H D Revanna: ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು; ಬಿಜೆಪಿಯವರಿಗೆ ಏನಾದ್ರೂ ಮಾನ, ಮರ್ಯಾದೆ ಇದ್ಯಾ ಎಂದ ಎಚ್‌.ಡಿ.ರೇವಣ್ಣ Vistara News

ಕರ್ನಾಟಕ

H D Revanna: ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು; ಬಿಜೆಪಿಯವರಿಗೆ ಏನಾದ್ರೂ ಮಾನ, ಮರ್ಯಾದೆ ಇದ್ಯಾ ಎಂದ ಎಚ್‌.ಡಿ.ರೇವಣ್ಣ

H D Revanna: ದೇವೇಗೌಡರು ಅಡಿಗಲ್ಲು ಹಾಕಿರುವ ವಿಮಾನ ನಿಲ್ದಾಣಕ್ಕೆ ಬಿಜೆಪಿಯವರು ಮತ್ತೆ ಅಡಿಗಲ್ಲು ಹಾಕುತ್ತಿದ್ದಾರೆ. ಇದನ್ನು ಖಂಡಿಸಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

HD Revanna says Those who get any benefit from the party are ordinary workers
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಬಿಜೆಪಿಯವರು ನಾವು ಅಡಿಗಲ್ಲು ಹಾಕಿರುವ ಕಾಮಗಾರಿಗಳಿಗೆ ಮತ್ತೆ ಅಡಿಗಲ್ಲು ಹಾಕಲು ಹೊರಟಿದ್ದಾರೆ. ಮಾನ, ಮರ್ಯಾದೆ ಇದ್ದರೆ ಆ ಕೆಲಸ ಮಾಡಬಾರದು. ವಿಮಾನ ನಿಲ್ದಾಣಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಈಗಾಗಲೇ ಅಡಿಗಲ್ಲು ಹಾಕಿದ್ದಾರೆ. ಈಗ ಮೊತ್ತೊಮ್ಮೆ ಅಡಿಗಲ್ಲು ಹಾಕುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ (H D Revanna) ಕಿಡಿಕಾರಿದ್ದಾರೆ.

ಮಾ.13 ರಂದು ಹಾಸನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ವಿಮಾನ ನಿಲ್ದಾಣದ ಫೈಲ್‌ ಅನ್ನು ತಡೆ ಹಿಡಿಯಲು ಹಿರಿಯರೊಬ್ಬರು 5 ಕೋಟಿ ರೂಪಾಯಿ ಪಡೆದಿದ್ದಾರೆ. ವಿಮಾನ ನಿಲ್ದಾಣದ ಭೂಮಿಯಲ್ಲಿ 290 ಎಕರೆ ಖರಾಬು ಭೂಮಿ ಲೂಟಿ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಆಸ್ಪತ್ರೆಯ ಕೆಲಸ ಇನ್ನೂ ಇದೆ, ಆಗಲೇ ಉದ್ಘಾಟನೆಗೆ ಮಾಡಲು ಹೊರಟಿದ್ದಾರೆ. ಹಾಸನದ ಐಬಿ‌ ನಾನೇ ಮಾಡಿಸಿಕೊಟ್ಟಿದ್ದು, ತಾಲೂಕು ಕಚೇರಿ, ಜಿಲ್ಲಾ ಕಚೇರಿ ಶುರುವಾಗಿ ಆರು ತಿಂಗಳಾಗಿದೆ. ಅದಕ್ಕೆ ಈಗ ಅಡಿಗಲ್ಲು ಹಾಕುತ್ತಿದ್ದಾರೆ ಎಂದ ಅವರು, ಹೊಸ ಕಾಮಗಾರಿ ಇದ್ದರೆ ಅಡಿಗಲ್ಲು ಹಾಕಿಕೊಳ್ಳಲಿ. ಬೇಕಿದ್ದರೆ ಹಾರ್ಟಿಕಲ್ಚರ್ ಕಾಲೇಜಿಗೆ ಅಡಿಗಲ್ಲು ಹಾಕಲಿ, ಆದರೆ, ದೇವೇಗೌಡರು ಅಡಿಗಲ್ಲು ಹಾಕಿರುವುದಕ್ಕೆ ಮತ್ತೆ ಅಡಿಗಲ್ಲು ಹಾಕುತ್ತಿದ್ದಾರೆ. ಇದನ್ನು ಖಂಡಿಸಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ | V. Somanna: ಪಕ್ಷ ಬಿಡಲು ಮುಂದಾಗಿರುವ ಸಚಿವ ವಿ. ಸೋಮಣ್ಣ ಜತೆ ಮಾತುಕತೆ: ಬಿ.ಎಸ್‌. ಯಡಿಯೂರಪ್ಪ ಹೇಳಿಕೆ

