ಕರ್ನಾಟಕ
H.D. Kumaraswamy: ಜೆಡಿಎಸ್ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್.ಡಿ. ಕುಮಾರಸ್ವಾಮಿ!
ಹಿಂದೆ ಒಂದು ಚುನಾವಣೆಯಲ್ಲಿ 179 ಸ್ಥಾನದಿಂದ 39 ಸ್ಥಾನಕ್ಕೆ ಇಳಿದಾಗ ಕಾಂಗ್ರೆಸ್ ನಾಯಕರು ಪಕ್ಷ ವಿಸರ್ಜನೆ ಮಾಡಿದ್ದರಾ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.
ಬೆಂಗಳೂರು: ಜೆಡಿಎಸ್ ಪಕ್ಷವನ್ನು ಎಂದು ವಿಸರ್ಜನೆ ಮಾಡುತ್ತೀರ ಎಂದು ಕಾಂಗ್ರೆಸ್ ನಾಯಕರು ಹಾಗೂ ಕಾಂಗ್ರೆಸ್ ಪಕ್ಷ ಟ್ವೀಟ್ ಮೂಲಕ ಪ್ರಶ್ನಿಸುತ್ತಿರುವುದರ ಕುರಿತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ತಾವು ಪಕ್ಷ ವಿಸರ್ಜನೆ ಕುರಿತು ಆಡಿದ ಮಾತಿಗೆ ಬದ್ಧನಾಗಿದ್ದೇನೆ. ಆದರೆ ಕಾಂಗ್ರೆಸ್‌ನವರು ನನ್ನ ಮಾತನ್ನು ಸರಿಯಾಗಿ ಕೇಳಿಸಿಕೊಳ್ಳಬೇಕು ಎಂದಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಪ್ರಶ್ನೆಗೆ ಉತ್ತರಿಸಿದ ಎಚ್.ಡಿ. ಕುಮಾರಸ್ವಾಮಿ, ನನಗೆ 123 ಸೀಟು ಬಂದು ಪಂಚರತ್ನ ಯೋಜನೆಗಳನ್ನು ಜಾರಿ ಮಾಡದಿದ್ದರೆ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಎಂದು ಹೇಳಿದ್ದೆ. ಆ ಹೇಳಿಕೆ ಕಾಂಗ್ರೆಸ್ ನಾಯಕರಿಗೆ ಬೇರೆ ರೀತಿ ಕೇಳಿಸಿದೆ. ಒಮ್ಮೆ ಅವರು ನನ್ನ ಹೇಳಿಕೆಯನ್ನು ಮತ್ತೆ ಕೇಳಿಸಿಕೊಳ್ಳಲಿ. ನಾನು ಹೇಳಿದ್ದು ಏನು ಎಂಬುದು ಅರ್ಥ ಆಗುತ್ತದೆ. ಅವರಂಥ ಕುತಂತ್ರದ ರಾಜಕಾರಣ ಮಾಡಿ, ನಾವು ಪಕ್ಷ ಕಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದರು.
ಹಿಂದೆ ಒಂದು ಚುನಾವಣೆಯಲ್ಲಿ 179 ಸ್ಥಾನದಿಂದ 39 ಸ್ಥಾನಕ್ಕೆ ಇಳಿದಾಗ ಕಾಂಗ್ರೆಸ್ ನಾಯಕರು ಪಕ್ಷ ವಿಸರ್ಜನೆ ಮಾಡಿದ್ದರಾ? ಕಾಲಚಕ್ರ ತಿರುಗುತ್ತೆ, ಮೇಲೆ ಇದ್ದವನು ಕೆಳಗೆ ಇಳಿಬೇಕು, ಕೆಳಗಿದ್ದವನು ಮೇಲೆ ಬರಬೇಕು. ಈ ದುರಹಂಕಾರದ ಮಾತು ಬೇಡ. ಪಕ್ಷ ವಿಸರ್ಜನೆ ಮಾಡುವುದು, ಅಂತ್ಯಸಂಸ್ಕಾರ ಮಾಡುವುದು ಇದೆಲ್ಲಾ ನಾನು ನಿಮ್ಮಿಂದ ಕಲೀಬೇಕಿಲ್ಲ ಎಂದರು.
