ಬೆಂಗಳೂರು: ಹವಾಮಾನ ವೈಪರೀತ್ಯದಿಂದ ರಾಜ್ಯದಲ್ಲಿ ಭಾರಿ ಮಳೆ ಹಾಗೂ ತೀವ್ರ ಚಳಿ ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ವೃದ್ಧರನ್ನು ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತಿವೆ. ಹೀಗಾಗಿ ಆರೋಗ್ಯದ ಬಗ್ಗೆ ಜನರು ಕಾಳಜಿ ವಹಿಸಬೇಕು ಎಂದು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ (Health Guidelines) ಬಿಡುಗಡೆ ಮಾಡಲಾಗಿದೆ.
ಚಳಿಗಾಲದಲ್ಲಿ ಮಕ್ಕಳು (ನವಜಾತ ಶಿಶುಗಳು ಸೇರಿ), ಗರ್ಭಿಣಿಯರು, ವೃದ್ಧರು, ವಿಶೇಷವಾಗಿ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಈ ಕೆಳಗಿನ ಸಲಹೆಗಳನ್ನು ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.
ಏನು ಮಾಡಬೇಕು:
- ಯಾವಾಗಲೂ ಬೆಚ್ಚಗಿನ ನೀರು ಕುಡಿಯುವುದು
- ಸುಲಭವಾಗಿ ಜೀರ್ಣವಾಗುವ ಹಾಗೂ ಆಗತಾನೆ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸುವುದು
- ಯಾವಾಗಲೂ ಸ್ವೆಟರ್, ಸಾಕ್ಸ್, ಕೈಗವಸುಗಳನ್ನು ಧರಿಸುವುದು ಹಾಗೂ ಮನೆಯ ಒಳಗಿರುವಾಗಲೂ ಬೆಚ್ಚಗಿರುವುದು ಉತ್ತಮ.
- ಸ್ನಾನಕ್ಕೆ ಬಿಸಿ ನೀರು ಉಪಯೋಗಿಸುವುದು
- ಅನಗತ್ಯವಾಗಿ ಹೊರ ಸಂಚಾರವನ್ನು ತಪ್ಪಿಸಿ
- ಕಿವಿಗಳನ್ನು ಹತ್ತಿಯಿಂದ ಮುಚ್ಚಿ ಅಥವಾ ಸ್ಕಾರ್ಫ್ ಕಟ್ಟಕೊಳ್ಳಬೇಕು ಹಾಗೂ ಹೋಗಲೇಬೇಕಾದಲ್ಲಿ ಮಾಸ್ಕ್ ಧರಿಸಬೇಕು.
- ನೆಗಡಿ, ಕೆಮ್ಮು ಹಾಗೂ ಜ್ವರದ ಲಕ್ಷಣಗಳಳು ಇರುವವರಿಂದ ದೂರವಿರಬೇಕು.
- ಮೊಣಕೈ ಒಳಗೆ ಸೀನುವುದು, ಕೆಮ್ಮುವುದು ಅಥವಾ ಸೀನುವಾಗ, ಕೆಮ್ಮುವಾಗ ಟಿಶ್ಯೂ ಅಥವಾ ಕರವಸ್ತ್ರವನ್ನು ಬಳಸಬೇಕು
- ಕೈಗಳನ್ನು ಆಗಾಗ್ಗೆ ನೀರು ಹಾಗೂ ಸೋಪಿನಿಂದ ತೊಳೆಯಬೇಕು
- ಜ್ವರ ಲಕ್ಷಣಗಳು ಅಥವಾ ಇತರ ಯಾವುದಾದರೂ ಕಾಯಿಲೆಯ ಲಕ್ಷಣಗಳಿದ್ದಲ್ಲಿ ತಕ್ಷಣವೇ ವೈದ್ಯರ ಸಲಹೆಯನ್ನು ಪಡೆಯುವುದು
- ಸ್ವಯಂವೈದ್ಯ ಪದ್ಧತಿಗಳನ್ನು ಅನುಸರಿಸಬಾರದು
ಏನು ಮಾಡಬಾರದು - ತಣ್ಣಗಿನ ಪಾನೀಯಗಳು, ಐಸ್ ಕ್ರೀಂಗಳನ್ನು ಸೇವಿಸಬಾರದು
- ರೆಫ್ರಿಜರೇಟರ್ನಲ್ಲಿಟ್ಟ ಅಥವಾ ತಣ್ಣಗಿನ ನೀರನ್ನು ಕುಡಿಯಬಾರದು
- ಮಳೆಯಲ್ಲಿ ನೆನೆಯುವುದು ಹಾಗೂ ತಣ್ಣನೆಯ ಶೀತ ಗಾಳಿಗೆ ಮೈ ಒಡ್ಡುವುದನ್ನು ತಪ್ಪಿಸಬೇಕು
- ಹೊರಾಂಗಣ ಪ್ರವಾಸಗಳನ್ನು ಆದಷ್ಟು ಕಡಿಮೆ ಮಾಡಿ (ವಿಶೇಷವಾಗಿ ಗಿರಿಧಾಮಗಳಿಗೆ ವಾರಾಂತ್ಯದ ಪ್ರವಾಸ ಹೋಗುವುದು ಇತ್ಯಾದಿ)
- ಮಸಾಲಾಯುಕ್ತ ಪದಾರ್ಥಗಳು / ಜಂಕ್ ಫುಡ್ ಸೇವಿಸಬಾರದು
ಇದನ್ನೂ ಓದಿ | Zika virus | ರಾಜ್ಯದಲ್ಲಿ ಮೊದಲ ಝಿಕಾ ವೈರಸ್ ರಾಯಚೂರಿನಲ್ಲಿ ಪತ್ತೆ; 5 ವರ್ಷದ ಬಾಲಕಿಗೆ ಪಾಸಿಟಿವ್