ಇಲ್ಲಿಯವರೆಗೂ ತಾಳ್ಮೆಯಿಂದ ಇದ್ದೇವೆ. ಚುನಾವಣೆ ಸಮೀಪದಲ್ಲಿದೆ ಎಂದು ಹೀಗೆ ಮಾಡುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸ್ತ್ರೀ ಶಕ್ತಿ ಸಂಘಗಳಿಗೆ ಹಿಂದಿನ ಚೆಕ್‌ಗಳಿಗೆ ಈಗ ದಿನಾಂಕ ಹಾಕಿ ಕೊಡುತ್ತಿದ್ದಾರೆ. ಇಂತಹ ಕೆಲಸಗಳ ಮೂಲಕ ಮುಖ್ಯಮಂತ್ರಿ ಹುದ್ದೆಯ ಮರ್ಯಾದೆ ಹಾಳು ಮಾಡಿಕೊಳ್ಳಬೇಡಿ ಎಂದು ಸಿಎಂ ಬೊಮ್ಮಾಯಿ ವಿರುದ್ಧ ಹರಿಹಾಯ್ದಿದ್ದಾರೆ.

48 ಮದ್ಯದಂಗಡಿ ಕೊಟ್ಟಿರುವುದೇ ಹಾಸನ ನಗರಕ್ಕೆ ಬಿಜೆಪಿಯವರ ಕೊಡುಗೆ, ಒಂದು ಲೈಸೆನ್ಸ್ ನೀಡಲು 60 ಲಕ್ಷ ರೂಪಾಯಿ ಲಂಚ ಪಡೆದಿದ್ದಾರೆ. ಸಾಯಂಕಾಲ ಸುಖ ನಿದ್ದೆ ಮಾಡಲು ಮದ್ಯದಂಗಡಿ ತೆರೆದಿದ್ದೇವೆ ಎಂದು ಗಂಧದ ಮರದಲ್ಲಿ ಒಂದು ಬೋರ್ಡ್ ಮಾಡಿಸಿ ಹಾಕಿ ಎಂದ ಅವರು, ಮದ್ಯದಂಗಡಿ ಕೊಟ್ಟಿದ್ದೇವೆ ಎಂದು ವಿಜಯ ಸಂಕಲ್ಪ ರಥಯಾತ್ರೆಯಲ್ಲಿ ಅಡಿಗಲ್ಲು ಹಾಕಿ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ | HD Revanna: ಎಚ್‌.ಡಿ. ರೇವಣ್ಣ ಜತೆ ಎಚ್‌.ಪಿ. ಸ್ವರೂಪ್‌ ಗೌಪ್ಯ ಚರ್ಚೆ; ಬಗೆಹರಿಯಲಿದೆಯಾ ಟಿಕೆಟ್‌ ಗೊಂದಲ?

2023ಕ್ಕೆ ಬಿಜೆಪಿ ಇರುತ್ತೋ ಇರಲ್ಲವೋ, 140 ಸೀಟ್ ಬರೋರು ಯಾಕೆ ಹೆದರಬೇಕು. ಹೊಳೆನರಸೀಪುರದ ಪೊಲೀಸ್ ಸ್ಟೇಷನ್‌ಗೆ ಇಲ್ಲಿ ಅಡಿಗಲ್ಲು ಹಾಕಬೇಕಾ? ಗೋಪಾಲಯ್ಯ ಬೇಡ ಎಂದರೂ ಕಲ್ಲು ಬೀಳಬೇಕು ಎನ್ನುತ್ತಾರಂತೆ ಕೆಲವರು ಎಂದು ಪರೋಕ್ಷವಾಗಿ ಶಾಸಕ ಪ್ರೀತಂ ಗೌಡ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಮಗಾರಿಗಳಿಗೆ ಮತ್ತೊಮ್ಮೆ ಅಡಿಗಲ್ಲು ಹಾಕಿದರೆ ನಾವು ಸುಮ್ಮನಿರಲ್ಲ, ಉಗ್ರವಾಗಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

ವಿಜಯಪುರ ಗೋದಾಮು ದುರಂತ: ಮೃತರ ಸಂಖ್ಯೆ 7ಕ್ಕೆ, ಇನ್ನೂ ನಾಲ್ಕು ಶವ ಸಿಕ್ಕಿಲ್ಲ

ಇದುವರೆಗೆ ಮೂವರು ಮೃತ ಕಾರ್ಮಿಕರ ದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ. ಇನ್ನೂ ನಾಲ್ಕು ಕಾರ್ಮಿಕರನ್ನು ಹೊರತೆಗೆಯಲು ಕಾರ್ಯಾಚರಣೆ ಮುಂದುವರಿದಿದೆ.

