Site icon Vistara News

Chakravarthy Sulibele: ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಕೇಸ್‌ಗೆ ಹೈಕೋರ್ಟ್ ತಡೆಯಾಜ್ಞೆ

Chakravarthy Sulibele

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ನಡೆದ ಪ್ರತಿಭಟನೆ ಪ್ರಕರಣದಲ್ಲಿ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ವಿರುದ್ಧ ದಾಖಲಾಗಿದ್ದ ಕೇಸ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ನಗರದ ಟೌನ್ ಹಾಲ್ ಬಳಿ ಪ್ರತಿಭಟನೆಗೆ ನಿರ್ಬಂಧವಿದ್ದರೂ ಯಾವುದೇ ಅನುಮತಿ ಪಡೆಯದೆ 2022ರ ಜುಲೈ 28ರಂದು ಹಿಂದುಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಹೀಗಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ, ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯ ಈ ಕೇಸ್‌ಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಪ್ರಕರಣದ ವಿಚಾರಣೆ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್ ಖಾಸಗಿ ದೂರು ಸಲ್ಲಿಸುವಂತಿಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದ್ದರು. ಹೀಗಾಗಿ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಇದನ್ನೂ ಓದಿ | Jain muni Murder : ಜೈನಮುನಿ ಕೊಲೆ ಪ್ರಕರಣ ಸಿಬಿಐಗೆ ವಹಿಸಲ್ಲ: ಡಾ. ಜಿ. ಪರಮೇಶ್ವರ

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಖಂಡಿಸಿ ನಗರದ ಟೌನ್‌ ಹಾಲ್‌ ಬಳಿ 2022ರ ಜುಲೈ 28ರಂದು ಹಿಂದುಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆ ವೇಳೆ ಜಿಹಾದಿಗಳಿಗೆ ಧಿಕ್ಕಾರ, ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದ್ದರು. ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ್ದರಿಂದ ಚಿಂತಕ ಚಕ್ರವರ್ತಿ ಸೂಲಿಬೆಲೆ, ಶಾಸಕ ರವಿ ಸುಬ್ರಹ್ಮಣ್ಯ ಸೇರಿ 11 ಮಂದಿ ವಿರುದ್ಧ ಎಸ್‌.ಜೆ.ಪಾರ್ಕ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Exit mobile version