HD Devegowda will be alive for another seven to eight years we will field him in LokSabha says HD Revanna HD Devegowda: ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ, ಅವರನ್ನು ಲೋಕಸಭೆಗೆ ನಿಲ್ಲಿಸುತ್ತೇವೆ: ಎಚ್.ಡಿ. ರೇವಣ್ಣ - Vistara News

ಕರ್ನಾಟಕ

HD Devegowda: ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ, ಅವರನ್ನು ಲೋಕಸಭೆಗೆ ನಿಲ್ಲಿಸುತ್ತೇವೆ: ಎಚ್.ಡಿ. ರೇವಣ್ಣ

HD Revanna: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಗಟ್ಟಿಯಾಗಿದ್ದಾರೆ. ಅವರು ಬೇಡ ಎಂದರೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅವರು ಸ್ಪರ್ಧೆ ಮಾಡುವಂತೆ ಮಾಡುತ್ತೇವೆ. ಅವರನ್ನು ಪಾರ್ಲಿಮೆಂಟ್‌ಗೆ ಕಳುಹಿಸಿಯೇ ಕಳುಹಿಸುತ್ತೇವೆ ಎಂದು ಎಚ್.ಡಿ. ರೇವಣ್ಣ ಹೇಳಿದ್ದು, ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂಬುದನ್ನು ಮುಂದೆ ನೋಡೋಣ ಎಂದು ಉತ್ತರಿಸಿದ್ದಾರೆ.

VISTARANEWS.COM


on

HD Devegowda and HD Revanna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡರು (HD Devegowda) ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಕರೆದುಕೊಂಡು ಮತ್ತೆ ಪಾರ್ಲಿಮೆಂಟ್‌ಗೆ ಹೋಗಿಯೇ ಹೋಗುತ್ತೇವೆ. ಅವರನ್ನು ಲೋಕಸಭೆಗೆ (LokSabha Election) ಸ್ಪರ್ಧೆ ಮಾಡಿಸುತ್ತೇವೆ. ಯಾವ ಕ್ಷೇತ್ರ ಅಂತ ಮುಂದೆ ನೋಡೋಣ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಹೇಳಿದರು.

ಮಂಗಳವಾರ (ಮೇ 16) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್.ಡಿ. ರೇವಣ್ಣ, ದೇವೇಗೌಡರಿಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ. ಅವರು ಸ್ಪರ್ಧೆ ಮಾಡುವುದಿಲ್ಲ ಎಂದರೂ ನಾವು ಬಿಡುವುದಿಲ್ಲ. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿಸಿ, ಗೆಲ್ಲಿಸಿ ಸಂಸತ್‌ಗೆ ಕಳುಹಿಸುತ್ತೇವೆ. ಆದರೆ, ಹಾಸನ ಜಿಲ್ಲೆಯಿಂದ ಲೋಕಸಭೆ ಚುನಾವಣೆಗೆ ಪ್ರಜ್ವಲ್‌ ರೇವಣ್ಣ‌ನೇ ಸ್ಪರ್ಧೆ ಮಾಡುತ್ತಾನೆ ಎಂದು ಹೇಳಿದರು.

ಇದನ್ನೂ ಓದಿ: Karnataka Election 2023: 50:50 ಫಾರ್ಮುಲಾ ಓಕೆ, ಆದರೆ ಮೊದಲು ನಾನು; ಇದು ಸಿದ್ದು-ಡಿಕೆಶಿ ಹೊಸ ವಾದ

ಹಾಸನ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನು ಮಾಡಬೇಕು ಅಂತ ನನ್ನ ಆಸೆ ಇದೆ. ನಾನು ಬದುಕಿರುವುದರೊಳಗೆ ಮಾಡಿ ತೋರಿಸುತ್ತೇನೆ. ಐದು ವರ್ಷಕ್ಕೆ ಮಾಡುತ್ತೇನೆಯೋ? ಹತ್ತು ವರ್ಷಕ್ಕೆ ಮಾಡುತ್ತೇನೆಯೋ ಗೊತ್ತಿಲ್ಲ. ಇಡಿ ರಾಜ್ಯದಲ್ಲಿ ಹಾಸನ ಜಿಲ್ಲೆಯನ್ನು ನಂಬರ್ ಒನ್ ಮಾಡಿ ತೋರಿಸುತ್ತೇನೆ. ಇಲ್ಲವಾದಲ್ಲಿ ಇನ್ನೊಂದು ಸಾರಿ ರಾಜಕೀಯಕ್ಕೆ ಬರಲ್ಲ. ಕಾಂಗ್ರೆಸ್‌ನವರು ಮಾಡಿ ಕೊಟ್ಟರೆ ಸಂತೋಷ. ಇಲ್ಲವಾದರೆ ನಮಗೂ ಟೈಂ ಬರುತ್ತದೆ. ನನ್ನ ಗ್ರಹಗತಿಗಳು ಇನ್ನೂ ಚೆನ್ನಾಗಿವೆ ಎಂದು ಎಚ್.ಡಿ. ರೇವಣ್ಣ ಹೇಳಿದರು.