ಚುನಾವಣೆಯಲ್ಲಿ ಕಾಂಗ್ರೆಸ್ ಅಕ್ರಮ
ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿಗೆ ಕಾಂಗ್ರೆಸ್ ಪಕ್ಷವು ಮತದಾನಕ್ಕೆ ಕೆಲವೇ ಗಂಟೆಗಳ ಮುನ್ನ ಹಂಚಿದ ಕ್ಯುಆರ್ ಕೋಡ್ ಉಳ್ಳ ಈ ಕೂಪನ್ ಗಳೇ ಕಾರಣ. ಇದು ಗಂಭೀರ ಸ್ವರೂಪದ ಚುನಾವಣೆ ಅಕ್ರಮ ಎಂದು ದೂರಿದರು. ಮೂರು ಸಾವಿರ ಹಾಗೂ ಐದು ಸಾವಿರ ಮೊತ್ತದ ಕ್ಯೂ ಆರ್ ಕೋಡ್ ಗಳನ್ಜು ಹೊಂದಿರುವ ಕೂಪನ್ ಗಳನ್ನು ಮತದಾನಕ್ಕೆ ಕೆಲವೇ ಗಂಟೆಗಳ ಮುನ್ನ ಮತದಾರರಿಗೆ ಹಂಚಲಾಯಿತು.
ರಾಮನಗರ, ಮಾಗಡಿ, ರಾಜರಾಜೇಶ್ವರಿ ನಗರ ಸೇರಿದಂತೆ ರಾಜ್ಯದ 45ರಿಂದ 50 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಈ ರೀತಿಯ ಅಕ್ರಮ ಮಾಡಿದೆ. ಬಿಜೆಪಿ ಸರ್ಕಾರದ ಅಕ್ರಮಗಳನ್ನು ತನಿಖೆ ಮಾಡಿಸುವೆ ಎಂದು ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಈ ಕೂಪನ್ ಅಕ್ರಮದ ಬಗ್ಗೆ ತನಿಖೆ ಮಾಡಿಸಬೇಕು.
ಸುಮಾರು ನಲವತ್ತೆರಡು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದವರು ಗಿಫ್ಟ್ ಕೂಪನ್ ಹಂಚಿದ್ದಾರೆ. ಆ ಕೂಪನ್ ಕೊಟ್ಟರೆ, ಮೂರು, ಐದು ಸಾವಿರ ಬೆಲೆಯ ವಸ್ತುಗಳು ಸಿಗುತ್ತೆ ಅಂತ ಆಸೆ ಹುಟ್ಟಿಸಿದ್ದಾರೆ. ಒಂದೊಂದು ಕ್ಷೇತ್ರದಲ್ಲಿ ಸುಮಾರು ಅರವತ್ತು ಸಾವಿರ ಕೂಪನ್ ಹಂಚಿದ್ದಾರೆ ಎಂದ ಎಚ್.ಡಿ. ಕುಮಾರಸ್ವಾಮಿ, ಗಿಫ್ಟ್ ಕೂಪನ್‌ಗಳನ್ನು ಪ್ರದರ್ಶನ ಮಾಡಿದರು.
ಇದನ್ನೂ ಓದಿ: Karnataka Election 2023: ಮತಕ್ಕಾಗಿ ಆಣೆ- ಪ್ರಮಾಣ, ಗಿಫ್ಟ್ ಆಮಿಷಕ್ಕೆ ಮುಂದಾದ ದಾವಣಗೆರೆ ಬಿಜೆಪಿ ಅಭ್ಯರ್ಥಿ, ದೂರು
ಕರ್ನಾಟಕ
Karnataka Cabinet: ತಾತನನ್ನು ಮಿನಿಸ್ಟರ್ ಮಾಡಿ ಪ್ಲೀಸ್: ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು
ತಮ್ಮ ತಾತ ಸಚಿವರಾಗದೇ ಇದ್ದದ್ದಕ್ಕೆ ಬೇಸರವಾಗಿದೆ. ನನ್ನ ತಾತ ಬಹಳ ಕರುಣಾಮಯಿ, ಸಾಮರ್ಥ್ಯ ಇರುವವರು ಹಾಗೂ ಪರಿಶ್ರಮಿಯಾಗಿದ್ದಾರೆ ಎಂದು ಆರ್ನ ತಿಳಿಸಿದ್ದಾಳೆ.
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗುವಲ್ಲಿ ಹಿರಿಯ ಕಾಂಗ್ರೆಸಿಗ ಟಿ.ಬಿ. ಜಯಚಂದ್ರ ಸಫಲರಾಗಿಲ್ಲ. ತಮ್ಮನ್ನು ಆಯ್ಕೆ ಮಾಡದೇ ಇರುವ ಕುರಿತು ಮಾಧ್ಯಮಗಳ ಎದುರು ಅಸಮಾಧಾನ ಹೊರಹಾಕಿದ್ದಾರೆ. ಇದೀಗ ಜಯಚಂದ್ರ ಅವರ ಮೊಮ್ಮಗಳೂ ಬೇಸರಗೊಂಡಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿದ್ದಾಳೆ.