VISTARANEWS.COM


on

Koo

ವಿಜಯಪುರ: ವಿಜಯಪುರ (Vijayapura news) ರಾಜಗುರು ಫುಡ್ಸ್ ಗೋದಾಮಿನಲ್ಲಿ ಭಾರಿ ಯಂತ್ರ ಕುಸಿದು (godown tragedy) ಅದರಡಿ ಬಿಹಾರ ಕಾರ್ಮಿಕರು ಸಿಲುಕಿದ (Labors death) ಪ್ರಕರಣದಲ್ಲಿ ಮೂವರ ಮೃತದೇಹಗಳು ದೊರೆತಿವೆ. ಇನ್ನೂ ನಾಲ್ಕು ಮಂದಿ ಕಾರ್ಮಿಕರು ಯಂತ್ರದಡಿ ಸಿಲುಕಿದ್ದು, ಅವರು ಬದುಕಿರುವ ಸಾಧ್ಯತೆ ಬಹುತೇಕ ಕ್ಷೀಣವಾಗಿದೆ.

ವಿಜಯಪುರ ಕೈಗಾರಿಕಾ ಪ್ರದೇಶದ (Vijayapura News) ರಾಜಗುರು ಇಂಡಸ್ಟ್ರೀಸ್‌ ಗೋದಾಮಿನಲ್ಲಿ ಮೆಕ್ಕೆ ಜೋಳದ ಮೂಟೆ ತುಂಬುವ ಯಂತ್ರ ಕುಸಿದು ಮೂಟೆಗಳಡಿ 10ಕ್ಕೂ ಹೆಚ್ಚು ಕಾರ್ಮಿಕರು ನಿನ್ನೆ ಸಿಲುಕಿದ್ದರು. ಫುಡ್ ಪ್ರೊಸೆಸಿಂಗ್ ಯುನಿಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇವರು ಬಿಹಾರ ಮೂಲದ ಕಾರ್ಮಿಕರಾಗಿದ್ದರು. ಕಳೆದ ಹಲವು ವರ್ಷಗಳಿಂದ ರಾಜಗುರು ಇಂಡಸ್ಟ್ರೀಸ್‌ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದರು.

ಕಾರ್ಮಿಕರನ್ನು ರಕ್ಷಿಸಲು ನಿರಂತರವಾಗಿ 15 ಗಂಟೆಗಳಿಂದ 4 ಕ್ರೇನ್‌ ಹಾಗೂ ಜೆಸಿಬಿಗಳ ಮೂಲಕ ಸಂಸ್ಕರಣಾ ಘಟಕವನ್ನು ಎತ್ತಿ, ಅದರಡಿ ಸಿಲುಕಿದ ಕಾರ್ಮಿಕರ ಮೃತದೇಹ ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಗುತ್ತಿದೆ. ಎಸ್‌ಡಿಆರ್‌ಎಫ್ ತಂಡ, ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆದಿದೆ.

ಇದುವರೆಗೆ ಮೂವರು ಮೃತ ಕಾರ್ಮಿಕರ ದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ. ಇನ್ನೂ ನಾಲ್ಕು ಕಾರ್ಮಿಕರನ್ನು ಹೊರತೆಗೆಯಲು ಕಾರ್ಯಾಚರಣೆ ಮುಂದುವರಿದಿದೆ. ಅವರೆಲ್ಲಾ ಬಹುತೇಕ ಬದುಕಿರುವ ಸಾಧ್ಯತೆಗಳು ಕ್ಷೀಣ ಎನ್ನಲಾಗುತ್ತಿದೆ. ಒಟ್ಟು 11 ಕಾರ್ಮಿಕರು ಅವಘಡದಲ್ಲಿ ಸಿಲುಕಿದ್ದರು. ಘಟನಾ ಸಂದರ್ಭದಲ್ಲಿ ಮೂವರು ಬಚಾವ್ ಆಗಿದ್ದರು. ಕಾರ್ಯಾಚರಣೆ ವೇಳೆ ಓರ್ವನನ್ನು ಸಿಬ್ಬಂದಿ ರಕ್ಷಿಸಿದ್ದರು.

