ಬೆಂಗಳೂರು: ನಟ ಸುದೀಪ್ ವಿರುದ್ಧ ವಂಚನೆ ಆರೋಪ ಸಂಬಂಧ ನಿರ್ಮಾಪಕರ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದೆ. ವಂಚನೆ ಆರೋಪ ಮಾಡಿದ ಹಿನ್ನೆಲೆ ನಿರ್ಮಾಪಕ ಎನ್.ಎಂ.ಸುರೇಶ್ ವಿರುದ್ಧ ನಟ ಸುದೀಪ್ (Actor Sudeep) ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಆದರೆ, ಈ ಪ್ರಕರಣ ರದ್ದು ಮಾಡುವಂತೆ ನಿರ್ಮಾಪಕ ಎನ್.ಎಂ.ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಸುದ್ದಿಗೋಷ್ಠಿಯಲ್ಲಿ ಸುದೀಪ್ ವಿರುದ್ಧ ನಿರ್ಮಾಪಕರಾದ ಎಂ.ಎನ್.ಕುಮಾರ್, ಎನ್.ಎಂ.ಸುರೇಶ್ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಬೆಂಗಳೂರಿನ 13ನೇ ಎಸಿಎಂಎಂ ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು. ಆದರೆ ಸಮನ್ಸ್ ರದ್ದು ಕೋರಿ ನಿರ್ಮಾಪಕ ಎನ್.ಎಂ.ಸುರೇಶ್ ಸಲ್ಲಿಸಿದ್ದ ಅರ್ಜಿ ಸಲ್ಲಿಸಿದ್ದರು. ಆರೋಪಗಳಿಂದ ವರ್ಚಸ್ಸಿಗೆ ಧಕ್ಕೆಯಾಗಿರುವುದಾಗಿ ಸುದೀಪ್ ಹೇಳಿದ್ದಾರೆ. ವಿಚಾರಣಾ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿರುವುದು ಸೂಕ್ತವಾಗಿದೆ. ಹೀಗಾಗಿ ಪ್ರಕರಣ ರದ್ದು ಮಾಡಲು ಸಾಧ್ಯವಿಲ್ಲವೆಂದು ಹೈಕೋರ್ಟ್
ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠ ತಿಳಿಸಿದೆ.
ಇದನ್ನೂ ಓದಿ | Actress Ramya: ಮತ್ತೊಂದು ಸಿನಿಮಾದಿಂದ ಹೊರಬಂದ ರಮ್ಯಾ; ʼಉತ್ತರಕಾಂಡʼ ಚಿತ್ರದಿಂದ ಹಿಂದೆ ಸರಿದಿದ್ದೇಕೆ?
ಏನಿದು ಪ್ರಕರಣ?
9 ಕೋಟಿ ರೂ.ಗಳು ಅಡ್ವಾನ್ಸ್ ಪಡೆದು ಸಿನಿಮಾಗೆ ಡೇಟ್ಸ್ ಕೊಡದೇ ವಂಚನೆ ಮಾಡಿದ್ದಾರೆಂದು ಕಿಚ್ಚ ಸುದೀಪ್ ವಿರುದ್ಧ ನಿರ್ಮಾಪಕರಾದ ಎಂ.ಎನ್. ಕುಮಾರ್ ಹಾಗೂ ಎಂ.ಎನ್. ಸುರೇಶ್ ಆರೋಪ ಮಾಡಿದ್ದರು. ಈ ಪ್ರಕರಣ ಸಂಬಂಧ ಸುದೀಪ್ ಕೋರ್ಟ್ ಮೆಟ್ಟಿಲೇರಿ ಮಾನನಷ್ಟ ಮೊಕದ್ದೊಮೆ ದಾಖಲಿಸಿದ್ದರು. ಎಂ.ಎನ್. ಕುಮಾರ್ ಮಾಡಿರುವ ಆರೋಪಗಳಿಗೆ ಸೂಕ್ತ ದಾಖಲೆ ನೀಡಬೇಕು, ಇಲ್ಲವೇ ಸುಳ್ಳು ಆರೋಪ ಮಾಡಿದ್ದಕ್ಕೆ ಬಹಿರಂಗ ಕ್ಷಮೆ ಕೇಳಬೇಕು ಎಂದು ಸುದೀಪ್ 10 ದಿನ ಗಡುವು ನೀಡಿದ್ದರು. ಆದರೆ ಅದಕ್ಕೆ ಯಾವುದೇ ಉತ್ತರ ನೀಡದ ಹಿನ್ನೆಲೆ ಸುದೀಪ್ ಮಾನನಷ್ಟ ಮೊಕದ್ದಮೆ ದಾಖಲಿಸಿ ಕಾನೂನು ಸಮರ ಸಾರಿದ್ದರು.
ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್‌ಗೆ ಬಿಗ್ ರಿಲೀಫ್
ಬೆಂಗಳೂರು: ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ವಿಧಾನಸಭೆಗೆ ಅವರ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಚುನಾವಣೆಯಲ್ಲಿ ಮತದಾರರಿಗೆ ಆಮಿಷ ಒಡ್ಡಿ ಗೆದ್ದಿರುವ ರಿಜ್ವಾನ್ ಅರ್ಷದ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಸಂಪಂಗಿ ರಾಮನಗರದ ನಿವಾಸಿ ಬಿ ಲಕ್ಷ್ಮಿದೇವಿ ಎಂಬುವವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿರುವ ನ್ಯಾ. ಎಸ್ ವಿಶ್ವಜಿತ್ ಶೆಟ್ಟಿ ರವರ ಏಕಸದಸ್ಯ ಪೀಠ, ಅರ್ಜಿಯನ್ನು ವಜಾ ಮಾಡಿದೆ. ಇದರಿಂದ ಶಾಸಕ ನಿರಾಳರಾಗುವಂತಾಗಿದೆ.
ಪ್ರಕರಣದ ಹಿನ್ನೆಲೆ
ಪ್ರಜಾ ಪ್ರತಿನಿಧಿ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿ ಅಕ್ರಮ ಆರೋಪದಲ್ಲಿ ರಿಜ್ವಾನ್ ಅರ್ಷದ್ ವಿರುದ್ಧ ಲಕ್ಷ್ಮಿದೇವಿ ಅರ್ಜಿ ಸಲ್ಲಿಸಿದ್ದರು. ಚುನಾವಣೆ ಅಕ್ರಮ ಎಸಗಿರುವ ಶಾಸಕರನ್ನು 6 ವರ್ಷಗಳ ಕಾಲ ಎಲೆಕ್ಷನ್‌ನಿಂದ ಅಮಾನತಿನಲ್ಲಿಡಬೇಕು, ಚುನಾವಣೆಗೆ ಸ್ಪರ್ಧಿಸದಂತೆ ತಡೆಯಬೇಕು ಎಂದು ಮನವಿ ಮಾಡಿದ್ದರು.
ಇದನ್ನೂ ಓದಿ | Lok Sabha Election 2024: ಸಿದ್ದರಾಮಯ್ಯ ಹಿಂದೆ ಏನಿದೆ? ಹಿಂದೆಲ್ಲ ನೋಡಬೇಡ ಅಂದ್ರಾ ಸಿಎಂ?
ರಿಜ್ವಾನ್ ಅರ್ಷದ್ ಅವರು ಗ್ಯಾರಂಟಿ ಯೋಜನೆಗಳ ಆಮಿಷ ಒಡ್ಡಿ ಗೆದ್ದಿದ್ದಾರೆ. ಮತದಾರರಿಗೆ ಆಮಿಷವೊಡ್ಡುವುದು ಲಂಚ ಮತ್ತು ಭ್ರಷ್ಟಾಚಾರಕ್ಕೆ ಸಮವಾಗಿದೆ. ಇದು ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123 (1) & ಸೆ. 123 (2) ಪ್ರಕಾರ ಅಕ್ರಮವಾಗಿದೆ. ಸೆಕ್ಷನ್ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧ. ಹೀಗಾಗಿ ರಿಜ್ವಾನ್ ಅರ್ಷದ್ ಆಯ್ಕೆ ಅಸಿಂಧು ಎಂದು ಘೋಷಿಸಲು ಅರ್ಜಿದಾರರು ಹೈಕೋರ್ಟ್‌ಗೆ ಮನವಿ ಮಾಡಿದ್ದರು.