ಇಂಗ್ಲಿಷ್‌ನಲ್ಲಿ ಪತ್ರ ಬರೆದಿರುವ ಆರ್ನಾ ಸಂದೀಪ್, ಕೊನೆಯಲ್ಲಿ ಒಂದು ಸ್ಮೈಲಿಯನ್ನೂ ಅಂಟಿಸಿದ್ದಾಳೆ. Dear Rahu Gandhi, I Am TB Jayachandras Granddaughter. I Am sad that my grandfather did not become minister. I want him to become minister because he is kind, capable and hardworking. Please. ಎಂದು ಬರೆದಿದ್ದಾಳೆ.
ತಮ್ಮ ತಾತ ಸಚಿವರಾಗದೇ ಇದ್ದದ್ದಕ್ಕೆ ಬೇಸರವಾಗಿದೆ. ನನ್ನ ತಾತ ಬಹಳ ಕರುಣಾಮಯಿ, ಸಾಮರ್ಥ್ಯ ಇರುವವರು ಹಾಗೂ ಪರಿಶ್ರಮಿಯಾಗಿದ್ದಾರೆ, ಅವರು ಸಚಿವರಾಗಬೇಕೆಂದು ನಾನು ಬಯಸುತ್ತೇನೆ. ದಯಮಾಡಿ ಎಂದು ಪತ್ರದಲ್ಲಿ ತಿಳಿಸಿ ಕೊನೆಯಲ್ಲಿ ಒಂದು ಸ್ಮೈಲಿಯನ್ನೂ ಹಾಕಿದ್ದಾಳೆ. ಸ್ವಯಂಸ್ಫೂರ್ತಿಯಿಂದ ಮೊಮ್ಮಗಳು ಪತ್ರ ಬರೆದಿರುವುದನ್ನು ಕಂಡು ಜಯಚಂದ್ರ ಅಚ್ಚರಿಪಟ್ಟರು.
ಇದನ್ನೂ ಓದಿ: Electricity Bill: ಇವತ್ತಿಂದ ಕರೆಂಟ್ ಬಿಲ್ ಕಟ್ಟಂಗಿಲ್ಲ; ಇದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಆರ್ಡರ್!
ಕರ್ನಾಟಕ
Karnataka Cabinet: ರಾಜ್ಯ ಕಾಂಗ್ರೆಸ್ ನಾಯಕರ ಜತೆಗೆ ಮಾತುಕತೆ ಕಟ್: ಸದನದಲ್ಲಿ ನೋಡ್ಕೊತೀನಿ ಎಂದ ಜಯಚಂದ್ರ
ನಾನು ಮಿನಿಸ್ಟರ್ ಆಗದಿದ್ದರೂ ಶಾಸಕ ಸ್ಥಾನದಿಂದ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ನನ್ನ ಬಳಿ ದಾಖಲೆ ಇದೆ, ಮಾತನಾಡುವ ಶಕ್ತಿ ಇದೆ ಎಂದು ಟಿ.ಬಿ. ಜಯಚಂದ್ರ ಹೇಳಿದ್ದಾರೆ.
ಬೆಂಗಳೂರು: ಇನ್ನುಮುಂದೆ ತಮಗೂ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಮಾತನಾಡುವುದಿಲ್ಲ ಎಂದಿರುವ ಹಿರಿಯ ಕಾಂಗ್ರೆಸಿಗ ಹಾಗೂ ಮಾಜಿ ಸಚಿವ ಟಿ.ಬಿ. ಜಯಚಂದ್ರ, ಸದನ ಕರೆಯಲ್ಲಿ ಅಲ್ಲಿ ಮಾತಾಡುತ್ತೇನೆ ಎಂದು ಹೇಳಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಅನೇಕ ಖಾತೆಗಳನ್ನು ನಿರ್ವಹಣೆ ಮಾಡುತ್ತಿದ್ದ ಪ್ರಭಾವಿ ಸಚಿವರಾಗಿದ್ದ ಟಿ.ಬಿ. ಜಯಚಂದ್ರ ಅವರು ಈ ಬಾರಿಯೂ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದರು. ಸಚಿವರ ಪಟ್ಟಿಯಲ್ಲಿ ಕೊನೆಯವರೆಗೂ ಹೋಗಿ ತಮ್ಮ ಹೆಸರು ಕೈಬಿಡಲಾಗಿದೆ ಎಂದು ಅಸಮಾಧಾನಗೊಂಡಿರುವ ಟಿ.ಬಿ. ಜಯಚಂದ್ರ, ಮಾಧ್ಯಮಗಳ ಎದುರು ಕೋಪ ಹೊರಹಾಕಿದ್ದಾರೆ.