ಕಾರ್ಮಿಕರ ಪತ್ತೆಗೆ ಪುಣೆಯಿಂದ 30ಕ್ಕೂ ಅಧಿಕ ಸಿಬ್ಬಂದಿಗಳಿರುವ ಎನ್‌ಡಿಆರ್‌ಎಫ್‌ ತಂಡ ಆಗಮಿಸಿದೆ. ಸ್ಥಳಕ್ಕೆ ಎಸ್‌.ಪಿ. ಋಷಿಕೇಶ ಸೋನಾವಣೆ, ಡಿಸಿ ಟಿ.ಭೂಬಾಲನ್ ಭೇಟಿ ನೀಡಿ ಕಾರ್ಯಾಚರಣೆ ನೇತೃತ್ವ ವಹಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಯೂ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಗೋದಾಮಿನಲ್ಲಿ ಯಂತ್ರ ಕುಸಿತ; ಜೋಳದ ಮೂಟೆಗಳಡಿ ಸಿಲುಕಿದ 10 ಕಾರ್ಮಿಕರು

Continue Reading

ಕರ್ನಾಟಕ

CM Siddaramaiah: ಹುತಾತ್ಮ ಯೋಧ ಪ್ರಾಂಜಲ್‌ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ

ಕರ್ನಾಟಕದ ಹುತಾತ್ಮ ಯೋಧ ಪ್ರಾಂಜಲ್‌ (Captain Pranjal) ಅವರ ಕುಟುಂಬಕ್ಕೆ ರೂ. 50,00,000 (ಐವತ್ತು ಲಕ್ಷ) ಪರಿಹಾರಧನವನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಮಂಜೂರು ಮಾಡಿದ್ದಾರೆ.

VISTARANEWS.COM


on

cm siddaramaih respect captain pranjal
Koo

ಬೆಂಗಳೂರು: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್‌ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ (Rajouri Encounter) ಮಡಿದ ಕರ್ನಾಟಕದ ವೀರ ಯೋಧ ಪ್ರಾಂಜಲ್‌ (Captain Pranjal) ಅವರ ಕುಟುಂಬಕ್ಕೆ ರೂ. 50,00,000 (ಐವತ್ತು ಲಕ್ಷ) ಪರಿಹಾರಧನವನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಮಂಜೂರು ಮಾಡಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್‌ (ಟ್ವಿಟರ್)‌ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. “ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ. ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ನಾಳೆ ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆʼʼ ಎಂದು ಬರೆದಿದ್ದಾರೆ.

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್‌ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ (Rajouri Encounter) ಕರ್ನಾಟಕದ ವೀರ ಯೋಧ ಪ್ರಾಂಜಲ್‌ (Captain Pranjal) ಮೃತಪಟ್ಟಿದ್ದರು. ಇವರ ಮನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಜಿಗಣಿ ಸಮೀಪದ ನಿಸರ್ಗ ಬಡಾವಣೆಯಲ್ಲಿದೆ. ಯೋಧನ ಮನೆಯ ಆವರಣದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಸಂಸ್ಕಾರ ನಡೆದಿತ್ತು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಅಲ್ಲಿಗೆ ಭೇಟಿ ನೀಡಿ, ಹುತಾತ್ಮ ಯೋಧನ ಅಂತಿಮ ದರ್ಶನ ಪಡೆದಿದ್ದರು. ಸಂಬಂಧಿಕರು ಹಾಗೂ ಸಹಸ್ರಾರು ಸಾರ್ವಜನಿಕರ ಉಪಸ್ಥಿತಿಯಲ್ಲಿ ಅಂತ್ಯಸಂಸ್ಕಾರ ನಡೆದಿತ್ತು.

