ಉತ್ತರ ಕನ್ನಡ
Karnataka Election 2023: ರಾಜ್ಯಕ್ಕೆ ಮತ್ತೊಮ್ಮೆ ಕುಮಾರಸ್ವಾಮಿ; ನೇತ್ರಾಣಿ ದ್ವೀಪದ ಕಡಲಾಳದಲ್ಲಿ ಬ್ಯಾನರ್ ಪ್ರದರ್ಶನ
HD Kumaraswamy: ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಎಂದು ಅವರ ಅಭಿಮಾನಿಯೊಬ್ಬ ಕಡಲಾಳದಲ್ಲಿ ಬ್ಯಾನರ್ ಪ್ರದರ್ಶನ ಮಾಡಿ ಅಭಿಮಾನ ಮೆರೆದಿದ್ದಾನೆ.
ಕಾರವಾರ: ವಿಧಾನಸಭಾ ಚುನಾವಣೆಗೆ (Karnataka Election 2023) ಇನ್ನು ಮೂರು ದಿನವಷ್ಟೇ ಬಾಕಿ ಇದೆ. ಈ ವೇಳೆ ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ಸೇರಿದಂತೆ ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. ಇನ್ನು ಆಯಾ ಪಕ್ಷಗಳ ಅಭಿಮಾನಿಗಳು, ಕಾರ್ಯಕರ್ತರು ಸಹ ತಮ್ಮ ಪಕ್ಷದ ನಾಯಕರು ಗೆಲ್ಲಲಿ ಎಂದು ವಿಶೇಷ ಪೂಜೆ, ಸೇವೆ ಸೇರಿದಂತೆ ಭಿನ್ನ-ವಿಭಿನ್ನ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರ ಅಭಿಮಾನಿಯೊಬ್ಬ ಮುರ್ಡೇಶ್ವರದ ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್ (Scuba diving) ನೀರಿನಲ್ಲಿ ಮುಳುಗಿ ಅವರ ಪರವಾಗಿ ಪ್ರಚಾರ ಮಾಡುವ ಮೂಲಕ ಅಭಿಮಾನವನ್ನು ಪ್ರದರ್ಶನ ಮಾಡಿದ್ದಾನೆ.
ಎಚ್.ಡಿ. ಕುಮಾರಸ್ವಾಮಿ ಅವರು ಈ ಬಾರಿ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು. ಅವರಿಗೆ ಅಧಿಕಾರ ಸಿಗಬೇಕು ಎಂದು ಅಭಿಮಾನಿಯೊಬ್ಬ ಕಡಲಾಳದಲ್ಲಿ ಬ್ಯಾನರ್ ಹಿಡಿದು ಅಭಿಮಾನವನ್ನು ಪ್ರದರ್ಶನ ಮಾಡಿದ್ದಾನೆ.
ಇದನ್ನೂ ಓದಿ: Karnataka Election 2023: ಅಸೆಂಬ್ಲಿ ಎಲೆಕ್ಷನ್ ಎಫೆಕ್ಟ್; ಬೆಂಗಳೂರಲ್ಲಿ ಓಲಾ, ಉಬರ್‌ಗಳಿಗೆ ಹೆಚ್ಚಿದ ಡಿಮ್ಯಾಂಡ್
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವ್ ಮಾಡಿರುವ ಅಭಿಮಾನಿ ಯುವಕ, ಬ್ಯಾನರ್ ಹಿಡಿದು ಎಚ್.ಡಿ. ಕುಮಾರಸ್ವಾಮಿ ಪರ ಪ್ರಚಾರ ನಡೆಸಿದ್ದಾನೆ. “2023 ವಿಧಾನಸಭಾ ಚುನಾವಣೆಯಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಕುಮಾರಣ್ಣ” ಎಂದು ಪ್ರದರ್ಶನ ಮಾಡಿದ್ದಾನೆ.
