ಶಿವಮೊಗ್ಗ: ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ 14 ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿರುವುದರಿಂದ ಪಾಲಕರಲ್ಲಿ ಆತಂಕ ಮೂಡಿದೆ. ಜಿಲ್ಲೆಯ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಮಕ್ಕಳಿಗೆ ಭಾನುವಾರ ಸಂಜೆ ಇಂಜೆಕ್ಷನ್ ನೀಡಿದ ಬಳಿಕ ಮಕ್ಕಳ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದಿದೆ.
ಇಂಜೆಕ್ಷನ್ ನೀಡಿದ ಬಳಿಕ ಚಳಿ ಜ್ವರ ಕಾಣಿಸಿಕೊಂಡ 14 ಮಕ್ಕಳ ಪೈಕಿ ನಾಲ್ವರು ಮೂರ್ಛೆ ಹೋಗಿದ್ದಾರೆ. ಹೀಗಾಗಿ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಮತ್ತು ಸರ್ಜಿ ಮಕ್ಕಳ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಉಳಿದ ಮಕ್ಕಳಿಗೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ. ಆಸ್ಪತ್ರೆಗೆ ಸಾಗರ ಶಾಸಕ ಹರತಾಳು ಹಾಲಪ್ಪ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ, ಪಾಲಕರಿಗೆ ಧೈರ್ಯ ತುಂಬಿ, ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ನಿರ್ದೇಶನ ನೀಡಿದರು.
ಇದನ್ನೂ ಓದಿ | ಭ್ರೂಣಗಳನ್ನು ಎಸೆದಿದ್ದು ನಾವೇ ಎಂದು ಒಪ್ಪಿಕೊಂಡ ವೈದ್ಯೆ: ಪೊಲೀಸರಿಂದ ಆಸ್ಪತ್ರೆ ಸೀಜ್