ಉಗ್ರರ ಜತೆಗಿನ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಂತು ಬಡಿದಾಡಿ ಪ್ರಾಣ ತ್ಯಾಗ ಮಾಡಿದ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಅವರು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನ (MRPL) ನಿವೃತ್ತ ಆಡಳಿತ ನಿರ್ದೇಶಕ ವೆಂಕಟೇಶ್ ಅವರ ಏಕೈಕ ಪುತ್ರ. (MRPL) ನ ಮಾಜಿ ನಿರ್ದೇಶಕ ಎಂ.ವೆಂಕಟೇಶ್ ಅವರ ಪುತ್ರ. ಎಂಆರ್‌ಪಿಎಲ್‌ನ ಬಳಿಯೇ ಇರುವ ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲೇ ಪ್ರಾಂಜಲ್‌ ವಿದ್ಯಾಭ್ಯಾಸ ಮಾಡಿದ್ದರು. ಕರಾವಳಿಯವರೇ ಆದ ವೆಂಕಟೇಶ್ ಅವರು ಮೇ 31ರಂದು ಸೇವಾ ನಿವೃತ್ತರಾಗಿದ್ದರು. ಕೆಲಕಾಲ ಮೈಸೂರಲ್ಲೂ ಇದ್ದರು. ತಂದೆಯ ನಿವೃತ್ತ ಸಮಾರಂಭಕ್ಕೆ ಪ್ರಾಂಜಲ್ ಆಗಮಿಸಿದ್ದರು. ನಿವೃತ್ತಿ ಬಳಿಕ ವೆಂಕಟೇಶ್ ಅವರು ಇದೀಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

Continue Reading

ಉದ್ಯೋಗ

Teachers Recruitment : ಪ್ರಾಥಮಿಕ ಶಾಲೆಯಲ್ಲಿ 2120 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ತೀರ್ಮಾನ

Teachers Recruitment : ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪ್ರಸ್ತುತ ಖಾಲಿ ಇರುವ ಪೈಕಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

VISTARANEWS.COM


on

Physical Education Teacher
Koo

ಬೆಂಗಳೂರು: ಸತತ 15 ವರ್ಷದಿಂದ ನೇಮಕಾತಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರಿಗೆ (Recruitment of Physical Education Teachers) ಈ ಸರ್ಕಾರದ ಅವಧಿಯಲ್ಲಿ ಗುಡ್‌ ನ್ಯೂಸ್‌ ಸಿಗಲಿದೆಯೇ? ಹೌದು ಎನ್ನುತ್ತದೆ ಶಿಕ್ಷಣ ಸಚಿವರ ಉತ್ತರ! ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪ್ರಸ್ತುತ ಖಾಲಿ ಇರುವ ಪೈಕಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು (Teachers Recruitment) ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Education Minister Madhu Bangarappa) ಹೇಳಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಪದವೀಧರ ಕ್ಷೇತ್ರದ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಕೇಳಲಾದ ಚುಕ್ಕೆ ಗುರುತಿನ ಪ್ರಶ್ನೆಗೆ ಶಿಕ್ಷಣ ಸಚಿವರು ಈ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: Karnataka Live News : ಪಿಎಸ್‌ಐ ಪರೀಕ್ಷೆ ಮುಂದೂಡಿಕೆ; ಜ. 23ಕ್ಕೆ ಎಕ್ಸಾಂ ಎಂದ ಗೃಹ ಸಚಿವ ಪರಮೇಶ್ವರ್‌

ರಾಜ್ಯದಲ್ಲಿ ಸುಮಾರು 17 ವರ್ಷಗಳಿಂದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕಾತಿ ಮಾಡಿಲ್ಲ ಎಂದು ದೈಹಿಕ ಶಿಕ್ಷಣ ಶಿಕ್ಷಕರ ಸಂಘಟನೆಯವರು ಆರೋಪ ಮಾಡುತ್ತಿದ್ದಾರೆ. ಇದು ನಿಜವೇ ಎಂದು ಎಸ್‌.ವಿ. ಸಂಕನೂರ ಪ್ರಶ್ನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದ ಸರ್ಕಾರಿ ಪ್ರಾಥಮಿಕ ಶಾಲೆಗೆ ಸಂಬಂಧಿಸಿದಂತೆ 2008ನೇ ಸಾಲಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಿಸಿದಂತೆ 2014-15ನೇ ಸಾಲಿಗೆ 148 ಹುದ್ದೆಗಳಿಗೆ ನೇಮಿಸಿಕೊಳ್ಳಲಾಗಿದೆ ಎಂದು ಉತ್ತರಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 41913 ಪ್ರಾಥಮಿಕ ಶಾಲೆಗಳಿದ್ದು, ಅವುಗಳಲ್ಲಿ ಮಂಜೂರಾದ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು 6772 ಆಗಿದೆ. ಆದರೆ, ಕಾರ್ಯನಿರತ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು 4127 ಆಗಿದೆ. ಹೀಗಾಗಿ ಇದರಲ್ಲಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಪ್ರೌಢಶಾಲೆಯಲ್ಲಿ ನೇಮಕಕ್ಕೆ ಸಚಿವರು ಹೇಳಿದ್ದೇನು?