ಕಡಲಾಳದಲ್ಲಿ ಅಭಿಮಾನಿಯ ಸಾಹಸ; ವಿಡಿಯೊ ಇಲ್ಲಿದೆ
ವಿಡಿಯೊ ವೈರಲ್
ಈಗ ಅಭಿಮಾನಿ ಯುವಕನ ಈ ಪ್ರಚಾರದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನೇತ್ರಾಣಿ ದ್ವೀಪದ ಆಳಕ್ಕೆ ಹೋಗಿದ್ದ ಯುವಕ ಅಲ್ಲಿ ಬ್ಯಾನರ್ ಅನ್ನು ಪ್ರದರ್ಶನ ಮಾಡಿದ್ದಾನೆ. ಕುಮಾರಸ್ವಾಮಿ ಮತ್ತೊಮ್ಮೆ ಆರಿಸಿ ಬರಬೇಕು ಎಂದು ಮನವಿ ಮಾಡಿದ್ದಾನೆ. ಆದರೆ, ಈ ಯುವಕ ಯಾರು? ಎಲ್ಲಿಯವನು ಎಂಬುದು ತಿಳಿದುಬಂದಿಲ್ಲ.
ಕಡಲಾಳದಲ್ಲಿ ಸ್ಕೂಬಾ ಡೈವಿಂಗ್ ಮೂಲಕ ವಿಶಿಷ್ಟ ಮತದಾನ ಜಾಗೃತಿ
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌ನಿಂದ ಸ್ವೀಪ್ ಕಾರ್ಯಕ್ರಮದಲ್ಲಿ ವಿನೂತನ ಜಾಗೃತಿ ಕಾರ್ಯಕ್ರಮವನ್ನು ಈಚೆಗೆ ಹಮ್ಮಿಕೊಳ್ಳಲಾಗಿತ್ತು. ಕಡಲಾಳದಲ್ಲಿ ಅಪರೂಪದ ಹವಳ, ಜಲಚರಗಳ ನಡುವೆ ಮತದಾನ ಜಾಗೃತಿ ನಡೆಸಲಾಗಿತ್ತು. ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಲು ವಿನೂತನವಾಗಿ ಪ್ರಯತ್ನವನ್ನು ನಡೆಸಲಾಗಿತ್ತು.
‘ಮತದಾನ ಸಂವಿಧಾನ ದೊರಕಿಸಿಕೊಟ್ಟ ಮಹತ್ವದ ಹಕ್ಕು’ ಎಂದು ಬರೆದ ಭಿತ್ತಿಚಿತ್ರವನ್ನು ಸ್ಕೂಬಾ ಡೈವಿಂಗ್ ಮಾಡುವ ಮೂಲಕ ಕಡಲಿನಾಳದಲ್ಲಿ ಹಿಡಿದು ಪ್ರದರ್ಶಿಸಿ ಅದನ್ನು ದಾಖಲೀಕರಿಸಿಕೊಳ್ಳಲಾಗಿತ್ತು. ಇದರ ಫೋಟೊ ಹಾಗೂ ವಿಡಿಯೊಗಳನ್ನು ಮತದಾನದ ಉತ್ತೇಜನಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಭಟ್ಕಳ ತಾಲೂಕು ಪಂಚಾಯತ್, ಸ್ಕೂಬಾ ಡೈವಿಂಗ್ ಅಡ್ವೆಂಚರ್ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಗಿತ್ತು.
ಮುರ್ಡೇಶ್ವರದ ಬಳಿಯ ನೇತ್ರಾಣಿ ದ್ವೀಪದ ಬಳಿ ಕರ್ನಾಟಕದ ಖ್ಯಾತ ಸ್ಕೂಬಾ ಡೈವಿಂಗ್ ಸಾಹಸ ಕ್ರೀಡೆ ಅವಕಾಶವಿದೆ. ಇಲ್ಲಿ ಸ್ಕೂಬಾ ಅಡ್ವೆಂಚರ್‌ಗಾಗಿ ರಾಜ್ಯದ ಹಾಗೂ ದೇಶದ ಎಲ್ಲೆಡೆಗಳಿಂದ ಸಾಹಸಪ್ರಿಯರು ಆಗಮಿಸುತ್ತಾರೆ. ಸಾಗರದಡಿಯ ಹವಳದ ದಿಬ್ಬಗಳೂ ನೇತ್ರಾಣಿ ದ್ವೀಪದ ಬಳಿ ಇವೆ.