ನನಗೆ ಮಂತ್ರಿ ಪದವಿ ಸಿಗಬೇಕಿತ್ತು. ಕೊನೆಯ ಕ್ಷಣದವರೆಗೂ ನನ್ನ ಹೆಸರು ಪಟ್ಟಿಯಲ್ಲಿತ್ತು. ನನಗೆ ಸಚಿವ ಸ್ಥಾನ ತಪ್ಪಲು ನಮ್ಮ ಜಿಲ್ಲೆಯ ನಾಯಕರು ಕಾರಣರಲ್ಲ. ಪರಮೇಶ್ವರ್ ಕೋಟಾ ಬೇರೆ, ರಾಜಣ್ಣ ಖೋಟಾ ಬೇರೆ. ನನ್ನದು ನನ್ನ ಸಮುದಾಯದ ಕೋಟ. ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ನಮ್ಮ ಕಾರ್ಯಕರ್ತರು ಹೋರಾಟಕ್ಕೆ ಮುಂದಾದರು. ಆದರೆ ನಾನು ಪಕ್ಷದ ಶಿಸ್ತಿನ ಸಿಪಾಯಿ. ನಾನು ಶಾಸಕನಾದಾಗ ಈಗ ವಿಧಾನ ಸಭೆಯಲ್ಲಿ ಇರೋರು ಯಾರೂ ಶಾಸಕರಾಗಿರಲಿಲ್ಲ. ನನ್ನ ಸಚಿವ ಸ್ಥಾನ ತಪ್ಪಲು ಕೆಲ ರಿಯಲ್ ಎಸ್ಟೇಟ್ ಹಾಗೂ ಎಜುಕೇಷನ್ ಮಾಫಿಯಾ ಕೆಲಸ ಮಾಡಿದೆ. ನಾನು ನೀರು ಬೇಕು ಜನರಿಗೆ ಅಂತ ಲಾಭಿ ಮಾಡಿದೆ, ಅವರು ಎಜುಕೇಷನ್ ಸಂಸ್ಥೆಗಳು ಬೇಕು ಅಂತ ಲಾಭಿ ಮಾಡಿದರು. ಇವರೇ ನನಗೆ ಸಚಿವ ಸ್ಥಾನ ತಪ್ಪಿಸುವಲ್ಲಿ ಕಾರಣರಾಗಿದ್ದಾರೆ.
ನಾನು ಮಿನಿಸ್ಟರ್ ಆಗದಿದ್ದರೂ ಶಾಸಕ ಸ್ಥಾನದಿಂದ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ನನ್ನ ಬಳಿ ದಾಖಲೆ ಇದೆ, ಮಾತನಾಡುವ ಶಕ್ತಿ ಇದೆ. ಸದನದಲ್ಲಿ ಎಲ್ಲವನ್ನೂ ಮಾತನಾಡ್ತೀನಿ. ನಾನು ಯಾವನಿಗೂ ಹೆದರಲ್ಲ. ಮುಂದೆ ಸದನ ಕರೆಯಲಿ ಎಲ್ಲವನ್ನೂ ಮಾತನಾಡ್ತೀನಿ. ಇನ್ನು ಏನಿದ್ದರೂ ಹೈಕಮಾಂಡ್ ಜತೆ ಮಾತ್ರ ನನ್ನ ಮಾತುಕತೆ. ರಾಜ್ಯದ ನಾಯಕರ ಜತೆ ಮಾತುಕತೆ ಇಲ್ಲ ಎಂದು ಹೇಳಿದರು.
ಇದನ್ನೂ ಓದಿ: Electricity Bill: ಇವತ್ತಿಂದ ಕರೆಂಟ್ ಬಿಲ್ ಕಟ್ಟಂಗಿಲ್ಲ; ಇದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಆರ್ಡರ್!
ಕರ್ನಾಟಕ
Drowned in Pond: ಸೆಕೆ ತಾಳಲಾರದೆ ಕೆರೆಯಲ್ಲಿ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವು
High temperature: ಬಿಸಿಲಿನ ಝಳ ಸಹಿಸಲಾಗದೆ ಕೆರೆಗೆ ಸ್ನಾನಕ್ಕೆ ಹೋಗಿದ್ದವರಲ್ಲಿ ಒಬ್ಬ ಯುವಕ ಪ್ರಾಣ ಕಳೆದುಕೊಂಡಿದ್ದಾನೆ.