ಇನ್ನು ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಪಟ್ಟಂತೆ ರಾಜ್ಯದಲ್ಲಿ 4844 ಸರ್ಕಾರಿ ಪ್ರೌಢ ಶಾಲೆಗಳು ಇವೆ. ಇದರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಮಂಜೂರಾದ ಹುದ್ದೆ 5210 ಆಗಿದೆ. ರಾಜ್ಯ ಸರ್ಕಾರಿ ಪ್ರೌಢಶಾಲೆಗಳಲ್ಲಿರುವ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್‌ 1 ಶಿಕ್ಷಕರ ಕಾರ್ಯನಿರತ ಹುದ್ದೆಗಳ ಸಂಖ್ಯೆ 3589 ಆಗಿದೆ.

ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ವಿವಿಧ ವೃಂದದ ದೈಹಿಕ ಶಿಕ್ಷಣ ಶಿಕ್ಷಕರ 200 ಹುದ್ದೆಗಳು ಸೇರಿ ಒಟ್ಟು 2500 ಶಿಕ್ಷಕರುಗಳ ಹುದ್ದೆಗಳನ್ನು 15000 ಪದವೀಧರ ಪ್ರಾಥಮಿಕ ಶಾಲಾ ನೇಮಕಾತಿಯಲ್ಲಿ ಭರ್ತಿಯಾಗದೇ ಖಾಲಿ ಉಳಿದ ಹುದ್ದೆಗಳಿಗೆ ಹೊಂದಾಣಿಕೆ ಮಾಡಿಕೊಳ್ಳುವ ಷರತ್ತಿಗೆ ಒಳಪಟ್ಟು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರವು ಅನುಮತಿ ನೀಡಿರುತ್ತದೆ.

ಆದರೆ, ಸದರಿ 15000 ಹುದ್ದೆಗಳಲ್ಲಿ ಪ್ರೌಢಶಾಲಾ ಶಿಕ್ಷಕರುಗಳ ನೇಮಕಾತಿಗೆ 1648 ಹುದ್ದೆಗಳು ಮಾತ್ರ ಉಳಿದಿರುವ ಪ್ರಯುಕ್ತ ಪ್ರಸ್ತುತ ಸಾಲಿನಲ್ಲಿ 200 ದೈಹಿಕ ಶಿಕ್ಷಕರ ಹುದ್ದೆಯು ಸೇರಿದ್ದು ಒಟ್ಟು 2500 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಪ್ರಸ್ತಾವನೆಯ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ನಿವೃತ್ತಿಯಿಂದ ತೆರವಾಗಿರುವ ದೈಹಿಕ ಶಿಕ್ಷಣ ಉಪನ್ಯಾಸಕರನ್ನು ಮಾಡಿಕೊಳ್ಳದಂತೆ ನೇಮಕಾತಿ ಆರ್ಥಿಕ ಇಲಾಖೆಯಿಂದ ಟಿಪ್ಪಣಿ ರೂಪದಲ್ಲಿ ಆದೇಶ ಬಂದಿದೆಯೇ? ಹಾಗಿದ್ದಲ್ಲಿ, ಈ ಕುರಿತು ಸರ್ಕಾರ ಕೈಗೊಂಡ ಕ್ರಮವೇನು? ಎಂದು ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: Belagavi Winter Session: ಸದನದಲ್ಲಿ ಮುಟ್ಟಿನ ಶುಚಿತ್ವ ಚರ್ಚೆ; ಜನವರಿಯಿಂದ ಶಾಲೆಗಳಿಗೆ ನ್ಯಾಪ್‌ಕಿನ್‌