ಉಡುಪಿ
Weather Report: ಈ ವಾರ ಕರಾವಳಿಯಲ್ಲಿ ಮಳೆ ಅಬ್ಬರ; ಉಳಿದೆಡೆ ಬಿಸಿಲಿಗೆ ಜನ ತತ್ತರ
Rising temperature: ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳು ಕಾದ ಕಾವಲಿಯಂತಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ (Weather Report) ಮುನ್ಸೂಚನೆಯನ್ನು ನೀಡಿದೆ.
ಬೆಂಗಳೂರು: ರಾಜ್ಯಾದ್ಯಂತ ಮಳೆ ತೀವ್ರತೆ ಕಡಿಮೆ ಆಗಿದ್ದು, ಇನ್ನೊಂದು ವಾರ ತಾಪಮಾನದಲ್ಲಿ (Heat wave) ಏರಿಳಿತ ಆಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆಯಾದರೂ ಹಲವು ಕಡೆ ಬಿಸಿಲು ಝಳಪಿಸಲಿದ್ದು, ನಾಗರಿಕರು ಮತ್ತಷ್ಟು ಹೈರಾಣಾಗಬಹುದು ಎಂದು ಹವಾಮಾನ ಇಲಾಖೆ (Weather report) ಮುನ್ಸೂಚನೆಯನ್ನು ನೀಡಿದೆ.
ಕರಾವಳಿ ಜಿಲ್ಲೆಯಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ ಮತ್ತು ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ಚಿತ್ರದುರ್ಗದಲ್ಲಿ ಬಿಸಿಲಿನ ತಾಪಮಾನ ಏರಿಕೆ ಆಗಲಿದೆ. ಮುಂದಿನ 48 ಗಂಟೆಯಲ್ಲಿ ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ರಾಜಧಾನಿಯಲ್ಲಿ ಗುಡುಗಲಿರುವ ವರುಣ
ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾಯಚೂರಲ್ಲಿ ಮಂಡೆ ಬಿಸಿ
ರಾಜ್ಯದಲ್ಲಿ ಶುಕ್ರವಾರದಂದು (ಮೇ 26) ಗರಿಷ್ಠ ಉಷ್ಣಾಂಶ 39.0 ಡಿಗ್ರಿ ಸೆಲ್ಸಿಯಸ್ ರಾಯಚೂರಿನಲ್ಲಿ ದಾಖಲಾಗಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡದ ಅಂಕೋಲ, ವಿಜಯಪುರದ ದೇವರಹಿಪ್ಪರಿಗಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡದ ಹೊನ್ನಾವರ ಹಾಗೂ ಉಡುಪಿಯ ಕೋಟದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ಇದನ್ನೂ ಓದಿ: Video: ಹಿಂದು ಹುಡುಗನೊಂದಿಗೆ ಮುಸ್ಲಿಂ ಹುಡುಗಿ ಡಿನ್ನರ್; ಸ್ಕೂಟರ್ ಅಡ್ಡಗಟ್ಟಿ ಗಲಾಟೆ ಮಾಡಿದ ಗುಂಪು, ಚಾಕು ಇರಿತ
ಶನಿವಾರ ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ
ಶನಿವಾರ (ಮೇ 27) ಕರಾವಳಿಯಲ್ಲಿ ಬೆಳ್ಳಂ ಬೆಳಗ್ಗೆ ವರುಣನ ಅಬ್ಬರ ಜೋರಾಗಿತ್ತು. ಬಿಸಿಲಿಗೆ ಕಾದಿದ್ದ ಇಳೆಗೆ ಮಳೆರಾಯ ತಂಪೆರೆದಿದ್ದಾನೆ. ಕಾರವಾರ, ಅಂಕೋಲಾ ತಾಲೂಕು ಸುತ್ತಮುತ್ತ ಒಂದೂವರೆ ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದೆ.