ಕೋಲಾರ : ರಾಜ್ಯಾದ್ಯಂತ ಸೆಕೆ ವಿಪರೀತವಾಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಜನರು ನಾನಾ ತಂತ್ರಗಳನ್ನು ಬಳಸುತ್ತಿದ್ದಾರೆ. ಕೆಲವರು ನೀರಿನಲ್ಲಿ ಈಜಲೂ ಹೋಗುವುದುಂಟು. ಆದರೆ, ಇಲ್ಲೊಬ್ಬರು ಸೆಕೆ ತಾಳಲಾರದೆ ಕೆರೆಯಲ್ಲಿ ಈಜಲು (Drowned in Pond) ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ.
ಕೋಲಾರದ (Kolar news) ಗಾಂಧಿ ನಗರದ ಮೂವರು ಯುವಕರು ಮಂಗಸಂದ್ರ-ಮಾಲೂರು ಮಾರ್ಗದ ರಸ್ತೆ ಬದಿಯ ಕೆರೆಯಲ್ಲಿ ಸ್ನಾನಕ್ಕೆಂದು ಹೋಗಿದ್ದವರು. ಮೂವರಲ್ಲಿ ಇಬ್ಬರಿಗೆ ಈಜು ಬರುತ್ತಿದ್ದರೆ ಒಬ್ಬನಿಗೆ ಬರುತ್ತಿರಲಿಲ್ಲ.
ಕೆರೆಯ ನೀರಿನಲ್ಲಿ ಸ್ನಾನ ಮಾಡುತ್ತಾ ಖುಷಿಪಡುತ್ತಿದ್ದಾಗ ಪ್ರಭಾಸ್ ಎಂಬ ಯುವಕ ನೀರಿನಲ್ಲಿ ಮುಳುಗಿದ್ದಾನೆ. ಆತನಿಗೆ ಈಜು ಬಾರದೆ ಮುಳುಗಿದ್ದಾನೆ. ಉಳಿದ ಇಬ್ಬರು ಆತನ ರಕ್ಷಣೆಗೆ ಪ್ರಯತ್ನ ಮಾಡಿದರೂ ಫಲ ನೀಡಲಿಲ್ಲ.
ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ದೇಹವನ್ನು ಎಸ್ ಎನ್ ಆರ್ ಆಸ್ಪತ್ರಗೆ ರವಾನಿಸಲಾಗಿದೆ.
ಸಿಗಂದೂರಿಗೆ ಲಾಂಚ್ ಸಂಚಾರ ಸ್ಥಗಿತ
ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ನೀರು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ಹಲ್ಕೆ-ಮುಪ್ಪಾನೆ ಲಾಂಚ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಕಾರ್ಗಲ್, ಜೋಗದಿಂದ ಶ್ರೀ ಕ್ಷೇತ್ರ ಸಿಗಂದೂರಿಗೆ ಸಂಪರ್ಕ ಕಲ್ಪಿಸುವ ಲಾಂಚ್ ಇದಾಗಿದೆ.
ಹಿನ್ನೀರಿನಲ್ಲಿ ವಾಡಿಕೆಗಿಂತಲೂ ನೀರು ಕಡಿಮೆಯಾಗಿದೆ. ಹೀಗಾಗಿ, ಲಾಂಚ್ ಸಂಚಾರಕ್ಕೆ ಕಲ್ಲು, ಮರದ ದಿಮ್ಮಿ, ಮರಳಿನ ದಿಬ್ಬ ಅಡ್ಡಿಯಾಗಿದೆ. ಒಂದೊಮ್ಮೆ ಕಡಿಮೆ ನೀರಿನಲ್ಲಿ ಲಾಂಚ್ ಓಡಾಡಿದರೆ ಅಪಘಾತಕ್ಕೀಡಾಗುವ ಆತಂಕ ಎದುರಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಲಾಂಚ್ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ವಾಹನಿಗರು ವಾಹನಿಗರಿಗೆ 60 ಕಿ.ಮೀ. ದೂರ ಸುತ್ತು ಬಳಸಿ ದೇವಸ್ಥಾನಕ್ಕೆ ಹೋಗಬೇಕಾಗಿದೆ.