ಇಲ್ಲಿ ಪಿಡಿಎಫ್‌ ಪ್ರತಿಯನ್ನು ಲಗತ್ತಿಸಿದ್ದು, ಡೌನ್‌ಲೋಡ್‌ ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಪಡೆದುಕೊಳ್ಳಬಹುದು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದೈಹಿಕ ಶಿಕ್ಷಣ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದಂತೆ ಆರ್ಥಿಕ ಇಲಾಖೆಯು ಯಾವುದೇ ನಿರ್ಬಂಧವನ್ನು ವಿಧಿಸಿರುವುದಿಲ್ಲ. ಆದರೆ, ಆರ್ಥಿಕ ಇಲಾಖೆಯು ದಿನಾಂಕ:14/06/2023ರಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರ ಹುದ್ದೆಗೆ ಪ್ರಸ್ತುತ ಇರುವ 120 ವಿದ್ಯಾರ್ಥಿಗಳ ಕಾರ್ಯಭಾರದ ಮಾನದಂಡವನ್ನು 500 ವಿದ್ಯಾರ್ಥಿಗಳಿಗೆ ಹೆಚ್ಚಿಸಲು ನಿರ್ಣಯಿಸುವಂತೆ ಆರ್ಥಿಕ ಇಲಾಖೆಯು ಸಲಹೆ ನೀಡಿದ್ದು, ಈ ಬಗ್ಗೆ ಸರ್ಕಾರದಲ್ಲಿ ಪರಿಶೀಲನೆಯಲ್ಲಿರುತ್ತದೆ ಎಂದು ಹೇಳಿದ್ದಾರೆ.

Continue Reading

ಕರ್ನಾಟಕ

Karnataka Weather : ಇಂದು – ನಾಳೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ಭಾರಿ ಮಳೆ; ಇದು ಮಿಚುಂಗ್ ಎಫೆಕ್ಟ್‌

Karnataka Weather : ಮಿಚುಂಗ್ ಸೈಕ್ಲೋನ್ ಪರಿಣಾಮ ರಾಜ್ಯದ ಮೇಲೆ ಆಗಲಿದೆ. ರಾಜ್ಯದ ಕೆಲವು ಕಡೆ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

VISTARANEWS.COM


on

Rain in Karnataka woman listening to music with an umbrella
Koo

ಬೆಂಗಳೂರು: ಮಂಗಳವಾರ ಮತ್ತು ಬುಧವಾರ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (karnataka Weather Forecast) ಹೇಳಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದ ಭಾರಿ ಮಳೆಯಾಗಲಿದೆ ಎಂದು ಅಂದಾಜಿಸಿದೆ.

ಮಿಚುಂಗ್ ಚಂಡಮಾರುತದ ಎಫೆಕ್ಟ್‌ ಮೊದಲು ತಮಿಳುನಾಡಿಗೆ ಬೀರಲಿದ್ದು, ನಂತರ ಕರ್ನಾಟಕದ ಗಡಿ ಭಾಗದ ಪ್ರದೇಶಗಳು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಇನ್ನು ಪ್ರತಿ ಗಂಟೆಗೆ 30 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹೇಳಲಾಗಿದೆ.

ಎರಡು ದಿನ ಸೈಕ್ಲೋನ್‌ ಎಫೆಕ್ಟ್‌!

ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದೆ. ಹೀಗಾಗಿ ರಾಜ್ಯದಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಸದ್ಯ ಬಂಗಾಳ ಕೊಲ್ಲಿಯಲ್ಲಿ 18 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಹೀಗಾಗಿ ಕರ್ನಾಟಕದಲ್ಲಿಯೂ ಮಳೆಯಾಗಲಿದ್ದು, ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: Belagavi Winter Session: ಸದನದಲ್ಲಿ ಮುಟ್ಟಿನ ಶುಚಿತ್ವ ಚರ್ಚೆ; ಜನವರಿಯಿಂದ ಶಾಲೆಗಳಿಗೆ ನ್ಯಾಪ್‌ಕಿನ್‌

ಉತ್ತರ ಮತ್ತು ದಕ್ಷಿಣ ಒಳನಾಡಲ್ಲಿ ಹೇಗಿರಲಿದೆ ಮಳೆ?

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣದಿಂದ ತೀವ್ರ ಪ್ರಮಾಣದಲ್ಲಿ ಮಳೆಯಾಗಬಹುದಾಗಿದ್ದು, ಬಹುಭಾಗ ಮೋಡ ಕವಿದ ವಾತಾವರಣ ಇರಲಿದೆ. ಉಳಿದ ಜಿಲ್ಲೆಗಳಲ್ಲಿ ಅಲ್ಪ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇನ್ನು ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ ಹಾಗೂ ಬೀದರ್, ರಾಯಚೂರಿನ ಒಂದೆರಡು ಕಡೆ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಲೆನಾಡಿನ ಕೊಡಗಿನಲ್ಲಿ ಭರ್ಜರಿ ಮಳೆ ಸಾಧ್ಯತೆ

ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಹೆಚ್ಚಿರಲಿದ್ದು, ಅಲ್ಪದಿಂದ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಎಫೆಕ್ಟ್‌?