ಪ್ರೀತಂ ಗೌಡಗೆ ಪರೋಕ್ಷ ಟೀಕೆ

ಹಾಸನದಲ್ಲಿ ಸ್ವರೂಪ್ ಗೆದ್ದಿದ್ದು, ಕೆಲಸ ಮಾಡುತ್ತಾರೆ. ಅವರ ಜತೆ ನಾನು ನಿಲ್ಲುತ್ತೇನೆ. ಸಂಸದರು ನಿಲ್ಲುತ್ತಾರೆ. ಅವರ ತಂದೆ ಹೇಗೆ ಕೆಲಸ ಮಾಡಿದ್ದರೋ ಅದೇ ರೀತಿ ಕೆಲಸ ಮಾಡುತ್ತಾರೆ. ಜನರಿಗೆ ತೊಂದರೆಯಾಗದಂತೆ ಒಳ್ಳೆಯ ಕೆಲಸವನ್ನು ಮಾಡುತ್ತಾರೆ. ಪ್ರಕಾಶ್‌ ನಾಲ್ಕು ಭಾರಿ ಶಾಸಕರಾಗಿದ್ದರು. ಅವರ ಮಗನನ್ನು ಜನ ಗೆಲ್ಲಿಸುವ ಮೂಲಕ ಪ್ರಕಾಶ್‌ ಆತ್ಮಕ್ಕೆ ಶಾಂತಿ ಸಿಕ್ಕಿದೆ. ಐವತ್ತು ಸಾವಿರ ವೋಟ್‌ನಲ್ಲಿ ಗೆಲ್ಲುತ್ತೇನೆ ಎಂದು ಕೆಲವರು ಹೇಳೋರು. ಒಂದು ಲಕ್ಷ ಮತ ಪಡೆದುಕೊಳ್ಳುತ್ತೇನೆ ಎಂದು ಹೇಳುತ್ತಿದ್ದರು ಎಂದು ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಎಚ್‌.ಡಿ. ರೇವಣ್ಣ ಅವರು ಪರೋಕ್ಷ ವಾಗ್ದಾಳಿ ನಡೆಸಿದರು.

ಬಿಜೆಪಿಯ ಮುಖಂಡರೇ ಕಾಂಗ್ರೆಸ್ ಅಧಿಕಾರಕ್ಕೆ ತಂದಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಮುಖಂಡರು ಹಳೇ ಮೈಸೂರಿಗೆ ಬಂದು ಪ್ರಾದೇಶಿಕ ಪಕ್ಷವನ್ನು ಮುಗಿಸಲು ಕಾಂಗ್ರೆಸ್‌ಗೆ ಸಹಾಯ ಮಾಡಿದರು. ಅವರಿಗೆ ಕಾಂಗ್ರೆಸ್ ಮುಖಂಡರು ಧನ್ಯವಾದ ಹೇಳಲಿ. ನಾನು ವೋಟು ಕೇಳಲು ಹೋಗಿಲ್ಲ, ಜನ ನನ್ನನ್ನು ಉಳಿಸಿಕೊಂಡಿದ್ದಾರೆ. ಇನ್ನೂ ಐದು ವರ್ಷ ಇದೆ, ಎಲ್ಲವನ್ನೂ ಸರಿ ಮಾಡಿಕೊಳ್ಳುತೇನೆ. ಆರು ಭಾರಿ ನನ್ನನ್ನು ಜನ ಗೆಲ್ಲಿಸಿದ್ದಾರೆ. ಎರಡು ರಾಷ್ಟ್ರೀಯ ಪಕ್ಷದ ಮುಖಂಡರು ನನ್ನನ್ನು ಮುಗಿಸಲು ಯತ್ನಿಸಿದ್ದರು. ನನಗೆ ಎಷ್ಟು ವೋಟು ಬರಬೇಕೋ ಅದು ಬಂದಿದೆ. ಕಡಿಮೆ ಏಕೆ ಆಯ್ತು ಅಂತ ನನಗೆ ಗೊತ್ತಿದೆ. ಅದನ್ನು ಹೇಗೆ ಸರಿ ಮಾಡಿಕೊಳ್ಳಬೇಕು ಅನ್ನೋದು ಗೊತ್ತಿದೆ. ಇನ್ನೂ ಐದು ವರ್ಷ ಟೈಂ ಇದೆ ಎಂದು ಹೇಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಆಗೇ ಆಗ್ತಾನೆ; ಇಲ್ಲದಿದ್ದರೆ ಮೀಸೆ ಬೋಳಿಸ್ತೀನಿ ಅಂದ ಮೀಸೆಯೇ ಇಲ್ಲದ 3 ವರ್ಷದ ಬಾಲಕ!