ಸಂಜೆ ವೇಳೆ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ
ಶನಿವಾರ (ಮೇ 27) ಸಂಜೆ ಬಳಿಕ ಬೆಂಗಳೂರು ನಗರ, ಧಾರವಾಡ, ಕಲಬುರಗಿ, ಕೋಲಾರ, ತುಮಕೂರಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಗುಡುಗು, ಮಿಂಚಿನ ಸಾಧ್ಯತೆ ಇದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉತ್ತರ ಕನ್ನಡ
Weather report: ಬೆಂಗಳೂರಲ್ಲಿ ತಣ್ಣಗಾದ ವರುಣ; ಕರಾವಳಿ ಸೇರಿ ಇತರ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
Weather Report: ರಾಜ್ಯಾದ್ಯಂತ ವರುಣ ತಣ್ಣಗಾಗಿದ್ದು, ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Update) ನೀಡಿದೆ. ಜತೆಗೆ ಕೆಲವು ಕಡೆಗಳಲ್ಲಿ ತಾಪಮಾನ ಏರಿಕೆ ಆಗುವ ಸಾಧ್ಯತೆಯೂ ಇದೆ.
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಕೆಲವು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಉಳಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ (Rain alert) ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಕೆಲವು ಭಾಗಗಳಲ್ಲಿ ಮಳೆಯಾಗುವ (Weather report) ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ ಚಾಮರಾಜನಗರದಲ್ಲೂ ಮಳೆಯ ಅಬ್ಬರ ಇರಲಿದೆ. ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೊಡಗು ಸೇರಿದಂತೆ ಕೋಲಾರದಲ್ಲೂ ಮಳೆಯಾಗಲಿದೆ.
ಕಳೆದೆರಡು ದಿನಗಳಿಂದ ಬೆಂಗಳೂರಲ್ಲಿ ವರುಣ ತಣ್ಣಗಾಗಿದ್ದು, ಶನಿವಾರದಂದು ಸಾಮಾನ್ಯವಾಗಿ ಬೆಳಗ್ಗೆ ಬಿಸಿಲಿನಿಂದ ಕೂಡಿದರೆ, ಮಧ್ಯಾಹ್ನದ ಸಮಯ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ತಾಪಮಾನ ಏರಿಕೆ ಸಾಧ್ಯತೆ
ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಮಳೆ ನಡುವೆಯು ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Karnataka Cabinet Expansion Live : ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ
ಪ್ರಮುಖ ನಗರಗಳಲ್ಲಿನ ಪ್ರಸ್ತುತ ಹವಾಮಾನ ಹೀಗಿದೆ
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 40 ಡಿ.ಸೆ – 26 ಡಿ.ಸೆ
ಗದಗ: 38 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 22 ಡಿ.ಸೆ
ಬೆಳಗಾವಿ: 34 ಡಿ.ಸೆ – 21 ಡಿ.ಸೆ
ಕಾರವಾರ: 37 ಡಿ.ಸೆ – 26 ಡಿ.ಸೆ
ಮಂಗಳೂರು: 34 ಡಿ.ಸೆ – 25 ಡಿ.ಸೆ
ಹೊನ್ನಾವರ: 33 ಡಿ.ಸೆ- 26 ಡಿ.ಸೆ
ಬೆಂಗಳೂರು ನಗರ: 33 ಡಿ.ಸೆ – 22 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉತ್ತರ ಕನ್ನಡ
Honnavar News: ಕಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ, 30 ಮಂದಿಗೆ ಗಾಯ
Honnavar News: ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಮಂಕಿ ಬಳಿ ಅಪಘಾತ ನಡೆದಿದೆ. ಬಸ್ ಚಾಲಕ ಅಪಘಾತ ತಡೆಯಲು ಬ್ರೇಕ್ ಹಾಕಿದ್ದು, ಈ ವೇಳೆ ಕಾರಿಗೆ ಡಿಕ್ಕಿಹೊಡೆದು ಬಸ್ ಪಲ್ಟಿಯಾಗಿದೆ.
ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಮಂಕಿ ಬಳಿ ನಡೆದಿದೆ. ಅಪಘಾತದಲ್ಲಿ (Honnavar News) ಗಾಯಗೊಂಡಿರುವ ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ.
ಮಂಕಿ ಬಳಿ ಒಳರಸ್ತೆಗೆ ಕಾರು ತಿರುಗಿಸುತ್ತಿದ್ದ ವೇಳೆ ಶುಕ್ರವಾರ ರಾತ್ರಿ ಹಿಂದಿನಿಂದ ಬಸ್ ಗುದ್ದಿದೆ. ಬಸ್ ಚಾಲಕ ಅಪಘಾತ ತಡೆಯಲು ಯತ್ನಿಸಿದನಾದರೂ ಕಾರಿಗೆ ಡಿಕ್ಕಿಯಾದ ಬಳಿಕ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಇನ್ನು ಕಾರಿನಲ್ಲಿದ್ದ ಜಿಲ್ಲಾ ಪಂಚಾಯಿತಿ ಗುತ್ತಿಗೆದಾರ ಮೋಹನ್ ನಾಯ್ಕ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ | Theft Case: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ಮಹಿಳೆಯರ ತಲೆ ಒಡೆದು ದರೋಡೆ ಮಾಡಿದ ಕಿರಾತಕಿ
ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣ; ಪಿಡಿಒ ಅಮಾನತು
ರಾಯಚೂರು: ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣದಲ್ಲಿ ನಿರ್ಲಕ್ಷ್ಯ ಆರೋಪದಲ್ಲಿ ಜಾಗೀರ ಜಾಡಲದಿನ್ನಿ ಪಿಡಿಒ ರೇಣುಕಾ ಎಂಬುವವರನ್ನು ಅಮಾನತು ಮಾಡಲಾಗಿದೆ.
ದೇವದುರ್ಗ ತಾಲೂಕು ರೇಕಲಮರಡಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಪೈಪ್‌ಲೈನ್ ಒಡೆದು ಕಲುಷಿತ ನೀರು ಸರಬರಾಜು ಆಗಿತ್ತು. ಆ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಒಬ್ಬ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಘಟನೆಗೆ ಪಿಡಿಒ ನಿರ್ಲಕ್ಷ್ಯ ಕಾರಣ, ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದರು. ದೇವದುರ್ಗ ಇಒ ನೀಡಿದ ವರದಿ ಆಧರಿಸಿ, ಇಲಾಖಾ ವಿಚಾರಣೆ ಕಾಯ್ದಿರಿಸಿ ಪಿಡಿಒ ರೇಣುಕಾ ಅವರನ್ನು ರಾಯಚೂರು ಜಿ.ಪಂ. ಸಿಇಒ ಶಶಿಧರ್ ಕುರೇರ್ ಆದೇಶ ಹೊರಡಿಸಿದ್ದಾರೆ.
ಉಡುಪಿ
Weather Report: ಉತ್ತರ ಒಳನಾಡಿನಲ್ಲಿ ವರುಣನಿಗೆ ವಿರಾಮ; ಕರಾವಳಿ, ದಕ್ಷಿಣ ಒಳನಾಡಲ್ಲಿ ಮುಂದುವರಿದ ಮಳೆ
Weather Report: ರಾಜ್ಯದ ಹಲವೆಡೆ ಇನ್ನೆರಡು ದಿನಗಳು ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Rain alert) ನೀಡಿದೆ. ಉತ್ತರ ಒಳನಾಡಲ್ಲಿ ವರುಣ ದುರ್ಬಲಗೊಂಡಿದ್ದರೆ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ.
ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ (Rain news) ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಭಾರಿ ಮಳೆಯಾಗುವ (Weather report) ಸಾಧ್ಯತೆ ಇದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ ಚಾಮರಾಜನಗರದಲ್ಲೂ ಮಳೆಯ ಅಬ್ಬರ ಇರಲಿದೆ. ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೊಡಗು ಸೇರಿದಂತೆ ಕೋಲಾರದಲ್ಲೂ ವ್ಯಾಪಕ ಮಳೆಯಾಗಲಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಗುಡುಗು ಮುನ್ನೆಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿಸಹಿತ ಗುಡುಗು ಮಿಂಚಿನ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಮಳೆ ನಡುವೆಯು ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Cooker Blast: ರಾಮನಗರದಲ್ಲಿ ಎಲೆಕ್ಷನ್ ಪ್ರಚಾರದ ವೇಳೆ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ರಾಯಚೂರಿನಲ್ಲಿ ತಾಪಮಾನ ಏರಿಕೆ; ರಾಜ್ಯಾದ್ಯಂತ ಮಳೆ ಅಬ್ಬರ
ರಾಜ್ಯದಲ್ಲಿ ಗುರುವಾರ ಮಳೆಯಾಗಿದ್ದು, ಇದರ ನಡುವೆಯೂ ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 39.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದಕ್ಷಿಣ ಕನ್ನಡದ ಸುಳ್ಯದಲ್ಲಿ 5, ಕೊಳ್ಳೇಗಾಲ, ಕೊಣನೂರು, ಹೊಸಪೇಟೆಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಸುಬ್ರಹ್ಮಣ್ಯ, ನಾಪೋಕ್ಲು, ಮದ್ದೂರು, ತುಮಕೂರಲ್ಲಿ ತಲಾ 3, ಬುಕ್ಕಪಟ್ಟಣ, ಹೊಸದುರ್ಗದಲ್ಲಿ ತಲಾ 2ಸೆಂ.ಮೀ ಮಳೆಯಾಗಿದೆ. ಹುಣಸೂರು, ಮಧುಗಿರಿ, ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ, ಚಿಕ್ಕಮಗಳೂರು, ಕೊಟ್ಟಿಗೆಹಾರ , ಚಂದೂರಾಯನಹಳ್ಳಿ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
ಕರ್ನಾಟಕ16 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ19 hours ago
Karnataka Cabinet Expansion Live : 34 ಸಚಿವರಿಗೆ ಖಾತೆ ಹಂಚಿಕೆ; ಬಯಸಿದ ಖಾತೆ ಪಡೆದ ಡಿ ಕೆ ಶಿವಕುಮಾರ್
-
ಕರ್ನಾಟಕ16 hours ago
Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
-
ಕಿರುತೆರೆ15 hours ago
Deepak Gowda: ‘ಶ್ರೀರಸ್ತು ಶುಭಮಸ್ತು’ಧಾರಾವಾಹಿಯಿಂದ ಹೊರನಡೆದ ದೀಪಕ್ ಗೌಡ; ಪಾತ್ರಕ್ಕೆ ಬಂದವರು ಕಿರುತೆರೆಗೆ ಹೊಸಬರಲ್ಲ!
-
ಕರ್ನಾಟಕ11 hours ago
Karnataka Cabinet: ತಾತನನ್ನು ಮಿನಿಸ್ಟರ್ ಮಾಡಿ ಪ್ಲೀಸ್: ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು
-
ಕಿರುತೆರೆ17 hours ago
Weekend With Ramesh: ಈ ವಾರದ ವೀಕೆಂಡ್ ವಿತ್ ರಮೇಶ್ ಅತಿಥಿಗಳು ಇವರು!
-
ಕ್ರಿಕೆಟ್6 hours ago
World Cup 2023 : ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ
-
ಕರ್ನಾಟಕ7 hours ago
Tumkur News: ಹೆಜ್ಜೇನು ದಾಳಿ; ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