಪಿಸಿದ ಅವರು, ಆದರೆ ಕರ್ನಾಟಕಕ್ಕೆ ನ್ಯಾಯ ಸಿಗಲು ಅನಿವಾರ್ಯವಾಗಿ ನಾವು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗಿ ನ್ಯಾಯ ಪಡೆಯಬೇಕಾಯಿತು ಎಂದು ತಿಳಿಸಿದರು.
ದೇಶಾದ್ಯಂತ ಬಿಜೆಪಿ ವಿರೋಧಿ ಅಲೆಯಿದ್ದು, ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಜಯವಾಗಲಿದೆ ಎಂದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದಿದೆ. ಐದು ಗ್ಯಾರೆಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ ಎಂದು ತಿಳಿಸಿದರು.
ಇದನ್ನೂ ಓದಿ: Tears Of Joy: ಕಣ್ಣೀರು ಸುರಿಸುವುದರಿಂದಲೂ ಲಾಭವಿದೆ!
ಈ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.