ಕಾಂಗ್ರೆಸ್‌ನಲ್ಲಿ ಯಾರೇ ಸಿಎಂ ಆದರೂ ಸ್ವಾಗತಿಸುತ್ತೇನೆ

ಸಿಎಂ ಯಾರೇ ಆದರೂ ಸ್ವಾಗತ ಮಾಡುತ್ತೇನೆ. ಯಾರೇ ಆದರೂ ರಾಜ್ಯದ ಅಭಿವೃದ್ಧಿ ಮಾಡಲಿ. ಬಿಜೆಪಿ ಅಧಿಕಾರದಿಂದ ಇಳಿಯಬೇಕಾದರೆ ಶಾಕ್ ಕೊಟ್ಟಿದ್ದಾರೆ. ವಿದ್ಯುತ್ ದರ ಹೆಚ್ಚಿಸಿದ್ದಾರೆ, ಅದನ್ನು ಇಳಿಕೆ ಮಾಡಲಿ. ಕಾಂಗ್ರೆಸ್‌ನವರು ಕೊಟ್ಟಿರುವ ಗ್ಯಾರಂಟಿ ಕಾರ್ಡ್‌ ಅನ್ನು ಈಡೇರಿಸಲಿ. ನನಗೆ ಸಿದ್ದರಾಮಯ್ಯ ಅವರ ಮೇಲೆ ವೈಯಕ್ತಿಕವಾಗಿ ಗೌರವವಿದೆ. ವೈಯುಕ್ತಿಕ ಬೇರೆ, ರಾಜಕೀಯ ಬೇರೆ. ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಅವರು ತಮ್ಮ ಜಿಲ್ಲೆಯಲ್ಲಿ ಒಂದೇ ಒಂದು ಸ್ಥಾನವನ್ನು ಗೆದ್ದಿದ್ದಾರೆ. ರೇವಣ್ಣ ಕ್ಷೇತ್ರದಲ್ಲಿ ನಾಲ್ಕು ಸ್ಥಾನವನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ವಾಲ್ಮೀಕಿ ಸಮುದಾಯದ ಪ್ರಮುಖ ಲೀಡರ್ ಶ್ರೀರಾಮುಲು ಇಪ್ಪತ್ತು ಸಾವಿರ ಮತದಿಂದ ಸೋತಿದ್ದಾರೆ ಎಂದು ರೇವಣ್ಣ ವ್ಯಂಗ್ಯವಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Modi in Karnataka: ನಾಳೆ ರಾಜ್ಯಕ್ಕೆ ಮೋದಿ; ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಬೃಹತ್‌ ಸಮಾವೇಶ

Modi in Karnataka: ನಾಳೆ (ಏಪ್ರಿಲ್‌ 20) ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿರೀಕ್ಷೆ ಇದೆ.

VISTARANEWS.COM


on

Modi in Karnataka on April 20 Massive rallies in Chikkaballapura and Bengaluru
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಚುನಾವಣೆ ಘೋಷಣೆಯಾಗಿ ಈಗಾಗಲೇ ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೂರನೇ ಬಾರಿಗೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಏಪ್ರಿಲ್ 20ರಂದು ಮೋದಿ ರಾಜ್ಯಕ್ಕೆ (Modi in Karnataka) ಆಗಮಿಸುತ್ತಿದ್ದು, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳಲ್ಲಿ ಮೋಡಿ ಮಾಡಲಿದ್ದಾರೆ.