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಹಾಗೂ ಉತ್ತರ ಕನ್ನಡದಲ್ಲಿ ಚಂಡಮಾರುತದ ಭಾರಿ ಪ್ರಭಾವ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಅಲ್ಲಲ್ಲಿ ಭಾರಿ ಮಳೆಯಾಗಬಹುದು ಎಂದು ಹಮಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾತ್ರಿ, ಬೆಳಗಿನ ಜಾವ ಚಳಿ ಚಳಿ

ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಬಹುತೇಕ ಕಡೆ ರಾತ್ರಿ ವೇಳೆಗೆ ಹಾಗೂ ಬೆಳಗಿನ ಜಾವ ಚಳಿಗಾಳಿ ಬೀಸಲಿದ್ದು, ಚಳಿ ಚಳಿ ವಾತಾವರಣ ನಿರ್ಮಾಣವಾಗಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 25 ಡಿ.ಸೆ -19 ಡಿ.ಸೆ
ಮಂಗಳೂರು: 35 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 19 ಡಿ.ಸೆ
ಗದಗ: 33 ಡಿ.ಸೆ – 18 ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 33 ಡಿ.ಸೆ – 22 ಡಿ.ಸೆ
ಬೆಳಗಾವಿ: 31 ಡಿ.ಸೆ – 17 ಡಿ.ಸೆ
ಕಾರವಾರ: 36 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
sadghuru with students
ಅಂಕಣ10 mins ago

Prerane Column : ವಿದ್ಯಾಭ್ಯಾಸ ಎಂದರೆ ದುಡ್ಡು ಮಾಡುವ ದಂಧೆಯ ಅಡಿಪಾಯವೇ?

ಕರ್ನಾಟಕ23 mins ago

ವಿಜಯಪುರ ಗೋದಾಮು ದುರಂತ: ಮೃತರ ಸಂಖ್ಯೆ 7ಕ್ಕೆ, ಇನ್ನೂ ನಾಲ್ಕು ಶವ ಸಿಕ್ಕಿಲ್ಲ

cm siddaramaih respect captain pranjal
ಕರ್ನಾಟಕ57 mins ago

CM Siddaramaiah: ಹುತಾತ್ಮ ಯೋಧ ಪ್ರಾಂಜಲ್‌ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ

Canara Bank Ammembala Subbarao Pai
ಅಂಕಣ1 hour ago

Raja Marga Column: ಹಿಡಿಯಕ್ಕಿ ಸಂಗ್ರಹಿಸಿ ಕೆನರಾ ಬ್ಯಾಂಕ್ ಕಟ್ಟಿದ ಅಮ್ಮೆಂಬಳ ಸುಬ್ಬರಾವ್ ಪೈ

CBSE Board Exam 2024 and many more changes proposed implemented in this year
ದೇಶ1 hour ago

ಸಿಬಿಎಸ್‌ಇ ಬೋರ್ಡ್‌ ಎಕ್ಸಾಂಗೆ ಘೋಷಿಸಿದ ಪ್ರಮುಖ ಬದಲಾವಣೆಗಳೇನು?

Saurav Gangly
ಕ್ರಿಕೆಟ್2 hours ago

Virat Kohli : ಕೊಹ್ಲಿಯನ್ನು ನಾಯಕತ್ವದಿಂದ ಇಳಿಸಿದ್ದಕ್ಕೆ ಕಾರಣ ತಿಳಿಸಿದ ಸೌರವ್​ ಗಂಗೂಲಿ

Physical Education Teacher
ಉದ್ಯೋಗ2 hours ago

Teachers Recruitment : ಪ್ರಾಥಮಿಕ ಶಾಲೆಯಲ್ಲಿ 2120 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ತೀರ್ಮಾನ

sufi
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಸಯ್ಯಿದ್ ರಿಜ್ವಿ ಸ್ವತಃ ಹೇಳಿದ ಸೂಫಿಗಳ ನಿಜ ಕಥನ

Rain in Karnataka woman listening to music with an umbrella
ಕರ್ನಾಟಕ2 hours ago

Karnataka Weather : ಇಂದು – ನಾಳೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ಭಾರಿ ಮಳೆ; ಇದು ಮಿಚುಂಗ್ ಎಫೆಕ್ಟ್‌

Congress party directed kamal nath to resign Madhya Pradesh Congress president post
ದೇಶ2 hours ago

ಎಂಪಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಮಲ್ ನಾಥ್‌ಗೆ ಸೂಚನೆ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ1 day ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ2 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ4 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ5 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ5 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

ಟ್ರೆಂಡಿಂಗ್‌