ಇದನ್ನೂ ಓದಿ: Students Drowned : ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲು
ಕರ್ನಾಟಕ
Shivamogga News: ಶಿವಮೊಗ್ಗ ಕ್ಷೇತ್ರಕ್ಕೆ 4ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಅನುಮತಿ: ಸಂಸದ ಬಿ.ವೈ. ರಾಘವೇಂದ್ರ
Shivamogga News: ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 4ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಕೇಂದ್ರ ಸರ್ಕಾರವು ಅನುಮತಿ ನೀಡಿದ್ದು, ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಯೋಜನೆಯನ್ನು ಕಾರ್ಯಗತಗೊಳಿಸಿ, ಯಶಸ್ವಿಗೊಳಿಸುವಂತೆ ಅಧಿಕಾರಿಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಸೂಚನೆ ನೀಡಿದ್ದಾರೆ.
ಶಿವಮೊಗ್ಗ: ಕೇಂದ್ರ ಸರ್ಕಾರವು (Central government) ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 4ಜಿ ಆಧಾರಿತ 225 ಮೊಬೈಲ್ ಟವರ್ (Mobile towers) ಸ್ಥಾಪನೆಗೆ ಅನುಮತಿ ನೀಡಿದ್ದು, ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಯೋಜನೆಯನ್ನು ಕಾರ್ಯಗತಗೊಳಿಸಿ, ಯಶಸ್ವಿಗೊಳಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಸೂಚನೆ ನೀಡಿದರು.
ಶಿವಮೊಗ್ಗ ವಲಯದ ಬಿಎಸ್ಎನ್ಎಲ್‌ನ ಹಿರಿಯ ಅಧಿಕಾರಿಗಳೊಂದಿಗೆ ಈ ಕುರಿತು ಸಭೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ, ಎಲ್ಲ ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಕಾರ್ಯಗತಗೊಳಿಸಿ, ಯಶಸ್ವಿಗೊಳಿಸಿ, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದರು.
ಈಗಾಗಲೇ ಜಿಲ್ಲೆಯ ಹಲವು ಗ್ರಾಮಾಂತರ ಪ್ರದೇಶಗಳಲ್ಲಿ ಬಿ.ಎಸ್.ಎನ್.ಎಲ್. ಸಂಪರ್ಕ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ನೆಟ್‌ವರ್ಕ್ ಇಲ್ಲದೇ ಜನಸಾಮಾನ್ಯರಿಗೆ ಆನ್‌ಲೈನ್ ಮೂಲಕ ಹಣದ ವ್ಯವಹಾರ ಮಾಡಲೂ ಸಹ ತೊಂದರೆಯಾಗುತ್ತಿರುವುದರಿಂದ, ಹಾಲಿ ಇರುವ ಟವರ್‌ಗಳಲ್ಲಿಯೂ ಸಹ ಉತ್ತಮ ರೀತಿಯಲ್ಲಿ ನೆಟ್ವರ್ಕ್ ಸಂಪರ್ಕ ದೊರೆಯುವಂತೆ ಮಾಡಲು ತೀವ್ರ ಗಮನಹರಿಸುವಂತೆ ಹಾಗೂ ಗ್ರಾಮಸ್ಥರಿಂದ ಆಕ್ಷೇಪಣೆ ಬಾರದಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಬೇಸಿಗೆ ರಜಾ ಇದ್ದರೂ ಶಾಲೆಗೆ ಹೋಗಿ ನಿಗೂಢವಾಗಿ ಮೃತಪಟ್ಟ 10ನೇ ತರಗತಿ ವಿದ್ಯಾರ್ಥಿನಿ