ಮೈಸೂರಿನ ಬೃಹತ್‌ ಸಮಾವೇಶ ಹಾಗೂ ಮಂಗಳೂರಿನ ರೋಡ್‌ ಶೋ ಯಶಸ್ಸಿನ ನಂತರ ಪುನಃ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮೋದಿ ಹವಾ!

ಏಪ್ರಿಲ್‌ 20ರಂದು ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಬೃಹತ್‌ ರ‍್ಯಾಲಿ

ಶನಿವಾರ ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಪ್ರಚಾರ ರ‍್ಯಾಲಿಯನ್ನು ಆಯೋಜನೆ ಮಾಡಲಾಗಿದೆ. ಇಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ಲೋಕಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನೊಳಗೊಂಡಂತೆ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ಸಿಗುವುದೇ ಮೋದಿ ಬೂಸ್ಟ್‌!

ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನಾಗಿ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಕಣಕ್ಕಿಳಿಸಲಾಗಿದೆ. ಇದರಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಡಿಎ ಅಭ್ಯರ್ಥಿಗಳ ನಡುವೆ ಟಫ್‌ ಫೈಟ್‌ ಏರ್ಪಟ್ಟಿದೆ. ಕಾರಣ ಇಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮತಗಳು ಕ್ರೋಡೀಕರಣಗೊಂಡರೆ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ಅವರ ಗೆಲುವಿನ ಹಾದಿ ಅಷ್ಟು ಸುಲಭವಿಲ್ಲ. ಈ ಹಿನ್ನೆಲೆಯಲ್ಲಿ ಡಿಕೆ ಬ್ರದರ್ಸ್‌ ರಾತ್ರಿ – ಹಗಲು ಎನ್ನುವಂತೆ ಪ್ರಚಾರದಲ್ಲಿ ನಿರತರಾಗಿದ್ದಾರೆ. ಅಲ್ಲದೆ, ಕ್ಷೇತ್ರದ ಗೆಲುವಿಗೆ ನಾನಾ ಕಸರತ್ತುಗಳನ್ನು, ರಣತಂತ್ರಗಳನ್ನು ಹೆಣೆಯುತ್ತಾ ಬರುತ್ತಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಸಹ ಬರಲಿದ್ದು, ಅವರು ಪಕ್ಷದ ಅಭ್ಯರ್ಥಿಯಾದ ಡಾ. ಸಿ.ಎನ್.‌ ಮಂಜುನಾಥ್‌ ಪರ ಏನು ಹೇಳಲಿದ್ದಾರೆ? ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್‌ ವಿರುದ್ಧ ಯಾವ ಬಾಂಬ್‌ ಎಸೆಯಲಿದ್ದಾರೆ? ಇದು ಮತದಾರರ ಮೇಲೆ ಬೀರುವ ಪರಿಣಾಮ ಏನು ಎಂಬಿತ್ಯಾದಿ ಲೆಕ್ಕಾಚಾರಗಳನ್ನು ಹಾಕಲಾಗುತ್ತಿದೆ.

ಇದನ್ನೂ ಓದಿ: Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

ಮೈಸೂರು ಸಮಾವೇಶದಲ್ಲಿ ಗುಡುಗಿದ್ದ ಮೋದಿ!

ಮೈಸೂರಿನಲ್ಲಿ ನಡೆದಿದ್ದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಪಕ್ಷದ ಭ್ರಷ್ಟಾಚಾರದ ಬಗ್ಗೆ ಉಲ್ಲೇಖಿಸಿದ್ದರು. ಅಲ್ಲದೆ, ಹಿಂದುತ್ವದ ವಿರುದ್ಧ ಆ ಪಕ್ಷ ಹಾಗೂ ಮಿತ್ರ ಪಕ್ಷಗಳು ಕೆಲಸ ಮಾಡುತ್ತಿವೆ ಎಂದು ದೂರಿದ್ದರು. ಇನ್ನು ದೇಶದ ಎಲ್ಲ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಇಲ್ಲಿನ ಕಾಂಗ್ರೆಸ್‌ ಸರ್ಕಾರವು ಎಟಿಎಂ ಆಗಿದ್ದು, ನೂರಾರು ಕೋಟಿ ರೂಪಾಯಿ ಸಂದಾಯವಾಗಿದೆ ಎಂದು ಗಂಭೀರ ಆರೋಪವನ್ನು ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಪ್ರಿಲ್‌ 20 ರಂದು ನಡೆಯಲಿರುವ ಎರಡು ಸಮಾವೇಶಗಳಲ್ಲಿ ಮೋದಿ ಏನು ಮಾತನಾಡಲಿದ್ದಾರೆ? ಯಾವೆಲ್ಲ ಹೊಸ ವಿಷಯಗಳನ್ನು ಪ್ರಸ್ತಾಪ ಮಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

