ಕೊಪ್ಪಳ: ಇಲ್ಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವಸತಿ ನಿಲಯದ ೨೦ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಧ್ಯಾಹ್ನದ ವೇಳೆ ಒಮ್ಮಿಂದೊಮ್ಮೆಗೇ ಜ್ವರ ಮತ್ತು ವಾಂತಿ ಬೇಧಿಗೆ ಒಳಗಾದರು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು.
ಕೊಪ್ಪಳ ನಗರದ ಪೊಲೀಸ್ ಠಾಣೆಯ ಬಳಿ ಇರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಮುಂಜಾನೆ ಉಪಹಾರ ಸೇವಿಸಿದ ನಂತರ ಈ ಘಟನೆ ನಡೆದಿರುವುದರಿಂದ ಉಪಾಹಾರದಲ್ಲೇ ಏನೋ ಸಮಸ್ಯೆ ಇರಬಹುದು ಎಂದು ಸಂಶಯ ವ್ಯಕ್ತಪಡಿಸಲಾಗಿದೆ. ಎಲ್ಲರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ | Students Fall Sick | ಆನೆಕಾಲು ರೋಗ ನಿಯಂತ್ರಣ ಮಾತ್ರೆ ಸೇವನೆ; 20ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಅಸ್ವಸ್ಥ