ಒಟ್ಟು 225 ಮೊಬೈಲ್ ಟವರ್‌ಗಳ ಪೈಕಿ, ಸಾಗರ ತಾಲೂಕಿಗೆ 89, ಹೊಸನಗರಕ್ಕೆ 35, ತೀರ್ಥಹಳ್ಳಿಗೆ 27, ಶಿವಮೊಗ್ಗಕ್ಕೆ 18, ಶಿಕಾರಿಪುರಕ್ಕೆ 13, ಭದ್ರಾವತಿ ಹಾಗೂ ಸೊರಬ ತಾಲೂಕಿಗೆ ತಲಾ 8 ಮತ್ತು ಬೈಂದೂರು ಕ್ಷೇತ್ರಕ್ಕೆ 25 ಟವರ್‌ಗಳು ಮಂಜೂರಾಗಿವೆ. ಆರಂಭಿಕ ಮೂರು ಹಂತಗಳಲ್ಲಿ ಶಿವಮೊಗ್ಗ ಜಿಲ್ಲೆಯ 112 ಹಾಗೂ ಬೈಂದೂರು ಕ್ಷೇತ್ರದಲ್ಲಿ 25 ಟವರ್ ಸ್ಥಾಪನೆಗೆ ಅನುಮತಿ ಲಭ್ಯವಾಗಿದ್ದು, ಬಿ.ಎಸ್.ಎನ್.ಎಲ್. ಸಂಸ್ಥೆಯು ಟವರ್ ಸ್ಥಾಪನೆಗೆ ಸೂಕ್ತ ಜಾಗಗಳನ್ನು ಗುರುತಿಸಿದೆ. ಈ ಸಂಬಂಧ ಭೂಮಿ ಹಸ್ತಾಂತರದ ಪ್ರಕ್ರಿಯೆ ಆರಂಭವಾಗಬೇಕಿದೆ. ತಲಾ ಒಂದು ಟವರ್‌ಗೆ ಅಂದಾಜು 75 ಲಕ್ಷ ರೂ.ಗಳಿಂದ 1 ಕೋಟಿವರೆಗೂ ಖರ್ಚಾಗುವ ಸಾಧ್ಯತೆ ಇದ್ದು, ಒಟ್ಟಾರೆ 200 ಕೋಟಿಗೂ ಅಧಿಕ ಮೊತ್ತ ಈ ಕಾಮಗಾರಿಗೆ ಖರ್ಚಾಗಲಿದೆ ಎಂದು ತಿಳಿಸಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ದೂರ ಸಂಪರ್ಕ ವ್ಯವಸ್ಥೆಯಲ್ಲಿನ ಅಭಿವೃದ್ಧಿ ಮತ್ತು ಸುಧಾರಣೆ ದೃಷ್ಟಿಯಿಂದ ಅದರಲ್ಲೂ ದೂರಸಂಪರ್ಕ ವ್ಯವಸ್ಥೆಯಿಂದ ವಂಚಿತವಾದ ನೂರಾರು ಕುಗ್ರಾಮಗಳನ್ನು ಗುರುತಿಸಿ, ಆ ಗ್ರಾಮಗಳಿಗೆ ತುರ್ತಾಗಿ ದೂರಸಂಪರ್ಕ ವ್ಯವಸ್ಥೆಯನ್ನು ಮತ್ತು ಮೊಬೈಲ್ ಟವರ್ ಸ್ಥಾಪನೆಗೆ ಕಳೆದ 3-4 ವರ್ಷಗಳಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದ್ದ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಿ.ಎಸ್.ಎನ್.ಎಲ್. ಜೊತೆಯಲ್ಲಿ ಖಾಸಗಿ ಕಂಪನಿಗಳಾದ ಜಿಯೋ ಮತ್ತು ಏರ್‌ಟೆಲ್ ಸಂಸ್ಥೆಗಳೊಂದಿಗೆ ಕ್ಷೇತ್ರದಲ್ಲಿನ ನೆಟ್‌ವರ್ಕ್ ವಂಚಿತ ಪ್ರದೇಶಗಳಿಗೆ ಮೊಬೈಲ್ ಟವರ್ ಒದಗಿಸುವ ನಿಟ್ಟಿನಲ್ಲಿ ಹಲವಾರು ಬಾರಿ ಸಭೆ ನಡೆಸಿದ್ದರು.
ಇದನ್ನೂ ಓದಿ: Ashish Vidyarthi: ಯಾವುದೇ ವಯಸ್ಸಲ್ಲಾದರೂ ಸಂತೋಷವಾಗಿರಬಹುದು; ಮದುವೆ ಬಗ್ಗೆ ಆಶಿಶ್ ವಿದ್ಯಾರ್ಥಿ ಹೇಳಿದ್ದೇನು?