Continue Reading

ಕ್ರೈಂ

Drowned: ನೀರಿನ ಸಂಪ್‌ನಲ್ಲಿ ಮುಳುಗಿ ತಾಯಿ- ಮಗು ಸಾವು, ಮುಚ್ಚಳ ಹಾಕದೆ ಬಿಟ್ಟಿದ್ದ ಮಾಲಿಕ

Drowned: ಮನೆಯ ಮಾಲಿಕ, ಉದ್ಯಮಿ ಸ್ಥಳದಲ್ಲಿ ನೀರಿನ ಸಂಪ್ ತೆಗೆಸಿ ಅದನ್ನು ಮುಚ್ಚದೆ ಹಾಗೆಯೇ ಬಿಟ್ಟಿದ್ದರು. ಸಂಪ್‌ನ ತುಂಬಾ ನೀರು ಇದೆ ಎಂದು ಗೊತ್ತಿದ್ದರೂ ಅದನ್ನು ಮುಚ್ಚುವ ಕೆಲಸ ಮಾಡಿರಲಿಲ್ಲ.

VISTARANEWS.COM


on

open sump drowned
Koo

ಬೆಂಗಳೂರು: ಶ್ರೀಮಂತರ ಮನೆಯವರ ನಿರ್ಲಕ್ಷ್ಯಕ್ಕೆ ತಾಯಿ- ಮಗು (mother- child death) ಬಲಿಯಾಗಿದ್ದಾರೆ. ತೆರೆದೇ ಇದ್ದ ನೀರಿನ ಸಂಪ್‌ನಲ್ಲಿ ಬಿದ್ದು ಮುಳುಗಿ (Drowned) ತಾಯಿ ಮಗು ಸಾವಿಗೀಡಾಗಿದ್ದಾರೆ. ಯಲಹಂಕ ನ್ಯೂಟೌನ್ ಬಳಿಯ ಈಸ್ಟ್ ಕಾಲೋನಿಯಲ್ಲಿ ಘಟನೆ ನಡೆದಿದೆ.

ಕವಿತಾ (40) ಹಾಗೂ ಪವನ್ (8) ಮೃತರು. ಸ್ಥಳಕ್ಕೆ ಯಲಹಂಕ ನ್ಯೂ ಟೌನ್ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಭೇಟಿ ಕೊಟ್ಟು ಶವಗಳನ್ನು ಹೊರಗೆ ತೆಗೆದಿದ್ದಾರೆ.

ಮೃತ ಕವಿತಾ ಅದೇ ಏರಿಯಾದ ಉದ್ಯಮಿಯೊಬ್ಬರ ಮನೆಯಲ್ಲಿ ಮನೆಗೆಲಸ ಮಾಡುತ್ತಿದ್ದರು. ನಿನ್ನೆ‌ ಸಹ ಅದೇ ಮನೆಯವರ ‌ಮನೆಯ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಈಕೆ ಕಾಂಪೌಂಡ್ ಒಂದಕ್ಕೆ ನೀರು ಹಾಕಲು ಹೋಗಿದ್ದರು. ಮನೆಯ ಮಾಲಿಕ, ಉದ್ಯಮಿ ಸ್ಥಳದಲ್ಲಿ ನೀರಿನ ಸಂಪ್ ತೆಗೆಸಿ ಅದನ್ನು ಮುಚ್ಚದೆ ಹಾಗೆಯೇ ಬಿಟ್ಟಿದ್ದರು. ಸಂಪ್‌ನ ತುಂಬಾ ನೀರು ಇದೆ ಎಂದು ಗೊತ್ತಿದ್ದರೂ ಅದನ್ನು ಮುಚ್ಚುವ ಕೆಲಸ ಮಾಡಿರಲಿಲ್ಲ.

