ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದು ಕೋರಿ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಗುರುಪಾದಯ್ಯ ಮಠದ್ ಎಂಬುವರು ಶಾಸಕರ ವಿರುದ್ಧ 2015ರಲ್ಲಿ ದೂರು ಸಲ್ಲಿಸಿದ್ದರು. ಹೀಗಾಗಿ ಲೋಕಾಯುಕ್ತ ಪೊಲೀಸರು (M P Renukacharya) ಎಫ್ಐಆರ್ ದಾಖಲಿಸಿ ತನಿಖೆ ನಡೆಸಿದ್ದರು.
ಪ್ರಕರಣದ ತನಿಖೆ ಮುಕ್ತಾಯವಾಗಿ ಅಂತಿಮ ವರದಿ ಸಿದ್ಧವಾಗಿದೆ. ಸಕ್ಷಮ ಪ್ರಾಧಿಕಾರದ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ಹೈಕೋರ್ಟ್‌ನಲ್ಲಿ ಲೋಕಾಯುಕ್ತ ಪರ ವಕೀಲ ಬಿ.ಎಸ್.ಪ್ರಸಾದ್ ವಾದ ಮಂಡಿಸಿದ್ದಾರೆ. ಹೀಗಾಗಿ ಪ್ರಕರಣ ರದ್ದು ಕೋರಿದ್ದ ಎಂ.ಪಿ.ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಕೆ. ನಟರಾಜನ್ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ.
ಎಡಿಜಿಪಿ ಅಮೃತ್ ಪೌಲ್ ಜಾಮೀನು ಅರ್ಜಿ ವಜಾ
ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಬಂಧನವಾಗಿ ಜೈಲಿನಲ್ಲಿರುವ ಪ್ರಮುಖ ಆರೋಪಿ ಎಡಿಜಿಪಿ ಅಮೃತ್ ಪೌಲ್ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣದಲ್ಲಿ 4ನೇ ಬಾರಿ ಅಮೃತ್ ಪೌಲ್ ಜಾಮೀನು ಅರ್ಜಿ ವಜಾ ಸಲ್ಲಿಸಿದ್ದರು. ಎಡಿಜಿಪಿ ಅಮೃತ್ ಪೌಲ್ ಪರವಾಗಿ ವಕೀಲ ಶ್ಯಾಮ್ ಸುಂದರ್ ವಾದ ಮಂಡಿಸಿದ್ದಾರೆ. ಅಮೃತ್ ಪೌಲ್ ಅವರು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದರು.
ಇದನ್ನೂ ಓದಿ | Drowned in lake: ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ನೀರುಪಾಲು; ಇನ್ನಿಬ್ಬರು ಪಾರು
ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು
ವಿಜಯಪುರ: ಜಿಲ್ಲೆಯ ಹೂವಿನ ಹಿಪ್ಪರಗಿಯ ಹುನಸ್ಯಾಳ ಪಿಬಿ ಗ್ರಾಮದ ಬಳಿ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ಮೂಲದ ಮುಕಣ್ಣ ನಿಂಗಪ್ಪ (21) ಮೃತ ಯುವಕ. ಅಪಘಾತದ ಬಳಿಕ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.