ಕೆಲವು ಕಡೆಗಳಲ್ಲಿ ಖಾಸಗಿ ಕಂಪನಿಗಳಾದ ಜಿಯೋ ಮತ್ತು ಏರ್ಟೆಲ್ ಕಂಪನಿಗಳು ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿದರೂ ಸಹ ಕೆಲವು ಕುಗ್ರಾಮಗಳಲ್ಲಿ ಜನವಸತಿ ಕಡಿಮೆ ಇರುವ ಕಾರಣದಿಂದಾಗಿ ಈ ಖಾಸಗಿ ಕಂಪನಿಗಳು ಟವರ್ ನಿರ್ಮಾಣದಲ್ಲಿ ಆಸಕ್ತಿ ತೋರಿರಲಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದಲೇ ಮೊಬೈಲ್ ಟವರ್ ನಿರ್ಮಾಣವನ್ನು ಕೈಗೊಳ್ಳಲು ಕೇಂದ್ರದ ದೂರಸಂಪರ್ಕ ಸಚಿವ ಅಶ್ವಿನಿ ವೃಷ್ಣವ್ ಅವರಿಗೆ ಕಳೆದ ಆ.2ರಂದು 96 ಸ್ಥಳಗಳಲ್ಲಿ ಟವರ್ ನಿರ್ಮಾಣಕ್ಕೆ ಮನವಿ ಸಲ್ಲಿಸಲಾಗಿತ್ತು. ನಂತರದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮೊಬೈಲ್ ನೆಟ್ ವರ್ಕ್ ಇಲ್ಲದ ಸ್ಥಳಗಳ ವಿವರಗಳನ್ನೂ ಸಹ ಕೇಂದ್ರ ದೂರಸಂಪರ್ಕ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ನನ್ನ ಸತತ ಪ್ರಯತ್ನಕ್ಕೆ ಮನ್ನಣೆ ನೀಡಿದ ಕೇಂದ್ರ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣನ್ ಅವರು ಶಿವಮೊಗ್ಗ ಟೆಲಿಕಾಂ ಜಿಲ್ಲೆಗೆ 4ಜಿ ಸ್ಯಾಚುರೇಷನ್ ಯೋಜನೆಯಡಿಯಲ್ಲಿ 198 ಹಾಗೂ ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ 27 ಹೊಸ 4G ಟವರ್‌ಗಳಿಗೆ ಒಟ್ಟಾರೆ 225 ಟವರ್ ಗಳಿಗೆ ಮಂಜೂರಾತಿ ನೀಡಿದ್ದಾರೆ ಎಂದು ಸಂಸದರು ತಿಳಿಸಿದರು.
ಇದನ್ನೂ ಓದಿ: NIA Raid: ಮಧ್ಯಪ್ರದೇಶದಲ್ಲಿ ಐಸಿಸ್ ಉಗ್ರರ ಜಾಲ ಬಯಲು; ಮಸೀದಿಗಳಲ್ಲೇ ಸಂಚು ರೂಪಿಸುತ್ತಿದ್ದ ಮೂವರ ಬಂಧನ
ಈ ಸಂದರ್ಭದಲ್ಲಿ ಡಿ.ಜಿ.ಎಂ. (ಆಪರೇಷನ್) ವೆಂಕಟೇಶ್, ಸಬ್ ಡಿವಿಜನಲ್ ಎಂಜಿನಿಯರ್‌ಗಳಾದ ರಾಜು, ಜಯಕುಮಾರ್, ಎ.ಜಿ.ಎಂ. (ಆಪರೇಷನ್) ಎನ್. ಬಿ. ಹೆಬ್ಬಾಳ್, ಜೆ.ಟಿ.ಒ. ರಾಘವೇಂದ್ರ ಪಾಲ್ಗೊಂಡಿದ್ದರು.
-
ಸುವಚನ14 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕರ್ನಾಟಕ6 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ9 hours ago
Karnataka Cabinet Expansion Live : 34 ಸಚಿವರಿಗೆ ಖಾತೆ ಹಂಚಿಕೆ; ಬಯಸಿದ ಖಾತೆ ಪಡೆದ ಡಿ ಕೆ ಶಿವಕುಮಾರ್
-
ಕರ್ನಾಟಕ20 hours ago
RP Ashok: ಇನ್ಸ್ಪೆಕ್ಟರ್ ಆರ್.ಪಿ.ಅಶೋಕ್ಗೆ ಆರ್ಯಭಟ ಪ್ರಶಸ್ತಿ ಪ್ರದಾನ
-
ಕರ್ನಾಟಕ21 hours ago
ರಾಜ್ಯ ಸಚಿವ ಸಂಪುಟ ವಿಸ್ತರಣೆ: ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ 24 ಶಾಸಕರಿಗೆ ಸಚಿವ ಸ್ಥಾನ, ಮತ್ತೆ ಸಿದ್ದು ಮೇಲುಗೈ
-
ಕ್ರಿಕೆಟ್21 hours ago
IPL 2023: ಗಿಲ್ ಶತಕದ ಕಮಾಲ್; ಮುಂಬೈಗೆ ಬೃಹತ್ ಮೊತ್ತದ ಗುರಿ
-
ಉತ್ತರ ಕನ್ನಡ20 hours ago
Honnavar News: ಕಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ, 30 ಮಂದಿಗೆ ಗಾಯ
-
ಪ್ರಮುಖ ಸುದ್ದಿ20 hours ago
ವಿಸ್ತಾರ ಸಂಪಾದಕೀಯ: ರಾಜ್ಯಾದ್ಯಂತ ಗ್ಯಾರಂಟಿ ಭರವಸೆಯ ಗದ್ದಲ, ಹೊಸ ಸರ್ಕಾರ ಗೊಂದಲ ನಿವಾರಿಸಲಿ