ತಾಯಿ ಕಾಂಪೌಂಡ್‌ಗೆ ನೀರು ಹಾಕುತ್ತಿದ್ದಾಗ ಮಗು ಆಟವಾಡುತ್ತ ಹೋಗಿ ಸಂಪ್‌ಗೆ ಬಿದ್ದಿದೆ. ಮಗುವನ್ನು ಕಾಪಾಡಲು ಮುಂದಾದ ತಾಯಿ ತಾನೂ ಸಂಪ್‌ಗೆ ಇಳಿದಿದ್ದಾಳೆ. ನಂತರ ಮೇಲೆ ಬರುವುದಕ್ಕೆ ಆಗದೆ ತಾಯಿ ಮಗು ಸಂಪ್‌ನಲ್ಲಿಯೇ ಜೀವ ಬಿಟ್ಟಿದ್ದಾರೆ. ಸಂಪ್‌ಗೆ ಮುಚ್ಚಳವಾಗಲೀ ಯಾವುದೇ ಲಾಕ್ ಆಗಲೀ ಹಾಕದೆ ಬಿಟ್ಟಿದ್ದ ಸೈಟ್ ಮಾಲೀಕನ ನಿರ್ಲಕ್ಷ್ಯ ಈ ಪ್ರಕರಣದಲ್ಲಿ ಎದ್ದು ಕಂಡಿದೆ.

ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ 4 ಮಂದಿ ಮಲಗಿದಲ್ಲೇ ಕೊಚ್ಚಿ ಕೊಲೆ

ಗದಗ: ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಮನೆಯಲ್ಲಿ ಮಲಗಿದಲ್ಲೇ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಈ ಬರ್ಬರ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದ್ದು, ಕೃತ್ಯದ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಕೊಲೆಯಾದವರಲ್ಲಿ ನಗರಸಭೆ ಉಪಾಧ್ಯಕ್ಷೆಯ ಪುತ್ರನೊಬ್ಬ ಸೇರಿದ್ದಾನೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

murder case gadag

ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳನ್ನು ಕೊಲೆ ಮಾಡಲಾಗಿದೆ. ಈ ಮೂವರೂ ಕೊಪ್ಪಳ ಮೂಲದವರಾಗಿದ್ದು, ಏಪ್ರಿಲ್‌ 17ರಂದು ನಡೆದ ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್‌ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ಸಂಬಂಧಿಗಳಾಗಿದ್ದಾರೆ.

ಮೇಲಿನ ಮಹಡಿಯ ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಕುಟುಂಬಸ್ಥರು ಪೊಲೀಸರಿಗೆ ಫೋನ್ ಮಾಡಿದ್ದರು. ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಬಾಗಿಲು ತೆಗೆದಿದ್ದರೆ ನಮ್ಮನ್ನೂ ಕೊಲೆ ಮಾಡುವ ಸಾಧ್ಯತೆಯಿತ್ತು ಎಂದು ಮನೆ ಮಾಲೀಕ‌ ಪ್ರಕಾಶ್ ಬಾಕಳೆ ಹೇಳಿಕೆ ನೀಡಿದ್ದಾರೆ.

ಶ್ವಾನದಳ, ಫಾರೆನ್ಸಿಕ್‌ ತಂಡಗಳು ಆಗಮಿಸಿದ್ದು, ಮನೆಯ ಇಂಚಿಂಚೂ ಪರಿಶೀಲನೆ ಮಾಡಲಾಗಿದೆ. ಸ್ಥಳಕ್ಕೆ ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೇಲ್ನೋಟಕ್ಕೆ ದರೋಡೆಗೆ ಬಂದ ತಂಡ ನಡೆಸಿರುವ ಕೃತ್ಯದಂತೆ ಕಂಡುಬಂದಿದ್ದರೂ, ಪ್ರಕರಣದ ಹಲವು ಮಗ್ಗಲುಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Student Death: ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.

ಚನ್ನಬಸು ಅಶೋಕ್‌ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.‌

ಇದನ್ನೂ ಓದಿ: Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Continue Reading

ಕ್ರೈಂ

Murder Case: ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ 4 ಮಂದಿ ಮಲಗಿದಲ್ಲೇ ಕೊಚ್ಚಿ ಕೊಲೆ

Murder Case: ಕೊಲೆಯಾದವರಲ್ಲಿ ನಗರಸಭೆ ಉಪಾಧ್ಯಕ್ಷೆಯ ಪುತ್ರನೊಬ್ಬ ಸೇರಿದ್ದಾನೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

