Site icon Vistara News

HD Revanna: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ; ಪಕ್ಕೆಲುಬಿಗೆ ಪೆಟ್ಟು

HD Revanna

ಹಾಸನ: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಎಚ್.ಡಿ.ರೇವಣ್ಣ (HD Revanna) ಅವರ ಪಕ್ಕೆಲುಬಿಗೆ ಪೆಟ್ಟಾಗಿದ್ದು, ಚಿಕಿತ್ಸೆಗಾಗಿ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಕಾದಶಿ ಪ್ರಯುಕ್ತ ಉಪವಾಸವಿದ್ದ ಎಚ್‌.ಡಿ.ರೇವಣ್ಣ, ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ತೆರಳಿದ್ದರು. ಪೂಜೆ ಸಲ್ಲಿಸಿ ಬರುವ ವೇಳೆ ಕಾಲು ಜಾರಿ ಬಿದ್ದಿದ್ದಾರೆ.

ಹರದನಹಳ್ಳಿಯಲ್ಲಿ ಪೂಜೆಯ ಬಳಿಕ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಎಚ್.ಡಿ.ರೇವಣ್ಣ ಹೊರಟಿದ್ದರು. ಈ ವೇಳೆ ಕಾಲು ಜಾರಿ ಬಿದ್ದಿದ್ದರಿಂದ ಪಕ್ಕೆಲುಬು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಪವಾಸ ಹಾಗೂ ತೀವ್ರ ಪಕ್ಕೆಲುಬು ನೋವಿನ ಕಾರಣ ಸುಸ್ತಾಗಿರುವ ಎಚ್.ಡಿ.ರೇವಣ್ಣ ಅವರಿಗೆ ಹೊಳೆನರಸೀಪುರದ ತಾಲೂಕು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ | Ankola landslide Case: ಅಂಕೋಲಾ ಗುಡ್ಡ ಕುಸಿತ ಪ್ರಕರಣ; ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation Scam) ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರ (Ex minister B Nagendra) ಸದ್ಯ ಇಡಿ ಅಧಿಕಾರಿಗಳ (ED Officers) ವಶದಲ್ಲಿದ್ದಾರೆ. ಇದೀಗ ಅವರ ಪತ್ನಿ ಮಂಜುಳಾ ಅವರನ್ನೂ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸದಿಂದ ವಶಕ್ಕೆ ಪಡೆದ ಅಧಿಕಾರಿಗಳು ಅವರನ್ನು ಇಡಿ ಕಚೇರಿ ಕರೆ ತಂದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮಂಜುಳಾ ಅವರಿಂದ ಮಾಹಿತಿ ಕಲೆ ಹಾಕಲಿದ್ದಾರೆ. ಮಂಜುಳಾ ಅವರ ಹೆಸರಲ್ಲಿ ಹಣದ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಅವ್ಯವಹಾರ ನಡೆದ ಸಮಯದಲ್ಲಿ ಮಂಜುಳಾ ಅವರ ಬ್ಯಾಂಕ್ ಖಾತೆಗಳಿಗೂ ಹಣ ಬಂದಿರುವ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ಇದರ ಮೂಲವನ್ನು ಪ್ರಶ್ನಿಸಲಿದ್ದಾರೆ.

ಜುಲೈ 13ರಂದು ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಬಳಿಕ ಯಲಹಂಕದಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು 5 ದಿನಗಳ ಕಾಲ ಕಸ್ಟಡಿಗೆ ನೀಡಿದ್ದರು. 18ನೇ ತಾರೀಖಿನಂದು ಬೆಳಿಗ್ಗೆ 11ಕ್ಕೆ ಮತ್ತೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದರು.

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಎಂಬಾತ ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ನಿಗಮದ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ನಂತರ ಅಧಿಕಾರಿಗಳ ಬಂಧನವಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆದಿದ್ದರು. ಬಳಿಕ ಹಗರಣದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿ ಬಂದ ಹಿನ್ನೆಲೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದರು. 

ಇದನ್ನೂ ಓದಿ: Wakf Board Scam: ವಾಲ್ಮೀಕಿ ನಿಗಮದ ಬಳಿಕ ವಕ್ಫ್ ಬೋರ್ಡ್‌ನಲ್ಲಿ ಹಗರಣ ಬೆಳಕಿಗೆ; ಮಾಜಿ ಸಿಇಒ ವಿರುದ್ಧ ಎಫ್‌ಐಆರ್!

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಕೇಸ್‌ಗೆ ಸಂಬಂಧಿಸಿ ಮತ್ತೊಬ್ಬನನ್ನು ಎಸ್ಐಟಿ ಬಂಧಿಸಿದೆ. ಆಂಧ್ರ ಮೂಲದ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಈತ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎನ್ನಲಾಗಿದೆ.

Exit mobile version