VISTARANEWS.COM


on

murder case gadag
ಕೊಲೆಯಾದ ಕುಟುಂಬ
Koo

ಗದಗ: ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಮನೆಯಲ್ಲಿ ಮಲಗಿದಲ್ಲೇ ಕೊಚ್ಚಿ ಭೀಕರವಾಗಿ ಹತ್ಯೆ (Murder Case) ಮಾಡಲಾಗಿದೆ. ಈ ಬರ್ಬರ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದ್ದು, ಕೃತ್ಯದ (Crime news) ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಹುಬ್ಬಳ್ಳಿಯ ಕಾರ್ಪೊರೇಟರ್‌ ಪುತ್ರಿ ನೇಹಾ ಕೊಲೆ (Hubli Neha Murder) ಕೃತ್ಯ ಇನ್ನೂ ಹಸಿಯಾಗಿರುವಾಗಲೇ ಈ ಘಟನೆ ನಡೆದಿದೆ.

ಕೊಲೆಯಾದವರಲ್ಲಿ ನಗರಸಭೆ ಉಪಾಧ್ಯಕ್ಷೆಯ ಪುತ್ರನೊಬ್ಬ ಸೇರಿದ್ದಾನೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ದರೋಡೆ ಸೇರಿದಂತೆ ವಿವಿಧ ಆಯಾಮಗಳನ್ನು ತನಿಖೆ ನಡೆಸಲಾಗುತ್ತಿದೆ.

ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳನ್ನು ಕೊಲೆ ಮಾಡಲಾಗಿದೆ. ಈ ಮೂವರೂ ಕೊಪ್ಪಳ ಮೂಲದವರಾಗಿದ್ದು, ಏಪ್ರಿಲ್‌ 17ರಂದು ನಡೆದ ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್‌ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ಸಂಬಂಧಿಗಳಾಗಿದ್ದಾರೆ.

ಮೇಲಿನ ಮಹಡಿಯ ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಕುಟುಂಬಸ್ಥರು ಪೊಲೀಸರಿಗೆ ಫೋನ್ ಮಾಡಿದ್ದರು. ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಬಾಗಿಲು ತೆಗೆದಿದ್ದರೆ ನಮ್ಮನ್ನೂ ಕೊಲೆ ಮಾಡುವ ಸಾಧ್ಯತೆಯಿತ್ತು ಎಂದು ಮನೆ ಮಾಲೀಕ‌ ಪ್ರಕಾಶ್ ಬಾಕಳೆ ಹೇಳಿಕೆ ನೀಡಿದ್ದಾರೆ.

ಶ್ವಾನದಳ, ಫಾರೆನ್ಸಿಕ್‌ ತಂಡಗಳು ಆಗಮಿಸಿದ್ದು, ಮನೆಯ ಇಂಚಿಂಚೂ ಪರಿಶೀಲನೆ ಮಾಡಲಾಗಿದೆ. ಸ್ಥಳಕ್ಕೆ ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೇಲ್ನೋಟಕ್ಕೆ ದರೋಡೆಗೆ ಬಂದ ತಂಡ ನಡೆಸಿರುವ ಕೃತ್ಯದಂತೆ ಕಂಡುಬಂದಿದ್ದರೂ, ಪ್ರಕರಣದ ಹಲವು ಮಗ್ಗಲುಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕಾರ್ಪೊರೇಟರ್‌ ಪತ್ನಿಯನ್ನು ಕೊಂದ ಪಾಗಲ್‌

ಹುಬ್ಬಳ್ಳಿ: ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿಯೊಬ್ಬ ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್‌ವೊಬ್ಬರ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದಾನೆ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ.

ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿಯಾಗಿದ್ದಾಳೆ. ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ. ಫೈಜಲ್ ಎಂಬಾತ ಆರೋಪಿ ಎಂದು ಗುರುತಿಸಲಾಗಿದೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.

ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.

Student Death: ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.

ಚನ್ನಬಸು ಅಶೋಕ್‌ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.‌

ಇದನ್ನೂ ಓದಿ: Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Continue Reading

ಮಳೆ

Karnataka Weather : 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Rain News: ರಾಜ್ಯದ ಹಲವೆಡೆ ಮಳೆಯು ಅಬ್ಬರಿಸುತ್ತಿದೆ. ಗುಡುಗು, ಸಿಡಿಲು ಸಹಿತ ಬಿರುಗಾಳಿ ಮಳೆಯಾಗುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಶುಕ್ರವಾರವೂ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಜತೆಗೆ ವಿವಿಧೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ.

ಉತ್ತರ ಒಳನಾಡಿನ ಬೆಳಗಾವಿ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಹಾಗೂ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: IPL‌ Betting: ಸಾಲಗಾರರ ಕಾಟ; ಹೆಂಡತಿ-ಮಕ್ಕಳಿಗೆ ವಿಷವಿಕ್ಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ

ತಾಪಮಾನದ ಮುನ್ಸೂಚನೆ

ಏಪ್ರಿಲ್ 19 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 2 ದಿನಗಳಲ್ಲಿ ಗರಿಷ್ಟ ಉಷ್ಣಾಂಶದಲ್ಲಿ ಹೆಚ್ಚಿನ ಬಡಲಾವಣೆ ಇರುವುದಿಲ್ಲ. ನಂತರದ 3 ದಿನಗಳವರೆಗೆ ಕ್ರಮೇಣ 2-3 ಡಿ.ಸೆ ಏರಿಕೆಯಾಗುತ್ತದೆ.

ಗುಡುಗು ಮುನ್ನೆಚ್ಚರಿಕೆ

ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಜತೆಗೆ ಮೇಲ್ಮೈ ಮಾರುತಗಳು ಬಲವಾದ ಮತ್ತು ರಭಸದಿಂದ ಕೂಡಿರುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಯಲ್ಲಿ ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಸಂಜೆ/ರಾತ್ರಿ ಸಮಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಗರಿಷ್ಠ ಉಷ್ಣಾಂಶ 37 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
summer trip
ಪ್ರವಾಸ27 mins ago

Summer Tour: ಹಚ್ಚ ಹಸುರಿನ ಪ್ರಶಾಂತ ನಗರ ಶಿಲ್ಲಾಂಗ್; ಬೇಸಿಗೆ ಪ್ರವಾಸಕ್ಕೆ ಸೂಕ್ತ

Viral Video
ವೈರಲ್ ನ್ಯೂಸ್30 mins ago

Viral Video: ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

Harshika Poonacha Bhuvan! for speak Kannada
ಸ್ಯಾಂಡಲ್ ವುಡ್48 mins ago

Harshika Poonacha: ಹರ್ಷಿಕಾ ಪೂಣಚ್ಚ-ಭುವನ್‌ ಮೇಲೆ ಅಟ್ಯಾಕ್! ಕನ್ನಡ ಮಾತನಾಡಿದ್ದೇ ತಪ್ಪಾಯ್ತಾ?

murali sreeshankar
ಕ್ರೀಡೆ53 mins ago

Murali Sreeshankar: ಒಲಿಂಪಿಕ್ಸ್‌ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತ; ಟೂರ್ನಿಯಿಂದ ಹೊರಬಿದ್ದ ಪದಕ ಭರವಸೆಯ ಕ್ರೀಡಾಪಟು

virat kohli
ಕ್ರೀಡೆ1 hour ago

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ ನೋಡಲು ಮುಗಿಬಿದ್ದ ಅಭಿಮಾನಿಗಳು

Pruthvi Ambaar new movie direction by Rathaavara Director
ಸಿನಿಮಾ2 hours ago

Pruthvi Ambaar: ʻದಿಯಾʼ ಹೀರೊಗೆ `ರಥಾವರʼ ಡೈರೆಕ್ಟರ್ ಆ್ಯಕ್ಷನ್ ಕಟ್!

Kantara Movie Rishab Shetty And Pragathi Shetty Met Mohanlal
ಸಿನಿಮಾ2 hours ago

Kantara Movie: ‘ಕಾಂತಾರ 2’ ಸಿನಿಮಾದಲ್ಲಿ ಇರಲಿದ್ದಾರಾ ಮೋಹನ್​ಲಾಲ್?

Solution For Pimple
ಆರೋಗ್ಯ2 hours ago

Solution For Pimples: ಈ ಆಹಾರಗಳ ಸಹವಾಸ ಬಿಡಿ; ಮೊಡವೆಯನ್ನು ದೂರವಿಡಿ!

indian navy chief of naval staff dinesh tripathi
ಪ್ರಮುಖ ಸುದ್ದಿ2 hours ago

Indian Navy: ನೌಕಾಪಡೆ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ

IPL 2024
ಕ್ರೀಡೆ2 hours ago

IPL 2024: ಕೆಕೆಆರ್​ ವಿರುದ್ಧ ಹಸಿರು ಜೆರ್ಸಿಯಲ್ಲಿ ಆಡಲಿದೆ ಆರ್​ಸಿಬಿ; ಈ ಬಾರಿಯ ಉದ್ದೇಶವೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ6 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